ಕ್ಯಾಂಪಸ್‌

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ: ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಪುತ್ತೂರು: ಪುಣಚ ಶ್ರೀದೇವಿ ವಿದ್ಯಾಸಂಸ್ಥೆಯಲ್ಲಿ ನಡೆದ ವಿದ್ಯಾಭಾರತಿ ಸಂಯೋಜಿತ ಶಾಲೆಗಳ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಪಾಲ್ಗೊಂಡು,  ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಕಿಶೋರ ವರ್ಗದ ಬಾಲಕರ ವಿಭಾಗದಲ್ಲಿ (17ರ ವಯೋಮಾನದ) – ಪ್ರಮಥ ಎಂ. ಭಟ್ (10ನೇ ತರಗತಿ) ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಮಹಮ್ಮದ್ ರಿಹಾನ್ (10ನೇ ತರಗತಿ) ತೃತೀಯ ಸ್ಥಾನ ಪಡೆದಿರುತ್ತಾರೆ. ಬಾಲವರ್ಗದ ಬಾಲಕಿಯರ ವಿಭಾಗದಲ್ಲಿ (14ರ ವಯೋಮಾನದ) ವರ್ಷಿ ರೈ (7ನೇ ತರಗತಿ) […]

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ: ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ Read More »

ಕಾಮಗಾರಿಯ ಅನುದಾನಕ್ಕೆ ನಿಮ್ಮದೇ ತೆರಿಗೆ ಹಣ | ಶಾಂತಿಗೋಡು ಸ.ಹಿ.ಪ್ರಾ. ಶಾಲೆಯಲ್ಲಿ ವಿವೇಕ ಕೊಠಡಿ ಉದ್ಘಾಟಿಸಿ ಶಾಸಕ ಅಶೋಕ್ ಕುಮಾರ್ ರೈ

ಪುತ್ತೂರು: ನಿಮ್ಮ ಊರಿನ ಕಾಮಗಾರಿಗೆ ಸರಕಾರದಿಂದ ಅನುದಾನ ಬಂದಿದ್ದರೆ ಅದು ನಿಮ್ಮದೇ ಹಣ. ನೀವು ಕಟ್ಟಿದ ಟ್ಯಾಕ್ಸ್ ಸೇರಿದಂತೆ ವಿವಿಧ ಮೂಲಗಳಿಂದ ನಿಮ್ಮಿಂದಲೇ ಸಂಗ್ರಹಿಸಿದ ಹಣವನ್ನು ಯಾವುದೇ ಕಾಮಗಾರಿಗೆ ಬಳಕೆ ಮಾಡುತ್ತಾರೆ. ಯಾವ ಜನಪ್ರತಿನಿಧಿಯೂ ಸ್ವಂತ ಹಣವನ್ನು ಕಾಮಗಾರಿಗೆ ನೀಡುತ್ತಿಲ್ಲ, ನೀಡುವುದೂ ಇಲ್ಲ ಎಂದು ಶಾಸಕ ಅಶೋಕ್ ರೈ ಹೇಳಿದರು. ಶಾಂತಿಗೋಡು ಸರಕಾರಿ ಹಿ.ಪ್ರಾ. ಶಾಲೆಯಲ್ಲಿ ವಿವೇಕ ಕೊಠಡಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ನಿಮ್ಮ ಊರಿನ ಬೇಡಿಕೆ, ಸಮಸ್ಯೆಗಳು ಏನೆಂಬುದು ನಿಮಗೆ ಗೊತ್ತಿರುತ್ತದೆ. ಸಾರ್ವಜನಿಕರು ಬೇಡಿಕೆ ಮತ್ತು

ಕಾಮಗಾರಿಯ ಅನುದಾನಕ್ಕೆ ನಿಮ್ಮದೇ ತೆರಿಗೆ ಹಣ | ಶಾಂತಿಗೋಡು ಸ.ಹಿ.ಪ್ರಾ. ಶಾಲೆಯಲ್ಲಿ ವಿವೇಕ ಕೊಠಡಿ ಉದ್ಘಾಟಿಸಿ ಶಾಸಕ ಅಶೋಕ್ ಕುಮಾರ್ ರೈ Read More »

ನೆಲ್ಲಿಕಟ್ಟೆ ಸ.ಹಿ.ಪ್ರಾ. ಶಾಲೆಯಲ್ಲಿ ವಿದ್ಯಾಜ್ಯೋತಿ ಎಲ್‍.ಕೆ.ಜಿ., ಯುಕೆಜಿ ತರಗತಿ ಉದ್ಘಾಟನೆ

ಪುತ್ತೂರು : ನೆಲ್ಲಿಕಟ್ಟೆ ಸರಕಾರಿ ಹಿ ಪ್ರಾ ಶಾಲೆಯಲ್ಲಿ ರೋಟರಿ‌ಕ್ಲಬ್ ಪುತ್ತೂರು ಸಿಟಿ ,ರೋಟರಿ ಕ್ಲಬ್ ಪುತ್ತೂರು ಸಿಟಿ ಚಾರಿಟೇಬಲ್ ಟ್ರಸ್ಟ್ ಆಶ್ರಯದಲ್ಲಿ ವಿದ್ಯಾ ಜ್ಯೋತಿ ಎಲ್ ಕೆ ಜಿ ಮತ್ತು ಯುಕೆಜಿ ಹಾಗೂ ಅಂಗನವಾಡಿ ಪುನಶ್ಚೇತನ ರೋಟರಿ ಜಿಲ್ಲಾ ಯೋಜನೆಯನ್ನು ಶನಿವಾರ ಉದ್ಘಾಟಿಸಲಾಯಿತು. ಶಾಸಕ ಅಶೋಕ್ ಕುಮಾರ್ ರೈ ಉದ್ಘಾಟಿಸಿ ಮಾತನಾಡಿ, ಸರಕಾರ ಮಾಡಬೇಕಾದ ಕೆಲಸವನ್ನು ರೋಟರಿ ಕ್ಲಬ್ ಮಾಡುತ್ತಿರುವುದು ಶ್ಲಾಘನೀಯ. ಮುಂದಿನ ಒಂದು ವರ್ಷದೊಳಗೆ ಎಲ್ಲಾ ಸರಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಎಲ್ ಕೆ

ನೆಲ್ಲಿಕಟ್ಟೆ ಸ.ಹಿ.ಪ್ರಾ. ಶಾಲೆಯಲ್ಲಿ ವಿದ್ಯಾಜ್ಯೋತಿ ಎಲ್‍.ಕೆ.ಜಿ., ಯುಕೆಜಿ ತರಗತಿ ಉದ್ಘಾಟನೆ Read More »

ಅಂಬಿಕಾದಲ್ಲಿ ’ನಾಟ’ ತರಗತಿಗಳ ಉದ್ಘಾಟನೆ

ಪುತ್ತೂರು : ಪ್ರಸಕ್ತ ವಿದ್ಯಮಾನದಲ್ಲಿ ಡಾಕ್ಟರ್, ಇಂಜಿನಿಯರ್‌ಗಳ ಸಾಲಿಗೆ ಸೇರುವ ಬಹು ಬೇಡಿಕೆಯ ಇನ್ನೊಂದು ವೃತ್ತಿ ಎಂದರೆ ’ಆರ್ಕಿಟೆಕ್ಟ್’. ಅಂತಾರಾಷ್ಟ್ರೀಯ ಮಟ್ಟದಲ್ಲಿ ಮನ್ನಣೆ ಇರುವ ಈ ವೃತ್ತಿಪರ ಶಿಕ್ಷಣಕ್ಕೆ ಸೇರಬೇಕಾದರೆ ಪಿಯುಸಿಯ ನಂತರ ವಿದ್ಯಾರ್ಥಿಗಳು ನಾಟ (ನ್ಯಾಷನಲ್ ಆಪ್ಟಿಟ್ಯೂಡ್ ಟೆಸ್ಟ್ ಇನ್ ಆರ್ಕಿಟೆಕ್ಚರ್) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಬೇಕು ಎಂದು ನಾಟ ಸಂಪನ್ಮೂಲ ವ್ಯಕ್ತಿ ಸುನಿಲ್ ಅಬ್ರಹಾಂ ಹೇಳಿದರು. ಅವರು ನಗರದ ಅಂಬಿಕಾ ವಸತಿಯುತ ಪದವಿ ಪೂರ್ವ ವಿದ್ಯಾಲಯದಲ್ಲಿ 2023-24ನೇ ಶೈಕ್ಷಣಿಕ ಸಾಲಿನ ನಾಟ ತರಗತಿಗಳನ್ನು ಉದ್ಘಾಟಿಸಿ

ಅಂಬಿಕಾದಲ್ಲಿ ’ನಾಟ’ ತರಗತಿಗಳ ಉದ್ಘಾಟನೆ Read More »

ಸುಳ್ಯ ಎನ್ ಎಂ ಸಿಯಲ್ಲಿ ಎನ್ ಸಿ ಸಿ  ವತಿಯಿಂದ ಶಿಕ್ಷಕರ ದಿನಾಚರಣೆ – ಸಾಧಕರಿಗೆ ಸನ್ಮಾನ

ಸುಳ್ಯ: ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಎನ್‌ಸಿಸಿ ವತಿಯಿಂದ ಸಾಧಕ ಶಿಕ್ಷಕರನ್ನು ಗೌರವಿಸುವ ಮೂಲಕ ಶಿಕ್ಷಕರ ದಿನಾಚರಣೆ ಆಚರಿಸಲಾಯಿತು. ಮೈಸೂರು ಮುಕ್ತ ವಿಶ್ವ ವಿದ್ಯಾಲಯದಿಂದ ಡಾಕ್ಟರೇಟ್ ಪದವಿ ಪಡೆದ ಡಾ. ಮಮತಾ ಕೆ ಹಾಗೂ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆಯಾದ ಡಾ. ಅನುರಾಧಾ ಕುರುಂಜಿ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಕಾಲೇಜಿನ ಪ್ರಾಂಶುಪಾಲ ರುದ್ರಕುಮಾರ್  ಎಂ ಎಂ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಆಧುನಿಕ ಯುಗದಲ್ಲಿ ಶಿಕ್ಷಕರು ದಿನದಿಂದ ದಿನಕ್ಕೆ ಹೊಸತನಕ್ಕೆ ತೆರೆದುಕೊಳ್ಳಬೇಕು. ಶಿಕ್ಷಕರು

ಸುಳ್ಯ ಎನ್ ಎಂ ಸಿಯಲ್ಲಿ ಎನ್ ಸಿ ಸಿ  ವತಿಯಿಂದ ಶಿಕ್ಷಕರ ದಿನಾಚರಣೆ – ಸಾಧಕರಿಗೆ ಸನ್ಮಾನ Read More »

ಕಬಡ್ಡಿ : ಫಿಲೋಮಿನಾ ಪ್ರೌಢಶಾಲೆಯ ದೀಕ್ಷಾ ಎಸ್‍., ವಿಜೇತಾ ಜಿಲ್ಲಾಮಟ್ಟಕ್ಕೆ ಆಯ್ಕೆ

ಪುತ್ತೂರು : ಕರ್ನಾಟಕ ಸರಕಾರ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನೆಟ್ಟಣಿಗೆ ಮುಡ್ನೂರು ಆಶ್ರಯದಲ್ಲಿ ನಡೆದ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಸಂತ ಫಿಲೋಮಿನಾ ಪ್ರೌಢಶಾಲೆಯ ಕು. ದೀಕ್ಷಾ ಎಸ್ ಹಾಗೂ ಕು. ವಿಜೇತ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರಿಗೆ ದೈಹಿಕ ಶಿಕ್ಷಣ ಶಿಕ್ಷಕ ನರೇಶ್ ಲೋಬೋ ತರಬೇತಿ ನೀಡಿರುತ್ತಾರೆ. ಅವರರನ್ನ ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು, ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.

ಕಬಡ್ಡಿ : ಫಿಲೋಮಿನಾ ಪ್ರೌಢಶಾಲೆಯ ದೀಕ್ಷಾ ಎಸ್‍., ವಿಜೇತಾ ಜಿಲ್ಲಾಮಟ್ಟಕ್ಕೆ ಆಯ್ಕೆ Read More »

ಈ ಬಾರಿಯೂ ಶಾಲೆಗಳಿಗೆ ದಸರಾ ರಜೆ ಕಡಿತ

ಬೆಂಗಳೂರು: ರಾಜ್ಯ ಸರಕಾರ ರಾಜ್ಯದ ಶಾಲೆಗಳಿಗೆ ಈ ಬಾರಿಯೂ ದಸರಾ ರಜೆಯನ್ನು ಕಡಿತಗೊಳಿಸಿದೆ. ಈ ಹಿನ್ನಲೆಯಲ್ಲಿ ಇದೀಗ ಶಿಕ್ಷಕರಿಂದ ತೀವ್ರ ಆಕ್ಷೇಪ ವ್ಯಕ್ತವಾಗುತ್ತಿದೆ. ಅ.2 ರಿಂದ 29 ರ ವರೆಗೆ ನೀಡಲಾಗುತ್ತಿದ್ದ ದಸರಾ ರಜೆಯನ್ನು  ಕೊರೊನಾ ಹಿನ್ನಲೆಯಲ್ಲಿ ಕಡಿತಗೊಳಿಸಲಾಗಿತ್ತು. ಲಾಕ್ ಡೌನ್ ಸಂದರ್ಭದಲ್ಲಿ ನಡೆಯದ ತರಗತಿಯನ್ನು ಸರಿದೂಗಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿತ್ತು. ಈಗ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಿದರೂ ಹಿಂದಿನ ಕಡಿತ ನೀತಿ ಅನುಸರಿಸುತ್ತಿದೆ. ಸಾಮಾನ್ಯ ಶಾಲೆಗಳಿಗೆ ಅ.8 ರಿಂದ 24 ಕ್ಕೆ ಸೀಮಿತಗೊಳಿಸಲಾಗಿದ್ದು, ವಿಶೇಷ

ಈ ಬಾರಿಯೂ ಶಾಲೆಗಳಿಗೆ ದಸರಾ ರಜೆ ಕಡಿತ Read More »

ಮಿತ್ತೂರು ದಾರುಲ್ ಇರ್ಷಾದ್ ನೂತನ ಪ್ರೌಢ ಶಾಲಾ ಕಟ್ಟಡ ಉದ್ಘಾಟನೆ

ಪುತ್ತೂರು : ಅಲ್ಪಸಂಖ್ಯಾತ ಮಕ್ಕಳು ವಿದ್ಯೆ ಕಲಿಯಬಾರದು, ಅವರು ವಿದ್ಯೆಯಿಂದ ವಂಚಿತರಾಗಬೇಕು ಎಂಬ ಏಕೈಕ ಉದ್ದೇಶದಿಂದ ಕಳೆದ ಅವಧಿಯ ಬಿಜೆಪಿ ಸರಕಾರ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಇಲಾಖೆಯಿಂದ ನೀಡುತ್ತಿದ್ದ ಸ್ಕಾಲರ್ ಶಿಪ್ ರದ್ದು ಮಾಡಿದ್ದರು ಆ ಮೂಲಕ ವಿದ್ಯೆಯ ಹೆಸರಿನಲ್ಲೂ ಕೋಮುವಾದ ಮಾಡಿದ್ದರು ಎಂದು ರಾಜ್ಯ ವಸತಿ, ಅಲ್ಪಸಂಖ್ಯಾತರ ಕಲ್ಯಾಣ ಮತ್ತು ವಕ್ಫ್ ಸಚಿವ ಝಮೀರ್ ಅಹ್ಮದ್ ಹೇಳಿದರು. ಅವರು ಇಡ್ಕಿದು ಗ್ರಾಮದ ಮಿತ್ತೂರು ದಾರುಲ್ ಇರ್ಷಾದ್ ಸಂಸ್ಥೆಯಲ್ಲಿ ಪ್ರಧಾನಮಂತ್ರಿ ಜನವಿಕಾಶ ಯೋಜನೆಯಡಿ ನಿರ್ಮಿಸಲಾದ ಪ್ರೌಢ ಶಾಲಾ ಕಟ್ಟಡವನ್ನು

ಮಿತ್ತೂರು ದಾರುಲ್ ಇರ್ಷಾದ್ ನೂತನ ಪ್ರೌಢ ಶಾಲಾ ಕಟ್ಟಡ ಉದ್ಘಾಟನೆ Read More »

ಪರೀಕ್ಷಾ ವ್ಯವಸ್ಥೆಯಲ್ಲಿ ಬದಲಾವಣೆ | ಎಸ್‍ಎಸ್‍ಎಲ್‍ಸಿ-ಪಿಯುಸಿ ವಿದ್ಯಾರ್ಥಿಗಳಿಗೆ ಶಿಕ್ಷಕರ ದಿನಾಚರಣೆಯಂದೇ ಸಿಹಿ ಸುದ್ದಿ ನೀಡಿದ  ರಾಜ್ಯ ಸರಕಾರ

ಮಂಗಳೂರು: ಶಿಕ್ಷಕರ ದಿನಾಚರಣೆಯಂದೇ ಎಸ್‍ಎಸ್‍ಎಲ್‍ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ರಾಜ್ಯ ಸರಕಾರ ಸಿಹಿ ಸುದ್ದಿಯೊಂದನ್ನು ನೀಡಿದೆ 24ನೇ ಶೈಕ್ಷಣಿಕ ಸಾಲಿನಿಂದ ಎಸ್ಎಸ್ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷಾ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗಿದೆ. ಇದುವರೆಗೆ ವರ್ಷಕ್ಕೆ 2 ಪರೀಕ್ಷೆ ಮಾತ್ರ ನಡೆಸುತ್ತಿದ್ದ ಶಿಕ್ಷಣ ಇಲಾಖೆ ಇನ್ಮುಂದೆ ವರ್ಷಕ್ಕೆ ಮೂರು ಪರೀಕ್ಷೆಗಳನ್ನು ನಡೆಸಲು ತೀರ್ಮಾನಿಸಿದೆ. ಶೈಕ್ಷಣಿಕ ಪ್ರಗತಿ, ಅರ್ಥಪೂರ್ಣ ಕಲಿಕೆ, ಜ್ಞಾನಧಾರಣೆ ವೃದ್ಧಿಸುವ ಉದ್ದೇಶದಿಂದ ಈ ವ್ಯವಸ್ಥೆಯನ್ನು ತರಲಾಗಿದ್ದು, ಎಸ್ಎಸ್ಎಲ್‌ಸಿ ಹಾಗೂ ಪಿಯುಸಿ ವಿದ್ಯಾರ್ಥಿ ನಡೆಸಲಿರುವ 3 ಪರೀಕ್ಷೆಗಳ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.

ಪರೀಕ್ಷಾ ವ್ಯವಸ್ಥೆಯಲ್ಲಿ ಬದಲಾವಣೆ | ಎಸ್‍ಎಸ್‍ಎಲ್‍ಸಿ-ಪಿಯುಸಿ ವಿದ್ಯಾರ್ಥಿಗಳಿಗೆ ಶಿಕ್ಷಕರ ದಿನಾಚರಣೆಯಂದೇ ಸಿಹಿ ಸುದ್ದಿ ನೀಡಿದ  ರಾಜ್ಯ ಸರಕಾರ Read More »

ಕಬಡ್ಡಿ ಪಂದ್ಯಾಟ : ದರ್ಬೆ ಲಿಟ್ಲ್ ಫ್ಲವರ್ ಶಾಲಾ ತಂಡ ಜಿಲ್ಲಾ ಮಟ್ಟಕ್ಕೆ

ಪುತ್ತೂರು: ಕರ್ನಾಟಕ ಸರಕಾರ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನೆಟ್ಟಣಿಗೆ ಮುಡ್ನೂರು ಆಶ್ರಯದಲ್ಲಿ ನಡೆದ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ದರ್ಬೆ ಲಿಟ್ಲ್ ಫ್ಲವರ್ ಶಾಲೆ ಬಾಲಕಿಯರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ ತಂಡವನ್ನು ಜೆನಿಟ ಸಿಂಧು ಪಸನ್ನ, ಜುವೆನ್ನ ಡ್ಯಾಜಲ್ ಕುಟಿನಾ, ಸನ್ನಿಧಿ, ಜಸ್ಮಿತಾ, ಫಾತಿಮತ್ ಶೈಮ, ನಿಶ್ಮಿತಾ ಕೆ, ಹಾರ್ದಿಕ, ಘನಶ್ರೀ, ಆರಾಧನ, ದ್ರಿಶಾ, ಫಾತಿಮತ್ ಅಫ್ರ, ರಶ್ಮಿತಾ, ವೈಷ್ಣವಿ ರೈ, ಸಾಕ್ಷಿ,

ಕಬಡ್ಡಿ ಪಂದ್ಯಾಟ : ದರ್ಬೆ ಲಿಟ್ಲ್ ಫ್ಲವರ್ ಶಾಲಾ ತಂಡ ಜಿಲ್ಲಾ ಮಟ್ಟಕ್ಕೆ Read More »

error: Content is protected !!
Scroll to Top