ಕ್ಯಾಂಪಸ್‌

ಅಕ್ಷಯ ಕಾಲೇಜಿನಲ್ಲಿ 77 ನೇ ಸ್ವಾತಂತ್ರೊತ್ಸವ  ಆಚರಣೆ

ಪುತ್ತೂರು: ಅಕ್ಷಯ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಸಂಪ್ಯ ಅಕ್ಷಯ ಕಾಲೇಜಿನಲ್ಲಿ 77ನೇ ಸ್ವಾತಂತ್ರೋತ್ಸವವನ್ನು ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ರಾಜ್ಯ ಪ್ರಶಸ್ತಿ ವಿಜೇತ ನಿವೃತ್ತ ಶಿಕ್ಷಕ, ನಾರಾಯಣ ರೈ ಕುಕ್ಕುವಳ್ಳಿ ಧ್ವಜಾರೋಹಣ ನೆರವೇರಿಸಿ, ಮಾತನಾಡಿ77ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಿದ ನಾವೆಲ್ಲ ಶತಮಾನೋತ್ಸವವನ್ನು ಆಚರಿಸುವಂತಾಗಲಿ. ಅಕ್ಷಯ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ, ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದ ಸಾಧನೆಯನ್ನು ವಿವಿಧ ಮಾಧ್ಯಮಗಳಲ್ಲಿ ಗಮನಿಸಿದ್ದು, ಇನ್ನೂ ಅನೇಕ ಸಾಧನೆಗಳು ವಿದ್ಯಾರ್ಥಿಗಳಿಂದ ಮೂಡಿ ಬರಲಿ ಎಂದು ಹಾರೈಸಿದರು. ಕಾಲೇಜಿನ ಅಧ್ಯಕ್ಷ ಜಯಂತ್ ನಡುಬೈಲು […]

ಅಕ್ಷಯ ಕಾಲೇಜಿನಲ್ಲಿ 77 ನೇ ಸ್ವಾತಂತ್ರೊತ್ಸವ  ಆಚರಣೆ Read More »

ಮಾಣಿಲ ಪ್ರೌಢಶಾಲೆಯಲ್ಲಿ 77ನೇ ಸ್ವಾತಂತ್ರ್ಯೋತ್ಸವ | ವಿದ್ಯಾರ್ಥಿಗಳಿಗೆ ಅಭಿನಂದನೆ

ಮಾಣಿಲ : ಪ್ರತಿಭೆಯನ್ನು ಬಳಸಿಕೊಳ್ಳುವುದರಲ್ಲಿ ಯಶಸ್ಸು ಅಡಗಿದೆ ಎಂದು ಖ್ಯಾತ ನಿರೂಪಕ , ಹಿನ್ನೆಲೆ ಧ್ವನಿ ಕಲಾವಿದ, ನಟ ಬಡೆಕ್ಕಿಲ ಪ್ರದೀಪ್ ಹೇಳಿದರು. ಮಾಣಿಲ ಸರಕಾರಿ ಪ್ರೌಢ ಶಾಲೆಯಲ್ಲಿ ನಡೆದ ಸ್ವಾತಂತ್ರ್ಯ ಹಾಗೂ 10ನೇ ತರಗತಿ ವಿದ್ಯಾರ್ಥಿಗಳ ಅಭಿನಂದನಾ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಅವರು ಮಾತನಾಡಿ, ಸ್ವಾತಂತ್ರ್ಯೋತ್ತರ  ಭಾರತದ ಸಾಧನೆಗಳು , ವ್ಯಕ್ತಿತ್ವ ನಿರ್ಮಾಣ ಹೀಗೆ ವಿವಿಧ ವಿಚಾರಗಳ ಬಗ್ಗೆ ಮಾತನಾಡಿದರು. ಎಸ್‍ ಡಿ ಎಂ ಸಿ ಅಧ್ಯಕ್ಷ ಶಿವಪ್ರಸಾದ್ ಸೊರಂಪಳ್ಳ  ಧ್ವಜಾರೋಹಣ ನೆರವೇರಿಸಿ ಶುಭ ಹಾರೈಸಿದರು. ಈ

ಮಾಣಿಲ ಪ್ರೌಢಶಾಲೆಯಲ್ಲಿ 77ನೇ ಸ್ವಾತಂತ್ರ್ಯೋತ್ಸವ | ವಿದ್ಯಾರ್ಥಿಗಳಿಗೆ ಅಭಿನಂದನೆ Read More »

ಶಾಂತಿಗೋಡು ಅಂಗನವಾಡಿಯಲ್ಲಿ 77ನೇ ಸ್ವಾತಂತ್ರ್ಯೋತ್ಸವ

ಪುತ್ತೂರು: ಶಾಂತಿಗೋಡು ಅಂಗನವಾಡಿ ಕೇಂದ್ರದಲ್ಲಿ 77ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಶಾಂತಿಗೋಡು ಗ್ರಾಮ ಪಂಚಾಯಿತಿ ಸದಸ್ಯೆ ಆಶಾ ಸಚ್ಚೀಂದ್ರ ಬೊಳ್ಳೆಕ್ಕು ಧ್ವಜಾರೋಹಣ ನೆರವೇರಿಸಿದರು. ಸದಸ್ಯರಾದ ಹೊನ್ನಪ್ಪ ಪೂಜಾರಿ ಕೈಂದಾಡಿ, ನಾಗಮ್ಮ ತೋಟ, ಸುಧೀರ್ ಶೆಟ್ಟಿ ಕುದುರೆಪ್ಪಾಡಿ, ಬಾಲವಿಕಾಸ ಸಮಿತಿ ಅಧ್ಯಕ್ಷೆ ಚಂದ್ರಕಲಾ, ಯುವಕ ಮಂಡಲ ಸದಸ್ಯರಾದ ಶಿವಪ್ರಸಾದ್, ವಿನೋದ್ ಕರ್ಪುತ್ತಮೂಲೆ, ಪ್ರವೀಣ್, ಶ್ರೀನಿವಾಸ್, ನೇತ್ರಾವತಿ ನರ್ಸರಿ ಮಾಲಕ ರಘುನಾಥ ಕೈಂದಾಡಿ, ಶ್ರೀಕೃಷ್ಣ, ಹರೀಶ್, ವಿಶ್ವನಾಥ, ಚಿರಂಜೀವಿ ತೋಟ, ಮಕ್ಕಳ ಪೋಷಕರು, ಸ್ತ್ರೀಶಕ್ತಿ ಸದಸ್ಯರು, ಹಳೆವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕರ್ತೆ ನಳಿನಿ

ಶಾಂತಿಗೋಡು ಅಂಗನವಾಡಿಯಲ್ಲಿ 77ನೇ ಸ್ವಾತಂತ್ರ್ಯೋತ್ಸವ Read More »

ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಿಂದ 77ನೇ ಸ್ವಾತಂತ್ರ್ಯೋತ್ಸವ | ಸ್ವಾತಂತ್ರ್ಯದ ಹಿಂದೆ ಅನೇಕ ವೀರಯೋಧರ ಬಲಿದಾನಗಳಿವೆ : ಶ್ರೀಕಾಂತ ಶೆಟ್ಟಿ

ಪುತ್ತೂರು: ಸತ್ಯಾಗ್ರಹಗಳು, ಅಸಹಕಾರ ನಡೆಗಳು ಸ್ವಾತಂತ್ರ್ಯ ಹೋರಾಟದ ಭಾಗವಾಗಿದ್ದದ್ದು ಹೌದಾದರೂ ಅದರಿಂದಲೇ ಸ್ವಾತಂತ್ರ್ಯ ಬಂತು ಎಂಬುದು ತಪ್ಪುಕಲ್ಪನೆ. ಕ್ರಾಂತಿಕಾರಿಗಳ ಬದುಕಿನ ಪುಟಗಳನ್ನು ತೆರೆದರೆ ಸ್ವಾತಂತ್ರ್ಯಕ್ಕಾಗಿ ನಡೆದ ತ್ಯಾಗಗಳು ಕಣ್ಣಮುಂದೆ ಕಟ್ಟಿಕೊಳ್ಳುತ್ತವೆ ಎಂದು ಉಡುಪಿಯ ವಾಗ್ಮಿ ಶ್ರೀಕಾಂತ ಶೆಟ್ಟಿ ಹೇಳಿದರು. ಅವರು ನಗರದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ನಡೆದ ಸ್ವಾತಂತ್ರೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಪ್ರಪಂಚದ ಇತಿಹಾಸದಲ್ಲಿ ಅನೇಕ ರಾಷ್ಟ್ರಗಳ ಮೇಲೆ ಅನ್ಯಧರ್ಮಿಯರ ದಾಳಿಗಳಾಗಿವೆ. ಪರಿಣಾಮ ಒಂದೆರಡು ದಶಕಗಳ ಒಳಗಾಗಿ ದಾಳಿಗೊಳಗಾದ ದೇಶಗಳ ಮೂಲ ಸಂಸ್ಕೃತಿ,

ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಿಂದ 77ನೇ ಸ್ವಾತಂತ್ರ್ಯೋತ್ಸವ | ಸ್ವಾತಂತ್ರ್ಯದ ಹಿಂದೆ ಅನೇಕ ವೀರಯೋಧರ ಬಲಿದಾನಗಳಿವೆ : ಶ್ರೀಕಾಂತ ಶೆಟ್ಟಿ Read More »

ಪ್ರಗತಿ ಪ್ಯಾರಮೆಡಿಕಲ್‌ ಕಾಲೇಜು ಹಾಗೂ ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ 76ನೇ ವರ್ಷದ ಸ್ವಾತಂತ್ರ್ಯೋತ್ಸವ

ಪುತ್ತೂರು: ಪುತ್ತೂರು ಪ್ರಗತಿ ಪ್ಯಾರಮೆಡಿಕಲ್‌ ಕಾಲೇಜು ಹಾಗೂ ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ 76ನೇ ವರ್ಷದ ಸ್ವಾತಂತ್ರೋತ್ಸವವನ್ನು ಆಚರಿಸಲಾಯಿತು. ನಿವೃತ್ತ ಭೂಸೇನೆ ಸೈನಿಕ ಸತ್ಯನಾರಾಯಣ ಭಟ್‌ ಧ್ವಜಾರೋಹಣಗೈದು ಶುಭ ಹಾರೈಸಿದರು. ಸಂಸ್ಥೆಯ ಅಧ್ಯಕ್ಷ ಡಾ.ಯು.ಶ್ರೀಪತಿ ರಾವ್‌ ಮಾತನಾಡಿ, ಇಂದಿನ ವಿದ್ಯಾರ್ಥಿಗಳು ಮುಂದಿನ ಭಾರತ ದೇಶದ ಉನ್ನತ್ತೀಕರಣಕ್ಕಾಗಿ ಸ್ವಇಚ್ಛೆಯಿಂದ ತಮ್ಮನ್ನು ತೊಡಗಿಸಿಕೊಳ್ಳಬೇಕು. ಅದೇ ರೀತಿ ಆಸ್ಪತ್ರೆಯ ಸಿಬ್ಬಂದಿಗಳು ರೋಗಿಗಳ ಜೊತೆ ಸೇವಾ ಮನೋಭಾವದಿಂದ ಕೆಲಸ ಮಾಡಬೇಕು ಎಂದರು. ಸಂಸ್ಥೆಯ ನಿರ್ಧೇಶಕ ಡಾ.ಸುಧಾ ಎಸ್‌ ರಾವ್‌, ಪ್ರಾಂಶುಪಾಲೆ ಪ್ರೀತಾ ಹೆಗ್ಡೆ,

ಪ್ರಗತಿ ಪ್ಯಾರಮೆಡಿಕಲ್‌ ಕಾಲೇಜು ಹಾಗೂ ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ 76ನೇ ವರ್ಷದ ಸ್ವಾತಂತ್ರ್ಯೋತ್ಸವ Read More »

ಭಾರತವನ್ನು ವಿಶ್ವ ಗುರುವನ್ನಾಗಿ ಮಾಡುವುದು ನಮ್ಮ ಜವಾಬ್ದಾರಿ : ಡಾ.ಪ್ರಭಾಕರ ಭಟ್ ಕಲ್ಲಡ್ಕ

ಪುತ್ತೂರು :  ನಮ್ಮ ದೇಶಕ್ಕೆ ಸ್ವಾತಂತ್ರ್ಯ ಲಭಿಸಿ 76 ವರ್ಷಗಳು ಕಳೆದಿದೆ. ಅದಕ್ಕಾಗಿ ಕೋಟ್ಯಾಂತರ ಜನರ ಬಲಿದಾನವಾಗಿದ್ದು, ಅವರ ಆ ಬಲಿದಾನದಿಂದಾಗಿಯೇ ನಮ್ಮ ನೆಲದ ಮೌಲ್ಯ, ನಮ್ಮ ಜೀವನದ ಮೌಲ್ಯಗಳನ್ನು ಉಳಿಸಿಕೊಳ್ಳಲು ಸಾಧ್ಯವಾಗಿದೆ. ನಮ್ಮ ದೇಶ ಉಳಿದ ದೇಶಗಳಿಗಿಂತ ಭಿನ್ನವಾಗಿದ್ದು ಇಲ್ಲಿ ನಾವು ಕಲ್ಲು, ಮಣ್ಣು, ನೀರಲ್ಲಿ ದೇವರನ್ನು ಕಾಣುತ್ತೇವೆ. ವ್ಯಕ್ತಿಯನ್ನು ಪೂಜೆ ಮಾಡದೆ ದೇಶವನ್ನು ಪೂಜೆ ಮಾಡುವ ಜನ ಭಾರತೀಯರಾಗಿದ್ದಾರೆ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್  ಹೇಳಿದರು. ಪುತ್ತೂರು

ಭಾರತವನ್ನು ವಿಶ್ವ ಗುರುವನ್ನಾಗಿ ಮಾಡುವುದು ನಮ್ಮ ಜವಾಬ್ದಾರಿ : ಡಾ.ಪ್ರಭಾಕರ ಭಟ್ ಕಲ್ಲಡ್ಕ Read More »

ನರೇಂದ್ರ ಪ.ಪೂ.ಕಾಲೇಜಿನಲ್ಲಿ ವಿದ್ಯಾರ್ಥಿಗಳ ಪ್ರತಿಭಾ ಅನಾವರಣ

ಪುತ್ತೂರು: ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಅನಾವರಣಗೊಳಿಸಲು ಇದೊಂದು ಉತ್ತಮ ವೇದಿಕೆಯಾಗಿದ್ದು, ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಸಾಹಿತ್ಯ,ಸಂಗೀತ,ನೃತ್ಯ,ನಾಟಕ ಮುಂತಾದ ಸೃಜನಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಾಗ ಮಾತ್ರ ಉತ್ತಮ ವ್ಯಕ್ತಿತ್ವ, ಉಜ್ವಲ ಭವಿಷ್ಯ ನಿರ್ಮಾಣ ಸಾಧ್ಯ ಎಂದು ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಜೊತೆ ಕಾರ್‍ಯದರ್ಶಿ ರೂಪಲೇಖ ಹೇಳಿದರು. ಅವರು ನರೇಂದ್ರ ಪ.ಪೂ.ಕಾಲೇಜಿನಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಾ ಅನಾವರಣ ಕಾರ್‍ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸೋಲು ಗೆಲುವು ಶಾಶ್ವತವಲ್ಲ ಎಂಬ ಸತ್ಯದ ಅರಿವಿನೊಡನೆ ಮುನ್ನಡೆಯಿರಿ. ಅವಕಾಶಗಳನ್ನು ಉತ್ತಮ ಅಭಿಲಾಷೆಯೊಂದಿಗೆ ನಿಮ್ಮದಾಗಿಸಿಕೊಳ್ಳಿ ಮತ್ತು ಈ

ನರೇಂದ್ರ ಪ.ಪೂ.ಕಾಲೇಜಿನಲ್ಲಿ ವಿದ್ಯಾರ್ಥಿಗಳ ಪ್ರತಿಭಾ ಅನಾವರಣ Read More »

ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಸಂಭ್ರಮದ 77ನೇ ಸ್ವಾತಂತ್ರ್ಯೋತ್ಸವ

ಸವಣೂರು: ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ 77ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಸಂಸ್ಥೆಯ ಸಂಚಾಲಕ ಸವಣೂರು ಸೀತಾರಾಮ ರೈ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ನಮ್ಮ ದೇಶಕ್ಕೆ ಸ್ವಾತಂತ್ರ್ಯ ಸಿಗಲು ಅನೇಕ ವೀರರು ತಮ್ಮ ಬೆವರು, ನೆತ್ತರು ಹರಿಸಿದ್ದಾರೆ. ಇಂದು ಅವರ ತ್ಯಾಗ, ಬಲಿದಾನ ಹಾಗೂ ದೇಶಭಕ್ತಿಯನ್ನು ಕೊಂಡಾಡುವ ಕಾರ್ಯಕ್ರಮಗಳು ಎಲ್ಲೆಡೆ ನಡೆಯುತ್ತಿದೆ .ಇಂದಿನ ವಿದ್ಯಾರ್ಥಿಗಳು ಮುಂದಿನ ಉತ್ತಮ ಪ್ರಜೆಯಾಗಲು ದೇಶಭಕ್ತಿಯನ್ನು ರೂಡಿಸಿಕೊಳ್ಳಬೇಕು ಎಂದು ಹೇಳಿದರು. ದ್ವಜಾರೋಹಣ ನಂತರ ವಿದ್ಯಾರ್ಥಿಗಳಿಗೆ ಸಿಹಿ ವಿತರಿಸಲಾಯಿತು. ಬಳಿಕ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಭಾಷಣ

ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಸಂಭ್ರಮದ 77ನೇ ಸ್ವಾತಂತ್ರ್ಯೋತ್ಸವ Read More »

ಮೌಂಟನ್ ವ್ಯೂ ಆಂಗ್ಲ ಮಾಧ್ಯಮ ಶಾಲಾ ರಕ್ಷಕ-ಶಿಕ್ಷಕ ಸಂಘದ ಸಭೆ

ಪುತ್ತೂರು: ನಾವು ವಿದ್ಯೆ ಕಲಿತು ಎಷ್ಟೇ ದೊಡ್ಡ ಉನ್ನತ ಪದವಿ ಪಡೆದು ಸಮಾಜದಲ್ಲಿ ದೊಡ್ಡ ವ್ಯಕ್ತಿಗಳಾಗಬಹುದು. ಆದರೆ ನಮಗೆ ನಮ್ಮ ತಂದೆ ತಾಯಿಯ ಆಶೀರ್ವಾದ ಇಲ್ಲದೇ ಇದ್ದರೆ ನಾವು ಶೂನ್ಯ ವ್ಯಕ್ತಿಗಳಾಗುತ್ತೇವೆ ಎಂದು ಪುತ್ತೂರು ಶಾಸಕ ಅಶೋಕ್ ರೈ ಹೇಳಿದರು. ಅವರು ಸಾಲ್ಮರ ಮೌಂಟನ್ ವ್ಯೂ ಆಂಗ್ಲ ಮಾಧ್ಯಮ ಹಾಗೂ ಪೌಢ ಶಾಲೆಯಲ್ಲಿ ನಡೆದ ರಕ್ಷಕ ಶಿಕ್ಷಕ ಸಂಘದ ಸಭೆಯಲ್ಲಿ ಮಾತನಾಡಿದರು. ವಿದ್ಯಾರ್ಥಿಗಳು ತಮ್ಮಲ್ಲಿರುವ ಪ್ರತಿಭೆಗಳನ್ನು ಪ್ರದರ್ಶನ ಮಾಡಬೇಕು, ನನ್ನಿಂದ ಏನೂ ಸಾಧ್ಯವಿಲ್ಲ ಎಂಬ ಚಿಂತೆಯನ್ನು ಬಿಟ್ಟು

ಮೌಂಟನ್ ವ್ಯೂ ಆಂಗ್ಲ ಮಾಧ್ಯಮ ಶಾಲಾ ರಕ್ಷಕ-ಶಿಕ್ಷಕ ಸಂಘದ ಸಭೆ Read More »

ಚೆಸ್ ಪಂದ್ಯಾಟ : ಅವನಿ ಎಸ್. ನಾಯಕ್ ಕ್ಷೇತ್ರ ಮಟ್ಟಕ್ಕೆ ಆಯ್ಕೆ

ಪುತ್ತೂರು: ಕಲ್ಲಡ್ಕ ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ನಡೆದ ವಿದ್ಯಾಭಾರತಿ ರಾಜ್ಯಮಟ್ಟದ ಚೆಸ್ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ಅವನಿ ಎಸ್ ನಾಯಕ್ ದಕ್ಷಿಣ ಕನ್ನಡ ಜಿಲ್ಲಾ ತಂಡವನ್ನು ಪ್ರತಿನಿಧಿಸಿ ಪ್ರಥಮ ಸ್ಥಾನ ಪಡೆದು  ಹೈದರಾಬಾದ್‌ನಲ್ಲಿ ನಡೆಯಲಿರುವ ಕ್ಷೇತ್ರ ಮಟ್ಟದ ಚೆಸ್ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾರೆ. ಈಕೆ ವಿವೇಕಾನಂದ ಪದವಿಪೂರ್ವ ಕಾಲೇಜಿನ ಉಪನ್ಯಾಸಕಿ ಸುಮ ಅವರ ಪುತ್ರಿ. ವಿದ್ಯಾರ್ಥಿನಿಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.

ಚೆಸ್ ಪಂದ್ಯಾಟ : ಅವನಿ ಎಸ್. ನಾಯಕ್ ಕ್ಷೇತ್ರ ಮಟ್ಟಕ್ಕೆ ಆಯ್ಕೆ Read More »

error: Content is protected !!
Scroll to Top