ಕ್ಯಾಂಪಸ್‌

ವಿಟ್ಲ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ

ವಿಟ್ಲ : ಭವಿಷ್ಯದ ಬಗ್ಗೆ ವಿದ್ಯಾರ್ಥಿಗಳು ಕನಸು ಕಾಣಬೇಕು, ನಾನು ಮುಂದೆ ಏನಾಗಬೇಕು ಎಂಬುದರ ಬಗ್ಗೆ ದೊಡ್ಡ ಕನಸು ಕಾಣಬೇಕು. ಗುರಿಯಿಲ್ಲದ ಜೀವನದಿಂದ ಯಶಸ್ಸು ಕಾಣಲು ಸಾಧ್ಯವಿಲ್ಲ ಎಂದು ಪುತ್ತೂರು ಶಾಸಕ ಅಶೋಕ್ ರೈ ಹೇಳಿದರು. ಅವರು ವಿಟ್ಲ ಪ್ರಥಮದರ್ಜೆ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭದಲ್ಲಿ ಮಾತನಾಡಿದರು. ದುಡ್ಡಿದ್ದವ ಮಾತ್ರ ಯಶಸ್ಸು ಕಾಣುತ್ತಾನೆ ಎಂಬ ಮನೋಭಾವ ಬಿಟ್ಟು ಬಿಡಬೇಕು. ವಿದ್ಯಾರ್ಥಿಗಳು ಪತ್ರಿಕೆ ಓದುವ ಹವ್ಯಾಸ ಬೆಳೆಸಿಕೊಳ್ಳಿ. ಇಂಗ್ಲೀಷ್ ಮತ್ತು ಹಿಂದಿ ಭಾಷಾ ಜ್ಞಾನವನ್ನು ಹೆಚ್ಚಿಸಿಕೊಳ್ಳುವ ಮೂಲಕ ಆತ್ಮಸ್ಥೈರ್ಯವನ್ನು ಹೆಚ್ಚಿಸಿಕೊಳ್ಳಬೇಕು […]

ವಿಟ್ಲ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ Read More »

ಜು.6 : ದ.ಕ.ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೊಷಣೆ

ಮಂಗಳೂರು : ಹವಾಮಾನ ಇಲಾಖೆ ಮುನ್ಸೂಚನೆಯಂತೆ, ಜು.6 ಗುರುವಾರವೂ ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳಿಗೆ, ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ. ಭಾರತೀಯ ಹವಾಮಾನ ಇಲಾಖೆ ಮತ್ತು ರಾಜ್ಯ ನೈಸರ್ಗಿಕ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಮುಂಜಾಗ್ರತಾ ಕ್ರಮವಾಗಿ ದ.ಕ.ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಕೆಲವೊಂದು ತುರ್ತು ಕ್ರಮಗಳನ್ನು ಕೈಗೊಂಡಿದೆ. ಪ್ರಾಕೃತಿಕ ವಿಕೋಪದಿಂದ ಉಂಟಾಗುವ ಯಾವುದೇ ಸಮಸ್ಯೆಗಳಿಗೆ ಈ ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸುವಂತೆ ತಿಳಿಸಲಾಗಿದೆ. ತುರ್ತು ಸೇವೆಗೆ ಟೋಲ್ ಫ್ರೀ ನಂ 24+7 ಕಂಟ್ರೋಲ್

ಜು.6 : ದ.ಕ.ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೊಷಣೆ Read More »

ಬನ್ನೂರು ಶಾಲಾ ವಠಾರದಲ್ಲಿ ಗಿಡ ನೆಡುವ ಕಾರ್ಯಕ್ರಮ

ಪುತ್ತೂರು: ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್, ರೋಟರಿ ಕ್ಲಬ್ ಪುತ್ತೂರು ಯುವ, ಇನ್ನರ್ ವೀಲ್ ಕ್ಲಬ್, ಬನ್ನೂರು ಸರಕಾರಿ ಪ್ರಾಥಮಿಕ ಶಾಲೆ ಹಾಗೂ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ, ದಕ್ಷಿಣ ಕನ್ನಡ ಜಿಲ್ಲಾ ತೆಂಗು ರೈತ ಉತ್ಪಾದಕರ ಕಂಪೆನಿ, ಬನ್ನೂರು ಸ್ಪೂರ್ತಿ ಯುವ ಸಂಸ್ಥೆ ಮತ್ತು ಕರ್ನಾಟಕ ರಾಜ್ಯ ಅರಣ್ಯ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಗಿಡ ನೆಡುವ ಕಾರ್ಯಕ್ರಮ ಬನ್ನೂರು ಸರಕಾರಿ ಪ್ರಾಥಮಿಕ ಶಾಲೆಯ ವಠಾರದಲ್ಲಿ ಬುಧವಾರ ನಡೆಯಿತು. ಪುತ್ತೂರು ನಗರಸಭೆ ಸದಸ್ಯೆ ಗೌರಿ ಬನ್ನೂರು ಗಿಡ

ಬನ್ನೂರು ಶಾಲಾ ವಠಾರದಲ್ಲಿ ಗಿಡ ನೆಡುವ ಕಾರ್ಯಕ್ರಮ Read More »

ನಸ್ವೀಪ್ ನೀಟ್ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ | ಊರವರಿಂದ ಸನ್ಮಾನ

ಪುತ್ತೂರು : ಪುತ್ತೂರು ಸಮೀಪದ ಕೊಡಿಯಾಡಿಯ ನಿಝಾರ್ ಮತ್ತು ಉಮೈಬಾ ದಂಪತಿಯ ಪುತ್ರ ನಸ್ವೀಪ್ ನೀಟ್ ಪರೀಕ್ಷೆಯಲ್ಲಿ 585 ಅಂಕ ಪಡೆದು ಉನ್ನತ ಶ್ರೇಣಿಯಲ್ಲಿ ತೇರ್ಗಡೆಗೊಂಡು ಎಂಬಿಬಿಎಸ್ ಸೀಟಿಗೆ ಅರ್ಹತೆ ಪಡೆದಿದ್ದಾರೆ. ಇವರು ಪುತ್ತೂರು ಕಮ್ಯೂನಿಟ್ ಸೆಂಟರ್ ಮುಖಾಂತರ ಬೀದರ್ ನ ಶಾಹಿನ್ ಸಂಸ್ಥೆಯಲ್ಲಿ ಕಲಿತು ನೀಟ್ ಪರೀಕ್ಷೆ ಬರೆದಿದ್ದರು. ಈ ಹಿನ್ನಲೆಯಲ್ಲಿ ಊರಿನ ಹಿಂದೂ ಮುಖಂಡರು ಮನೆಗೆ ತೆರಳಿ ನಸ್ವೀಪ್ ರನ್ನು ಸನ್ಮಾನಿಸಿದರು.

ನಸ್ವೀಪ್ ನೀಟ್ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ | ಊರವರಿಂದ ಸನ್ಮಾನ Read More »

ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ವ್ಯವಹಾರ ಅಧ್ಯಯನ ಪರೀಕ್ಷಾ ಕಾರ್ಯಗಾರ

ಪುತ್ತೂರು : ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವತಿಯಿಂದ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ವ್ಯವಹಾರ ಅಧ್ಯಯನ ವಿಷಯದ ಪರೀಕ್ಷಾ ಮಾದರಿ ಬಗ್ಗೆ ಕಾರ್ಯಗಾರ ಕಾಲೇಜಿನಲ್ಲಿ ನಡೆಯಿತು. ವಾಣಿಜ್ಯ ವಿಭಾಗದ ಮುಖ್ಯಸ್ಥ ಶ್ರೀಧರ್ ಶೆಟ್ಟಿಗಾರ್  ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ವಿದ್ಯಾರ್ಥಿಗಳಿಗೆ  ಪರೀಕ್ಷಾ ಮಾದರಿ, ಅಂಕಗಳು, ಉತ್ತರ ಬರೆಯುವ ಕೌಶಲ್ಯಗಳ ಬಗ್ಗೆ ತರಬೇತಿ ನೀಡಿದರು. ವಾಣಿಜ್ಯ ವಿಭಾಗದ ಉಪನ್ಯಾಸಕರಾದ ಉಷಾ ಪಿ ಎಂ, ಭಾಗ್ಯಶ್ರೀ, ಗ್ರೀಷ್ಮ ಹಾಗೂ ದೇವಿಪ್ರಸಾದ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಹಕರಿಸಿದರು.

ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ವ್ಯವಹಾರ ಅಧ್ಯಯನ ಪರೀಕ್ಷಾ ಕಾರ್ಯಗಾರ Read More »

ತಾಲೂಕು ಮಟ್ಟದ ಜನಪದ ಗೀತೆ ಸ್ಪರ್ಧೆ | ಪ್ರೋತ್ಸಾಹಕ ಬಹುಮಾನ

ಪುತ್ತೂರು: ತಾಲೂಕು ಮಟ್ಟದ ಜನಪದ ಗೀತೆ ಸ್ಪರ್ಧೆ – ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಕ ಬಹುಮಾನ ಲಭಿಸಿದೆ. ದಿ. ಬಾಲಕೃಷ್ಣ ಮಧುವನ ಅವರ ಸ್ಮರಣಾರ್ಥ ಸರ್ವೋದಯ ಪ್ರೌಢಶಾಲೆ, ಸುಳ್ಯಪದವು ಇಲ್ಲಿ ನಡೆದ ತಾಲೂಕು ಮಟ್ಟದ ಜನಪದ ಗೀತೆ ಸ್ಪರ್ಧೆಯಲ್ಲಿ ಪ್ರೋತ್ಸಾಹಕ ಬಹುಮಾನ ಲಭಿಸಿದೆ. ಶಾಲೆಯ ವಿದ್ಯಾರ್ಥಿನಿಯರಾದ ಹರಿಣಿ, ಸುಷ್ಮಾ ಮತ್ತು ಮಂಗಳಾದುರ್ಗಾ ಸ್ಪರ್ಧೆಯನ್ನು ಪ್ರತಿನಿಧಿಸಿದ್ದರು.

ತಾಲೂಕು ಮಟ್ಟದ ಜನಪದ ಗೀತೆ ಸ್ಪರ್ಧೆ | ಪ್ರೋತ್ಸಾಹಕ ಬಹುಮಾನ Read More »

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ | ಜಿಲ್ಲೆಯ ಐದು ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಐದು ತಾಲೂಕಿನ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್​ ಆದೇಶ ಹೊರಡಿಸಿದ್ದಾರೆ. ಮಂಗಳೂರು, ಉಳ್ಳಾಲ, ಮುಲ್ಕಿ, ಬಂಟ್ವಾಳ ಹಾಗೂ ಮೂಡಬಿದಿರೆ ತಾಲೂಕಿನ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆಯಾಗಿದೆ. ಇನ್ನುಳಿದ ಕಡೆಗಳಲ್ಲಿ ಅಲ್ಲಿ ಪ್ರಸ್ತುತ ಪರಿಸ್ಥಿತಿಗಳನ್ನು ನೋಡಿಕೊಂಡು ರಜೆ ಘೋಷಿಸುವ ಅಧಿಕಾರವನ್ನು ಆಯಾ ತಹಶೀಲ್ದಾರ್​​ಗಳಿಗೆ ನೀಡಲಾಗಿದೆ. ಶಾಲೆಯ ಮುಖ್ಯೋಪಾಧ್ಯರು, ಕಾಲೇಜಿನ ಪ್ರಾಂಶುಪಾಲರು ಹಾಗೂ ಕ್ಷೇತ್ರ

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ | ಜಿಲ್ಲೆಯ ಐದು ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ Read More »

ಸರ್ವೆ ಕಲ್ಪನೆ ಶಾಲಾ ಮಂತ್ರಿಮಂಡಲ ರಚನೆ

ಪುತ್ತೂರು : ಮುಂಡೂರು ಗ್ರಾಮದ ಸರ್ವೆ ಕಲ್ಪನೆ  ಶಾಲಾ ಮಂತ್ರಿಮಂಡಲ ರಚನೆ ಸೋಮವಾರ ನಡೆಯಿತು. ಶಾಲಾ ಮುಖ್ಯಮಂತ್ರಿಯಾಗಿ ಮೋಕ್ಷಿತ್ ನೆಕ್ಕಿಲು, ಉಪಮುಖ್ಯಮಂತ್ರಿಯಾಗಿ ಆತ್ಮೀ ಆಯ್ಕೆಗೊಂಡರು. ಶಾಲಾ ಮುಖ್ಯ ಶಿಕ್ಷಕ ಜಯರಾಮ ಶೆಟ್ಟಿ ಪ್ರಮಾಣವಚನ ಬೋಧಿಸಿ ಮಾರ್ಗದರ್ಶನ ಮಾಡಿದರು. ಶಾಲಾ ಸಂಸತ್ತನ್ನು ಸಮಾಜ ವಿಜ್ಞಾನ ಶಿಕ್ಷಕ ಉಮಾಶಂಕರ್ ನಿರ್ವಹಿಸಿದರು. ಸಂಸ್ಥೆಯ ಶಿಕ್ಷಕ ವೃಂದದವರು ಸಹಕರಿಸಿದರು.

ಸರ್ವೆ ಕಲ್ಪನೆ ಶಾಲಾ ಮಂತ್ರಿಮಂಡಲ ರಚನೆ Read More »

ನರೇಂದ್ರ ಪ.ಪೂ.ಕಾಲೇಜಿನಲ್ಲಿ ಗುರು ಪೂರ್ಣಿಮೆ ಆಚರಣೆ

ಪುತ್ತೂರು : ಯಾವುದೇ ಓರ್ವ ವ್ಯಕ್ತಿ ಯಶಸ್ಸನ್ನು ಸಾಧಿಸಬೇಕೆಂದರೆ ಅವನ ಮುಂದೆ ಗುರಿ ಇರಬೇಕು, ಹಿಂದೆ ಗುರುವಿರಬೇಕು ಎನ್ನುವ ನಂಬಿಕೆಯಿದೆ. ಗುರುವಿಲ್ಲದೆ ಜೀವನಕ್ಕೆ ಅಥವಾ ಜ್ಞಾನಕ್ಕೆ ಯಾವುದೇ ರೀತಿಯ ಅರ್ಥವಿರುವುದಿಲ್ಲ. ನಮ್ಮ ಮೊದಲ ಗುರು ತಾಯಿ ನಮಗೆ ಜೀವನದ ಅರ್ಥವನ್ನು ನೀಡುತ್ತಾಳೆ. ಅದೇ ರೀತಿ ಜೀವನಕ್ಕೆ ಅಗತ್ಯವಾದ ಜ್ಞಾನವನ್ನು ಗುರು ನೀಡುತ್ತಾನೆ. ಅಂದರೆ, ಗುರುವಿಲ್ಲದೆ ಏನೂ ಸಾಧ್ಯವಿಲ್ಲ.ಎಂದು ವಿದ್ಯಾಭಾರತಿ ಜಿಲ್ಲಾ ಯೋಗ ಶಿಕ್ಷಣ ಸಂಯೋಜಕ ಚಂದ್ರಶೇಖರ ದೇಲಂಪಾಡಿ ಹೇಳಿದರು. ಅವರು ಸೋಮವಾರ ನರೇಂದ್ರ ಪ.ಪೂ.ಕಾಲೇಜಿನಲ್ಲಿ ನಡೆದ ಗುರು

ನರೇಂದ್ರ ಪ.ಪೂ.ಕಾಲೇಜಿನಲ್ಲಿ ಗುರು ಪೂರ್ಣಿಮೆ ಆಚರಣೆ Read More »

ಜು.5 : ವಿವೇಕಾನಂದ ಕಾಲೇಜಿನಲ್ಲಿ ’ತಿರಿ’ ಕೃತಿ ಬಿಡುಗಡೆ ಹಾಗೂ  ಶಂಕರ ಸಾಹಿತ್ಯ ಪ್ರಶಸ್ತಿ ಪ್ರದಾನ ಸಮಾರಂಭ

ಪುತ್ತೂರು: ಇಲ್ಲಿನ ವಿವೇಕಾನಂದ ವಿದ್ಯಾವರ್ಧಕ ಸಂಘ, ವಿವೇಕಾನಂದ ಪದವಿ ಕಾಲೇಜಿನ ಕನ್ನಡ ಸಂಘ ಹಾಗೂ ಐಕ್ಯೂಎಸಿ ಇದರ ಸಹಯೋಗದಲ್ಲಿ ಸಿದ್ದಮೂಲೆ ಶಂಕರನಾರಾಯಣ ಭಟ್ ಸ್ಥಾಪಿತ ’ಶಂಕರ ಸಾಹಿತ್ಯ ಪ್ರಶಸ್ತಿ ಪ್ರದಾನ ಹಾಗೂ ಕಾಲೇಜಿನ ಕನ್ನಡ ವಿಭಾಗದ ಉಪನ್ಯಾಸಕ ಡಾ. ಮನಮೋಹನ ಎಂ ಇವರ ’ತಿರಿ’ ಎಂಬ ಕೃತಿ ಲೋಕಾರ್ಪಣೆ ಕಾರ್‍ಯಕ್ರಮವು ಜು.5 ರಂದು ಕಾಲೇಜಿನ ಸುವರ್ಣ ಮಹೋತ್ಸವ ಸಭಾಭವನದಲ್ಲಿ ನಡೆಯಲಿದೆ. ಕಾರ್‍ಯಕ್ರಮದ ಅಧ್ಯಕ್ಷತೆಯನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್‍ಯದರ್ಶಿ ಡಾ. ಕೆ.ಎಂ ಕೃಷ್ಣ ಭಟ್ ವಹಿಸಲಿದ್ದು ಮುಖ್ಯ

ಜು.5 : ವಿವೇಕಾನಂದ ಕಾಲೇಜಿನಲ್ಲಿ ’ತಿರಿ’ ಕೃತಿ ಬಿಡುಗಡೆ ಹಾಗೂ  ಶಂಕರ ಸಾಹಿತ್ಯ ಪ್ರಶಸ್ತಿ ಪ್ರದಾನ ಸಮಾರಂಭ Read More »

error: Content is protected !!
Scroll to Top