ಅಪರಾಧ

ಸ್ನೇಹಿತರಿಂದ ವಿಡಿಯೋ ಬಹಿರಂಗ ಮಾಡುವ ಬೆದರಿಕೆ : ಲಾಡ್ಜ್‌ನಲ್ಲಿ ಯುವಕ ಆತ್ಮಹತ್ಯೆ

ಗೆಳತಿ ಜೊತೆಗಿದ್ದ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ ಸ್ನೇಹಿತರು ಕಾರ್ಕಳ : ತನ್ನ ಗೆಳತಿಯೊಂದಿಗೆ ಇರುವ ಖಾಸಗಿ ವಿಡಿಯೋವನ್ನು ಸೋರಿಕೆ ಮಾಡುವುದಾಗಿ ಸ್ನೇಹಿತರು ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಮನನೊಂದ ಯುವಕನೊಬ್ಬ ಲಾಡ್ಜ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರಂತ ಘಟನೆ ಗುರುವಾರ ಸಂಜೆ ಬೆಳ್ಮಣ್‌ನಲ್ಲಿ ನಡೆದಿದೆ. ನಿಟ್ಟೆ ಗ್ರಾಮದ ಪರಪ್ಪಾಡಿ ನಿವಾಸಿ ಅಭಿಷೇಕ್ ಆಚಾರ್ಯ (23) ಆತ್ಮಹತ್ಯೆ ಮಾಡಿಕೊಂಡ ಯುವಕ. ಅಭಿಷೇಕ್ ಮಂಗಳೂರಿನ ಖಾಸಗಿ ಕಂಪನಿಯಲ್ಲಿ ಉದ್ಯೋಗದಲ್ಲಿದ್ದರು ಮತ್ತು ಸ್ಥಳೀಯ ಯುವತಿಯನ್ನು ಪ್ರೀತಿಸುತ್ತಿದ್ದರು. ಇಬ್ಬರ ಸಂಬಂಧ ಬಹಳ […]

ಸ್ನೇಹಿತರಿಂದ ವಿಡಿಯೋ ಬಹಿರಂಗ ಮಾಡುವ ಬೆದರಿಕೆ : ಲಾಡ್ಜ್‌ನಲ್ಲಿ ಯುವಕ ಆತ್ಮಹತ್ಯೆ Read More »

ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿ ಮನೆಯ ಲಾಕರ್‌ನಲ್ಲಿತ್ತು 40 ಕೆಜಿ ಚಿನ್ನ

ಆನ್‌ಲೈನ್‌ ಬೆಟ್ಟಿಂಗ್‌ನಲ್ಲಿ ಸಂಪಾದಿಸಿದ ಅಪಾರ ಅಕ್ರಮ ಸಂಪತ್ತು ಬಯಲು ಬೆಂಗಳೂರು: ಅಕ್ರಮ ಬೆಟ್ಟಿಂಗ್‌ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿ ಮನೆ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಮತ್ತೊಮ್ಮೆ ದಾಳಿ ಮಾಡಿದಾಗ ಲಾಕರ್‌ನಲಿದ್ದ 51 ಕೋಟಿ ರೂ. ಮೌಲ್ಯದ 40 ಕೆಜಿ ಚಿನ್ನದ ಗಟ್ಟಿ ಪತ್ತೆಯಾಗಿದೆ. ಇ.ಡಿ. ಅಧಿಕಾರಿಗಳು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯ ಫೆಡರಲ್ ಬ್ಯಾಂಕ್‌ ಸೇರಿದಂತೆ ಪಟ್ಟಣದ ಹಲವೆಡೆ ಶೋಧ ನಡೆಸಿದ್ದಾರೆ. ವೀರೇಂದ್ರ ಪಪ್ಪಿ ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ಅಲ್ಪಾವಧಿಯಲ್ಲಿಯೇ 2,000 ಕೋಟಿ ರೂ. ಲಾಭಗಳಿಸಿದ್ದಾರೆ

ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿ ಮನೆಯ ಲಾಕರ್‌ನಲ್ಲಿತ್ತು 40 ಕೆಜಿ ಚಿನ್ನ Read More »

ನಿರೀಕ್ಷಣಾ ಜಾಮೀನು ಅರ್ಜಿ ವಜಾ : ಬಂಧನ ಭೀತಿಯಲ್ಲಿ ತಿಮರೋಡಿ

ಮನೆಯಲ್ಲಿ ಅಕ್ರಮವಾಗಿ ಶಸ್ತ್ರಾಸ್ತ್ರ ಇಟ್ಟುಕೊಂಡ ಪ್ರಕಣ ಧರ್ಮಸ್ಥಳ : ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಗುರುವಾರ ನಗರದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಜಾಗೊಳಿಸಿದೆ. ತನ್ನ ವಿರುದ್ಧ ದಾಖಲಾಗಿರುವ ಅಕ್ರಮ ಶಸ್ತ್ರಾಸ್ತ್ರ ಹೊಂದಿದ್ದ ಪ್ರಕರಣಕ್ಕೆ ಸಂಬಂಧಿಸಿ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಕೋರಿದ್ದರು. ತಿಮರೋಡಿ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಧೀಶ ಬಸವರಾಜ್

ನಿರೀಕ್ಷಣಾ ಜಾಮೀನು ಅರ್ಜಿ ವಜಾ : ಬಂಧನ ಭೀತಿಯಲ್ಲಿ ತಿಮರೋಡಿ Read More »

ಪಾಲಿಶಿಂಗ್‌ ನೆಪದಲ್ಲಿ 14 ಗ್ರಾಂ ಚಿನ್ನ ಎಗರಿಸಿದ ವಂಚಕ

ದಾರಿಮಧ್ಯೆ ಸಿಕ್ಕ ಅಪರಿಚಿತನ ಮಾತು ನಂಬಿ ಮೋಸ ಹೋದ ಮಹಿಳೆ ಮಂಗಳೂರು : ಆಭರಣ ಪಾಲಿಶಿಂಗ್ ಮಾಡಿಕೊಡುವ ಸೋಗಲ್ಲಿ ಬಂದ ಅಪರಿಚಿತ ವ್ಯಕ್ತಿಯೊಬ್ಬ ವಿಧವೆಯೋರ್ವರನ್ನು ಯಾಮಾರಿಸಿ ಆಕೆಯ ಕತ್ತಿನ ಸರದಿಂದ 14 ಗ್ರಾಂ ಚಿನ್ನವನ್ನು ಕರಗಿಸಿ ಹೊತ್ತೊಯ್ದ ಘಟನೆ ಉಳ್ಳಾಲ ತಾಲೂಕಿನ ಅಂಬ್ಲಮೊಗರು ಎಂಬಲ್ಲಿ ನಡೆದಿದೆ. ಉಳ್ಳಾಲ ತಾಲೂಕಿನ ಅಂಬ್ಲಮೊಗರು ನಿವಾಸಿ ಸುಂದರಿ (60) ವಂಚಕನಿಂದ‌ ಮೋಸ ಹೋದವರು. ಸುಂದರಿ ಅವರು ದಿನನಿತ್ಯಲೂ ಸುದರ್ಶನ್ ಶೆಟ್ಟಿ ಎಂಬವರ ಮನೆಗೆ ಕೆಲಸಕ್ಕೆ ತೆರಳಿ ಮಧ್ಯಾಹ್ನ 12 ಗಂಟೆಗೆ ಮರಳುತ್ತಿದ್ದರು.

ಪಾಲಿಶಿಂಗ್‌ ನೆಪದಲ್ಲಿ 14 ಗ್ರಾಂ ಚಿನ್ನ ಎಗರಿಸಿದ ವಂಚಕ Read More »

ಬಾಲಕನಿಗೆ ದ್ವಿಚಕ್ರ ವಾಹನ ನೀಡಿದ ವ್ಯಕ್ತಿಗೆ 29 ಸಾವಿರ ರೂ ದಂಡ

ಮಂಗಳೂರು : ಅಪ್ರಾಪ್ತ ವಯಸ್ಸಿನ ಬಾಲಕನಿಗೆ ದ್ವಿಚಕ್ರ ವಾಹನ ಚಲಾಯಿಸಲು ನೀಡಿದ ವ್ಯಕ್ತಿಗೆ ನ್ಯಾಯಾಲಯ 29,000 ರೂ. ದಂಡ ವಿಧಿಸಿದೆ. ಮಾರುತಿ ಕಂಬಾಲ್ ದಂಡ ಪಾವತಿಸಬೇಕಾದ ವ್ಯಕ್ತಿ ಎಂದು ತಿಳಿದುಬಂದಿದೆ. ಜೆಎಂಎಫ್‌ಸಿ 4 ನ್ಯಾಯಾಲಯದ ಪ್ರಭಾರ ನ್ಯಾಯಾಧೀಶೆ ಶಿಲ್ಪ ಎಸ್ ಬ್ಯಾಡಗಿ ಅವರು ಮಾರುತಿ ಕಂಬಾಲ್‌ಗೆ ದಂಡ ವಿಧಿಸಿ ಆದೇಶ ನೀಡಿದ್ದಾರೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

ಬಾಲಕನಿಗೆ ದ್ವಿಚಕ್ರ ವಾಹನ ನೀಡಿದ ವ್ಯಕ್ತಿಗೆ 29 ಸಾವಿರ ರೂ ದಂಡ Read More »

ಮಕ್ಕಳ ಸಾವಿಗೆ ಕಾರಣವಾದ ಸಿರಪ್‌ ಕಂಪನಿ ಮಾಲಕ ಸೆರೆ

ಕೋಲ್ಟ್ರಿಫ್‌ ಕೆಮ್ಮಿನ ಸಿರಪ್‌ ಸೇವಿಸಿ 20ಕ್ಕೂ ಹೆಚ್ಚು ಮಕ್ಕಳ ಸಾವು ನವದೆಹಲಿ: ಹಲವು ಮಕ್ಕಳ ಸಾವಿಗೆ ಕಾರಣವಾಗಿರುವ ಕೋಲ್ಡ್ರಿಫ್ ಕೆಮ್ಮಿನ ಸಿರಪ್ ತಯಾರಿಸಿದ ಕಂಪನಿಯ ಮಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿನ ಸ್ರೆಸನ್ ಫಾರ್ಮಾಸ್ಯುಟಿಕಲ್ಸ್ ಕಂಪನಿ ಈ ಸಿರಪ್‌ ತಯಾರಿಸಿದ್ದು, ಕಂಪನಿಯ ಮಾಲಕ ಎಸ್. ರಂಗನಾಥನ್ ಅವರನ್ನು ಮಧ್ಯಪ್ರದೇಶ ಪೊಲೀಸರು ಬಂಧಿಸಿದ್ದಾರೆ. ಮಧ್ಯಪ್ರದೇಶ ಮತ್ತು ತಮಿಳುನಾಡು ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ರಂಗನಾಥನ್ ಅವರನ್ನು ಚೆನ್ನೈಯಲ್ಲಿ ಬಂಧಿಸಲಾಯಿತು. ಬುಧವಾರ ರಾತ್ರಿ ಅವರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ. ಮಧ್ಯಪ್ರದೇಶದ

ಮಕ್ಕಳ ಸಾವಿಗೆ ಕಾರಣವಾದ ಸಿರಪ್‌ ಕಂಪನಿ ಮಾಲಕ ಸೆರೆ Read More »

ಶರಣ್‌ ಪಂಪ್‌ವೆಲ್‌ಗೆ 2 ಲ.ರೂ. ದಂಡ ವಿಧಿಸಿದ ಹೈಕೋರ್ಟ್‌

ಗಣೇಶೋತ್ಸವದಲ್ಲಿ ಹೈಕೋರ್ಟ್‌ ಷರತ್ತು ಉಲ್ಲಂಘಿಸಿದ ಆರೋಪ ಬೆಂಗಳೂರು: ಆದೇಶ ಉಲ್ಲಂಘನೆ ಆರೋಪ ಎದುರಿಸುತ್ತಿದ್ದ ವಿಶ್ವ ಹಿಂದೂ ಪರಿಷತ್​​ ಸಹಕಾರ್ಯದರ್ಶಿ ಶರಣ್ ಪಂಪ್​​ವೆಲ್​​ಗೆ ಹೈಕೋರ್ಟ್ 2 ಲಕ್ಷ ರೂ. ದಂಡ ವಿಧಿಸಿದೆ. ಇದರಲ್ಲಿ ರಾಜ್ಯ ಲೀಗಲ್ ಸರ್ವೀಸ್ ಅಥಾರಿಟಿಗೆ 1 ಲಕ್ಷ ರೂ. ಮತ್ತು ಪೋಲಿಸ್ ಕ್ಷೇಮಾಭಿವೃದ್ಧಿ ನಿಧಿಗೆ 1 ಲಕ್ಷ ರೂ ನೀಡಲು ಬುಧವಾರ ಕೋರ್ಟ್‌ ಆದೇಶ ನೀಡಿದೆ. ಇತ್ತೀಚೆಗೆ ಚಿತ್ರದುರ್ಗದಲ್ಲಿ ಹಿಂದೂ ಮಹಾಗಣಪತಿ ಶೋಭಾಯಾತ್ರೆ ಹಿನ್ನಲೆ ಜಿಲ್ಲೆ ಪ್ರವೇಶಿಸದಂತೆ ಜಿಲ್ಲಾಡಳಿತ ಶರಣ್ ಪಂಪ್​​ವೆಲ್​​ಗೆ ನಿರ್ಬಂಧ ವಿಧಿಸಿತ್ತು.

ಶರಣ್‌ ಪಂಪ್‌ವೆಲ್‌ಗೆ 2 ಲ.ರೂ. ದಂಡ ವಿಧಿಸಿದ ಹೈಕೋರ್ಟ್‌ Read More »

ಮಮ್ಮುಟ್ಟಿ, ದುಲ್ಕರ್‌ ಸಲ್ಮಾನ್‌, ಪೃಥ್ವಿರಾಜ್‌ ಮನೆಗೆಳ ಇ.ಡಿ. ದಾಳಿ

ಬೆಳ್ಳಂಬೆಳಗ್ಗೆ ಮಲಯಾಳಂ ಸೂಪರ್‌ಸ್ಟಾರ್‌ಗಳಿಗೆ ಇ.ಡಿ. ದಾಳಿಯ ಶಾಕ್‌ ತಿರುವನಂತಪುರ: ಮಲಯಾಳಂ ಚಿತ್ರರಂಗದ ಸೂಪರ್‌ಸ್ಟಾರ್‌ಗಳಾದ ಮಮ್ಮುಟ್ಟಿ, ಪೃಥ್ವಿರಾಜ್‌ ಸುಕುಮಾರನ್‌, ಮಮ್ಮುಟ್ಟಿಯವರ ಮಗ ನಟ ದುಲ್ಕರ್‌ ಸಲ್ಮಾನ್‌ ಮನೆ ಮತ್ತು ಕಚೇರಿಗಳ ಮೇಲೆ ಇಂದು ಬೆಳ್ಳಂಬೆಳಗ್ಗೆ ಜಾರಿ ನಿರ್ದೇಶನಾಲಯ ದಾಳಿ ಮಾಡಿದೆ. ಕೇರಳದಲ್ಲಿ ಕಳೆದ ಕೆಲ ದಿನಗಳಿಂದ ಸಿನಿಮಾ ತಾರೆಯರು ಒಳಗೊಂಡಿರುವ ಸ್ಮಗ್ಲಿಂಗ್ ಪ್ರಕರಣ ಸದ್ದು ಮಾಡುತ್ತಿದೆ. ವಿದೇಶಗಳ ಐಷಾರಾಮಿ ಕಾರುಗಳನ್ನು ಅಕ್ರಮವಾಗಿ ಖರೀದಿ ಮಾಡಲಾಗಿದೆ ಎಂಬ ಗುಮಾನಿಯ ಮೇಲೆ ಕಸ್ಟಮ್ಸ್ ಅಧಿಕಾರಿಗಳು ಕೆಲ ವಾರಗಳ ಹಿಂದಷ್ಟೆ ದುಲ್ಕರ್ ಸಲ್ಮಾನ್,

ಮಮ್ಮುಟ್ಟಿ, ದುಲ್ಕರ್‌ ಸಲ್ಮಾನ್‌, ಪೃಥ್ವಿರಾಜ್‌ ಮನೆಗೆಳ ಇ.ಡಿ. ದಾಳಿ Read More »

ಮಾರಕ ಕಫ್‌ ಸಿರಪ್‌ಗೆ ಮತ್ತೆ 6 ಮಕ್ಕಳು ಬಲಿ

ಮಧ್ಯಪ್ರದೇಶವೊಂದರಲ್ಲೇ ಒಟ್ಟು 20 ಮಕ್ಕಳನ್ನು ಬಲಿತೆಗೆದುಕೊಂಡ ಕೆಮ್ಮಿನ ಕಷಾಯ ಭೋಪಾಲ್: ಮಧ್ಯಪ್ರದೇಶದಲ್ಲಿ ಮಾರಕ ಕೆಮ್ಮಿನ ಸಿರಪ್ ಸೇವಿಸಿ ಮೂತ್ರಪಿಂಡ ವೈಫಲ್ಯಕ್ಕೆ ಚಿಕಿತ್ಸೆ ಪಡೆಯುತ್ತಿದ್ದ ಮತ್ತೆ 6 ಮಕ್ಕಳು ಸಾವನ್ನಪ್ಪಿದ್ದು, ಈ ರಾಜ್ಯದಲ್ಲಿ ಸಾವನ್ನಪ್ಪಿದ ಮಕ್ಕಳ ಸಂಖ್ಯೆ 20ಕ್ಕೆ ಏರಿಕೆಯಾಗಿದೆ. ಈ ಮೊದಲು ಮಧ್ಯಪ್ರದೇಶದ ಛಿಂದ್ವಾಡದ 14 ಮಕ್ಕಳು ವಿಷಕಾರಿ ಕೆಮ್ಮಿನ ಸಿರಪ್ ಸೇವಿಸಿದ್ದರಿಂದ ಸಾವನ್ನಪ್ಪಿದ್ದಾರೆ ಎಂದು ಸರ್ಕಾರ ದೃಢಪಡಿಸಿತ್ತು. ಅದಾದ ಬಳಿಕ ಮತ್ತೆ ಮಂಗಳವಾರ ಛಿಂದ್ವಾಡದಲ್ಲಿ 4 ಹಾಗೂ ಬೇತುಲ್‌ನಲ್ಲಿ 2 ಮಕ್ಕಳು ಸಾವನ್ನಪ್ಪಿವೆ. ಇನ್ನೂ 6

ಮಾರಕ ಕಫ್‌ ಸಿರಪ್‌ಗೆ ಮತ್ತೆ 6 ಮಕ್ಕಳು ಬಲಿ Read More »

ಮಚ್ಚಿನಿಂದ ಕೊಚ್ಚಿ ಬಿಜೆಪಿ ನಾಯಕನ ಬರ್ಬರ ಹತ್ಯೆ

ಬೆಂಗಳೂರು : ಸಿನಿಮಿಯ ರೀತಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದಲ್ಲಿ ನಡೆದಿದೆ. ವೆಂಕಟೇಶ ಕುರುಬರ (31) ವರ್ಷ ಕೊಲೆಯಾದ ಬಿಜೆಪಿ ನಾಯಕ. ಕೊಪ್ಪಳ ರಸ್ತೆಯ ಲೀಲಾವತಿ ಆಸ್ಪತ್ರೆಯ ಮುಂಭಾಗದಲ್ಲಿ ಬುಧವಾರ ನಸುಕಿನ ಜಾವ 2 ಗಂಟೆಗೆ ಕಾರಿನಲ್ಲಿ ಆಗಮಿಸಿದ್ದ ಗ್ಯಾಂಗ್ ಕೊಲೆ ಮಾಡಿದೆ. ದೇವಿಕ್ಯಾಂಪ್‌ನಿಂದ ಗಂಗಾವತಿಗೆ ವೆಂಕಟೇಶ್‌ ಅವರು ಸ್ನೇಹಿತರ ಜೊತೆ ಊಟ ಮಾಡಿ ಬೈಕಿನಲ್ಲಿ ಬರುತ್ತಿದ್ದರು. ಅವರನ್ನು ಹಿಂಬಾಲಿಸಿಕೊಂಡು ಬಂದಿದ್ದ ಗ್ಯಾಂಗ್‌

ಮಚ್ಚಿನಿಂದ ಕೊಚ್ಚಿ ಬಿಜೆಪಿ ನಾಯಕನ ಬರ್ಬರ ಹತ್ಯೆ Read More »

error: Content is protected !!
Scroll to Top