ಕ್ಯಾಂಪಸ್‌

ಸಂತ ಫಿಲೋಮಿನಾ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಪುತ್ತೂರು : ಸಂತ ಫಿಲೋಮಿನಾ ಕಾಲೇಜಿನ ಬೆಳ್ಳಿ ಹಬ್ಬ ಸಭಾಭವನದಲ್ಲಿ ಸಂತ ಫಿಲೋಮಿನಾ ಪ್ರೌಢಶಾಲೆ, ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ಸಂತ ಫಿಲೋಮಿನಾ ಕಾಲೇಜಿನ ಎನ್‌ ಸಿ ಸಿ ಮತ್ತು ಎನ್‌ ಎಸ್‌ ಎಸ್‌ ಘಟಕಗಳ ಸಂಯುಕ್ತ ಆಶ್ರಯದಲ್ಲಿ ಅಂತರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲವಂ| ಡಾ| ಆಂಟೊನಿ ಪ್ರಕಾಶ್‌ ಮೊಂತೆರೊ ಮಾತನಾಡಿ, “ಯೋಗವು ಪ್ರಪಂಚಕ್ಕೆ ಭಾರತದ ಕೊಡುಗೆಯಾಗಿದೆ. ಇಂದು ಗಡಿ, ಸಂಸ್ಕೃತಿಯನ್ನು ಮೀರಿ ವಿಶ್ವದಾದ್ಯಂತ ಕೋಟ್ಯಂತರ ಜನರು […]

ಸಂತ ಫಿಲೋಮಿನಾ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ Read More »

ಒಂದರಿಂದ ಎಂಟನೇ ತರಗವತಿ ವಿದ್ಯಾರ್ಥಿಗಳಿಗೆ ಮೊಟ್ಟೆ, ಶೇಂಗಾ ಚಿಕ್ಕಿ, ಬಾಳೆಹಣ್ಣು ವಿತರಿಸುವಂತೆ ಸರಕಾರದ ಸುತ್ತೋಲೆ

ಬೆಂಗಳೂರು: ಒಂದರಿಂದ ಎಂಟನೇ ತರಗತಿ ಮಕ್ಕಳಿಗೆ ಈ ಸಾಲಿನ ಶೈಕ್ಷಣಿಕ ವರ್ಷದಿಂದ ವಾರಕ್ಕೊಮ್ಮೆ ಮೊಟ್ಟೆ, ಮೊಟ್ಟೆ ತಿನ್ನದ ಮಕ್ಕಳಿಗೆ ಬಾಳೆಹಣ್ಣು ಅಥವಾ ಶೇಂಗಾ ಚಿಕ್ಕಿಯನ್ನು ವಿತರಿಸುವಂತೆ ಸರಕಾರ ಸುತ್ತೋಲೆ ಹೊರಡಿಸಿದೆ. ಜೂ.20 ರಿಂದ ಜು.15 ರ ತನಿ ಅಥವಾ ಮುಂದಿನ ಆದೇಶದ ವರೆಗೆ ನೀಡುವಂತೆ ಸುತ್ತೋಲೆ ಹೊರಡಿಸಿದ್ದು, ರಾಜ್ಯದ ಎಲ್ಲಾ ಜಿಲ್ಲೆಗಳ ಸರಕಾರಿ, ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಒಂದರಿಂದ ಎಂಟನೇ ತರಗತಿ ಮಕ್ಕಳಿಗೆ ಪೌಷ್ಠಿಯ ಆಹಾರವಾಗಿ ಬೇಸಿಯಿದ ಮೊಟ್ಟೆ, ಮೊಟ್ಟೆ ತಿನ್ನದ ಮಕ್ಕಳಿಗೆ ಬಾಳೆಹಣ್ಣು ಅಥವಾ

ಒಂದರಿಂದ ಎಂಟನೇ ತರಗವತಿ ವಿದ್ಯಾರ್ಥಿಗಳಿಗೆ ಮೊಟ್ಟೆ, ಶೇಂಗಾ ಚಿಕ್ಕಿ, ಬಾಳೆಹಣ್ಣು ವಿತರಿಸುವಂತೆ ಸರಕಾರದ ಸುತ್ತೋಲೆ Read More »

ಸರಸ್ವತಿ ವಿದ್ಯಾ ಮಂದಿರದಲ್ಲಿ ವಿಶ್ವ ಯೋಗ ದಿನಾಚರಣೆ

ಪುತ್ತೂರು: ಪುರುಷರಕಟ್ಟೆ ಸರಸ್ವತಿ ವಿದ್ಯಾ ಮಂದಿರದಲ್ಲಿ ವಿಶ್ವ ಯೋಗ ದಿನವನ್ನು ಆಚರಿಸಲಾಯಿತು. ನರಿಮೊಗರು ಸರಸ್ವತಿ ವಿದ್ಯಾಮಂದಿರದ ಅವಿನಾಶ್ ಕೊಡೆಂಕಿರಿ ಮಾತನಾಡಿ, ಯೋಗವು ಜೀವನ ಶೈಲಿಯನ್ನು ರೂಪಿಸುವ ಪರಿಪೂರ್ಣ ವಿಧಾನ. ಅಷ್ಟಾಂಗ ಯೋಗವು ದೇಹ, ಮನಸು ಮತ್ತು ಬುದ್ಧಿ ಸಂಸ್ಕಾರದ ಜೊತೆಗೆ ಆಧ್ಯಾತ್ಮಿಕ ಉನ್ನತಿ ತಂದುಕೊಡುತ್ತದೆ ಎಂದು ಹೇಳಿದರು. ದೈಹಿಕ ಶಿಕ್ಷಣ ಶಿಕ್ಷಕ ರಾಧಾಕೃಷ್ಣ ಮಾತನಾಡಿ, ಜೀವನ ಶಿಸ್ತು ಅವಶ್ಯ. ಯೋಗ ಅದನ್ನು ನೀಡುತ್ತದೆ. ನಿತ್ಯ ಯೋಗಾಸನ ಮಾಡುವಂತೆ ತಿಳಿಸಿದರು. ಶಾಲಾ ಆಡಳಿತ ಅಧಿಕಾರಿ ಶುಭಾ ಅವಿನಾಶ್ ಉಪಸ್ಥಿತರಿದ್ದರು.

ಸರಸ್ವತಿ ವಿದ್ಯಾ ಮಂದಿರದಲ್ಲಿ ವಿಶ್ವ ಯೋಗ ದಿನಾಚರಣೆ Read More »

ನರೇಂದ್ರ ಪ.ಪೂ.ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ

ಪುತ್ತೂರು: ಯೋಗವು ಮನುಷ್ಯ ಮತ್ತು ಪ್ರಕೃತಿಯನ್ನು ಸೇರಿಸುವ, ಒಂದಾಗಿಸುವ ಒಂದು ಸಾಧನ.ಭೌತಿಕದಿಂದ ಅಭೌತಿಕದೆಡೆಗೆ ನಡೆಸುವ ಪಯಣಕ್ಕೆ ಈ ಯೋಗವೇ ಮಾರ್ಗದರ್ಶಕ. ಯೋಗದಲ್ಲಿ ಸಂಪೂರ್ಣತೆಯನ್ನು ಪಡೆದವರು ಬ್ರಹ್ಮಜ್ಞಾನವನ್ನು ಪಡೆಯುತ್ತಾರೆ.ಆಧ್ಯಾತ್ಮದ ಸೂಕ್ಷ್ಮ ಸತ್ಯವನ್ನು ಅರಿತುಕೊಳ್ಳುತ್ತಾರೆ.ಯೋಗವನ್ನು ಹಿಡಿದು ಪರಿಪೂರ್ಣತೆಯನ್ನು ಪಡೆಯುವವನೇ ಸಾಧಕನಾಗುತ್ತಾನೆ. ಎಂದು ಕೊಂಬೆಟ್ಟು ಸರಕಾರಿ ಪ.ಪೂ.ಕಾಲೇಜಿನ ಉಪನ್ಯಾಸಕಿ ವಾರಿಜ ಹೇಳಿದರು. ಅವರು ಬುಧವಾರ ನರೇಂದ್ರ ಪ.ಪೂ.ಕಾಲೇಜಿನಲ್ಲಿ ನಡೆದ ವಿಶ್ವ ಯೋಗ ದಿನಾಚರಣೆಯಲ್ಲಿ  ಆಸನಗಳೊಂದಿಗೆ ಯೋಗದ ಮಹತ್ವ ಎಂಬ ವಿಷಯದ ಕುರಿತಾಗಿ ವಿದ್ಯಾರ್ಥಿಗಳಿಗೆ ವಿಶೇಷ ಉಪನ್ಯಾಸ ನೀಡಿದರು. ಸಕಾರಾತ್ಮಕ ಚಿಂತನೆಗಳಿಗೆ ಯೋಗ

ನರೇಂದ್ರ ಪ.ಪೂ.ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ Read More »

ರಾಜ್ಯಮಟ್ಟದ ಅಂತರ್ ವಲಯ ಯುವಜನೋತ್ಸವ-2023 | ವಿವೇಕಾನಂದ ಕಾನೂನು ಮಹಾವಿದ್ಯಾಲಯಕ್ಕೆ ದ್ವಿತೀಯ ಸ್ಥಾನ

ಪುತ್ತೂರು: ಹುಬ್ಬಳ್ಳಿಯ ಕರ್ನಾಟಕ ರಾಜ್ಯ ಕಾನೂನು ಮಹಾವಿದ್ಯಾಲಯದಲ್ಲಿ ನಡೆದ ರಾಜ್ಯ ಮಟ್ಟದ ಅಂತರ್ ವಲಯ ಯುವಜನೋತ್ಸವ-2023ರಲ್ಲಿ ಪುತ್ತೂರಿನ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಗಳು ಸ್ಪರ್ದಿಸಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ಈ ಸ್ಪರ್ಧೆಯಲ್ಲಿ ವಿವಿಧ ವಲಯಗಳಿಂದ ಆಯ್ದ 30 ಕಾಲೇಜುಗಳ ವಿದ್ಯಾರ್ಥಿ ತಂಡಗಳು ಭಾಗವಹಿಸಿದ್ದವು. ಈ ಸ್ಪರ್ಧೆಯಲ್ಲಿ ವಿವೇಕಾನಂದ ಕಾನೂನು ಮಹಾವಿದ್ಯಾಲಯದ 4ನೇ ವರ್ಷದ ಬಿ.ಎ ಎಲ್.ಎಲ್.ಬಿ ವಿದ್ಯಾರ್ಥಿನಿ ಲಘು ಸಂಗೀತಾ ದಲ್ಲಿ ಪ್ರಥಮ ಸ್ಥಾನ, 4ನೇ ವರ್ಷದ ಬಿ.ಎ ಎಲ್.ಎಲ್.ಬಿ ವಿದ್ಯಾರ್ಥಿ ಶ್ರೇಯಸ್ ಎಂ ರಾವ್ ಭಾಷಣ

ರಾಜ್ಯಮಟ್ಟದ ಅಂತರ್ ವಲಯ ಯುವಜನೋತ್ಸವ-2023 | ವಿವೇಕಾನಂದ ಕಾನೂನು ಮಹಾವಿದ್ಯಾಲಯಕ್ಕೆ ದ್ವಿತೀಯ ಸ್ಥಾನ Read More »

ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ವಿಶ್ವ ಯೋಗ ದಿನಾಚರಣೆ

ಪುತ್ತೂರು: ಯೋಗವನ್ನು ಪ್ರತಿಯೊಬ್ಬರೂ ಕೂಡಾ ತನ್ನ ದೈನಂದಿನ ದಿನಚರಿಯ ಭಾಗವನ್ನಾಗಿ ಅಳವಡಿಸಿಕೊಳ್ಳುವುದರಿಂದ ಒತ್ತಡ ನಿವಾರಣೆ, ಮಾನಸಿಕ ಸ್ಥಿತಿಯ ಸುಧಾರಣೆ, ದೈಹಿಕ ಸಧೃಢತೆಯನ್ನು ಸಾಧಿಸಬಹುದು ಎಂದು ವಿದ್ಯಾಭಾರತಿಯ ದಕ್ಷಿಣ ಕನ್ನಡದ ಯೋಗ ಸಂಯೋಜಕ ಶ್ರೀ.ಚಂದ್ರಶೇಖರ್ ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ಎಂಬಿಎ ವಿಭಾಗದ ಆಶ್ರಯದಲ್ಲಿ ಕಾಲೇಜಿನ ವಿಶ್ವೇಶ್ವರಯ್ಯ ಸಭಾ ಭವನದಲ್ಲಿ ನಡೆದ 9ನೇ ಅಂತಾರಾಷ್ಟ್ರೀಯ ಯೋಗದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತಾಡಿದರು. ಯೋಗ ಇಂದು ವಿಶ್ವವ್ಯಾಪಿಯಾಗಿದೆ, ವಿದೇಶಗಳೂ ಅದರ ಮಹತ್ವವನ್ನು ಅರಿತಿವೆ.

ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ವಿಶ್ವ ಯೋಗ ದಿನಾಚರಣೆ Read More »

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ

ಬೆಂಗಳೂರು: ಮೇ-ಜೂನ್ ತಿಂಗಳಿನಲ್ಲಿ ನಡೆದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ. ಪರೀಕ್ಷೆ ಬರೆದ ವಿದ್ಯಾರ್ಥಿಗಳು https://karresults.nic.in/ ವೆಬ್‌ಸೈಟ್‌ನಲ್ಲಿ ತಮ್ಮ ಫಲಿತಾಂಶ ನೋಡಬಹುದಾಗಿದೆ. ಪೂರಕ ಪರೀಕ್ಷೆಯ ಫಲಿತಾಂಶದಲ್ಲಿಯೂ ಬಾಲಕಿಯರು ಮುಂದಿದ್ದಾರೆ. ಒಟ್ಟು 62,111 ವಿದ್ಯಾರ್ಥಿನಿಯರು ಪರೀಕ್ಷೆಗೆ ಹಾಜರಾಗಿದ್ದು,ಇವರಲ್ಲಿ 21,577 ವಿದ್ಯಾರ್ಥಿನಿಯರು (ಶೇ.34.74) ಉತ್ತೀರ್ಣರಾಗಿದ್ದಾರೆ. 95,645 ಬಾಲಕರು ಪರೀಕ್ಷೆಗೆ ಹಾಜರಾಗಿದ್ದು, 28, 901 ಬಾಲಕರು (ಶೇ.30.22) ಉತ್ತೀರ್ಣರಾಗಿದ್ದಾರೆ. ನಗರ ಪ್ರದೇಶದ ಶೇ.32.69 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರೆ ಗ್ರಾಮಾಂತರ ಭಾಗದ

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ Read More »

ಸೈಂಟ್ ಆನ್ಸ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ನಲ್ಲಿ IRCMD ಶಿಕ್ಷಣ ಸಂಸ್ಥೆ ವತಿಯಿಂದ ‘ಅಬಾಕಸ್’ ಗಣಿತ ತರಗತಿ ಉದ್ಘಾಟನೆ.

ಕಡಬ : ಕಡಬದ ಸೈಂಟ್ ಆನ್ಸ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ನಲ್ಲಿ ಅಬಾಕಸ್ ಗಣಿತ ತರಬೇತಿಯ ಉದ್ಘಾಟನಾ ಕಾರ್ಯಕ್ರಮ ಶಾಲಾ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸೈಂಟ್ ಆನ್ಸ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ನ ಪ್ರಾಂಶುಪಾಲರಾದ ವಂದನೀಯ ಫಾದರ್ ಅಮಿತ್ ಪ್ರಕಾಶ್ ರೋಡ್ರಿಗಸ್ ರವರು ವಹಿಸಿ ಮಾತನಾಡಿ, ಅಬಾಕಸ್ ತರಗತಿಯನ್ನು ನಮ್ಮ ವಿದ್ಯಾರ್ಥಿಗಳಿಗೆ ನೀಡುವುದರಿಂದ ವಿದ್ಯಾರ್ಥಿಗಳ ಬುದ್ದಿ ಶಕ್ತಿ ಉತ್ತಮಗೊಳ್ಳುತ್ತದೆ, ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಇನ್ನಿತರ ಚಟುವಟಿಕೆಗಳಲ್ಲಿಯೂ ಪ್ರಗತಿ ಸಾಧಿಸುತ್ತಾರೆ ಎಂದು ಹೇಳಿದರು. ಮುಖ್ಯ ಅತಿಥಿಯಾಗಿ ಪುತ್ತೂರು

ಸೈಂಟ್ ಆನ್ಸ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ನಲ್ಲಿ IRCMD ಶಿಕ್ಷಣ ಸಂಸ್ಥೆ ವತಿಯಿಂದ ‘ಅಬಾಕಸ್’ ಗಣಿತ ತರಗತಿ ಉದ್ಘಾಟನೆ. Read More »

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪ್ರತಿಭಾನ್ವೇಷಣೆ ಕಾರ್ಯಕ್ರಮ

ಪುತ್ತೂರು: ಸಾಂಸ್ಕೃತಿಕ ಕಲೆಗಳು ಶಿಕ್ಷಣದ ಅವಿಭಾಜ್ಯ ಅಂಗವಾಗಿದ್ದು ಭಾರತೀಯ ಮನಸ್ಸಿನ ಬೆಳವಣಿಗೆಗೆ ಪೂರಕವಾಗಿದೆ. ಇವುಗಳು ಮನಸ್ಸಿಗೆ ಮನೋರಂಜನೆ ಒದಗಿಸುವುದು ಮಾತ್ರವಲ್ಲದೆ ವ್ಯಕ್ತಿಯನ್ನು ಸಂವೇದನಶೀಲರನ್ನಾಗಿಸುತ್ತದೆ. ಎಂದು ವಿವೇಕಾನಂದ ಪದವಿ ಕಾಲೇಜಿನ ಪ್ರಾಂಶುಪಾಲ ಪ್ರೊ.ವಿಷ್ಣು ಭಟ್ ಹೇಳಿದರು. ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಲಾದ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪ್ರತಿಭಾನ್ವೇಷಣೆ-2023 ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ನಾಲ್ಕು ಗೋಡೆಯ ಶಿಕ್ಷಣ ಪ್ರಸ್ತುತ ಕಾಲಘಟ್ಟದಲ್ಲಿ ಸಾಕಾಗುವುದಿಲ್ಲ. ಜ್ಞಾನ ಹೆಚ್ಚಿಸಿಕೊಳ್ಳಬೇಕಾದರೆ ಪಠ್ಯೇತರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬೇಕು. ಓದುವುದರ ಜೊತೆಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪ್ರತಿಭಾನ್ವೇಷಣೆ ಕಾರ್ಯಕ್ರಮ Read More »

ಜೆ.ಇ.ಇ. ಎಡ್ವಾನ್ಸ್ಡ್ ರಾಷ್ಟ್ರೀಯ ಮಟ್ಟದ ಪರೀಕ್ಷೆ: ವಿವೇಕಾನಂದ ಪದವಿಪೂರ್ವ ಕಾಲೇಜಿನ ವರ್ಷಿತ್ ಮತ್ತು ಅಮೋಘ್‌ರವರಿಗೆ ರ್‍ಯಾಂಕ್ | ಐ.ಐ.ಟಿ. ಸಂಸ್ಥೆಗಳ ಪ್ರವೇಶಕ್ಕೆ ಅರ್ಹತೆ

ಪುತ್ತೂರು: ಕೇಂದ್ರ ಸರಕಾರದ ಎನ್.ಟಿ.ಎ. ನಡೆಸುವ ರಾಷ್ಟ್ರೀಯ ಮಟ್ಟದ ಜೆ.ಇ.ಇ. ಎಡ್ವಾನ್ಸ್ಡ್ ಪರೀಕ್ಷೆಯಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವರ್ಷಿತ್ ಜೆ ಮತ್ತು ಅಮೋಘ್ ಎ.ಪಿ. ಉತ್ತಮ ರ್‍ಯಾಂಕುಗಳನ್ನು ಗಳಿಸಿ ರಾಷ್ಟ್ರಮಟ್ಟದ ಐ.ಐ.ಟಿ. ಸಂಸ್ಥೆಗಳ ಪ್ರವೇಶಕ್ಕೆ ಅರ್ಹತೆ ಪಡೆದಿದ್ದಾರೆ. ವರ್ಷಿತ್ ಜೆ 108 ಅಂಕಗಳನ್ನು ಗಳಿಸುವ ಮೂಲಕ ಸಾಮಾನ್ಯ ವರ್ಗದಲ್ಲಿ 1540 ರ್‍ಯಾಂಕ್, ಒ.ಬಿ.ಸಿ. ವಿಭಾಗದಲ್ಲಿ 3806  ರ್‍ಯಾಂಕ್ ಗಳಿಸಿದ್ದಾರೆ. ಇವರು ಬಂಟ್ವಾಳ ತಾಲೂಕಿನ ಮೂಡ ಭಂಡಾರಿ ಬೆಟ್ಟುವಿನ ಜಯಂತ ಆರ್ ಮತ್ತು ಸೌಮ್ಯ ಜೆ ದಂಪತಿ

ಜೆ.ಇ.ಇ. ಎಡ್ವಾನ್ಸ್ಡ್ ರಾಷ್ಟ್ರೀಯ ಮಟ್ಟದ ಪರೀಕ್ಷೆ: ವಿವೇಕಾನಂದ ಪದವಿಪೂರ್ವ ಕಾಲೇಜಿನ ವರ್ಷಿತ್ ಮತ್ತು ಅಮೋಘ್‌ರವರಿಗೆ ರ್‍ಯಾಂಕ್ | ಐ.ಐ.ಟಿ. ಸಂಸ್ಥೆಗಳ ಪ್ರವೇಶಕ್ಕೆ ಅರ್ಹತೆ Read More »

error: Content is protected !!
Scroll to Top