ವಿವೇಕ ವಿಜ್ಞಾನ 2023 ಕಾರ್ಯಾಗಾರ ಸಮಾರೋಪ | ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಕಲಿಕೆ ಹೆಚ್ಚು ಪ್ರಯೋಜನಕಾರಿ: ನವೀನ್ ಸ್ಟೀಫನ್ ವೇಗಸ್
ಪುತ್ತೂರು: ವಿಜ್ಞಾನದ ಕಲಿಕೆಯಲ್ಲಿ ಅನ್ವಯ ಮತ್ತು ಸಾಂಪ್ರಾದಾಯಿಕ ಪದ್ಧತಿಯ ಕಲಿಕೆಯನ್ನು ಅಳವಡಿಸಿಕೊಂಡರೆ ವಿಜ್ಞಾನದ ವಿಷಯವೂ ಕೂಡಾ ಆಸಕ್ತಿದಾಯಕವಾಗಬಲ್ಲುದು. ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಕಲಿಕೆ ಹೆಚ್ಚು ಪ್ರಯೋಜನಕಾರಿ ಎಂಬುದಕ್ಕೆ ಅಧ್ಯಾಪಕರ ಕಾರ್ಯಾಗಾರ ‘ವಿವೇಕ-ವಿಜ್ಞಾನ 2023’ ಸಾಕ್ಷಿಯಾಗಿದೆ ಎಂದು ಪುತ್ತೂರು ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯಾಧಿಕಾರಿ ನವೀನ್ ಸ್ಟೀಫನ್ ವೇಗಸ್ ಹೇಳಿದರು. ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪ್ರೌಢಶಾಲಾ ವಿಜ್ಞಾನ ಹಾಗೂ ಗಣಿತ ಅಧ್ಯಾಪಕರ ಕಾರ್ಯಾಗಾರ ‘ವಿವೇಕ-ವಿಜ್ಞಾನ 2023’ ಕಾರ್ಯಕ್ರಮದ ಸಮಾರೋಪ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡಿದರು. ಶಿಕ್ಷಕ ವೃತ್ತಿ […]










