ಅಪರಾಧ

ಉಪ್ಪಿನಂಗಡಿ : ಮಹಿಳೆಯ ಸರ ಕಿತ್ತುಕೊಂಡು ಹೋಗಿದ್ದ ಆರೋಪಿ ಬಂಧನ

ಉಪ್ಪಿನಂಗಡಿ: ನೆಲ್ಯಾಡಿ ಗ್ರಾಮದ ಪಡುವೆಟ್ಟು ಎಂಬಲ್ಲಿ ಕಳೆದ ಜೂನ್ 4ರಂದು ಮನೆಯ ಗೇಟು ಮುಂಭಾಗದಲ್ಲಿ ನಿಂತಿದ್ದ ಮಹಿಳೆಯೋರ್ವರ ಕತ್ತಿನಿಂದ 6 ಪವನ್ ತೂಕದ ಚಿನ್ನದ ಸರವನ್ನು ಬೈಕ್‍ನಲ್ಲಿ ಬಂದು ಎಳೆದುಕೊಂಡು ಪರಾರಿಯಾಗಿದ್ದ ಪ್ರಕರಣದ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿ ಸುಳ್ಯ ಆಲೆಟ್ಟಿ ನಿವಾಸಿ ಅಬ್ದುಲ್ ರಹಿಮಾನ್ ಎಂಬಾತನಾಗಿರುತ್ತಾರೆ. ಆರೋಪಿಯಿಂದ 4,54,000 ರೂ. ಮೌಲ್ಯದ ಚಿನ್ನದ ಸರ ಮತ್ತು ಕೃತ್ಯಕ್ಕೆ ಬಳಸಿದ ಪಲ್ಸರ್ ಬೈಕನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬೈಕ್ ಬಗ್ಗೆ ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಕಳ್ಳತನ ಪ್ರಕರಣ […]

ಉಪ್ಪಿನಂಗಡಿ : ಮಹಿಳೆಯ ಸರ ಕಿತ್ತುಕೊಂಡು ಹೋಗಿದ್ದ ಆರೋಪಿ ಬಂಧನ Read More »

5 ಕೋ.ರೂ. ಮೌಲ್ಯದ ಡ್ರಗ್ಸ್‌ ವಶ : ಇಬ್ಬರು ವಿದೇಶಿ ಪ್ರಜೆಗಳ ಬಂಧನ

ಬೆಂಗಳೂರು : ಡ್ರಗ್ಸ್‌ ದಂಧೆ ವಿರುದ್ಧ ನಡೆಸಿದ ಮಹತ್ವದ ಕಾರ್ಯಾಚರಣೆಯಲ್ಲಿ ಬೆಂಗಳೂರು ಪೊಲೀಸರು ಇಬ್ಬರು ವಿದೇಶಿ ಪ್ರಜೆಗಳನ್ನು ಬಂಧಿಸಿ ಅವರಿಂದ ಬರೋಬ್ಬರಿ ಐದು ಕೋಟಿ ರೂ. ಮೌಲ್ಯದ ಮಾದಕ ವಸ್ತು ವಶಪಡಿಸಿಕೊಂಡಿದ್ದಾರೆ. ಆಫ್ರಿಕಾ ಮೂಲದ ಜೊಯಲ್ ಕಾಬೊಂಗ್ ಮತ್ತು ಜೊಯ್ ಸಂಡೇ ಬಂಧಿತ ಆರೋಪಿಗಳು. ಜೊಯಲ್ ಕಾಬೊಂಗ್​ 12 ವರ್ಷಗಳ ಹಿಂದೆ ವಿದ್ಯಾರ್ಥಿ ವೀಸಾದಡಿ ಭಾರತಕ್ಕೆ ಬಂದಿದ್ದ. ಜೊಯ್ ಸಂಡೇ ಮೂರು ವರ್ಷಗಳ ಹಿಂದೆ ಭಾರತಕ್ಕೆ ಬಂದಿದ್ದಳು. ವೀಸಾ ಅವಧಿ ಮುಗಿದಿದ್ದರೂ ಬೆಂಗಳೂರಲ್ಲಿ ವಾಸವಾಗಿದ್ದರು. ಈ ಇಬ್ಬರು

5 ಕೋ.ರೂ. ಮೌಲ್ಯದ ಡ್ರಗ್ಸ್‌ ವಶ : ಇಬ್ಬರು ವಿದೇಶಿ ಪ್ರಜೆಗಳ ಬಂಧನ Read More »

ನಕಲಿ ಕ್ರೀಡಾ ಪರಿಕರ ಮಾರಾಟ ಅಂಗಡಿಗಳಿಗೆ ಪೊಲೀಸರ ದಾಳಿ, ವಸ್ತುಗಳು ವಶಕ್ಕೆ

ಮಂಗಳೂರು: ನಕಲಿ‌ ಕ್ರೀಡಾ ಸಾಮಗ್ರಿಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ದಾಳಿ ಮಾಡಿದ ಪೊಲೀಸರು ಕ್ರೀಡಾ ಪರಿಕರಗಳನ್ನು ವಶಕ್ಕೆ ಪಡೆದಿದ್ದಾರೆ. ನಕಲಿ ಕ್ರೀಡಾ ಸಾಮಗ್ರಿಗಳು ಮಾರಟವಾಗುತ್ತಿರುವ ಬಗ್ಗೆ ಬ್ರಾಂಡ್ ಪ್ರೊಟೆಕ್ಟರ್ಸ್ ಇಂಡಿಯಾ ಪ್ರೈ. ಲಿ. ನ ದಕ್ಷಿಣ ಭಾರತದ ಪ್ರಾದೇಶಿಕ ಮುಖ್ಯಸ್ಥರಾದ ಸ್ಟೀಫನ್ ರಾಜ್ ಅವರು ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಉಳ್ಳಾಲ ಠಾಣಾ ವ್ಯಾಪ್ತಿಯಲ್ಲಿ ಆ. 18 ಮತ್ತು 19 ರಂದು ಸ್ಪೋರ್ಟ್ಸ್ ವಿನ್ನರ್ ಅಂಗಡಿ, ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯ ಮಹಾದೇವ

ನಕಲಿ ಕ್ರೀಡಾ ಪರಿಕರ ಮಾರಾಟ ಅಂಗಡಿಗಳಿಗೆ ಪೊಲೀಸರ ದಾಳಿ, ವಸ್ತುಗಳು ವಶಕ್ಕೆ Read More »

ಬಿ.ಎಲ್‌.ಸಂತೋಷ್‌ ನಿಂದನೆ : ತಿಮರೋಡಿ ವಿರುದ್ಧ ದೂರು ದಾಖಲು

ಉಡುಪಿ: ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಬಿ.ಎಲ್‌.ಸಂತೋಷ್‌ ಅವರನ್ನು ವಾಚಾಮಗೋಚರವಾಗಿ ನಿಂದಿಸಿದ ಮಹೇಶ್‌ ತಿಮರೋಡಿ ವಿರುದ್ಧ ಉಡುಪಿಯ ಬ್ರಹ್ಮಾವರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಫೇಸ್‌ಬುಕ್‌ ವೀಡಿಯೊದಲ್ಲಿ ಮಹೇಶ್‌ ತಿಮರೋಡಿ ಎಂಬ ವ್ಯಕ್ತಿ ಬಿಜೆಪಿಯ ರಾಷ್ಟ್ರೀಯ ಕಾರ್ಯದರ್ಶಿ ಹಾಗೂ ಹಿರಿಯ ಹಿಂದೂ ನಾಯಕರಾಗಿರುವ ಬಿ.ಎಲ್‌.ಸಂತೋಷ್‌ ವಿರುದ್ಧ ಅವಾಚ್ಯ ಶಬ್ದಗಳನ್ನು ಬಳಸಿ ನಿಂದಿಸಿ ತೇಜೋವಧೆ ಮಾಡಿದ್ದಾರೆ. ಈ ಮೂಲಕ ವಿಭಿನ್ನ ಧರ್ಮಗಳ ನಡುವೆ ವೈಷಮ್ಯ ಸೃಷ್ಟಿಸಲು ಯತ್ನಿಸಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲೆ ಗ್ರಾಮಾಂತರ ಮಂಡಲಾಧ್ಯಕ್ಷ ರಾಜೀವ್‌ ಕುಲಾಲ್‌ ಎಂಬವರು

ಬಿ.ಎಲ್‌.ಸಂತೋಷ್‌ ನಿಂದನೆ : ತಿಮರೋಡಿ ವಿರುದ್ಧ ದೂರು ದಾಖಲು Read More »

ಸರಗಳ್ಳತನ ಆರೋಪಿ ಬಂಧನ | ಸೊತ್ತುಗಳನ್ನು ವಶಪಡಿಸಿಕೊಂಡ ುಪ್ಪಿನಂಗಡಿ ಪೊಲೀಸರು

ಉಪ್ಪಿನಂಗಡಿ: ಮಹಿಳೆಯೊಬ್ಬರ ಕುತ್ತಿಗೆಯಿಂದ ಚಿನ್ನದ ಸರ ಎಗರಿಸಿದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿ, ಆರೋಪಿಯಿಂದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಸುಳ್ಯ, ಆಲೆಟ್ಟಿ ನಿವಾಸಿ ಅಬ್ದುಲ್ ರೆಹಮಾನ್ (31) ಬಂಧಿತ ಆರೋಪಿ. ಪೊಲೀಸ್ ಠಾಣಾ ವ್ಯಾಪ್ತಿಯ ನೆಲ್ಯಾಡಿ, ಪಡುಬೆಟ್ಟು ಎಂಬಲ್ಲಿ ಜೂ.4ರಂದು  ಮಹಿಳೆಯೊಬ್ಬರ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಬೈಕಿನಲ್ಲಿ ಬಂದಿದ್ದ ಇಬ್ಬರು ಅಪರಿಚಿತರು ಎಳೆದು ಬಲವಂತವಾಗಿ ಕಸಿದುಕೊಂಡು ಹೋದ ಘಟನೆಗೆ ಸಂಬಂಧಿಸಿದಂತೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಉಪ್ಪಿನಂಗಡಿ ಠಾಣಾ ಪೊಲೀಸರು ಈ ಬಗ್ಗೆ ತನಿಖೆ ನಡೆಸಿದ್ದು, ಆರೋಪಿಯನ್ನು

ಸರಗಳ್ಳತನ ಆರೋಪಿ ಬಂಧನ | ಸೊತ್ತುಗಳನ್ನು ವಶಪಡಿಸಿಕೊಂಡ ುಪ್ಪಿನಂಗಡಿ ಪೊಲೀಸರು Read More »

ತಮಿಳುನಾಡಿನಲ್ಲಿ ತನ್ನನ್ನು ಕೆಲವು ವ್ಯಕ್ತಿಗಳು ಭೇಟಿ ಮಾಡಿದ್ದಾರೆಂದು ಮುಸುಕುಧಾರಿ ಹೇಳಿಲ್ಲ : ಎಸ್‌ಐಟಿ ಸ್ಪಷ್ಟನೆ

ಸುಳ್ಳು ಸುದ್ದಿ, ಭಾವನೆಗಳನ್ನು ಕೆರಳಿಸುವ ವೀಡಿಯೊ ಮಾಡದಂತೆ ಯೂಟ್ಯೂಬರ್‌ಗಳಿಗೆ ಖಡಕ್‌ ಎಚ್ಚರಿಕೆ ಮಂಗಳೂರು: ತಮಿಳುನಾಡಿನಲ್ಲಿದ್ದ ವೇಳೆ ಗುಂಪೊಂದು ತನ್ನನ್ನು ಸಂಪರ್ಕಿಸಿತ್ತು ಎಂದು ದೂರುದಾರ ಮುಸುಕುಧಾರಿ ವ್ಯಕ್ತಿ ಹೇಳಿಲ್ಲ ಎಂದು ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. 2014ರ ನಂತರ ತಮಿಳುನಾಡಿನಲ್ಲಿದ್ದೆ. 2023ರಲ್ಲಿ ಒಂದು ಗುಂಪು ನನ್ನನ್ನು ಸಂಪರ್ಕಿಸಿತ್ತು. ಧರ್ಮಸ್ಥಳದಲ್ಲಿ ಶವ ಹೂತಿರುವ ಬಗ್ಗೆ ನನ್ನನ್ನು ಕೇಳಿತ್ತು. ನಾನು ಕಾನೂನು ಪ್ರಕಾರವೇ ಶವಗಳನ್ನು ಹೂತಿರುವುದಾಗಿ ಹೇಳಿದ್ದೆ. ಆದರೆ ಈ ಗುಂಪು ತಪ್ಪು ಹೇಳಿಕೆ ನೀಡುವಂತೆ ಒತ್ತಡ

ತಮಿಳುನಾಡಿನಲ್ಲಿ ತನ್ನನ್ನು ಕೆಲವು ವ್ಯಕ್ತಿಗಳು ಭೇಟಿ ಮಾಡಿದ್ದಾರೆಂದು ಮುಸುಕುಧಾರಿ ಹೇಳಿಲ್ಲ : ಎಸ್‌ಐಟಿ ಸ್ಪಷ್ಟನೆ Read More »

ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್‍.ಸಂತೋಷ್‍ ರವರಿಗೆ ಏಕವಚನದಲ್ಲಿ ಅವಮಾನ | ಮಹೇಶ್‍ ಶೆಟ್ಟಿ ತಿಮರೋಡಿ ವಿರುದ್ಧ ಪುತ್ತೂರು ಬಿಜೆಪಿಯಿಂದ ನಗರ ಠಾಣೆಗೆ ದೂರು

ಪುತ್ತೂರು: ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್‌ ರವರಿಗೆ ಏಕವಚನದಲ್ಲಿ ಮಾತನಾಡಿರುವುದಲ್ಲದೆ ಹೆಣ್ಣು ಮಕ್ಕಳ ಬಗ್ಗೆ ಅವಮಾನ  ರೀತಿಯಲ್ಲಿ ಮಾತನಾಡಿ ಗುಂಪು ಘರ್ಷಣೆಗೆ ಪ್ರಚೋದನೆ ನೀಡಿರುವ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಪುತ್ತೂರು ಬಿಜೆಪಿಯಿಂದ ಪುತ್ತೂರು ನಗರ ಠಾಣಾ ಪೊಲೀಸರಿಗೆ ದೂರು ನೀಡಿದ್ದಾರೆ. ಮಹೇಶ್ ತಿಮರೋಡಿಯವರು ಸಾಮಾಜಿಕ ಜಾಲತಾಣದಲ್ಲಿ ಮಾತನಾಡುವ ಸಮಯದಲ್ಲಿ ಬಿಜೆಪಿಯ ರಾಷ್ಟ್ರೀಯ ಪ್ರದಾನ ಕಾರ್ಯದರ್ಶಿಯವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿ, ಅವರನ್ನು ಅವಿವೇಕಿ, ಪಾಪಿ ಎಂದು ನಿಂಧಿಸಿದಲ್ಲದೆ ಶಿವಮೊಗ್ಗ, ಪುತ್ತೂರು, ಬೆಂಗಳೂರು, ದೆಹಲಿಯಲ್ಲಿ

ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್‍.ಸಂತೋಷ್‍ ರವರಿಗೆ ಏಕವಚನದಲ್ಲಿ ಅವಮಾನ | ಮಹೇಶ್‍ ಶೆಟ್ಟಿ ತಿಮರೋಡಿ ವಿರುದ್ಧ ಪುತ್ತೂರು ಬಿಜೆಪಿಯಿಂದ ನಗರ ಠಾಣೆಗೆ ದೂರು Read More »

ರಾಜ್ಯದಲ್ಲಿ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚಳ

ಎರಡು ವರ್ಷದಲ್ಲಿ ಪೋಕ್ಸೊ ಪ್ರಕರಣಗಳ ಸಂಖ್ಯೆ ಶೇ.26 ಏರಿಕೆ ಬೆಂಗಳೂರು: ಕರ್ನಾಟಕದಲ್ಲಿ ಮಕ್ಕಳ ಮೇಲಿನ ಲೈಂಗಿಕ ಕಿರುಕುಳ, ದೌರ್ಜನ್ಯ ಪ್ರಕರಣಗಳ ಸಂಖ್ಯೆ ಗಣನೀಯ ಏರಿಕೆಯಾಗಿದೆ ಸರ್ಕಾರವೇ ತಿಳಿಸಿದೆ. ಕಳೆದ ಎರಡು ವರ್ಷಗಳಲ್ಲಿ ರಾಜ್ಯದಲ್ಲಿ ಪೋಕ್ಸೊ ಪ್ರಕರಣಗಳ ಸಂಖ್ಯೆ ಶೇ.26ರಷ್ಟು ಹೆಚ್ಚಾಗಿರುವುದು ಅಂಕಿಅಂಶಗಳಿಂದ ತಿಳಿದುಬಂದಿದೆ. ವಿಧಾನ ಪರಿಷತ್ತಿಗೆ ಸರ್ಕಾರ ನೀಡಿದ ಮಾಹಿತಿಯ ಪ್ರಕಾರ, 2022ರಲ್ಲಿ 3,209 ಪೋಕ್ಸೊ ಪ್ರಕರಣಗಳು ದಾಖಲಾಗಿದ್ದು, ಅದು 2024ರ ವೇಳೆಗೆ 4,064ಕ್ಕೆ ಏರಿಕೆಯಾಗಿದೆ. 2025ರಲ್ಲಿ ಈವರೆಗೆ 2,544 ಪ್ರಕರಣಗಳು ದಾಖಲಾಗಿವೆ. ಪೋಕ್ಸೊ ಪ್ರಕರಣಗಳು ಹೆಚ್ಚುತ್ತಿದ್ದರೂ,

ರಾಜ್ಯದಲ್ಲಿ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚಳ Read More »

ಧರ್ಮಸ್ಥಳ ಪ್ರಕರಣ : ಎಸ್‌ಐಟಿಗೆ ಕಗ್ಗಂಟಾದ ಮುಸುಕುಧಾರಿ ಅನಾಮಿಕ

ತೀವ್ರ ವಿಚಾರಣೆ ನಡೆಸಿದರೂ ಬಾಯಿ ಬಿಡದ ಮುಸುಕುಧಾರಿ ನಡೆಯ ಬಗ್ಗೆ ಅನುಮಾನ ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ಶವ ಶೋಧವನ್ನು ಸ್ಥಗಿತಗೊಳಿಸಿರುವ ಎಸ್‌ಐಟಿ ಅಧಿಕಾರಿಗಳು ಅನಾಮಿಕ ಮುಸುಕುಧಾರಿಯ ವಿಚಾರಣೆ ಪ್ರಾರಂಭಿಸಿದ್ದಾರೆ. ಸೋಮವಾರವೂ ಸುಮಾರು ಆರು ತಾಸುಗಳ ಕಾಲ ಮುಸುಕುಧಾರಿಯನ್ನು ಅಧಿಕಾರಿಗಳು ವಿಚಾರಣೆಗೊಳಪಡಿಸಿ ಮಾಹಿತಿ ಪಡೆದುಕೊಂಡಿದ್ದಾರೆ. ಪ್ರಕರಣದ ತನಿಖಾಧಿಕಾರಿ ಜಿತೇಂದ್ರ ದಯಾಮ ಮತ್ತು ಸುಮಾರು 25 ಪೊಲೀಸರ ತಂಡ ಎಸ್‌ಐಟಿ ಠಾಣೆಯಲ್ಲಿ ತೀವ್ರ ವಿಚಾರಣೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಮುಸುಕುಧಾರಿ ಹೇಳಿದ ಕಡೆಯಲೆಲ್ಲ ಅಗೆದರೂ ಶವಗಳ ಯಾವುದೇ ಕುರುಹು ಸಿಗದಿರುವ

ಧರ್ಮಸ್ಥಳ ಪ್ರಕರಣ : ಎಸ್‌ಐಟಿಗೆ ಕಗ್ಗಂಟಾದ ಮುಸುಕುಧಾರಿ ಅನಾಮಿಕ Read More »

ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ವರ್ತನೆ | ರವಿ ರಾಮಕುಂಜ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ವಿಎಚ್‍ ಪಿಯಿಂದ ನಗರ ಠಾಣೆಗೆ ದೂರು

ಪುತ್ತೂರು: ಕೃಷ್ಣನ ವೇಷ ಧರಿಸಿ ಹಿಂದುಗಳ ಧಾರ್ಮಿಕ ಭಾವನೆಗೆ ದಕ್ಕೆ ಬರುವ ರೀತಿ ವರ್ತನೆ ಮಾಡಿದ ರವಿ ರಾಮಕುಂಜ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ವಿಶ್ವ ಹಿಂದೂ ಪರಿಷತ್‍ ಹಾಗೂ ಮೊಸರು ಕುಡಿಕೆ ಉತ್ಸವ ಸಮಿತಿ ನಗರ ಪೊಲೀಸ್ ಠಾಣೆಗೆ ದೂರು ನೀಡಿದೆ. ರವಿ ರಾಮ ಕುಂಜ ಎಂಬ ಕಲಾವಿದ ಶ್ರೀ ಕೃಷ್ಣನ ವೇಷ ದರಿಸಿ ನಾಟಕ ಪಾತ್ರ ಮಾಡುವ ಸಂರ್ಭದಲ್ಲಿ ಹೆಣ್ಣ (ಮಾತೆಯ) ನ್ನು ಅಪ್ಪಿ ಕೊಳ್ಳಲು ಹೇಳಿದ್ದು ಅಲ್ಲದೆ ಪೂಜೆಯಲ್ಲಿ ನಿರತವಾಗಿದ್ದ

ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ವರ್ತನೆ | ರವಿ ರಾಮಕುಂಜ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ವಿಎಚ್‍ ಪಿಯಿಂದ ನಗರ ಠಾಣೆಗೆ ದೂರು Read More »

error: Content is protected !!
Scroll to Top