ಕ್ರೀಡಾ ಮನೋಭಾವ ವ್ಯಕ್ತಿಯ ವ್ಯಕ್ತಿತ್ವ ಅರಳಿಸುತ್ತದೆ | ಜಿಲ್ಲಾ ಪ್ರೌಢ ವಿಭಾಗದ ಬಾಲಕ ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಡಾ. ಕೃಷ್ಣ ಭಟ್ ಕೊಂಕೋಡಿ | ಬಾಲಕರ ವಿಭಾಗದಲ್ಲಿ ಶ್ರೀ ರಾಮಕುಂಜೆಶ್ವರ ಪ್ರೌಢಶಾಲೆ ಪ್ರಥಮ, ಬಾಲಕಿಯರ ವಿಭಾಗದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ಪ್ರಥಮ
ಪುತ್ತೂರು: ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಛೇರಿ, ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಹಾಗೂ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ಸಹಯೋಗದಲ್ಲಿ ಪ್ರೌಢಶಾಲಾ ಬಾಲಕ ಬಾಲಕಿಯರ ಕಬಡ್ಡಿ ಪಂದ್ಯಾಟ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಒಳಾಂಗಣ ಕ್ರೀಡಾಂಗಣದಲ್ಲಿ ಜರುಗಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ. ಕೃಷ್ಣ ಭಟ್ ಕೊಂಕೋಡಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಅನ್ಯಾನ್ಯ ಕಾರ್ಯಕ್ರಮಗಳಿಗೆ ವಿವೇಕಾನಂದ ವಿದ್ಯಾಸಂಸ್ಥೆಗಳ ಸಹಾಯ ಸದಾ ಇದ್ದು ಇಂದು ನಡೆಯುತ್ತಿರುವ ಪಂದ್ಯಾಟವು […]










