ಸರಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮಕ್ಕೆ ಅನುಮತಿ ನೀಡಬೇಕಿದೆ: ಶಾಸಕ ಅಶೋಕ್ ರೈ | ಸಾಮೆತ್ತಡ್ಕ ಸರಕಾರಿ ಹಿ ಪ್ರಾ ಶಾಲೆಯಲ್ಲಿ ವಿವೇಕ ತರಗತಿ ಉದ್ಘಾಟನೆ
ಪುತ್ತೂರು: ಸರಕಾರಿ ಶಾಲೆಗಳಲ್ಲಿ ಕನ್ನಡ ಕಲಿಕೆಯ ಜೊತೆಗೆ ಇಂಗ್ಲೀಷ್ ಕಲಿಕೆಗೂ ಅವಕಾಶ ನೀಡಿದರೆ ಮುಂದಿನ ದಿನಗಳಲ್ಲಿ ಸರಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಸಂಖ್ಯೆಯೂ ಹೆಚ್ಚಾಗಲಿದೆ ಈ ನಿಟ್ಟಿನಲ್ಲಿ ಮುಂದಿನ ಅಧಿವೇಶನದಲ್ಲಿ ಸರಕಾರವನ್ನು ಒತ್ತಾಯಮಾಡುವುದಾಗಿ ಪುತ್ತೂರು ಶಾಸಕ ಅಶೋಕ್ ರೈ ಹೇಳಿದರು. ಅವರು ಸಾಮೆತ್ತಡ್ಕ ಸರಕಾರಿ ಹಿ ಪ್ರಾ ಶಾಲೆಯಲ್ಲಿ ವಿವೇಕ ತರಗತಿಯನ್ನು ಉದ್ಘಾಟಿಸಿ ಮಾತನಾಡಿದರು. ಬಡವರ ಮಕ್ಕಳು ಇಂಗ್ಲೀಷ್‌ಕಲಿಯಬೇಕು, ಕೇವಲ ಉಳ್ಳವರ ಮಕ್ಕಳು ಮಾತ್ರ ಖಾಸಗಿ ಶಾಲೆಗಳಿಗೆ ತೆರಳಿ ಇಂಗ್ಲೀಷ್ ಕಲಿಯುವಂತಾಗಬಾರದು, ಉಳ್ಳವರೂ ಇಲ್ಲದವರೂ ಎಲ್ಲರ ಮಕ್ಕಳೂ […]