ಅಪರಾಧ

ಇನ್ನಿಬ್ಬರು ಉಗ್ರರನ್ನು ಸಾಯಿಸಿದ ಭದ್ರತಾ ಪಡೆ

ಗಡಿ ನುಸುಳಲು ಯತ್ನಿಸಿದ ಪಾಕ್‌ ಉಗ್ರರು ಗುಂಡಿಗೆ ಬಲಿ ಶ್ರೀನಗರ: ಪಹಲ್ಗಾಮ್‌ ದಾಳಿಯ ಪಾತಕಿ ಹಾಶಿಮ್‌ ಮೂಸಾ ಸಹಿತ ಮೂವರು ಉಗ್ರರನ್ನು ಸಾಯಿಸಿದ ಬೆನ್ನಲ್ಲೇ ಮತ್ತಿಬ್ಬರು ಉಗ್ರರನ್ನು ಭದ್ರತಾ ಪಡೆ ಬೇಟೆಯಾಡಿದೆ. ಜಮ್ಮು ಮತ್ತು ಕಾಶ್ಮೀರದ ಪೂಂಛ್‌ನಲ್ಲಿ ಇಂದು ಬೆಳಗ್ಗೆ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಬಲಿಯಾಗಿದ್ದಾರೆ. ಹತ್ಯೆಯಾದ ಇಬ್ಬರು ಉಗ್ರರು ಕಾಶ್ಮೀರದ ಪೂಂಛ್‌ ಜಿಲ್ಲೆಯ ದೇಗ್ವಾರ್ ಸೆಕ್ಟರ್‌ನ ನಿಯಂತ್ರಣ ರೇಖೆಯ ಬಳಿ ಒಳನುಸುಳಲು ಯತ್ನಿಸಿದ್ದರು. ಭಾರಿ ಮಳೆ ನಡುವೆಯೂ ಮೂವರು ಪಿಒಕೆ […]

ಇನ್ನಿಬ್ಬರು ಉಗ್ರರನ್ನು ಸಾಯಿಸಿದ ಭದ್ರತಾ ಪಡೆ Read More »

ಸುಳ್ಯ : ಅಕ್ರಮ ಗೋಸಾಗಾಟ ಪತ್ತೆ, ಇಬ್ಬರ ಬಂಧನ

ಸುಳ್ಯ: ಬೆಳ್ಳಾರೆ ಪೊಲೀಸರು ಮಂಗಳವಾರ ಅಕ್ರಮವಾಗಿ ಸಾಗಿಸುತ್ತಿದ್ದ ಗೋವುಗಳನ್ನು ರಕ್ಷಿಸಿ ಇಬ್ಬರನ್ನು ಬಂಧಿಸಿದ್ದಾರೆ. ಬೆಳ್ಳಾರೆ ಸಮೀಪದ ನೆಟ್ಟಾರಿನಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ. ಹಾಸನ ಕಡೆಯಿಂದ ಪಂಜ – ಬೆಳ್ಳಾರೆ – ನೆಟ್ಟಾರು ಮಾರ್ಗವಾಗಿ ಈಶ್ವರಮಂಗಲಕ್ಕೆ 5 ಎಮ್ಮೆಗಳನ್ನು ಪಿಕಪ್ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ನೆಟ್ಟಾರಿನಲ್ಲಿ ಪಿಕಪ್ ಅನ್ನು ತಡೆದು ನಿಲ್ಲಿಸಿ ಇಬ್ಬರು ಆರೋಪಿಗಳು, 5 ಎಮ್ಮೆಗಳನ್ನು ಪಿಕಪ್ ಸಮೇತ ವಶಪಡಿಸಿಕೊಂಡಿದ್ದಾರೆ. ಕಾಸರಗೋಡಿನ ದೇಲಂಪಾಡಿ ಮುಜಾಮಿನ್ ಮತ್ತು ಅಬ್ದುಲ್ಲ ಬಂಧಿತ ಆರೋಪಿಗಳು. ಆರೋಪಿಗಳನ್ನು

ಸುಳ್ಯ : ಅಕ್ರಮ ಗೋಸಾಗಾಟ ಪತ್ತೆ, ಇಬ್ಬರ ಬಂಧನ Read More »

ಮೈಸೂರಿನಲ್ಲಿ ವಶಪಡಿಸಿಕೊಂಡದ್ದು ಬರೋಬ್ಬರಿ 390 ಕೋಟಿ. ರೂ. ಡ್ರಗ್ಸ್‌

ಗ್ಯಾರೇಜ್‌ನ ಒಳಗಿತ್ತು ಮಾದಕ ವಸ್ತು ತಯಾರಿಸುವ ಕಾರ್ಖಾನೆ ಮುಂಬೈ: ಮುಂಬೈ ಪೊಲೀಸರು ಭಾನುವಾರ ಮೈಸೂರಿನ ಹೊರವಲಯದಲ್ಲಿ ವಶಪಡಿಸಿಕೊಂಡಿರುವ ಮಾದಕವಸ್ತು ಮೌಲ್ಯ ಬರೋಬ್ಬರಿ 390 ಕೋ. ರೂ.. ಭಾರಿ ಪ್ರಮಾಣದ ಡ್ರಗ್ಸ್‌ ವಶ ಪ್ರಕರಣದ ಸಂಪೂರ್ಣ ಚಿತ್ರಣವನ್ನು ದಾಳಿ ನಡೆಸಿದ್ದ ಮುಂಬೈ ಪೊಲೀಸರು ಸೋಮವಾರ ನೀಡಿದ್ದು ಒಟ್ಟು 390 ಕೋಟಿ ರೂ. ಮೌಲ್ಯದ 192 ಕೆ.ಜೆ. ಮೆಫೆಡ್ರೋನ್‌ ಡ್ರಗ್ಸ್‌ ವಶಪಡಿಸಿಕೊಂಡು 8 ಜನರನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಉಪ ಪೊಲೀಸ್ ಆಯುಕ್ತರ ದತ್ತಾ ನಲವಾಡೆ,

ಮೈಸೂರಿನಲ್ಲಿ ವಶಪಡಿಸಿಕೊಂಡದ್ದು ಬರೋಬ್ಬರಿ 390 ಕೋಟಿ. ರೂ. ಡ್ರಗ್ಸ್‌ Read More »

ನಟಿ ರಮ್ಯಾಗೆ ಅಸಭ್ಯ ಕಮೆಂಟ್‌ : 43 ಮಂದಿ ವಿರುದ್ಧ ಕೇಸ್‌

ಸೋಷಿಯಲ್‌ ಮೀಡಿಯಾದಲ್ಲಿ ರಮ್ಯಾ V/S ದರ್ಶನ್‌ ಅಭಿಮಾನಿಗಳ ಜಟಾಪಟಿ ಬೆಂಗಳೂರು: ಸಾಮಾಜಿಕ ಮಾಧ್ಯಮಗಳಲ್ಲಿ ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಹಾಗೂ ನಟ ದರ್ಶನ್‌ ಅಭಿಮಾನಿಗಳ ನಡುವಿನ ಜಟಾಪಟಿ ತೀವ್ರಗೊಂಡಿದ್ದು, ನಟಿಗೆ ಕುರಿತು ಅವಹೇಳನಕಾರಿ ಹಾಗೂ ಅಶ್ಲೀಲ ಸಂದೇಶ ಕಳುಹಿಸಿದ ಆರೋಪದ ಮೇಲೆ ದರ್ಶನ್ ಅವರ 43 ಅಭಿಮಾನಿಗಳ ವಿರುದ್ಧ ಬೆಂಗಳೂರು ಪೊಲೀಸರು ಸೋಮವಾರ ರಾತ್ರಿ ಎಫ್ಐಆರ್ ದಾಖಲಿಸಿದ್ದಾರೆ. ತಮ್ಮ ವಿರುದ್ಧ ಅಶ್ಲೀಲ ಕಾಮೆಂಟ್ ಮಾಡಿದ ದರ್ಶನ್ ಫ್ಯಾನ್ಸ್ ವಿರುದ್ಧ ಕಿಡಿಕಾರಿರುವ ನಟಿ ರಮ್ಯಾ, ಮಹಿಳಾ ಆಯೋಗ

ನಟಿ ರಮ್ಯಾಗೆ ಅಸಭ್ಯ ಕಮೆಂಟ್‌ : 43 ಮಂದಿ ವಿರುದ್ಧ ಕೇಸ್‌ Read More »

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್‌ : ಆರು ಕಡೆ ಏಕಕಾಲದಲ್ಲಿ ದಾಳಿ

ಬೆಂಗಳೂರು: ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಬೆಳ್ಳಂಬೆಳಗ್ಗೆ ಬಿಸಿ ಮುಟ್ಟಿಸಿದೆ. ಬೆಂಗಳೂರು ಸೇರಿದಂತೆ 4 ಜಿಲ್ಲೆಗಳಲ್ಲಿ ಆರು ಕಡೆ ದಾಳಿ ನಡೆಸಿದೆ. ಬೆಂಗಳೂರು, ಹಾಸನ, ಚಿಕ್ಕಬಳ್ಳಾಪುರ, ಚಿತ್ರದುರ್ಗ ಜಿಲ್ಲೆಗಳ 6 ಕಡೆ ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ಬೆಂಗಳೂರಿನ ಕಂದಾಯ ಅಧಿಕಾರಿ ವೆಂಕಟೇಶ್, ಬಿಡಿಎ ಕಚೇರಿಯ ಸಿನಿಯರ್ ಅರ್ಟಿಕಲ್ಚರ್ ಡೈರೆಕ್ಟರ್ ಓಂ ಪ್ರಕಾಶ್‌, ರಾಷ್ಟ್ರೀಯ ಹೆದ್ದಾರಿ ಹಾಸನ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಜಯಣ್ಣ, ಚಿಕ್ಕಬಳ್ಳಾಪುರದ ಜ್ಯೂನಿಯರ್ ಎಂಜಿನಿಯರ್ ಆಂಜನೇಯ ಮೂರ್ತಿ, ಚಿತ್ರದುರ್ಗದ ತಾಲೂಕು ಆರೋಗ್ಯಾಧಿಕಾರಿ ವೆಂಕಟೇಶ್ ಮನೆ

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್‌ : ಆರು ಕಡೆ ಏಕಕಾಲದಲ್ಲಿ ದಾಳಿ Read More »

ಧರ್ಮಸ್ಥಳ ಪ್ರಕರಣ : ಇಂದೇ ಗುರುತಿಸಿದ ಸ್ಥಳಗಳ ಅಗೆತ ಕಾರ್ಯಾಚರಣೆ?

ಶವ ಹೂತು ಹಾಕಿದ 13 ಸ್ಥಳಗಳನ್ನು ತೋರಿಸಿದ ದೂರುದಾರ ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ವಿವಿಧೆಡೆ ನೂರಾರು ಶವಗಳನ್ನು ಹೂತು ಹಾಕಿರುವುದಾಗಿ ಹೇಳಿಕೆ ನೀಡಿದ್ದ ವ್ಯಕ್ತಿ ಸೋಮವಾರ ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟದ ಸುತ್ತಲಿನ ಪ್ರದೇಶಗಳಲ್ಲಿ ತಾನು ಮೃತದೇಹಗಳನ್ನು ಹೂತು ಹಾಕಿರುವ 13 ಸ್ಥಳಗಳನ್ನು ತೋರಿಸಿದ್ದಾನೆ. ಪೊಲೀಸರು ಈ 13 ಸ್ಥಳಗಳನ್ನು ನಂಬರ್ ನೀಡಿ ಗುರುತಿಸಿದ್ದಾರೆ. ಅದರ ಸುತ್ತ ಟೇಪ್ ಕಟ್ಟಲಾಗಿದ್ದು ಈ ಸ್ಥಳಗಳಲ್ಲಿ ರಾತ್ರಿ ಪೊಲೀಸ್ ಗಸ್ತನ್ನು ಏರ್ಪಡಿಸಲಾಗಿತ್ತು. ಮಂಗಳವಾರವೇ ಮೃತದೇಹಗಳನ್ನು ಹೂತು ಹಾಕಿದ ಸ್ಥಳಗಳಲ್ಲಿ ಅಗೆದು ಅವಶೇಷಗಳನ್ನು

ಧರ್ಮಸ್ಥಳ ಪ್ರಕರಣ : ಇಂದೇ ಗುರುತಿಸಿದ ಸ್ಥಳಗಳ ಅಗೆತ ಕಾರ್ಯಾಚರಣೆ? Read More »

ನಿಮಿಷಾ ಪ್ರಿಯಾ ಮರಣ ದಂಡನೆ ಶಾಶ್ವತವಾಗಿ ರದ್ದು

ಕೊನೆಗೂ ಸಾವಿನ ದವಡೆಯಿಂದ ಪಾರಾದ ಕೇರಳದ ನರ್ಸ್‌ ತಿರುವನಂತಪುರ: ಕೇರಳದ ನರ್ಸ್‌ ನಿಮಿಷಾ ಪ್ರಿಯಾಗೆ ಕೊಲೆ ಪ್ರಕರಣವೊಂದರಲ್ಲಿ ವಿಧಿಸಿದ್ದ ಮರಣ ದಂಡನೆಯನ್ನು ಯೆಮೆನ್‌ ಸರ್ಕಾರ ಸಂಪೂರ್ಣವಾಗಿ ರದ್ದುಪಡಿಸಿದೆ. ಯೆಮೆನ್‌ ಅಧಿಕಾರಿಗಳು ಮರಣ ದಂಡನೆಯನ್ನು ಸಂಪೂರ್ಣವಾಗಿ ರದ್ದುಗೊಳಿಸಿದ್ದಾರೆ ಎಂದು ಗ್ರ್ಯಾಂಡ್‌ ಮುಫ್ತಿ ಕಾಂತಪುರಂ ಎ.ಪಿ.ಅಬೂಬಕ್ಕರ್‌ ಮುಸ್ಲಿಯಾರ್‌ ಅವರ ಕಚೇರಿ ಪ್ರಕಟಣೆ ತಿಳಿಸಿದೆ. ಯೆಮೆನ್‌ನ ವ್ಯವಹಾರ ಪಾಲುದಾರನನ್ನು ನಿದ್ದೆಯ ಓವರ್‌ಡೋಸ್‌ ಇಂಜೆಕ್ಷನ್‌ ಚುಚ್ಚಿ ಕೊಲೆ ಮಾಡಿದ ಅಪರಾಧಕ್ಕೆ ನಿಮಿಷಾ ಪ್ರಿಯಾಗೆ ಯೆಮೆನ್‌ನಲ್ಲಿ ಗಲ್ಲು ಶಿಕ್ಷೆ ವಿಧಿಸಲಾಗಿತ್ತು. ಪಾಲುದಾರನನ್ನು ಕೊಂದು ಶವವನ್ನು

ನಿಮಿಷಾ ಪ್ರಿಯಾ ಮರಣ ದಂಡನೆ ಶಾಶ್ವತವಾಗಿ ರದ್ದು Read More »

ಧರ್ಮಸ್ಥಳ ಪ್ರಕರಣ : ಎರಡನೇ ದಿನವೂ ದೂರುದಾರನ ಸುದೀರ್ಘ ವಿಚಾರಣೆ

ತಲೆ ಬುರುಡೆ ರಹಸ್ಯ ಬೇಧಿಸುವ ನಿಟ್ಟಿನಲ್ಲಿ ತನಿಖೆ ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟಿದ್ದೇನೆ ಎಂದು ದೂರು ನೀಡಿದ್ದ ವ್ಯಕ್ತಿಯನ್ನು ಎರಡನೇ ದಿನವೂ ಎಸ್‌ಐಟಿ ಅಧಿಕಾರಿಗಳು ತೀವ್ರ ವಿಚಾರಣೆಗೊಳಪಡಿಸಿದ್ದಾರೆ. ಎರಡನೇ ದಿನವಾದ ಭಾನುವಾರ ವಿಶೇಷ ತನಿಖಾ ತಂಡದ ಮುಖ್ಯಸ್ಥ ಪ್ರಣವ್ ಮೊಹಾಂತಿ ಅವರೇ ಸ್ವತಃ ವಿಚಾರಣೆ ನಡೆಸಿದ್ದಾರೆ. ಶನಿವಾರ ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ಐಬಿಯಲ್ಲಿ ಎಸ್‌ಐಟಿ ಅಧಿಕಾರಿ ಡಿಐಜಿ ಅನುಚೇತ್ ನೇತೃತ್ವದಲ್ಲಿ ಎಂಟು ಗಂಟೆಗಳ ಕಾಲ ನಿರಂತರ ವಿಚಾರಣೆ ನಡೆಸಲಾಗಿತ್ತು. ಈವರೆಗೆ ನಡೆದ ವಿಚಾರಣೆಯ ಮಾಹಿತಿ ಪಡೆದ ಬಳಿಕ

ಧರ್ಮಸ್ಥಳ ಪ್ರಕರಣ : ಎರಡನೇ ದಿನವೂ ದೂರುದಾರನ ಸುದೀರ್ಘ ವಿಚಾರಣೆ Read More »

ಮಂಗಳೂರು ಶೂಟೌಟ್‌ ಪ್ರಕರಣದ ಆರೋಪಿ 10 ವರ್ಷಗಳ ಬಳಿಕ ಸೆರೆ

ಭಾರತಿ ಬಿಲ್ಡರ್ಸ್‌ ಕಚೇರಿ ಮೇಲೆ ರವಿ ಪೂಜಾರಿ ಗ್ಯಾಂಗ್‌ ನಡೆಸಿದ ಶೂಟೌಟ್‌ ಪ್ರಕರಣ ಮಂಗಳೂರು : 2014ರಲ್ಲಿ ಮಂಗಳೂರಿನಲ್ಲಿ ಸಂಭವಿಸಿದ್ದ ಶೂಟೌಟ್‌ ಪ್ರಕರಣದ ಆರೋಪಿಯನ್ನು ಹತ್ತು ವರ್ಷಗಳ ಬಳಿಕ ಪೊಲೀಸರು ಬಂಧಿಸಿದ್ದಾರೆ. ಮಹಾರಾಷ್ಟ್ರದ ಕರಾಡ್‌ನ ಗಣೇಶ್‌ ಲಕ್ಷ್ಮಣ್ ಸಕಟ್ ಎಂಬಾತನನ್ನು ಉರ್ವ ಪೊಲೀಸರು ಬಂಧಿಸಿದ್ದಾರೆ. ಬಿಜೈಯ ಭಾರತಿ ಬಿಲ್ಡರ್ಸ್ ಕಚೇರಿ ಮೇಲೆ ಭೂಗತ ಪಾತಕಿ ರವಿ ಪೂಜಾರಿ ಸಹಚರರು 2014ರಲ್ಲಿ ಶೂಟೌಟ್ ನಡೆಸಿದ್ದರು. ಈ ಬಗ್ಗೆ ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ಆರೋಪಿಯಾಗಿದ್ದ

ಮಂಗಳೂರು ಶೂಟೌಟ್‌ ಪ್ರಕರಣದ ಆರೋಪಿ 10 ವರ್ಷಗಳ ಬಳಿಕ ಸೆರೆ Read More »

ಹರಿದ್ವಾರ : ಮಾನಸ ದೇವಿ ದೇವಸ್ಥಾನದಲ್ಲಿ ಕಾಲ್ತುಳಿತದಿಂದ 6 ಮಂದಿ ಸಾವು

ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ ನೋಡಿ ಜನ ಗಾಬರಿಯಾದಾಗ ನೂಕುನುಗ್ಗಲು ಹರಿದ್ವಾರ: ಹರಿದ್ವಾರದ ಪ್ರಸಿದ್ಧ ಮಾನಸ ದೇವಿ ದೇವಸ್ಥಾನದಲ್ಲಿ ಭಾನುವಾರ ಬೆಳಗ್ಗೆ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಆರು ಜನರು ಮೃತಪಟ್ಟು ಹಲವರು ಗಾಯಗೊಂಡಿದ್ದಾರೆ. ದೇವಸ್ಥಾನದ ಸಮೀಪವಿರುವ ವಿದ್ಯುತ್‌ ಕಂಬದಲ್ಲಿ ಶಅರ್ಟ್‌ ಸರ್ಕ್ಯೂಟ್‌ ಆಗಿದ್ದು, ಇದನ್ನು ನೋಡಿ ಭಕ್ತರು ಗಾಬರಿಯಾಗಿ ಓಡ;ಲು ತೊಡಗಿದಾಗ ನೂಕುನುಗ್ಗಲು ಸಂಭವಿಸಿತು ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿಕೊಂಡಿದ್ದಾರೆ. ಆದರೆ ಪೊಲೀಸರು ಶಾರ್ಟ್‌ ಸರ್ಕ್ಯೂಟ್‌ ಅವಗಡಕ್ಕೆ ಕಾರಣ ಎಂದು ಸ್ಪಷ್ಟಪಡಿಸಿಲ್ಲ. ಹರಿದ್ವಾರದ ಮಾನಸ ದೇವಿ ದೇವಸ್ಥಾನದಲ್ಲಿ ಇಂದು ಬೆಳಗ್ಗೆ

ಹರಿದ್ವಾರ : ಮಾನಸ ದೇವಿ ದೇವಸ್ಥಾನದಲ್ಲಿ ಕಾಲ್ತುಳಿತದಿಂದ 6 ಮಂದಿ ಸಾವು Read More »

error: Content is protected !!
Scroll to Top