ಕ್ಯಾಂಪಸ್‌

ಕಬಡ್ಡಿ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ತಂಡ ರಾಜ್ಯಮಟ್ಟಕ್ಕೆ ಆಯ್ಕೆ

ಪುತ್ತೂರು: ಮಂಗಳೂರಿನ ಶಕ್ತಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾಮಟ್ಟದ ಕಬಡ್ಡಿ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡವು ಪ್ರಥಮ ಸ್ಥಾನ ಪಡೆದು ಆಗಸ್ಟ್ 12 ಹಾಗೂ 13ರಂದು ಮಂಗಳೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಕಬಡ್ಡಿ ಸ್ಪರ್ಧೆಗೆ ಆಯ್ಕೆಯಾಗಿದೆ. ತಂಡವನ್ನು ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ಮನ್ಯ ಎಂ ವಿ, ಅನ್ನಪೂರ್ಣ ರೈ, ವಾಣಿಜ್ಯ ವಿಭಾಗದ ಹೇಮಲತಾ ಕೆ, ವರ್ಷಿತಾ ಎಚ್ ವಿ, ತ್ರಿಷಾ, ಕಾರ್ತಿಕಾ, ಪ್ರಣತಿ,ಹರ್ಷಿತಾ ವಿ ವಿ, ಕಲಾ ವಿಭಾಗದ ಧನುಶ್ರೀ, […]

ಕಬಡ್ಡಿ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ತಂಡ ರಾಜ್ಯಮಟ್ಟಕ್ಕೆ ಆಯ್ಕೆ Read More »

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ಪೋಷಕರು, ಸಮಿತಿ ಸಮನ್ವಯ ಸಭೆ

ಪುತ್ತೂರು: ಮಕ್ಕಳ ಮೂಲಕ ಪೋಷಕರಲ್ಲೂ ವೈಜ್ಞಾನಿಕ ಮನೋಭಾವನೆ ಬೆಳೆಸುವ ನಿಟ್ಟಿನಲ್ಲಿ ಮಕ್ಕಳಿಂದ ಪ್ರಾತ್ಯಕ್ಷಿತಗೊಂಡ ವಿಜ್ಞಾನದ ದೈನಂದಿನ ಬದುಕಿಗೆ ಸಂಬಂಧಿಸಿದ ಪ್ರಯೋಗಗಳನ್ನು ನಮಗೂ ತಿಳಿಸುವುದು ಮಕ್ಕಳ ಪ್ರಯತ್ನ ಶ್ಲಾಘನೀಯ ಎಂದು ಪೋಷಕಿ ಆಶಾ ಹೇಳಿದರು. ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ಒಂದನೇ ತರಗತಿಯಿಂದ 10ನೇ ತರಗತಿಯವರೆಗೆ ನಡೆದ ವಿಭಾಗವಾರು ಪೋಷಕರ ಸಭೆಯಲ್ಲಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಮಕ್ಕಳಿಂದ ಶ್ಲೋಕ, ಅಮೃತ ವಚನ, ಮಂಕುತಿಮ್ಮನ ಕಗ್ಗ, ದೇಶಭಕ್ತಿ ಗೀತೆ, ಕನ್ನಡ ಮತ್ತು ಆಂಗ್ಲ ಭಾಷೆಯ ಭಾಷಣ ಹಾಗೂ ವಿಜ್ಞಾನ

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ಪೋಷಕರು, ಸಮಿತಿ ಸಮನ್ವಯ ಸಭೆ Read More »

ವಿದ್ಯಾಭಾರತಿ ಜಿಲ್ಲಾಮಟ್ಟದ ಕಬ್ಬಡ್ಡಿ ಪಂದ್ಯಾಟ : ಶ್ರೀ ಭಾರತಿ ವಿದ್ಯಾಸಂಸ್ಥೆ ರಾಜ್ಯಮಟ್ಟಕ್ಕೆ ಆಯ್ಕೆ

ಪುತ್ತೂರು: ವಿದ್ಯಾಭಾರತಿ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಶಕ್ತಿ ವಿದ್ಯಾಸಂಸ್ಥೆ ಶಕ್ತಿನಗರ ಮಂಗಳೂರು ಸಹಯೋಗದೊಂದಿಗೆ ನಡೆದ 14 ರ ವಯೋಮಾನದ ಜಿಲ್ಲಾಮಟ್ಟದ ಕಬ್ಬಡ್ಡಿ ಪಂದ್ಯಾಟದಲ್ಲಿ ಶ್ರೀ ಭಾರತಿ ವಿದ್ಯಾಸಂಸ್ಥೆಯ ಬಾಲಕಿಯರ ಕಬ್ಬಡ್ಡಿ ತಂಡ ಪ್ರಥಮ ಸ್ಥಾನದೊಂದಿಗೆ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ. ತಂಡವನ್ನು ಹಂಸಿಕ ಅಂಬುಲ,ಯಶಸ್ವಿನಿ.ಬಿ, ಭವ್ಯ. ಕೆ,ಚಿನ್ಮಯಿ, ಇಂಚರ ಎಲ್ ಶೆಟ್ಟಿ, ಅಲ್ವಿತಾ, ವಾತ್ಸಲ್ಯ ಬಿ ಗೌಡ, ಪಲ್ಲವಿ, ಕೃತಿ, ಸಿಂಚನ ಎಸ್, ದೀಕ್ಷಾ ಶ್ರೀ, ಹಂಸಿಕ ಅಂಬುಲ, ಭೂಮಿಕಾ ಜೆ. ಪ್ರತಿನಿಧಿಸಿದ್ದರು. ತಂಡಕ್ಕೆ ಶಾಲಾ ಶಿಕ್ಷಕರಾದ ಸಂತೋಷ್

ವಿದ್ಯಾಭಾರತಿ ಜಿಲ್ಲಾಮಟ್ಟದ ಕಬ್ಬಡ್ಡಿ ಪಂದ್ಯಾಟ : ಶ್ರೀ ಭಾರತಿ ವಿದ್ಯಾಸಂಸ್ಥೆ ರಾಜ್ಯಮಟ್ಟಕ್ಕೆ ಆಯ್ಕೆ Read More »

ದ.ಕ.ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟ

ಬೆಳ್ಳಾರೆ : ಸುಳ್ಯ ತಾಲೂಕಿನ ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್‍ನಲ್ಲಿ ದ.ಕ.ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ಚೆಸ್ ಪಂದ್ಯಾಟ ನಡೆಯಿತು. ದ.ಕ.ಜಿಲ್ಲಾ ಪಂಚಾಯಿತಿ ಉಪನಿರ್ದೇಶಕರ ಕಚೇರಿ, ಶಾಲಾ ಶಿಕ್ಷಣ ಇಲಾಖೆ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಸಂಯುಕ್ತ ಆಶ್ರಯದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ವಹಿಸಿದ್ದರು. ಈ ಸಂದರ್ಭದಲ್ಲಿ ಬೆಳ್ಳಾರೆ ಗ್ರಾಪಂ ಅಧ್ಯಕ್ಷ ಚಂದ್ರಶೇಖರ ಪನ್ನೆ, ಶಿಕ್ಷಣ ಇಲಾಖೆ ಅಧಿಕಾರಿ ಶ್ರೀನಾಥ್ ರೈ

ದ.ಕ.ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟ Read More »

ವಿಶ್ವ ಪ್ರಕೃತಿ ಸಂರಕ್ಷಣಾ ದಿನಾಚರಣೆ

ಪುತ್ತೂರು: ಮಾನವನ ಆರ್ಥಿಕಾಭಿವೃದ್ಧಿ ಹಾಗೂ ಕೊಳ್ಳುಬಾಕತನವು ಪರಿಸರದ ಮೇಲೆ ಅಗಾಧ ದುಷ್ಪರಿಣಾಮ ಬೀರುತ್ತಿದ್ದು, ಮಾಲಿನ್ಯ ಮುಕ್ತ ಪ್ರಕೃತಿಯನ್ನು ಬೆಳೆಸಿ, ಉಳಿಸಿ ಅದರ ಜತೆ ನಾವೂ ಬೆಳೆಯುವ ಸಂಕಲ್ಪವನ್ನು ಮಾಡಬೇಕು ಎಂದು ಪುತ್ತೂರಿನ ಸ್ವಾಯತ್ತ ವಿವೇಕಾನಂದ ಪದವಿ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಅರುಣ್ ಪ್ರಕಾಶ್ ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಎನ್‌ಎಸ್‌ಎಸ್ ಮತ್ತು ಯೂತ್ ರೆಡ್‌ಕ್ರಾಸ್ ವಿಭಾಗಗಳ ಆಶ್ರಯದಲ್ಲಿ ನಡೆದ ವಿಶ್ವ ಪ್ರಕೃತಿ ಸಂರಕ್ಷಣ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ

ವಿಶ್ವ ಪ್ರಕೃತಿ ಸಂರಕ್ಷಣಾ ದಿನಾಚರಣೆ Read More »

ಶೈಕ್ಷಣಿಕ ಸಾಧನೆಯಲ್ಲಿ ಉಡುಪಿ ಜಿಲ್ಲೆ ಕುಸಿತ ಕಂಡಿದೆ | ಸಿ.ಎಂ.ಹೇಳಿಕೆಗೆ ಕರಾವಳಿ ಶಾಸಕರ ತೀವೃ ಆಕ್ರೋಶ

ಮಂಗಳೂರು: ಶೈಕ್ಷಣಿಕ ಸಾಧನೆಯಲ್ಲಿ ಉಡುಪಿ ಜಿಲ್ಲೆ ಕುಸಿತ ಕಂಡಿದೆ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ರಾಜ್ಯದಲ್ಲಿ ಪರ-ವಿರೋಧ ಚರ್ಚೆಗೆ ಕಾರಣವಾಗಿದ್ದು, ಸಿಎಂ ಹೇಳಿಕೆಗೆ ಕರಾವಳಿ ಶಾಸಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ ಮತ್ತಿತರರು ಈ ಬಗ್ಗೆ ಅಂಕಿಅಂಶ ಸಹಿತ ಹೇಳಿಕೆಗಳನ್ನು ನೀಡಿದ್ದಾರೆ. ನಿನ್ನೆ ಉಡುಪಿ ಮತ್ತು ಮಂಗಳೂರು ಪ್ರವಾಸ ಕೈಗೊಂಡಿದ್ದ ಸಿದ್ದರಾಮಯ್ಯ ನಾವು ಈ ಹಿಂದೆ ಅಧಿಕಾರದಲ್ಲಿದ್ದಾಗ ಉಡುಪಿ ಜಿಲ್ಲೆ ಶೈಕ್ಷಣಿಕ ಸೂಚ್ಯಂಕದಲ್ಲಿ

ಶೈಕ್ಷಣಿಕ ಸಾಧನೆಯಲ್ಲಿ ಉಡುಪಿ ಜಿಲ್ಲೆ ಕುಸಿತ ಕಂಡಿದೆ | ಸಿ.ಎಂ.ಹೇಳಿಕೆಗೆ ಕರಾವಳಿ ಶಾಸಕರ ತೀವೃ ಆಕ್ರೋಶ Read More »

ಭಾರೀ ಮಳೆ ಹಿನ್ನಲೆಯಲ್ಲಿ ಶಾಲೆಗಳಿಗೆ ರಜೆ | ಸರಿದೂಗಿಸಲು ನ.4 ರ ವರೆಗೆ ಶನಿವಾರ ದಿನಪೂರ್ತಿ ತರಗತಿ

ಪುತ್ತೂರು: ಭಾರೀ ಮಳೆಯ ಹಿನ್ನಲೆಯಲ್ಲಿ ಈ ಬಾರಿ ಶಾಲೆಗಳಿಗೆ ರಜೆ ನೀಡಲಾಗಿದ್ದು, ಅದನ್ನು ಸರಿದೂಗಿಸಲು ನವೆಂಬರ್ 4 ರ ವರೆಗೆ ಶನಿವಾರ ದಿನಪೂರ್ತಿ ತರಗತಿ ನಡೆಯಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. ಈ ಬಾರಿ ಮಳೆಯಿಂದ ಶಾಲೆಗಳಿಗೆ 6 ದಿನ ರಜೆ ನೀಡಲಾಗಿತ್ತು. ರಜೆಯನ್ನು ಸರಿದೂಗಿಸುವ ಹಿನ್ನಲೆಯಲ್ಲಿ ಶನಿವಾರ ಮಧ್ಯಾಹ್ನದ ಬಳಿಕವೂ ಪಾಠಗಳನ್ನು ಮಾಡುವ ಮೂಲಕ ದಿನಪೂರ್ತಿ ತರಗತಿ ನಡೆಯಲಿದೆ. ಈ ಕುರಿತು ವೇಳಾಪಟ್ಟಿಯನ್ನು ಶಿಕ್ಷಣ ಇಲಾಖೆ ಹೊರಡಿಸಿದ್ದು, ನ.4 ರ ವರೆಗೆ ಅಂದರೆ 12 ಶನಿವಾರದಂದು ತರಗತಿ

ಭಾರೀ ಮಳೆ ಹಿನ್ನಲೆಯಲ್ಲಿ ಶಾಲೆಗಳಿಗೆ ರಜೆ | ಸರಿದೂಗಿಸಲು ನ.4 ರ ವರೆಗೆ ಶನಿವಾರ ದಿನಪೂರ್ತಿ ತರಗತಿ Read More »

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಎಂಬಿಎ, ಎಂಸಿಎ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ

ಪುತ್ತೂರು: ನಾವೆಲ್ಲರೂ ಜಗತ್ತಿನಲ್ಲಾಗುತ್ತಿರುವ ತಂತ್ರಜ್ಞಾನದ ವ್ಯಾಪಕ ಬೆಳವಣಿಗೆಗೆ ಒಗ್ಗಿಕೊಳ್ಳುತ್ತಾ, ಸ್ವೀಕರಿಸುತ್ತಾ ಅದನ್ನು ಬಳಸಿಕೊಳ್ಳುತ್ತಾ ಮುನ್ನಡೆಯಬೇಕು ಎಂದು ಮುಳಿಯ ಜುವೆಲ್ಸ್ ಪ್ರೈವೆಟ್ ಲಿಮಿಟೆಡ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ವ್ಯವಸ್ಥಾಪಕ ನಿರ್ದೇಶಕ ಕೃಷ್ಣನಾರಾಯಣ ಮುಳಿಯ ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಶ್ರೀರಾಮ ಸಭಾಭವನದಲ್ಲಿ ಸ್ನಾತಕೋತ್ತರ ಎಂಬಿಎ ಮತ್ತು ಎಂಸಿಎ ವಿಭಾಗಗಳ ವಿದ್ಯಾರ್ಥಿಗಳ ಬೀಳ್ಕೊಡುವ ಕಾರ್ಯಕ್ರಮದಲ್ಲಿ ಮಾತಾಡಿದರು. ನಮ್ಮ ಜೀವನದಲ್ಲಿ ತಂತ್ರಜ್ಞಾನದ ಬಳಕೆ ಅದರಲ್ಲೂ ಮುಖ್ಯವಾಗಿ ಕೃತಕ ಬುದ್ದಿಮತ್ತೆಯ ಪ್ರಭಾವದ ಬಗ್ಗೆ ಬೆಳಕು ಚೆಲ್ಲಿದ

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಎಂಬಿಎ, ಎಂಸಿಎ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ Read More »

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆ

ಪುತ್ತೂರು: ಪುತ್ತೂರು ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಭಾಗವಹಿಸಿದ ಪುರುಷರಕಟ್ಟೆ ಸರಸ್ವತಿ ವಿದ್ಯಾ ಮಂದಿರದ ಇಬ್ಬರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಜರುಗಿದ ಪುತ್ತೂರು ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಸರಸ್ವತಿ ವಿದ್ಯಾ ಮಂದಿರದ 10ನೇ ತರಗತಿಯ ವಿದ್ಯಾರ್ಥಿಗಳಾದ ವಿಸ್ಮಯ್ ಎನ್ ನಾಯಕ್ ಮತ್ತು ಮೋಕ್ಷಿತ್ ಪಿ ಎಸ್ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ. 9ನೇ ತರಗತಿಯ ರಿಷಿ ಭಾರಧ್ವಜ್

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆ Read More »

ನರೇಂದ್ರ ಪ.ಪೂ.ಕಾಲೇಜಿನಲ್ಲಿ ಔಷಧೀಯ ಸಸ್ಯಗಳ ಸಂರಕ್ಷಣೆ ಮತ್ತು ಸಮರ್ಥನೀಯ ಬಳಕೆ ಬಗ್ಗೆ ಮಾಹಿತಿ ಕಾರ್‍ಯಕ್ರಮ

ಪುತ್ತೂರು: ಔಷಧೀಯ ಗಿಡಮೂಲಿಕೆಗಳು ನಶಿಸಿ ಹೋಗುತ್ತಿರುವ ಕಾಲ ಘಟ್ಟದಲ್ಲಿ ಅವುಗಳ ಸಂರಕ್ಷಣೆಯ ಮಹತ್ವದ ಕುರಿತು ಇಂದಿನ ಯುವ ಸಮೂಹದಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಪೇರಲ್ತಡ್ಕ ಸರಕಾರಿ ಉನ್ನತೀಕರಿಸಿದ ಹಿ.ಪ್ರಾ.ಶಾಲಾ ಶಿಕ್ಷಕಿ ಯಶೋಧ ಹೇಳಿದರು. ಅವರು ನರೇಂದ್ರ ಪ.ಪೂ. ಕಾಲೇಜಿನಲ್ಲಿ ಔಷಧೀಯ ಸಸ್ಯಗಳ ಸಂರಕ್ಷಣೆ ಮತ್ತು ಸಮರ್ಥನೀಯ ಬಳಕೆ ಕುರಿತು ಮಾಹಿತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಭಾರತೀಯ ಸಂಸ್ಕೃತಿಯಲ್ಲಿ ಪರಂಪರಾನುಗತವಾಗಿ ಗಿಡಮೂಲಿಕೆಯ ಉಪಚಾರವನ್ನು ನಡೆಸಿಕೊಂಡು ಬರಲಾಗುತ್ತಿದೆ. ವಿವಿಧ ರೋಗಗಳ ತಡೆಗಟ್ಟುವಿಕೆ ಮತ್ತು ಚಿಕಿತ್ಸೆಗಾಗಿ ಔಷಧೀಯ ಸಸ್ಯಗಳ ಬಳಕೆ ಹಳೆಯ

ನರೇಂದ್ರ ಪ.ಪೂ.ಕಾಲೇಜಿನಲ್ಲಿ ಔಷಧೀಯ ಸಸ್ಯಗಳ ಸಂರಕ್ಷಣೆ ಮತ್ತು ಸಮರ್ಥನೀಯ ಬಳಕೆ ಬಗ್ಗೆ ಮಾಹಿತಿ ಕಾರ್‍ಯಕ್ರಮ Read More »

error: Content is protected !!
Scroll to Top