ಅಪರಾಧ

ಮಂಗಳೂರು : ಫ್ಲ್ಯಾಟ್‌ನಿಂದ 9.46 ಲ.ರೂ. ಚಿನ್ನಾಭರಣ ಕಳವು

ಮಂಗಳೂರು : ನಗರದ ಅಪಾರ್ಟ್‌ಮೆಂಟ್‌ನ ಫ್ಲ್ಯಾಟ್‌ವೊಂದರಿಂದ ಸುಮಾರು 9.46 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವಾದ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದೆ. ಜಗದೀಶ್ ಎಂಬವರ ಮನೆಯಲ್ಲಿ ಕಳ್ಳತನವಾಗಿದೆ. ಜಗದೀಶ್‌ ಮತ್ತವರ ಮಕ್ಕಳು ವಿದೇಶದಲ್ಲಿ ಉದ್ಯೋಗದಲ್ಲಿದ್ದಾರೆ. ಈ ಫ್ಲ್ಯಾಟ್‌ನಲ್ಲಿ ಜಗದೀಶ್‌ರ ಪತ್ನಿ ಒಬ್ಬರೇ ಇದ್ದರು. ಅವರ ಆರೋಗ್ಯ ಸರಿ ಇಲ್ಲದ ಕಾರಣ ಮಹಿಳೆಯೊಬ್ಬರನ್ನು ಮನೆ ಕೆಲಸಕ್ಕೆ ಇಟ್ಟುಕೊಂಡಿದ್ದರು. ಮನೆ ಕೆಲಸದಾಕೆ ಕಳೆದ ಜು.21ರಿಂದ ಕೆಲಸಕ್ಕೆ ಬರುವುದನ್ನು ನಿಲ್ಲಿಸಿದ್ದಳು. ಫೋನ್ ಕರೆಗಳನ್ನು ಕೂಡ ಸ್ವೀಕರಿಸುತ್ತಿರಲಿಲ್ಲ. ಬಳಿಕ ಜಗದೀಶ್‌ರ ಪತ್ನಿಯ ಆರೋಗ್ಯದಲ್ಲಿ […]

ಮಂಗಳೂರು : ಫ್ಲ್ಯಾಟ್‌ನಿಂದ 9.46 ಲ.ರೂ. ಚಿನ್ನಾಭರಣ ಕಳವು Read More »

ಚೆನ್ನಯ್ಯ SIT ಕಸ್ಟಡಿ ಅಂತ್ಯ: ಬೆಳ್ತಂಗಡಿ ಕೋರ್ಟ್‌ಗೆ ಹಾಜರು

ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣದ ದೂರುದಾರ ಆರೋಪಿ ಚೆನ್ನಯ್ಯನ SIT ಕಸ್ಟಡಿ ಅಂತ್ಯವಾಗಿದ್ದು, ಆತನನ್ನು ಇಂದು ಬೆಳ್ತಂಗಡಿ ನ್ಯಾಯಾಲಯದ ಮುಂದೆ ಹಾಜರು ಪಡಿಸಲಾಗಿದೆ. ಆತನನ್ನು ತನಿಖಾಧಿಕಾರಿ ಜಿತೇಂದ್ರ ಕುಮಾರ್ ದಯಾಮ ಅವರ ಸಮ್ಮುಖದಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಪ್ರಕರಣಕ್ಕೆ ‌ಸಂಬಂಧಿಸಿದ ಹಾಗೆ ಹೆಚ್ಚುವರಿ ಮಾಹಿತಿ ಪಡೆಯಲು ಮತ್ತೆ SIT ಅಧಿಕಾರಿಗಳು ಕಸ್ಟಡಿಗೆ ಕೇಳುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

ಚೆನ್ನಯ್ಯ SIT ಕಸ್ಟಡಿ ಅಂತ್ಯ: ಬೆಳ್ತಂಗಡಿ ಕೋರ್ಟ್‌ಗೆ ಹಾಜರು Read More »

ಧರ್ಮಸ್ಥಳ ಪ್ರಕರಣದಲ್ಲಿ ಮತ್ತೊಂದು ಟ್ವಿಸ್ಟ್: ಕಾಡಿನ ಕೆಲ ಪ್ರದೇಶಗಳಲ್ಲಿ ಗಿಡ ನೆಟ್ಟು ಸ್ಥಳ ಗುರುತಿಸಿದ್ದ ಬುರುಡೆ ಗ್ಯಾಂಗ್

ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣದ ಬುರುಡೆ ವಿಷಯಕ್ಕೆ ಸಂಬಂಧಿಸಿದ ಹಾಗೆ ಕಳೆದ ಒಂದು ವರ್ಷದಿಂದಲೇ ತಯಾರಿ ನಡೆದಿತ್ತು. ಚೆನ್ನಯ್ಯನ ಮೂಲಕ ಕಾಡಿನಲ್ಲಿ ಕೆಲವು ಸ್ಥಳಗಳನ್ನು ಗುರುತು ಮಾಡಿ ಅಲ್ಲಿ ಗಿಡಗಳನ್ನು ನೆಡಲಾಗಿತ್ತು ಎಂಬ ಅಂಶ SIT ಗೆ ಗೊತ್ತಾಗಿದೆ. ದೂರುದಾರ ಆರೋಪಿ ಚೆನ್ನಯ್ಯ‌ನನ್ನು ಕಳೆದ ಕೆಲ ದಿನಗಳಿಂದಲೂ SIT ಅಧಿಕಾರಿಗಳು ತೀವ್ರ ವಿಚಾರಣೆಗೆ ಒಳಪಡಿಸಿದ್ದು, ಚೆನ್ನಯ್ಯನ ಪಾತ್ರ ಸೃಷ್ಟಿಯಾದಾಗಿಂದ ಈ ವರೆಗಿನ ಎಲ್ಲಾ ವಿಚಾರಗಳನ್ನು ಕ್ರಮಬದ್ಧವಾಗಿ ಜೋಡಿಸುವ ಕಾರ್ಯ ನಡೆಯುತ್ತಿದೆ. ಗಿರೀಶ್ ಮಟ್ಟಣ್ಣನವರ್ ತಂಡ ಕಳೆದ ಒಂದು ವರ್ಷದ

ಧರ್ಮಸ್ಥಳ ಪ್ರಕರಣದಲ್ಲಿ ಮತ್ತೊಂದು ಟ್ವಿಸ್ಟ್: ಕಾಡಿನ ಕೆಲ ಪ್ರದೇಶಗಳಲ್ಲಿ ಗಿಡ ನೆಟ್ಟು ಸ್ಥಳ ಗುರುತಿಸಿದ್ದ ಬುರುಡೆ ಗ್ಯಾಂಗ್ Read More »

ದರ್ಶನ್‌ಗೆ ಜೈಲಿನಲ್ಲಿ ಕನಿಷ್ಟ ಸೌಲಭ್ಯಗಳನ್ನೂ ನೀಡಲಾಗುತ್ತಿಲ್ಲ: ವಕೀಲರಿಂದ ನ್ಯಾಯಾಲಯಕ್ಕೆ ದೂರು

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ತೂಗುದೀಪ್ ಅವರು ಜೈಲಿನಲ್ಲಿ ಕನಿಷ್ಟ ಸೌಲಭ್ಯಗಳೂ ದೊರೆಯುತ್ತಿಲ್ಲ ಎಂದು ವಕೀಲರು ನ್ಯಾಯಾಲಯದ ಮುಂದೆ ದೂರಿದ್ದಾರೆ. ಹಾಸಿಗೆ, ತಲೆದಿಂಬು, ಹೊದಿಕೆ ಸೇರಿದಂತೆ ಖೈದಿಗೆ ನೀಡಲಾಗುವ ಸಾಮಾನ್ಯ ಸೌಲಭ್ಯಗಳನ್ನು ನೀಡದೆ ಅಧಿಕಾರಿಗಳು ಅನ್ಯಾಯ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಕಾನೂನು ಪ್ರಕಾರ ಈ ಸೌಲಭ್ಯಗಳನ್ನು ನಿರಾಕರಿಸುವ ಹಕ್ಕು ಅಧಿಕಾರಿಗಳಿಗೆ ಇಲ್ಲ ಎಂದು ಹೇಳಿದ್ದಾರೆ. ದರ್ಶನ್ ಧರಿಸಿದ ಶೂ ಬಿಚ್ಚಿಸುತ್ತಾರೆ. ಆಹಾರದ ತಟ್ಟೆಯನ್ನು ಎಸೆದು ಹೋಗುತ್ತಾರೆ‌. ಈ ಬಗ್ಗೆ ಜೈಲಧಿಕಾರಿಗಳಿಗೆ ಮೌಖಿಕ

ದರ್ಶನ್‌ಗೆ ಜೈಲಿನಲ್ಲಿ ಕನಿಷ್ಟ ಸೌಲಭ್ಯಗಳನ್ನೂ ನೀಡಲಾಗುತ್ತಿಲ್ಲ: ವಕೀಲರಿಂದ ನ್ಯಾಯಾಲಯಕ್ಕೆ ದೂರು Read More »

ಧರ್ಮಸ್ಥಳ ಪ್ರಕರಣಕ್ಕೆ ದಿಢೀರ್‌ ತಿರುವು : ಸೌಜನ್ಯಾ ಕೇಸ್‌ನಲ್ಲಿ ಕ್ಲೀನ್‌ಚಿಟ್‌ ಪಡೆದವರಿಗೆ ಎಸ್‌ಐಟಿ ನೋಟಿಸ್‌

ವಿಚಾರಣೆಗೆ ಹಾಜರಾದ ಸೌಜನ್ಯಾ ಪ್ರಕರಣದಲ್ಲಿ ಖುಲಾಸೆಗೊಂಡಿದ್ದ ಉದಯಕುಮಾರ್‌ ಜೈನ್‌ ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣದ ತನಿಖೆ ದಿನಕಳೆದಂತೆ ಅನೂಹ್ಯ ತಿರುವುಗಳನ್ನು ಪಡೆಯುತ್ತಿದೆ. ಇಂದು ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಖುಲಾಸೆಗೊಂಡಿದ್ದ ಆರೋಪಿಗಳನ್ನು ಎಸ್‌ಐಟಿ ಇಂದು ವಿಚಾರಣೆಗೆ ಕರೆಸಿರುವುದು ಕುತೂಹಲ ಮೂಡಿಸಿದೆ. ಈ ನಡೆಯಿಂದ ಸೌಜನ್ಯಾ ಪ್ರಕರಣದ ತನಿಖೆಯನ್ನು ಎಸ್‌ಐಟಿ ಕೈಗೆತ್ತಿಕೊಂಡಿತಾ ಎಂಬ ಪ್ರಶ್ನೆಯೂ ಮೂಡಿದೆ. ಸೌಜನ್ಯಾ ಅತ್ಯಾಚಾರ, ಕೊಲೆ ಪ್ರಕರಣದ ಆರೋಪ ಹೊತ್ತು ಕ್ಲೀನ್‌ಚಿಟ್‌ ಪಡೆದವರಿಗೆ ವಿಶೇಷ ತನಿಖಾ ತಂಡ ಬುಲಾವ್‌

ಧರ್ಮಸ್ಥಳ ಪ್ರಕರಣಕ್ಕೆ ದಿಢೀರ್‌ ತಿರುವು : ಸೌಜನ್ಯಾ ಕೇಸ್‌ನಲ್ಲಿ ಕ್ಲೀನ್‌ಚಿಟ್‌ ಪಡೆದವರಿಗೆ ಎಸ್‌ಐಟಿ ನೋಟಿಸ್‌ Read More »

ಮಂಗಳೂರು: ಮಹಿಳೆಗೆ ಕಿರುಕುಳ ನೀಡಿದ ಪೊಲೀಸ್‌ ಸಿಬ್ಬಂದಿ ಅಮಾನತು

ಕರೆ ಮಾಡಿ, ಸಂದೇಶ ಕಳುಹಿಸಿ ಕಿರುಕುಳ ನೀಡುತ್ತಿದ್ದ ಪೊಲೀಸ್‌ ಸಿಬ್ಬಂದಿ ಮಂಗಳೂರು: ಮಹಿಳೆಗೆ ಅಶ್ಲೀಲ ಕರೆ ಮತ್ತು ಸಂದೇಶಗಳನ್ನು ಕಳುಹಿಸಿ ಕಿರುಕುಳ ನೀಡಿದ ಆರೋಪದ ಮೇಲೆ ಮೂಡುಬಿದಿರೆ ಪೊಲೀಸ್ ಠಾಣೆಯ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯ ತೋಡಾರು ಬಳಿಯ ವಿವಾಹಿತ ಮಹಿಳೆಯೊಬ್ಬರು ಆಗಸ್ಟ್ 23ರಂದು ಕೌಟುಂಬಿಕ ಕಲಹದ ಬಗ್ಗೆ ದೂರು ನೀಡಲು ಠಾಣೆಗೆ ಭೇಟಿ ನೀಡಿದ್ದರು. ಆಗ ಇನ್ಸ್‌ಪೆಕ್ಟರ್ ಸಂದೇಶ್ ಅವರು ಪತಿ ಮತ್ತು ಪತ್ನಿ ಇಬ್ಬರನ್ನೂ ಕರೆದು ಮಧ್ಯಸ್ಥಿಕೆ ವಹಿಸಿ ಪ್ರಕರಣವನ್ನು ಇತ್ಯರ್ಥಗೊಳಿಸಿ

ಮಂಗಳೂರು: ಮಹಿಳೆಗೆ ಕಿರುಕುಳ ನೀಡಿದ ಪೊಲೀಸ್‌ ಸಿಬ್ಬಂದಿ ಅಮಾನತು Read More »

ಮಹಿಳೆಯ ಆಭರಣ ಕಳವು : ವಿಮಾನ ನಿಲ್ದಾಣದ ಸಿಬ್ಬಂದಿ ಸಹಿತ ಐವರ ಬಂಧನ

ಮಹಿಳೆಯ ಬ್ಯಾಗಿನಿಂದ 4.5 ಲ.ರೂ. ಮೌಲ್ಯದ ನೆಕ್ಲೆಸ್‌ ಎಗರಿಸಿದ್ದ ಆರೋಪಿಗಳು ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಹಿಳಾ ಪ್ರಯಾಣಿಕರೊಬ್ಬರ ಚೆಕ್-ಇನ್ ಲಗೇಜ್‌ನಿಂದ ಚಿನ್ನಾಭರಣಗಳನ್ನು ಕದ್ದ ಆರೋಪದ ಮೇಲೆ ಏರ್ ಇಂಡಿಯಾ SATSನಲ್ಲಿ ಕೆಲಸ ಮಾಡುತ್ತಿದ್ದ ನಾಲ್ವರು ಬ್ಯಾಗೇಜ್ ನಿರ್ವಹಣಾ ಸಿಬ್ಬಂದಿಯನ್ನು ಬಂಧಿಸಲಾಗಿದೆ. ಕಳವು ಮಾಲನ್ನು ಖರೀದಿಸಿದ ಆರೋಪ ಹೊತ್ತಿರುವ ಐದನೇ ವ್ಯಕ್ತಿಯನ್ನು ಸಹ ಬಂಧಿಸಲಾಗಿದೆ. ಕಾಣೆಯಾದ ಚಿನ್ನದ ಗಣನೀಯ ಭಾಗವನ್ನು ಪೊಲೀಸರು ವಶಪಡಿಸಿಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ. ಆಗಸ್ಟ್ 30ರಂದು ಬೆಳಗ್ಗೆ ಬೆಂಗಳೂರಿನಿಂದ ಏರ್ ಇಂಡಿಯಾ ಎಕ್ಸ್‌ಪ್ರೆಸ್

ಮಹಿಳೆಯ ಆಭರಣ ಕಳವು : ವಿಮಾನ ನಿಲ್ದಾಣದ ಸಿಬ್ಬಂದಿ ಸಹಿತ ಐವರ ಬಂಧನ Read More »

ಕೊಲೆ ಆರೋಪಿ ಪವಿತ್ರಾ ಗೌಡ ಜಾಮೀನು ಅರ್ಜಿ ವಜಾ

ಸಿಂಗಲ್‌ ಮದರ್‌ ಆಗಿರುವುದರಿಂದ ಜಾಮೀನು ಕೊಡಬೇಕೆಂದು ಕೋರಿದ್ದ ಪವಿತ್ರಾ ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾ ಗೌಡ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಜಾ ಆಗಿದೆ. ಕೊಲೆ ಪ್ರಕರಣದಲ್ಲಿ ಮತ್ತೆ ಜೈಲುಪಾಲಾಗಿರುವ ಎ1 ಆರೋಪಿ ಪವಿತ್ರಾ ಗೌಡ ಜಾಮೀನು ಅರ್ಜಿಯನ್ನು 57ನೇ ಸೆಷನ್ಸ್ ಕೋರ್ಟ್ ವಜಾಗೊಳಿಸಿದೆ. ಈ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿ ಏಳು ಆರೋಪಿಗಳ ಜಾಮೀನನ್ನು ಸುಪ್ರೀಂಕೋರ್ಟ್ ವಜಾ ಮಾಡಿದ ಕಾರಣ ಅವರೀಗ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ

ಕೊಲೆ ಆರೋಪಿ ಪವಿತ್ರಾ ಗೌಡ ಜಾಮೀನು ಅರ್ಜಿ ವಜಾ Read More »

232 ಕೋ. ರೂ. ವಂಚನೆ : ವಿಮಾನ ನಿಲ್ದಾಣ ಪ್ರಾಧಿಕಾರದ ಮ್ಯಾನೇಜರ್‌ ಬಂಧನ

ಸರ್ಕಾರದ ಹಣವನ್ನು ತನ್ನ ಖಾತೆಗಳಿಗೆ ವರ್ಗಾಯಿಸಿಕೊಂಡು ಗೋಲ್‌ಮಾಲ್‌ ನವದೆಹಲಿ: 232 ಕೋಟಿ ರೂ. ವಂಚನೆ ಪ್ರಕರಣದಲ್ಲಿ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಹಿರಿಯ ಮ್ಯಾನೇಜರ್‌ ರಾಹುಲ್ ವಿಜಯ್‌ ಅವರನ್ನು ಸಿಬಿಐ ಬಂಧಿಸಿದೆ. ರಾಹುಲ್ ವಿಜಯ್ ಸುಮಾರು 232 ಕೋಟಿ ರೂ. ಸರ್ಕಾರದ ಹಣವನ್ನು ನೇರವಾಗಿ ತನ್ನ ವೈಯಕ್ತಿಕ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿಕೊಂಡಿದ್ದಾರೆ. ನಂತರ ಆ ಹಣವನ್ನು ಬ್ಯುಸಿನೆಸ್ ಖಾತೆಗಳಿಗೆ ವರ್ಗಾಯಿಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ತನಿಖಾಧಿಕಾರಿಗಳು ಈ ಪ್ರಕರಣವನ್ನು ವರ್ಷದ ಅತಿದೊಡ್ಡ ಹಣಕಾಸು ಹಗರಣಗಳಲ್ಲಿ ಒಂದು ಎಂದು ಹೇಳಿದ್ದಾರೆ.

232 ಕೋ. ರೂ. ವಂಚನೆ : ವಿಮಾನ ನಿಲ್ದಾಣ ಪ್ರಾಧಿಕಾರದ ಮ್ಯಾನೇಜರ್‌ ಬಂಧನ Read More »

ಬಿಜೆಪಿ ನೆರವಿನ ಕೊಡುಗೆಯನ್ನು ನಿರಾಕರಿಸಿದ ಸೌಜನ್ಯಾ ತಾಯಿ

ಸುಪ್ರೀಂ ಕೋರ್ಟಿಗೆ ಮೇಲ್ಮನವಿ ಸಲ್ಲಿಸಿದರೆ ಖರ್ಚುವೆಚ್ಚ ಭರಿಸುವ ಭರವಸೆ ನೀಡಿದ ವಿಜಯೇಂದ್ರ ಧರ್ಮಸ್ಥಳ: ಸೌಜನ್ಯಾ ಅತ್ಯಾಚಾರ-ಹತ್ಯೆ ಪ್ರಕರಣದ ಮರುತನಿಖೆ ಕೋರಿ ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಿದರೆ ಅದರ ಪೂರ್ತಿ ಖರ್ಚನ್ನು ಭರಿಸುವ ಬಿಜೆಪಿ ಕೊಡುಗೆಯನ್ನು ಸೌಜನ್ಯಾ ತಾಯಿ ಕುಸುಮಾವತಿ ನಿರಾಕರಿಸಿದ್ದಾರೆ. ಬಿಜೆಪಿ ನಿಯೋಗ ಮನೆಗೆ ಬಂದು ಹೋದ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಕುಸುಮಾವತಿ ತನಗೆ ರಾಜಕೀಯದವರ ಮೇಲೆ ನಂಬಿಕೆ ಇಲ್ಲ. ಹೋರಾಟ ಮಾಡುತ್ತಿರುವ ಸಂದರ್ಭದಲ್ಲಿ ನಮ್ಮನ್ನು ವಿರೋಧಿಸಿದವರು ಈಗ ಸಹಾಯ ಮಾಡಲು ಬಂದಿರುವುದು ಏಕೆ ಎಂದು

ಬಿಜೆಪಿ ನೆರವಿನ ಕೊಡುಗೆಯನ್ನು ನಿರಾಕರಿಸಿದ ಸೌಜನ್ಯಾ ತಾಯಿ Read More »

error: Content is protected !!
Scroll to Top