ಕ್ಯಾಂಪಸ್‌

3ನೇ ತರಗತಿ ವಿದ್ಯಾರ್ಥಿನಿ ಪತ್ರಕ್ಕೆ ಸಿಎಂ ಕಚೇರಿ ಸ್ಪಂದನೆ!! | ಮಾದಕ ವಸ್ತು ಅಕ್ರಮ ಮಾರಾಟದ ಅಂಗಡಿಗೆ ಪೊಲೀಸ್ ದಾಳಿ

ಸುಬ್ರಹ್ಮಣ್ಯ: ಅಂಗಡಿ ಮಾಲಕರೊಬ್ಬರು ನಿಷೇಧದ ನಡುವೆಯೇ ಶಾಲಾ ಕಾಲೇಜು ಬಳಿ ತಂಬಾಕು ಮಾರಾಟ ಮಾಡುತ್ತಿರುವ ಕುರಿತು ಶಾಲಾ ಬಾಲಕಿಯೊಬ್ಬಳು ಮುಖ್ಯಮಂತ್ರಿಗೆ ಕಳುಹಿಸಿದ ಪತ್ರದಿಂದ ಶೀಘ್ರ ಸ್ಪಂದನೆ ದೊರಕಿದೆ. ಪತ್ರ ತಲುಪಿದ ಸ್ವಲ್ಪ ಹೊತ್ತಿನಲ್ಲೇ ಅಂಗಡಿಗೆ ಪೊಲೀಸರು ದಾಳಿ ನಡೆಸಿದ್ದಾರೆ. ಇದು ಕಡಬ ತಾಲೂಕಿನ ಸುಬ್ರಹ್ಮಣ್ಯ ಬಳಿಯ ಕೈಕಂಬದಲ್ಲಿ ನಡೆದಿದೆ. ಕೈಕಂಬ ಪಿಲಿಕಜೆ ನಿವಾಸಿ 3ನೇ ತರಗತಿ ವಿದ್ಯಾರ್ಥಿನಿ ಅಯೊರ ಪತ್ರ ಬರೆದ ಬಾಲಕಿ. ಕೆಲ ದಿನಗಳ ಹಿಂದೆ ಪತ್ರಿಕೆಯೊಂದರಲ್ಲಿ ಬಂದಿದ್ದ ಧಾರ್ಮಿಕ ಕೇಂದ್ರಗಳ ಬಳಿಯ ಮಾದಕ ವಸ್ತು […]

3ನೇ ತರಗತಿ ವಿದ್ಯಾರ್ಥಿನಿ ಪತ್ರಕ್ಕೆ ಸಿಎಂ ಕಚೇರಿ ಸ್ಪಂದನೆ!! | ಮಾದಕ ವಸ್ತು ಅಕ್ರಮ ಮಾರಾಟದ ಅಂಗಡಿಗೆ ಪೊಲೀಸ್ ದಾಳಿ Read More »

ಜಿಲ್ಲಾ ಮಟ್ಟದ ಈಜು ಸ್ಪರ್ಧೆ: ಅಂಬಿಕಾದ ಅನಿಕೇತ್ ಮತ್ತು ಧನ್ವಿತ್ ರಾಜ್ಯಮಟ್ಟಕ್ಕೆ ಆಯ್ಕೆ

ಪುತ್ತೂರು: ನೆಲ್ಲಿಕಟ್ಟೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದ ಪ್ರಥಮ ಪಿ.ಯು.ಸಿ ವಿದ್ಯಾರ್ಥಿಗಳಾದ ಧನ್ವಿತ್ ಹಾಗೂ ಅನಿಕೇತ್ ಎನ್. ಅವರು ಜಿಲ್ಲಾ ಮಟ್ಟದ ಈಜು ಸ್ಪರ್ಧೆಗಳಲ್ಲಿ ಬಹುಮಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಪದವಿ ಪೂರ್ವ ಶಿಕ್ಷಣ ಇಲಾಖೆಯ ಜಿಲ್ಲಾ ಘಟಕ ಹಾಗೂ ಮಂಗಳೂರಿನ ಬಲ್ಮಠದ ಸರಕಾರಿ ಪದವಿ ಪೂರ್ವ ಬಾಲಕಿಯರ ಕಾಲೇಜಿನ ಆಶ್ರಯದಲ್ಲಿ ಮಂಗಳೂರಿನ ಮಂಗಳ ಈಜು ಕ್ಲಬ್’ನಲ್ಲಿ ಸ್ಪರ್ಧೆ ನಡೆದಿತ್ತು. ಪುತ್ತೂರು ಮರೀಲಿನ ಕೇಶವ ಕುಮಾರ್ ಕೆ.ಎಂ. ಮತ್ತು ಮೀನಾಕ್ಷಿ ದಂಪತಿ ಪುತ್ರ ಧನ್ವಿತ್ 100 ಮೀಟರ್ ಫ್ರೀ

ಜಿಲ್ಲಾ ಮಟ್ಟದ ಈಜು ಸ್ಪರ್ಧೆ: ಅಂಬಿಕಾದ ಅನಿಕೇತ್ ಮತ್ತು ಧನ್ವಿತ್ ರಾಜ್ಯಮಟ್ಟಕ್ಕೆ ಆಯ್ಕೆ Read More »

ಶಾಲಾ, ಕಾಲೇಜು ರಜೆ ನಿರ್ಧಾರ ಜಿಲ್ಲಾಧಿಕಾರಿಗಳಿಗೆ ಬಿಟ್ಟದ್ದು! | ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಮಹತ್ವದ ಆದೇಶ ನೀಡಿದ ಸರಕಾರ

ಬೆಂಗಳೂರು: ನಾಳೆ ನಡೆಯುವ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಆಯಾ ಜಿಲ್ಲೆಗಳ ಪರಿಸ್ಥಿತಿಯನ್ನು ಅವಲೋಕಿಸಿಕೊಂಡು ಶಾಲಾ – ಕಾಲೇಜುಗಳಿಗೆ ರಜೆ ನೀಡುವ ಅಧಿಕಾರವನ್ನು ಜಿಲ್ಲಾಧಿಕಾರಿಗಳಿಗೆ ನೀಡಲಾಗಿದೆ. ಈ ಬಗ್ಗೆ ಆದೇಶ ಹೊರಡಿಸಿರುವ ಸಾರ್ವಜನಿಕ ಶಿಕ್ಷಣ ಇಲಾಖೆ, ಪರಿಸ್ಥಿತಿಯನ್ನು ಗಮನಿಸಿಕೊಂಡು ಸೆ. 29ರಂದು ನಡೆಯುವ ಕರ್ನಾಟಕ ಬಂದ್’ಗೆ ರಜೆಯನ್ನು ನೀಡುವಂತೆ ಸೂಚಿಸಿದೆ. ಖಾಸಗಿ ಶಾಲೆಗಳ ಒಕ್ಕೂಟ ಕರ್ನಾಟಕ ಬಂದ್‌ಗೆ ನೈತಿಕ ಬೆಂಬಲ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಕರ್ನಾಟಕ ಬಂದ್ ಯಶಸ್ವಿಯಾಗುವ ಲಕ್ಷಣಗಳಿವೆ. ಜಿಲ್ಲಾಧಿಕಾರಿಗಳು ರಜೆ ನೀಡುವ ನಿರ್ಧಾರ ತೆಗೆದುಕೊಳ್ಳುವಂತೆ ಖಾಸಗಿ ಶಾಲೆ

ಶಾಲಾ, ಕಾಲೇಜು ರಜೆ ನಿರ್ಧಾರ ಜಿಲ್ಲಾಧಿಕಾರಿಗಳಿಗೆ ಬಿಟ್ಟದ್ದು! | ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಮಹತ್ವದ ಆದೇಶ ನೀಡಿದ ಸರಕಾರ Read More »

ಅ. 6-7: ಪುತ್ತೂರು ಶೈಕ್ಷಣಿಕ ವಲಯದ ಪ್ರಾಥಮಿಕ, ಪ್ರೌಢಶಾಲಾ ಕ್ರೀಡಾಕೂಟ ‘ಕ್ರೀಡೋತ್ಸವ-2023’

ಉಪ್ಪಿನಂಗಡಿ: ಪುತ್ತೂರು ಶೈಕ್ಷಣಿಕ ವಲಯದ 2023-24ನೇ ಸಾಲಿನ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕರ ಹಾಗೂ ಬಾಲಕಿಯರ ಕ್ರೀಡಾಕೂಟ ‘ಕ್ರೀಡೋತ್ಸವ-2023’ ಅ. 6ರಂದು ಸರ್ವೋದಯ ಪ್ರೌಢಶಾಲಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಉಪ್ಪಿನಂಗಡಿ ಪೆರಿಯಡ್ಕ ಸರ್ವೋದಯ ಪ್ರೌಢಶಾಲೆ ಆಶ್ರಯದಲ್ಲಿ ಕ್ರೀಡೋತ್ಸವ ಹಮ್ಮಿಕೊಳ್ಳಲಾಗಿದೆ. ಅ. 6ರಂದು ಬೆಳಿಗ್ಗೆ 9ಕ್ಕೆ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಅ. 7ರಂದು ಶನಿವಾರ ಅಪರಾಹ್ನ 3ರಿಂದ ಸಮಾರೋಪ ಸಮಾರಂಭ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ಅ. 6-7: ಪುತ್ತೂರು ಶೈಕ್ಷಣಿಕ ವಲಯದ ಪ್ರಾಥಮಿಕ, ಪ್ರೌಢಶಾಲಾ ಕ್ರೀಡಾಕೂಟ ‘ಕ್ರೀಡೋತ್ಸವ-2023’ Read More »

ಅಂಬಿಕಾ ವಿದ್ಯಾಲಯದ ನಿಯತಿ ಭಟ್ ಗೆ ಬಹುಮಾನ

ಪುತ್ತೂರು: ಬಪ್ಪಳಿಗೆಯಲ್ಲಿರುವ ಅಂಬಿಕಾ ಸಿಬಿಎಸ್ಇ ವಿದ್ಯಾಲಯದ ವಿದ್ಯಾರ್ಥಿನಿ ನಿಯತಿ ಭಟ್ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪುತ್ತೂರು ಘಟಕದ ವತಿಯಿಂದ ಆಯೋಜಿಸಲಾದ ತಾಲೂಕು ದಸರಾ ಕ್ರೀಡಾಕೂಟದಲ್ಲಿ ಆರ್ಟಿಫಿಶಿಯಲ್ ಹಾಗೂ ಟ್ರೆಡಿಷನಲ್ ಯೋಗ ಸ್ಪರ್ಧೆಗಳಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ. ಮುಕ್ರಂಪಾಡಿಯ ಗೋಕುಲ ಲೇಔಟಿನ ಪ್ರವೀಣ ಡಿ ಹಾಗೂ ಚಿತ್ಕಲಗೌರಿ ಕೆ ಅವರ ಪುತ್ರಿಯಾಗಿರುವ ನಿಯತಿ, 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಸೆ.23ರಂದು ಕೊಂಬೆಟ್ಟಿನ ತಾಲೂಕು ಕ್ರೀಡಾಂಗಣದಲ್ಲಿ ಸ್ಪರ್ಧೆ ಆಯೋಜನೆಗೊಂಡಿತ್ತು.

ಅಂಬಿಕಾ ವಿದ್ಯಾಲಯದ ನಿಯತಿ ಭಟ್ ಗೆ ಬಹುಮಾನ Read More »

ನಾಳೆ (ಸೆ.28): ವಿದ್ಯಾಮಾತಾ ಅಕಾಡೆಮಿಯ ಸುಳ್ಯ ಶಾಖೆ ಶುಭಾರಂಭ

ಪುತ್ತೂರು: ಭಾರತ ಸರಕಾರದ ಮಾನ್ಯತೆ ಪಡೆದಿರುವ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಮತ್ತು ಖಾಸಗಿ ಉದ್ಯೋಗಗಳ ವೃತ್ತಿಪರ ಕೌಶಲ್ಯ ತರಬೇತಿ ಸಂಸ್ಥೆ ವಿದ್ಯಾಮಾತಾ ಅಕಾಡೆಮಿಯ ಸುಳ್ಯ ಶಾಖೆ ಸೆ. 28ರಂದು ಸುಳ್ಯ ರಥಬೀದಿಯಲ್ಲಿನ ಟಿ.ಎ.ಪಿ.ಸಿ.ಎಂ.ಎಸ್. ಸಂಕೀರ್ಣದಲ್ಲಿ ಶುಭಾರಂಭಗೊಳ್ಳಲಿದೆ. ವಿದ್ಯಾಮಾತಾ ಇದರ ಮಾತೃ ಸಂಸ್ಥೆ ವಿದ್ಯಾಮಾತಾ ಫೌಂಡೇಶನ್ ಈಗಾಗಲೇ 3 ರಾಜ್ಯಮಟ್ಟದ ಉದ್ಯೋಗ ಮೇಳ, ಸುಮಾರು 500ಕ್ಕೂ ಹೆಚ್ಚು ನೇರ ಉದ್ಯೋಗ ಸಂದರ್ಶನಗಳ ಮೂಲಕ 5000ಕ್ಕೂ ಮಿಕ್ಕಿದ ವಿದ್ಯಾರ್ಥಿಗಳಿಗೆ ವಿವಿಧ ಕಂಪನಿಗಳಲ್ಲಿ ಉದ್ಯೋಗ ಕೊಡಿಸುವಲ್ಲಿ ಸಫಲತೆ ಕಂಡಿದೆ. ಕರಾವಳಿಯಲ್ಲಿ ಸ್ಪರ್ಧಾತ್ಮಕ

ನಾಳೆ (ಸೆ.28): ವಿದ್ಯಾಮಾತಾ ಅಕಾಡೆಮಿಯ ಸುಳ್ಯ ಶಾಖೆ ಶುಭಾರಂಭ Read More »

ದಸರಾ ಕ್ರೀಡಾಕೂಟ: ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಪುತ್ತೂರು: ತಾಲೂಕು ಮಟ್ಟದ ದಸರಾ ಕ್ರೀಡಾಕೂಟದ ಮಹಿಳೆಯರ ಖೋ-ಖೋ ಪಂದ್ಯಾಟದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಬಾಲಕಿಯರು ಪ್ರಥಮ ಸ್ಥಾನ ಹಾಗೂ ಬಾಲಕರ ತಂಡ ದ್ವಿತೀಯ ಸ್ಥಾನ  ಪಡೆದು ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಆಯ್ಕೆಯಾಗಿದೆ. ಬಾಲಕಿಯರ 4*100 ಮೀಟರ್ ರಿಲೇಯಲ್ಲಿ ಗುಣಶ್ರೀ, ಪ್ರತೀಕ್ಷಾ, ತ್ರಿಶಾ, ಕೀರ್ತಿ ಅವರ ತಂಡ ದ್ವಿತೀಯ ಸ್ಥಾನ ಗಳಿಸಿದೆ. ಕೀರ್ತಿ ಎತ್ತರ ಜಿಗಿತದಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದಾರೆ. ವಿದ್ಯಾರ್ಥಿಗಳ ಸಾಧನೆಯನ್ನು ಶಾಲಾ ಆಡಳಿತ ಮಂಡಳಿ, ಮುಖ್ಯಶಿಕ್ಷಕರು, ಸಿಬ್ಬಂದಿ ವರ್ಗ ಅಭಿನಂದಿಸಿದೆ.

ದಸರಾ ಕ್ರೀಡಾಕೂಟ: ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ಜಿಲ್ಲಾ ಮಟ್ಟಕ್ಕೆ ಆಯ್ಕೆ Read More »

ನರಿಮೊಗರು ಶಾಲೆಯಲ್ಲಿ ಸ್ವಚ್ಛತಾ ಹಿ ಸೇವಾ-ಸ್ವಚ್ಛತೆಯೇ ಸೇವೆ ಅಭಿಯಾನದಲ್ಲಿ ಪ್ರತಿಜ್ಞಾ ವಿಧಿ

ಮುಕ್ವೆ: ನರಿಮೊಗರು ಶಾಲೆಯಲ್ಲಿ ಬುಧವಾರ ಹಮ್ಮಿಕೊಂಡ ಸ್ವಚ್ಛತಾ ಹಿ ಸೇವಾ, ಸ್ವಚ್ಛತೆಯೇ ಸೇವೆ ಅಭಿಯಾನ -2023ರಲ್ಲಿ ಪ್ರತಿಜ್ಞಾ ವಿಧಿ ಕಾರ್ಯಕ್ರಮ ನೆರವೇರಿಸಲಾಯಿತು. ಗ್ರಾಮ ಪಂಚಾಯಿತಿ ಅಧ್ಯಕ್ಷೆ ಹರಿಣಿ ಪಂಜಳ, ಉಪಾಧ್ಯಕ್ಷ ಉಮೇಶ್ ಇಂದಿರಾನಗರ, ಎಸ್ ಡಿ ಎಂ ಸಿ ಅಧ್ಯಕ್ಷ ಕೃಷ್ಣರಾಜ ಜೈನ್, ಸಲೀಂ ಮಾಯಂಗಳ, ಸೌಮ್ಯ ರಮೇಶ್, ಗ್ರಾಮ ಪಂಚಾಯಿತಿ ನಿಕಟ ಪೂರ್ವ ಉಪಾಧ್ಯಕ್ಷ ಸುಧಾಕರ ಕುಲಾಲ್, ಸದಸ್ಯರಾದ ಪುಷ್ಪಾವತಿ, ಗಣೇಶ್, ಜಯಲಕ್ಷ್ಮಿ, ಆಶಾ ಕಾರ್ಯಕರ್ತೆ ವಾಣಿ, ಸ್ವಚ್ಛತಾ ಸಿಬ್ಬಂದಿಗಳಾದ ಸುಜಾತಾ, ನಮಿತಾ, ಶಾಲಾ ಶಿಕ್ಷಕರಾದ

ನರಿಮೊಗರು ಶಾಲೆಯಲ್ಲಿ ಸ್ವಚ್ಛತಾ ಹಿ ಸೇವಾ-ಸ್ವಚ್ಛತೆಯೇ ಸೇವೆ ಅಭಿಯಾನದಲ್ಲಿ ಪ್ರತಿಜ್ಞಾ ವಿಧಿ Read More »

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ತರಬೇತಿ

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಸಮಾಜಶಾಸ್ತ್ರ ವಿಭಾಗ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಘಟಕದ ವತಿಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಕ್ರಮ ಬುಧವಾರ ನಡೆಯಿತು. ಮಂಗಳೂರು ಸರ್ವಜ್ಞ ಅಕಾಡೆಮಿ ನಿರ್ದೇಶಕ ಸುರೇಶ್ ಎಂ.ಎಸ್. ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು. ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ದಿನೇಶ ಪಿ.ಟಿ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕಿ ಆರತಿ ಕೆ. ಉಪಸ್ಥಿತರಿದ್ದರು. ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ, ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಘಟಕದ ಸಂಯೋಜಕ ಮನೋಹರ ಪ್ರಾಸ್ತಾವಿಕವಾಗಿ ಮಾತನಾಡಿದರು. ದೀಕ್ಷಿತ್ ಸ್ವಾಗತಿಸಿದರು. ವಿದ್ಯಾರ್ಥಿ ವಿಜ್ಞೇಶ್

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ತರಬೇತಿ Read More »

ಕನ್ನಡ ಎಂ.ಎ. ವಿದ್ಯಾಭ್ಯಾಸಕ್ಕೆ ಕಸಾಪ ಪುತ್ತೂರು ಘಟಕದ ಸಹಾಯಹಸ್ತ | ವಿದ್ಯಾರ್ಥಿಗಳಿಗಾಗಿ ತಂದಿರುವ ಹೊಸ ಯೋಜನೆಯ ಬಗ್ಗೆ ಇಲ್ಲಿದೆ ಮಾಹಿತಿ

ಪುತ್ತೂರು: ಕನ್ನಡ ಐಚ್ಛಿಕ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆಯುವವರಿಗೆ ನೆರವಾಗಲು ಕನ್ನಡ ಸಾಹಿತ್ಯ ಪರಿಷತ್’ನ ಪುತ್ತೂರು ಘಟಕ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. ಪ್ರಸ್ತುತ ಪದವಿ ವ್ಯಾಸಂಗ ಪೂರೈಸಿ ಆರ್ಥಿಕ ಸಮಸ್ಯೆಯಿಂದ ಉನ್ನತ ವ್ಯಾಸಂಗ ಮಾಡಲು ಅವಕಾಶ ವಂಚಿತ ವಿದ್ಯಾರ್ಥಿಗಳು ಅಥವಾ ಆಸಕ್ತ ವಿದ್ಯಾರ್ಥಿಗಳಿಗಾಗಿ ದಿನನಿತ್ಯದ ತರಗತಿಗಳಿಗೆ ಹಾಜರಾಗಿ ಕನ್ನಡದಲ್ಲಿ ಎಂ.ಎ. ಮಾಡಲು ಪುತ್ತೂರು ತಾಲೂಕಿನಲ್ಲಿರುವ ವಿದ್ಯಾ ಸಂಸ್ಥೆಯೊಂದರಲ್ಲಿ ಅವಕಾಶ ಕಲ್ಪಿಸಲಾಗಿದೆ. ಆರ್ಥಿಕವಾಗಿ ಸಮಸ್ಯೆ ಇರುವ ಬಡ ವಿದ್ಯಾರ್ಥಿಗಳಿಗೆ ದಾನಿಗಳ ಸಹಕಾರದಿಂದ ವಿದ್ಯಾರ್ಥಿ ವೇತನದ ವ್ಯವಸ್ಥೆ ಮಾಡಲಾಗಿದೆ. ಸಂಖ್ಯೆ

ಕನ್ನಡ ಎಂ.ಎ. ವಿದ್ಯಾಭ್ಯಾಸಕ್ಕೆ ಕಸಾಪ ಪುತ್ತೂರು ಘಟಕದ ಸಹಾಯಹಸ್ತ | ವಿದ್ಯಾರ್ಥಿಗಳಿಗಾಗಿ ತಂದಿರುವ ಹೊಸ ಯೋಜನೆಯ ಬಗ್ಗೆ ಇಲ್ಲಿದೆ ಮಾಹಿತಿ Read More »

error: Content is protected !!
Scroll to Top