ವಿವೇಕಾನಂದ ಇನ್ಟ್ಸ್ ಟ್ಯೂಟ್ ಆಫ್ ಫಾರ್ಮಾಸ್ಯೂಟಿಕಲ್ ಸೈನ್ಸಸ್ ಉದ್ಘಾಟನೆ | ವಿವೇಕಾನಂದ ವಿದ್ಯಾವರ್ಧಕ ಸಂಘದ 80ನೇ ಸಂಸ್ಥೆ
ಪುತ್ತೂರು : ವಿವೇಕಾನಂದ ವಿದ್ಯಾವರ್ಧಕ ಸಂಘದ ವತಿಯಿಂದ ಪುತ್ತೂರಿನಲ್ಲಿ ಪ್ರಥಮ ಬಿ.ಫಾರ್ಮ್ ಕಾಲೇಜು ವಿವೇಕಾನಂದ ಇನ್ಟ್ಸ್ ಟ್ಯೂಟ್ ಆಫ್ ಫಾರ್ಮಾಸ್ಯೂಟಿಕಲ್ ಸೈನ್ಸ್ ಉದ್ಘಾಟನಾ ಸಮಾರಂಭ ಸೋಮವಾರ ನಡೆಯಿತು. ವಿವೇಕಾನಂದ ವಿದ್ಯಾವರ್ಧಕ ಸಂಘದ 80ನೇ ಸಂಸ್ಥೆಯಾಗಿದ್ದು, ಕಾಲೇಜಿನ ಕೇಶವ ಸಂಕಲ್ಪ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಶೈಕ್ಷಣಿಕ ವಿಭಾಗವನ್ನು ಭಾರತ ಸರಕಾರದ ರಾಜ್ಯ ಆರೋಗ್ಯ ಸಚಿವೆ ಡಾ.ಭಾರತಿ ಪ್ರವೀಣ್ ಪವಾರ್ ಉದ್ಘಾಟಿಸಿ ಮಾತನಾಡಿ, ಸಾಂಸ್ಕೃತಿಕವಾಗಿ ಶ್ರೀಮಂತಿಕೆಯಿಂದ ಕೂಡಿದ ಪುತ್ತೂರಿನ ಈ ಪ್ರದೇಶದಲ್ಲಿ ವೈದ್ಯಕೀಯ ಶಿಕ್ಷಣವನ್ನು ಕೊಡುವ ಸಂಸ್ಥೆ ಪ್ರಾರಂಭಗೊಂಡಿರುವುದು […]










