ಅಪರಾಧ

ರಸ್ತೆ ಅವ್ಯವಸ್ತೆಗೆ ಬಲಿಯಾಯ್ತು 2 ವರ್ಷದ ಕಂದನ ಜೀವ

ಬೆಂಗಳೂರು: ರಸ್ತೆ ಅವ್ಯವಸ್ಥೆಯಿಂದಾಗಿ ಎರಡು ವರ್ಷದ ಕಂದಮ್ಮ ಮೃತಪಟ್ಟ ಘಟನೆ ಮಹದೇವಪುರದಲ್ಲಿ ‌ನಡೆದಿದೆ. ರಸ್ತೆ ದುರಸ್ತಿ ವಿಳಂಬದಿಂದಾಗಿ ಸಂಭವಿಸಿದ ಅಪಘಾತದಲ್ಲಿ ಈ ದುರ್ಘಟನೆ ನಡೆದಿದೆ. ಮಗು ಇದ್ದ ಬೈಕ್‌ಗೆ ಹಿಂದಿನಿಂದ ಬಂದ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಮಗು ಕೆಳಕ್ಕೆ ಬಿದ್ದು ಮೃತಪಟ್ಟಿದೆ. ಮೃತ ಮಗುವನ್ನು ತ್ರಿಶೂಲ್ ಎಂದು ಗುರುತಿಸಲಾಗಿದೆ. ಮಗು ಕೆಳಕ್ಕೆ ಬಿದ್ದಾಗ ಅದರ ತಲೆಯ ಮೇಲೆ ಕಾರು ಹರಿದು ಹೋಗಿದೆ. ಪರಿಣಾಮ ಮಗು ಸ್ಥಳದಲ್ಲೇ ಮೃತಪಟ್ಟಿದೆ. ಈ ಅಪಘಾತಕ್ಕೆ ಅರೆಪೂರ್ಣವಾದ ರಸ್ತೆಗಳ ಅವ್ಯವಸ್ಥೆ ಎಂದು […]

ರಸ್ತೆ ಅವ್ಯವಸ್ತೆಗೆ ಬಲಿಯಾಯ್ತು 2 ವರ್ಷದ ಕಂದನ ಜೀವ Read More »

ಹತ್ತನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ

ಚಿತ್ರದುರ್ಗ: ನಗರದ ವಸತಿ ಶಾಲೆಯೊಂದರ ಎಸ್‌ಎಸ್‌ಎಲ್‌ಸಿ ‌ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಚಿತ್ರದುರ್ಗದ ಕರಿಯಣ್ಣನಹಳ್ಳಿ ನಿವಾಸಿ, ಭರಮಸಾಗರದ ‌ಖಾಸಗಿ ವಸತಿ ಶಾಲಾ ವಿದ್ಯಾರ್ಥಿ ಕೊಟ್ರೇಶ್ ಎಂಬವನೇ‌ ಮೃತ ವಿದ್ಯಾರ್ಥಿ. ಈತ ಶಾಲಾ ಕಟ್ಟಡದ ಮೂರನೇ ಮಹಡಿಯಿಂದ ಕೆಳಕ್ಕೆ ಹಾರಿ ಆತ್ಮಹತ್ಯೆಗೆ ಶರಣಾಗಿರುವುದಾಗಿದೆ. ಯಾವ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನುವ ಕಾರಣ ತಿಳಿದು ಬಂದಿಲ್ಲ. ಈತ ಕಟ್ಟಡದಿಂದ ಜಿಗಿಯುವ ದೃಶ್ಯ ಸಿಸಿಟಿವಿಯಲ್ಲಿ ‌ಸೆರೆಯಾಗಿದೆ. ಪರಮ ಸಾಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಹತ್ತನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ Read More »

400 ಕೋ. ರೂ. ದರೋಡೆ ಕಟ್ಟುಕಥೆ!

ಬೆಳಗಾವಿಯ ಘಾಟಿಯಲ್ಲಿ ಇಂಥ ಘಟನೆಯೇ ನಡೆದಿಲ್ಲ ಎಂದು ತನಿಖೆಯಿಂದ ಸಾಬೀತು ಬೆಳಗಾವಿ : ಕರ್ನಾಟಕ-ಗೋವಾ ಗಡಿಯಲ್ಲಿ ನಡೆದಿದೆ ಎನ್ನಲಾದ 400 ಕೋಟಿ ರೂ. ದರೋಡೆ ಪ್ರಕರಣಕ್ಕೆ ಈಗ ದಿಢೀರ್‌ ತಿರುವು ಪಡೆದುಕೊಂಡಿದ್ದು, ಇಡೀ ಘಟನೆಯೇ ಸುಳ್ಳು ಎನ್ನುವ ಮಾಹಿತಿ ಹೊರಬಿದ್ದಿದೆ. ಘಟನೆ ಕಟ್ಟುಕಥೆ ಎಂಬ ಅನುಮಾನಕ್ಕೆ ಬಲವಾದ ಪುರಾವೆ ಸಿಕ್ಕಿದೆ. ಬೆಳಗಾವಿ ಸಮೀಪದ ಗಡಿ ಪ್ರದೇಶದಲ್ಲಿ ಹಣ ಸಾಗಿಸುತ್ತಿದ್ದ ಎರಡು ಕಂಟೇನರ್‌ಗಳನ್ನು ದರೋಡೆ ಮಾಡಲಾಗಿದೆ ಎಂದು ನೀಡಿದ್ದ ದೂರಿನ ಮೇಲೆ ಮಹಾರಾಷ್ಟ್ರ ಸರ್ಕಾರ ಎಸ್‌ಐಟಿ ರಚಿಸಿ ತನಿಖೆ

400 ಕೋ. ರೂ. ದರೋಡೆ ಕಟ್ಟುಕಥೆ! Read More »

ವೃದ್ಧನ ಕೊಲೆ : ಮಗ ಸಹಿತ ಮೂವರ ಬಂಧನ

ನೆಲ್ಯಾಡಿಯ ಕೊಪ್ಪಮಾದೇರಿಯಲ್ಲಿ ಸಂಭವಿಸಿದ ಪ್ರಕರಣ ಉಪ್ಪಿನಂಗಡಿ: ಏಳು ದಿನದ ಹಿಂದೆ ಸಂಭವಿಸಿದ ನೆಲ್ಯಾಡಿ ಗ್ರಾಮದ ಕೊಪ್ಪಮಾದೇರಿ ನಿವಾಸಿ ವೃದ್ಧ ಕೆ.ಸಿ ವರ್ಗೀಸ್ (73) ಅವರ ಅಸಹಜ ಸಾವು ಪ್ರಕರಣ ಕೊಲೆ ಪ್ರಕರಣ‌ ಎಂದು ಖಚಿತ ಪಡಿಸಿದ ಪೊಲೀಸರು ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಮೃತರ ಮಗ ಹಾಗೂ ಸಂಬಂಧಿಕರಾದ ಕೆ.ವಿ. ತೋಮಸ್ (39), ಸಿ.ಟಿ ರಾಜು (59), ಚಾಕೊಚ್ಚ (51) ಬಂಧಿತರು. ಫೆ.9ರಂದು ಉಪ್ಪಿನಂಗಡಿ ಠಾಣೆಯಲ್ಲಿ ಕೆ.ಸಿ.ವರ್ಗೀಸ್ ಸಾವಿಗೆ ಸಂಬಂಧಪಟ್ಟಂತೆ ಅಸಹಜ ಸಾವು ಪ್ರಕರಣ ದಾಖಲಾಗಿತ್ತು.

ವೃದ್ಧನ ಕೊಲೆ : ಮಗ ಸಹಿತ ಮೂವರ ಬಂಧನ Read More »

ನದಿಯಿಂದ ಆಮೆಗಳನ್ನು ಹಿಡಿದು ಸುಟ್ಟ ನಾಲ್ಕು ಮಂದಿ ಸೆರೆ

ಅಜ್ಜಿಯ ತಿಥಿ ಕಾರ್ಯಕ್ಕೆ ಆಮೆ ಮಾಂಸ ಮಾಡಲು ಮುಂದಾಗಿದ್ದ ಆರೋಪಿಗಳು ಬೆಳ್ತಂಗಡಿ : ನದಿಯಲ್ಲಿ ಆಮೆಗಳನ್ನು ಹಿಡಿದು ಸುಟ್ಟು ಬೇಯಿಸುತ್ತಿದ್ದ ನಾಲ್ಕು ಮಂದಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ತಿಥಿ ಕಾರ್ಯಕ್ರಮಕ್ಕೆ ಪದಾರ್ಥ ಮಾಡಿ ಬಡಿಸಲು ಅಜ್ಜಿಗೆ ಇಷ್ಟವಾದ ಆಮೆಯನ್ನು ಸಂಬಂಧಿಕರು ನದಿಯಲ್ಲಿ ಅಕ್ರಮವಾಗಿ ಹಿಡಿದು ನದಿ ದಡದಲ್ಲೇ ಮಾಂಸ ಮಾಡಿ ಸುಡಲು ಯತ್ನಿಸುತ್ತಿದ್ದಾಗ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿದ್ದಾರೆ. ಬೆಳ್ತಂಗಡಿ ನಗರದ ಸೋಮವತಿ ನದಿಯಲ್ಲಿ ನಾಲ್ಕು ಆಮೆಯನ್ನು ಹಿಡಿದು ನದಿ ಬದಿಯಲ್ಲಿ ಮಾಂಸ ಮಾಡಲು ಪ್ರಯತ್ನಿಸುತ್ತಿರುವಾಗ ಫೆ.14ರಂದು

ನದಿಯಿಂದ ಆಮೆಗಳನ್ನು ಹಿಡಿದು ಸುಟ್ಟ ನಾಲ್ಕು ಮಂದಿ ಸೆರೆ Read More »

ವಿದೇಶದಿಂದಲೇ ಯುವತಿಯರಿಗೆ ವಂಚನೆ : ಪತಿಯ ವಿರುದ್ಧ ದೂರು ನೀಡಿದ ಪತ್ನಿ

ಮದುವೆಯಾಗಿದ್ದರೂ ಬೇರೆ ಯುವತಿಯರಿಗೆ ಮೋಸ ಮಾಡುತ್ತಿದ್ದ ಬಜಪೆಯ ಯುವಕ ಮಂಗಳೂರು : ಮ್ಯಾಟ್ರಿಮೋನಿ ಸೈಟ್‌ನಲ್ಲಿ ಯುವತಿಯರನ್ನು ಪರಿಚಯ ಮಾಡಿಕೊಂಡು ಮದುವೆಯ ನಾಟಕವಾಡಿ ಹಣ ಪಡೆದು ವಂಚಿಸುತ್ತಿದ್ದ ಯುವಕ ಮತ್ತು ಅವನ ಸಹಾಯಕನ ಮುಖವಾಡ ಬಯಲಾದ ಬೆನ್ನಿಗೆ ಮಂಗಳೂರಿನಲ್ಲಿ ಇದೇ ಮಾದರಿಯ ಇನ್ನೊಂದು ಘಟನೆ ವರದಿಯಾಗಿದೆ. ವಿದೇಶದಲ್ಲೇ ಕುಳಿತು ಯುವತಿಯರಿಗೆ ಗಾಳ ಹಾಕುತ್ತಿದ್ದ ಮತ್ತೊಬ್ಬನ ವಂಚನೆ ಬಯಲಾಗಿದ್ದು, ಗಂಡನ ಪ್ರೇಮ, ಪ್ರೀತಿ, ಪ್ರಣಯದಾಟವನ್ನು ಸ್ವತಃ ಪತ್ನಿಯೇ ಬಯಲು ಮಾಡಿದ್ದಾರೆ. ಬಜಪೆ ನಿವಾಸಿ ಮನೀಶ್ ಎಂಬಾತನ ವಿರುದ್ಧ ಪತ್ನಿ ಪ್ರೀತಿ

ವಿದೇಶದಿಂದಲೇ ಯುವತಿಯರಿಗೆ ವಂಚನೆ : ಪತಿಯ ವಿರುದ್ಧ ದೂರು ನೀಡಿದ ಪತ್ನಿ Read More »

ಅಮೆರಿಕದಲ್ಲಿ ನಾಪತ್ತೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಶವವಾಗಿ ಪತ್ತೆ

ಕ್ಯಾಲಿಫೋರ್ನಿಯಾದಲ್ಲಿ ಆರು ದಿನಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿ ಕ್ಯಾಲಿಫೋರ್ನಿಯಾ : ಕ್ಯಾಲಿಫೋರ್ನಿಯಾದಲ್ಲಿ ಆರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ ಶವವಾಗಿ ಪತ್ತೆಯಾಗಿದ್ದಾರೆ. ಭಾರತೀಯ ವಿದ್ಯಾರ್ಥಿಯ ಶವ ಪತ್ತೆಯಾಗಿರುವುದು ಅವರ ಕುಟುಂಬವನ್ನು ಮಾತ್ರವಲ್ಲದೆ ಇಡೀ ಭಾರತೀಯ ವಿದ್ಯಾರ್ಥಿ ಸಮುದಾಯವನ್ನು ಆಘಾತಗೊಳಿಸಿದೆ. ಕರ್ನಾಟಕದ 22 ವರ್ಷದ ಸಾಕೇತ್ ಶ್ರೀನಿವಾಸಯ್ಯ ಬರ್ಕ್ಲಿಯ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದಲ್ಲಿ ರಾಸಾಯನಿಕ ಮತ್ತು ಜೈವಿಕ ಅಣು ಇಂಜಿನಿಯರಿಂಗ್‌ನಲ್ಲಿ ಸ್ನಾತಕೋತ್ತರ ಪದವಿ ಪಡೆಯುತ್ತಿದ್ದರು. ಫೆಬ್ರವರಿ 9ರಂದು ಕ್ಯಾಂಪಸ್‌ನಿಂದ ಸುಮಾರು ಒಂದು ಕಿಲೋಮೀಟರ್ ದೂರದಲ್ಲಿ ಅವರನ್ನು

ಅಮೆರಿಕದಲ್ಲಿ ನಾಪತ್ತೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಶವವಾಗಿ ಪತ್ತೆ Read More »

ಮದುವೆಗೆ ಬಂದ ವಿವಾಹಿತ ಮಹಿಳೆ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌

ಗಂಡನ ಸ್ನೇಹಿತನ ಮನೆಯಲ್ಲಿ ಎರಡು ದಿನದಿಂದ ಇದ್ದಾಕೆಯನ್ನು ಪತ್ತೆಹಚ್ಚಿದ ಪೊಲೀಸರು ಬೆಂಗಳೂರು: ಮದುವೆಗೆ ಬಂದಿದ್ದ ಮಹಿಳೆ ಕಾಣೆಯಾಗಿ ಇಡೀ ರಾಜ್ಯದ ಗಮನ ಸೆಳೆದಿದ್ದ ಹಾಸನ ನಾಪತ್ತೆ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಗುರುವಾರ ರಾತ್ರಿ ಕಾಣೆಯಾಗಿದ್ದ ಮಹಿಳೆ ಕುಣಿಗಲ್​ನಲ್ಲಿ ಪತ್ತೆ ಆಗಿದ್ದಾಳೆ. ಪತಿಯ ಸ್ನೇಹಿತನ ಮನೆಯಲ್ಲಿಯೇ ಮಹಿಳೆ ಸಿಕ್ಕಿದ್ದು, ಅನೈತಿಕ ಸಂಬಂಧದ ಶಂಕೆ ವ್ಯಕ್ತವಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಆಧಾರದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು ಎನ್ನಲಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಆಧಾರದಲ್ಲಿ ಕುಣಿಗಲ್​​ನ ಗೊಟ್ಟಿಕೆರೆಯಲ್ಲಿ ಡೇವಿಡ್ ಎಂಬಾತನ ಮನೆಯಲ್ಲಿ

ಮದುವೆಗೆ ಬಂದ ವಿವಾಹಿತ ಮಹಿಳೆ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌ Read More »

ತಲೆಮರೆಸಿಕೊಂಡಿದ್ದ ಆರೋಪಿ ಪೊಲೀಸ್ ವಶಕ್ಕೆ

ಪುತ್ತೂರು: ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಒಂಬತ್ತು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ‌ ಈಗ ಮತ್ತೆ ಪೊಲೀಸ್ ಬಲೆಗೆ ಬಿದ್ದಿದ್ದಾನೆ. ಬಂಧಿತ ಆರೋಪಿಯನ್ನು ಪುತ್ತೂರು ಕಸಬಾ ಗ್ರಾಮದ ಅಬ್ಬಾಸ್ ಆಲಿ ಅಲ್ತಾಫ್(55) ಎಂದು ಗುರುತಿಸಲಾಗಿದೆ. ಪ್ರಸ್ತುತ ಈತ ಮಂಗಳೂರಿನ ಪದವು ಎಂಬಲ್ಲಿ ವಾಸ್ತವ್ಯ ಇದ್ದ. ಈತನನ್ನು ಮಂಗಳೂರಿನ ಬಿಕರ್ನಕಟ್ಟೆ‌ ಕುಲಶೇಖರದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಅಲ್ತಾಫ್ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ.: 18/2026, ಕಲಂ: 269 ಬಿಎನ್‌ಎಸ್

ತಲೆಮರೆಸಿಕೊಂಡಿದ್ದ ಆರೋಪಿ ಪೊಲೀಸ್ ವಶಕ್ಕೆ Read More »

ಕರ್ನಾಟಕದ ವಿದ್ಯಾರ್ಥಿ ಅಮೆರಿಕದಲ್ಲಿ ನಾಪತ್ತೆ

ಕ್ಯಾಲಿಫೋರ್ನಿಯಾದಲ್ಲಿ ನಿಗೂಢವಾಗಿ ನಾಪತ್ತೆಯಾಗಿರುವ ಸಾಕೇತ್ ಶ್ರೀನಿವಾಸಯ್ಯ ನವದೆಹಲಿ: ಕರ್ನಾಟಕ ಮೂಲದ ವಿದ್ಯಾರ್ಥಿ ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆಯಾಗಿದ್ದು, ಕಾಣೆಯಾಗಿರುವ ಬಗ್ಗೆ ಸ್ಯಾನ್ ಫ್ರಾನ್ಸಿಸ್ಕೋದಲ್ಲಿನ ಭಾರತೀಯ ದೂತಾವಾಸ ಕಚೇರಿ ಆತಂಕ ವ್ಯಕ್ತಪಡಿಸಿದೆ. 22 ವರ್ಷದ ಸಾಕೇತ್ ಶ್ರೀನಿವಾಸಯ್ಯ ಕಾಣೆಯಾಗಿದ್ದು, ಅವರನ್ನು ಪತ್ತೆಹಚ್ಚಲು ಸ್ಥಳೀಯ ಪೊಲೀಸರು ಮತ್ತು ಭಾರತೀಯ ದೂತಾವಾಸ ಕಚೇರಿ ತುರ್ತು ಕ್ರಮ ಕೈಗೊಂಡಿವೆ. ಮಾಸ್ಟರ್ಸ್ ವಿದ್ಯಾರ್ಥಿಯಾಗಿರುವ ಸಾಕೇತ್ ಶ್ರೀನಿವಾಸಯ್ಯ ಅಮೆರಿಕದ ಯೂನಿವರ್ಸಿಟಿ ಆಫ್ ಕ್ಯಾಲಿಫೋರ್ನಿಯಾ, ಬರ್ಕ್ಲೆಯಲ್ಲಿ ಪಿಜಿ ವ್ಯಾಸಂಗ ಮಾಡುತ್ತಿದ್ದಾರೆ. ಫೆ.10ರಂದು ಕ್ಯಾಲಿಫೋರ್ನಿಯಾದ ಬರ್ಕ್ಲೆ ನಗರದ ಡ್ವೈಟ್ ವೇ

ಕರ್ನಾಟಕದ ವಿದ್ಯಾರ್ಥಿ ಅಮೆರಿಕದಲ್ಲಿ ನಾಪತ್ತೆ Read More »

error: Content is protected !!
Scroll to Top