ಚೆಸ್ ಪಂದ್ಯಾಟವು ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವವನ್ನು ಮೂಡಿಸಲು ಸಹಕಾರಿಯಾಗಿದೆ- ಶೇಷಪ್ಪ ಗೌಡ | ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟ
ಪುತ್ತೂರು: ಪದವಿಪೂರ್ವ ಶಿಕ್ಷಣ ಇಲಾಖೆ ಮತ್ತು ವಿವೇಕಾನಂದ ಪದವಿಪೂರ್ವ ಕಾಲೇಜು ಇದರ ಜಂಟಿ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಬಾಲಕ ಮತ್ತು ಬಾಲಕಿಯರ ಚೆಸ್ ಪಂದ್ಯಾಟದ ಉದ್ಘಾಟನಾ ಕಾರ್ಯಕ್ರಮವು ಕಾಲೇಜಿನ ನೇತಾಜಿ ಸಭಾ ಭವನದಲ್ಲಿ ನಡೆಯಿತು. ವಿಟ್ಲ ಸರಕಾರಿ ಪದವಿ ಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಶೇಷಪ್ಪ ಗೌಡ ಪಂದ್ಯಾಟ ಉದ್ಘಾಟಿಸಿ ಮಾತನಾಡಿ, ಚದುರಂಗ ಅದೃಷ್ಟವನ್ನು ಅವಲಂಬಿಸಿದ ಆಟವಲ್ಲ. ಶುದ್ಧವಾಗಿ ಆಟಗಾರರ ಆಲೋಚನೆ, ಯೋಜನಾ ಸಾಮರ್ಥ್ಯ ಮತ್ತು ಮುಂದಾಲೋಚನೆಗಳನ್ನು ಅವಲಂಬಿಸಿದ ಆಟ. ಸ್ಪರ್ಧಾತ್ಮಕ ಯುಗದಲ್ಲಿ ಇಂತಹ ಕ್ರೀಡೆಗಳು […]