ಅಪರಾಧ

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಅಪರಾಧಿಗೆ 20 ವರ್ಷ ಜೈಲು

ಕೃತ್ಯ ನಡೆದ ಐದೇ ತಿಂಗಳಲ್ಲಿ ಪ್ರಕಟವಾದ ತೀರ್ಪು ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಅಪರಾಧಿ ದಯಾನಂದ ಮೂಲ್ಯ (44) ಎಂಬಾತನಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಎಫ್‌ಟಿ ಎಸ್‌ಸಿ-2) ಪೋಕ್ಸೊ ನ್ಯಾಯಾಲಯದ ನ್ಯಾಯಾಧೀಶರು 20 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 40 ಸಾವಿರ ರೂ. ದಂಡ ವಿಧಿಸಿದ್ದಾರೆ. ಕೃತ್ಯ ನಡೆದ ಐದೇ ತಿಂಗಳಲ್ಲಿ ತೀರ್ಪು ಪ್ರಕಟವಾಗಿರುವುದು ವಿಶೇಷವಾಗಿದೆ. 2025ರ ನ.16ರಂದು ಮಧ್ಯಾಹ್ನ 2ಕ್ಕೆ ಏಳು ವರ್ಷ ಪ್ರಾಯದ ಬಾಲಕಿ […]

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಅಪರಾಧಿಗೆ 20 ವರ್ಷ ಜೈಲು Read More »

ಹೆಂಡತಿ ಪರಾರಿಯಾದ ನೋವಿನಲ್ಲಿ ಮಕ್ಕಳಿಬ್ಬರನ್ನು ಕೊಂದು ಅರ್ಚಕ ಆತ್ಮಹತ್ಯೆ

ಸಾಕಿ ಬೆಳೆಸಿದ ಯುವಕನ ಜೊತೆಗೆ ಓಡಿಹೋದ ಹೆಂಡತಿ ತುಮಕೂರು: ತಾನೇ ಸಾಕಿ ಬೆಳೆಸಿದ ಸಂಬಂಧಿಕ ಯುವಕನೊಂದಿಗೆ ತನ್ನ ಪತ್ನಿ ಪಲಾಯನ ಮಾಡಿದ ನೋವಿನಲ್ಲಿ ಅರ್ಚಕರೊಬ್ಬರು ತನ್ನ ಇಬ್ಬರು ಮಕ್ಕಳನ್ನು ಕತ್ತು ಹಿಸುಕಿ ಕೊಂದು ಬಳಿಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ಕುಣಿಗಲ್ ತಾಲೂಕಿನ ಆಲ್ಕೆರೆ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದವರನ್ನು ಗ್ರಾಮದ ಮಲ್ಲೇಶ್ವರ ಸ್ವಾಮಿ ದೇವಸ್ಥಾನದ ಅರ್ಚಕ ಶಿವಣ್ಣ (40) ಎಂದು ಗುರುತಿಸಲಾಗಿದೆ. ಅವರು ಮಕ್ಕಳಾದ ಜೀವನ್ (10) ಹಾಗೂ ಪ್ರಾಣೇಶ್ (5) ಕತ್ತುಹಿಸುಕಿ

ಹೆಂಡತಿ ಪರಾರಿಯಾದ ನೋವಿನಲ್ಲಿ ಮಕ್ಕಳಿಬ್ಬರನ್ನು ಕೊಂದು ಅರ್ಚಕ ಆತ್ಮಹತ್ಯೆ Read More »

ಧರ್ಮಸ್ಥಳದ ಬಗ್ಗೆ ಅವಹೇಳನಕಾರಿ ಹೇಳಿಕೆ : ಮಟ್ಟಣ್ಣವರ್‌ ವಿರುದ್ಧ ಎಫ್‌ಐಆರ್‌

ಧರ್ಮಸ್ಥಳದ ಸಾಮೂಹಿಕ ವಿವಾಹ ಕಾರ್ಯಕ್ರಮದ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ಬೆಂಗಳೂರು: ಧರ್ಮಸ್ಥಳ ಕ್ಷೇತ್ರದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಗಿರೀಶ್ ಮಟ್ಟಣ್ಣನವರ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಕಾವೇರಿ ಎನ್ನುವವರು ನೀಡಿದ ದೂರಿನ ಆಧಾರದ ಮೇಲೆ ಬೆಂಗಳೂರಿನ ಸುಬ್ರಹ್ಮಣ್ಯ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಯೂಟ್ಯೂಬ್ ಚಾನೆಲ್ ಮೂಲಕ ಧರ್ಮಸ್ಥಳ ಹಾಗೂ ಕ್ಷೇತ್ರದಲ್ಲಿ ಮದುವೆಯಾದ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಧಾರ್ಮಿಕ ಭಾವನೆಗಳು ಹಾಗೂ ಮಹಿಳೆಯರ ಗೌರವಕ್ಕೆ ಧಕ್ಕೆ ತಂದಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದರು. 2023,

ಧರ್ಮಸ್ಥಳದ ಬಗ್ಗೆ ಅವಹೇಳನಕಾರಿ ಹೇಳಿಕೆ : ಮಟ್ಟಣ್ಣವರ್‌ ವಿರುದ್ಧ ಎಫ್‌ಐಆರ್‌ Read More »

ಒಂದೇ ಕುಟುಂಬದ ನಾಲ್ವರ ಸಾವಿಗೆ ಕಲ್ಲಂಗಡಿ ಕಾರಣವಲ್ಲ : ವಿಧಿವಿಜ್ಞಾನ ವರದಿ

ಮೃತದೇಹದಲ್ಲಿ ಪ್ರಬಲ ವಿಷಕಾರಿ ಅಂಶ ಪತ್ತೆಯಾದ ಬಳಿಕ ಜಟಿಲಗೊಂಡ ಪ್ರಕರಣ ಮುಂಬೈ: ಮುಂಬೈಯ ಒಂದೇ ಕುಟುಂಬದ ನಾಲ್ಕು ಮಂದಿ ಇತ್ತೀಚೆಗೆ ಬಿರಿಯಾನಿ ತಿಂದ ಬಳಿಕ ಕಲ್ಲಂಗಡಿ ಸೇವಿಸಿದ ಬೆನ್ನಿಗೆ ಮೃತಪಟ್ಟ ಘಟನೆ ದೇಶಾದ್ಯಂತ ಆತಂಕ ಸೃಷ್ಟಿಸಿತ್ತು. ಆದರೆ ಒಂದೇ ಕುಟುಂಬದ ನಾಲ್ವರ ಸಾವಿಗೆ ಕಲ್ಲಂಗಡಿ ಹಣ್ಣು ಕಾರಣವಲ್ಲ ಎಂಬುದಾಗಿ ವೈದ್ಯಕೀಯ ವರದಿ ತಿಳಿಸಿದೆ. ಕಳೆದ ವಾರ ಮುಂಬೈನಲ್ಲಿ ತಂದೆ, ತಾಯಿ ಉತ್ತು ಇಬ್ಬರು ಹೆಣ್ಣು ಮಕ್ಕಳು ಸಾವನ್ನಪ್ಪಿದ್ದು, ಇವರ ಸಾವಿಗೆ ಕಲುಷಿತ ಕಲ್ಲಂಗಡಿ ಕಾರಣ ಎಂದು ಹೇಳಲಾಗಿತ್ತು.

ಒಂದೇ ಕುಟುಂಬದ ನಾಲ್ವರ ಸಾವಿಗೆ ಕಲ್ಲಂಗಡಿ ಕಾರಣವಲ್ಲ : ವಿಧಿವಿಜ್ಞಾನ ವರದಿ Read More »

ಎರಡು ಮೀನುಗಾರ ತಂಡದ ನಡುವೆ ಹೊಡೆದಾಟ: ಪ್ರಕರಣ ದಾಖಲು

ಉಡುಪಿ: ಮೀನುಗಾರರ ಎರಡು ತಂಡಗಳ ನಡುವೆ ಹಣಕಾಸು ವಿಷಯಕ್ಕೆ ಸಂಬಂಧಿಸಿ ಹೊಡೆದಾಟ ನಡೆದ ಘಟನೆ ಮಲ್ಪೆ ಬಂದರಿನಲ್ಲಿ ನಡೆದಿದೆ. ಜಯೇಶ್ ಕೋಟ್ಯಾನ್ ಎಂಬವರು ಬಾಕು ಉಳಿದಿರುವ ಹಣವನ್ನು ಕೇಳಿದ ಕಾರಣಕ್ಕೆ ಬೋಟ್ ಮಾಲೀಕ ಚೋಟಾ ಹರೀಶ್ ಎಂಬಾತನಿಗೆ ಹಲ್ಲೆ ಮಾಡಿದ್ದು, ಇವರಿಬ್ಬರ ನಡುವೆ ಹೊಡೆದಾಟ ನಡೆದಿದೆ. ಇಬ್ಬರೂ ಉಡುಪಿಯ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದಾರೆ. ಪ್ರಕರಣ ಇಷ್ಟಕ್ಕೇ ಮುಗಿಯದೆ, ಚಿಕಿತ್ಸೆ ಪಡೆಯುತ್ತಿದ್ದ ಜಯೇಶ್ ಮೇಲೆ ಚೋಟಾ ಹರೀಶನ ನಾಲ್ಕು ಮಂದಿ ಬೆಂಬಲಿಗರು ಹಲ್ಲೆ‌ ಮಾಡಿ ಪರಾರಿಯಾಗಿದ್ದಾರೆ. ಘಟನೆಗೆ

ಎರಡು ಮೀನುಗಾರ ತಂಡದ ನಡುವೆ ಹೊಡೆದಾಟ: ಪ್ರಕರಣ ದಾಖಲು Read More »

ಗೋಡೆಗೆ ಕನ್ನ ಕೊರೆದು ಕೋಟಿಗಟ್ಟಲೆ ರೂ. ಮೌಲ್ಯದ ಬೆಳ್ಳಿ ಆಭರಣ ಕಳ್ಳತನ

ಬೆಂಗಳೂರು: ಬೆಂಗಳೂರಿನ ದಾಸರಹಳ್ಳಿಯ ಎಂಟನೇ ಮೈಲಿ ಬಳಿಯ ಹಾವನೂರಿನಲ್ಲಿರುವ ಚಿನ್ನದಂಗಡಿಯೊಂದಕ್ಕೆ ಗೋಡೆ ಕೊರೆದು ಕನ್ನ ಹಾಕಿರುವ ಕಳ್ಳರು ಕೋಟಿಗಟ್ಟಲೆ ಬೆಲೆಬಾಳುವ ಬೆಳ್ಳಿ ಆಭರಣಗಳನ್ನು ಕಳವುಗೈದಿದ್ದಾರೆ. ಎಂಬಿ ಜ್ಯುವೆಲ್ಲರ್ಸ್ ಅಂಗಡಿಯಿಂದ ಸುಮಾರು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ವಸ್ತುಗಳನ್ನು ಕದ್ದಿದ್ದಾರೆ. ಎರಡು ದಿನಗಳ ಹಿಂದೆ ಈ ಘಟನೆ ನಡೆದಿದ್ದು, ಅತ್ಯಂತ ಯೋಜಿತವಾಗಿ ಕಳ್ಳತನ ಮಾಡಲಾಗಿದೆ. ಜ್ಯುವೆಲ್ಲರಿ ಶಾಪ್‌ನ ಹಿಂಭಾಗದ ರೂಮ್‌ನ ಬೀಗ ಮುರಿದು ಒಳನುಗ್ಗಿರುವ ಕಳ್ಳರು, ನಂತರ ಗೋಡೆಯನ್ನು ಕೊರೆದು ಮಳಿಗೆಯೊಳಗೆ ಪ್ರವೇಶಿಸಿ ಸುಮಾರು 70 ಕೆಜಿ

ಗೋಡೆಗೆ ಕನ್ನ ಕೊರೆದು ಕೋಟಿಗಟ್ಟಲೆ ರೂ. ಮೌಲ್ಯದ ಬೆಳ್ಳಿ ಆಭರಣ ಕಳ್ಳತನ Read More »

ಮಹಿಳೆಯ ಹತ್ಯಾ ಯತ್ನ : ಇಬ್ಬರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಮಹಿಳೆಯನ್ನು ಸೂಟ್‌ಕೇಸ್‌ನಲ್ಲಿ ತುಂಬಿಸಿ ಸಾಗಿಸಲೆತ್ನಿಸಿದ್ದ ಅಪರಾಧಿಗಳು ಉಡುಪಿ : ನಾಲ್ಕು ವರ್ಷಗಳ ಹಿಂದೆ ಮಂಚಿಕುಮೇರಿಯಲ್ಲಿ ಮಹಿಳೆಯೊಬ್ಬರನ್ನು ಉಸಿರುಗಟ್ಟಿಸಿ ಕೊಲೆ ಮಾಡಲು ಪ್ರಯತ್ನಿಸಿದ ಪ್ರಕರಣದಲ್ಲಿ ಇಬ್ಬರು ಆರೋಪಿಗಳಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಬೆಳ್ತಂಗಡಿ ನಿವಾಸಿಗಳಾದ ಮಿಥುನ್ ಹಾಗೂ ನಾಗೇಶ್ ಪೂಜಾರಿ ಜೀವಾವಧಿ ಶಿಕ್ಷೆಗೆ ಗುರಿಯಾದ ಆರೋಪಿಗಳು. ಮಂಚಿಕುಮೇರಿ ನಿವಾಸಿ ರಮಾನಾಥ ರೈ ಮಣಿಪಾಲದ ಟೈಗರ್ ಸರ್ಕಲ್ ಬಳಿ ನಂದಿನಿ ಮಿಲ್ಕ್ ಪಾರ್ಲರ್ ನಡೆಸುತ್ತಿದ್ದು, 2022ರ ಫೆ.18ರಂದು ಅವರ ಪತ್ನಿ ಸುಮತಿ ಮನೆಯಲ್ಲಿ ಒಬ್ಬರೇ ಇದ್ದಾಗ ಸಂಜೆ 7

ಮಹಿಳೆಯ ಹತ್ಯಾ ಯತ್ನ : ಇಬ್ಬರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ Read More »

ಇಲಿ ಪಾಷಾಣ ಸೇವಿಸಿದ್ದ ಯುವತಿ ಚಿಕಿತ್ಸೆ ಫಲಿಸದೆ ಸಾವು

ಬೆಳ್ತಂಗಡಿ : ಪ್ರೀತಿಸಿದ ಯುವಕನ ಜೊತೆ ಮದುವೆಯಾಗಲು ಮನೆಯವರು ಅನುಮತಿ ನೀಡಲಿಕ್ಕಿಲ್ಲ ಎಂದು ಭಾವಿಸಿ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಮಾಯದ ಬಾಳೆಮಂಡಿಕಲ್ಲು ನಿವಾಸಿ ದಿನೇಶ್ ನಾಯ್ಕ್ ಮತ್ತು ರೇವತಿ ದಂಪತಿ ಎರಡನೇ ಪುತ್ರಿ ರಮಾ (19) ಎಂಬಾಕೆ ಕಳೆದ ಏ.19ರಂದು ರಾತ್ರಿ ಮನೆಯಲ್ಲಿ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಳು. ಬಳಿಕ ಮಂಗಳೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತಿತ್ತು,

ಇಲಿ ಪಾಷಾಣ ಸೇವಿಸಿದ್ದ ಯುವತಿ ಚಿಕಿತ್ಸೆ ಫಲಿಸದೆ ಸಾವು Read More »

ಬಿಜೆಪಿ ಮುಖಂಡನ ಕೊಲೆ ಕೇಸ್‌ : ಆರು ಅಪರಾಧಿಗಳಿಗೆ ಗಲ್ಲು ಶಿಕ್ಷೆ

ಕಳೆದ ವರ್ಷ ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಸಂಭವಿಸಿದ ಭೀಕರ ಹತ್ಯೆ ಕೊಪ್ಪಳ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ವೆಂಕಟೇಶ್ ಕುರುಬರ ಹತ್ಯೆ ಪ್ರಕರಣದಲ್ಲಿ 6 ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ ಗಂಗಾವತಿ ಕೋರ್ಟ್ ಆದೇಶ ಹೊರಡಿಸಿದೆ. ಕೊಲೆ ಆಪರಾಧಿಗಳಾದ ರವಿ, ವಿಜಯ್, ಧನರಾಜ್, ಭರತ್, ಸಲೀಮ್ ಮಹಮ್ಮದ್ ರಫೀಕ್, ಗಂಗಾಧರ ಗೌಳಿಗೆ ಗಲ್ಲು ಶಿಕ್ಷೆ ಹಾಗೂ ತಲಾ 3 ಲಕ್ಷ ರೂ. ದಂಡ ವಿಧಿಸಿ ನ್ಯಾಯಾಧೀಶ ಸದಾನಂದ ನಾಗಪ್ಪ ನಾಯ್ಕ್ ತೀರ್ಪು ನೀಡಿದ್ದಾರೆ. 2025ರ ಅ.7ರಂದು ಹಳೆಯ

ಬಿಜೆಪಿ ಮುಖಂಡನ ಕೊಲೆ ಕೇಸ್‌ : ಆರು ಅಪರಾಧಿಗಳಿಗೆ ಗಲ್ಲು ಶಿಕ್ಷೆ Read More »

ಆರ್‌ಎಸ್‌ಎಸ್‌ ಪ್ರಧಾನ ಕಚೇರಿಗೆ ಸ್ಫೋಟ ಬೆದರಿಕೆ

ಸೀಸಿಯಮ್ ವಿಕಿರಣ ಹಾಯಿಸಿ ಸ್ಫೋಟಿಸುವ ಎಚ್ಚರಿಕೆ ನಾಗಪುರ : ಮಹಾರಾಷ್ಟ್ರದ ನಾಗಪುರದಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಧಾನ ಕಚೇರಿ ಮತ್ತು ಭಾರತೀಯ ಜನತಾ ಪಕ್ಷದ ಕಚೇರಿಯನ್ನು ಗುರಿಯಾಗಿಸಿಕೊಂಡು ವಿಕಿರಣಶೀಲ ವಸ್ತುಗಳ ಮೂಲಕ ದಾಳಿ ನಡೆಸುವ ಬೆದರಿಕೆ ಪತ್ರವೊಂದು ಪೊಲೀಸ್ ಇಲಾಖೆಗೆ ಲಭ್ಯವಾಗಿದೆ. ಪತ್ರದ ಗಂಭೀರತೆಯನ್ನು ಅರಿತ ಪೊಲೀಸ್ ಆಯುಕ್ತರು ತಕ್ಷಣವೇ ಕಾರ್ಯಪ್ರವೃತ್ತರಾಗಿದ್ದಾರೆ. ಬೆದರಿಕೆ ಪತ್ರ ಬಂದ ಬೆನ್ನಲ್ಲೇ ಭಯೋತ್ಪಾದನಾ ನಿಗ್ರಹ ದಳ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಮತ್ತು ಮುಂಬೈನಿಂದ ಆಗಮಿಸಿದ ಪರಮಾಣು ಶಕ್ತಿ ತಜ್ಞರ ವಿಶೇಷ

ಆರ್‌ಎಸ್‌ಎಸ್‌ ಪ್ರಧಾನ ಕಚೇರಿಗೆ ಸ್ಫೋಟ ಬೆದರಿಕೆ Read More »

error: Content is protected !!
Scroll to Top