ಅಪರಾಧ

ಕಬಕ ಬಿರಾವು ನಿವಾಸಿ ಸಹೋದರಿ ಮನೆಯಲ್ಲಿ ಆತ್ಮಹತ್ಯೆ

ಪುತ್ತೂರು: ಕಬಕದ ಬಿರಾವು ನಿವಾಸಿಯೊಬ್ಬರು ಬಲ್ನಾಡು ಗ್ರಾಮದ ಕಟ್ಟತ್ತಾರು ಸಹೋದರಿಯ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಬಿರಾವು ಪದ್ಮನಾಭ ಪೂಜಾರಿ (54) ಆತ್ಮಹತ್ಯೆ ಮಾಡಿಕೊಂಡವರು. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಕಳೆದ ಒಂದು ವರ್ಷದಿಂದ ಬಲ್ನಾಡು ಗ್ರಾಮದ ಕಟ್ಟತ್ತಾರು ಎಂಬಲ್ಲಿ ಸಹೋದರಿಯ ಜೊತೆ ವಾಸವಾಗಿದ್ದರು. ಅಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರ ಪುತ್ರ ಶ್ರೀಕಾಂತ್ ಬಿರಾವು ಅವರು ನೀಡಿದ ದೂರಿನಂತೆ ಸಂಪ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕಬಕ ಬಿರಾವು ನಿವಾಸಿ ಸಹೋದರಿ ಮನೆಯಲ್ಲಿ ಆತ್ಮಹತ್ಯೆ Read More »

ಸುಳ್ಯ ಪದವು ಮರದ ದಿಮ್ಮಿ ಮೈಮೇಲೆ ಬಿದ್ದು ವ್ಯಕ್ತಿ ಮೃತ್ಯು

ಸುಳ್ಯಪದವು: ಮನೆಯ ಸಮೀಪ ಮರದದಿಮ್ಮಿಯನ್ನು ವಾಹನಕ್ಕೆ ಲೋಡ್ ಮಾಡುತ್ತಿರುವಾಗ ಮರದ ದಿಮ್ಮಿ ಮೈ ಮೇಲೆ ಬಿದ್ದು ಪಡುವನ್ನೂರು ಗ್ರಾಮದ ಸುಳ್ಯ ಪದವು ಬಟ್ಟ್ಯಂಗಳ ನಿವಾಸಿ ಗೋಪಾಲಕೃಷ್ಣ ಎಂಬವರು ಮೃತಪಟ್ಟ ಘಟನೆ ಇಂದು ಮುಂಜಾನೆ ನಡೆದಿದೆ. ತನ್ನ ಮನೆಯ ಸಮೀಪ ಇರುವ ಮಾವಿನ ಮರದ ದಿಮ್ಮಿಗಳನ್ನು ಜೆಸಿಬಿ ಮೂಲಕ ಟಿಪ್ಪರ್ ವಾಹನಕ್ಕೆ ಲೋಡ್ ಮಾಡಲಾಗಿತ್ತು. ಟಿಪ್ಪರ್ ವಾಹನದ ಹಿಂದಿನ ಬಾಗಿಲನ್ನು ಸರಿಪಡಿಸುವ ಸಂದರ್ಭದಲ್ಲಿ ಮರದ ದಿಮ್ಮಿ ಹಿಂದಕ್ಕೆ ಬಂದು ಮೈಮೇಲೆ ಬಿದ್ದು ಗಂಭೀರ ಗಾಯಗೊಂಡಿದ ಗೋಪಾಲ ಕೃಷ್ಣ ರವರನ್ನು

ಸುಳ್ಯ ಪದವು ಮರದ ದಿಮ್ಮಿ ಮೈಮೇಲೆ ಬಿದ್ದು ವ್ಯಕ್ತಿ ಮೃತ್ಯು Read More »

ಕೇರಳದಲ್ಲಿ ಸಹೋದರನ ಕೊಲೆ | ಕೊಲೆ ಆರೋಪಿ ಪುತ್ತೂರಿನಲ್ಲಿ ಪೊಲೀಸ್ ವಶ

ಪುತ್ತೂರು : ಕೊಲೆ ಆರೋಪಿಯೋರ್ವನನ್ನು ಪೊಲೀಸರು ಕೊಂಬೆಟ್ಟು ಬಳಿ ಬಂಧಿಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಆರೋಪಿಯು ಕೇರಳದಲ್ಲಿ ಸಹೋದರನನ್ನು ಕೊಲೆಗೈದು ಪುತ್ತೂರಿನಲ್ಲಿ ತಲೆಮರೆಸಿಕೊಂಡಿದ್ದು, ಈ ಬಗ್ಗೆ ಮಾಹಿತಿ ತಿಳಿದ ಕೇರಳ ಪೊಲೀಸರು ಪುತ್ತೂರಿಗೆ ಆಗಮಿಸಿದ್ದರು. ಆರೋಪಿಯನ್ನು ಬಂಧಿಸುವಲ್ಲಿ ಪುತ್ತೂರು ನಗರ ಠಾಣಾ ಪೊಲೀಸರು ಸಹಕರಿಸಿದ್ದು, ಆರೋಪಿಯು ದೇವಸ್ಥಾನದ ಸಮೀಪವಿರುವ ಚರಂಡಿಗಳಲ್ಲೆಲ್ಲಾ ಬಿದ್ದು ತಪ್ಪಿಸಿಕೊಳ್ಳಲು ಯತ್ನಿಸಿದ್ದು, ನಗರ ಠಾಣಾ ಪೊಲೀಸರು, ಕೇರಳ ಪೊಲೀಸರ ಜೊತೆ ಕಾರ್ಯಚರಣೆ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾದರು…

ಕೇರಳದಲ್ಲಿ ಸಹೋದರನ ಕೊಲೆ | ಕೊಲೆ ಆರೋಪಿ ಪುತ್ತೂರಿನಲ್ಲಿ ಪೊಲೀಸ್ ವಶ Read More »

8 ತಿಂಗಳ ಹಿಂದೆ 15 ಲಕ್ಷ ನಗದು ಕಳ್ಳತನ -ಆರೋಪಿಗಳ ಬಂಧನ

ಪುತ್ತೂರು:  ಅಂಗಡಿಯೊಂದರಿಂದ ಎಂಟು ತಿಂಗಳ ಹಿಂದೆ 15 ಲಕ್ಷ ರೂ. ನಗದು ಕಳವುಗೈದಿದ್ದ ಇಬ್ಬರು ಆರೋಪಿಗಳನ್ನು ಪುತ್ತೂರು ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ದಾವಣಗೆರೆ ದೇವರಾಜ ಅರಸ್‌ ಬಡವಾಣೆಯ ಸಮೀರ್‌ (ಕಪ್ಪ), ಹಾಸನ ಶಂಕರಿಪುರಂನ ಚಂದ್ರಶೇಖರ್‌ (ಚಂದು) ಬಂಧಿತರು. ಆರೋಪಿಗಳು 2022 ಸೆ. 16ರಂದು ಪುತ್ತೂರು ನಗರದ ಮುಖ್ಯ ರಸ್ತೆಯ ಮಾಯಿದೆ ದೇವುಸ್‌ ಚರ್ಚ್‌ ಸಮೀಪದ ಪ್ರಕಾಶ್‌ ಫೂಟ್ ವೇರ್‌ ಅಂಗಡಿಗೆ ನುಗ್ಗಿದ ಕಳ್ಳರು ಸುಮಾರು 15 ಲಕ್ಷ ರೂ. ಅನ್ನು ಕಳ್ಳತನ ಎಸಗಿದ್ದರು. ಈ ಬಗ್ಗೆ

8 ತಿಂಗಳ ಹಿಂದೆ 15 ಲಕ್ಷ ನಗದು ಕಳ್ಳತನ -ಆರೋಪಿಗಳ ಬಂಧನ Read More »

ಎನ್.ಐ.ಎ. ತಂಡ ಚಿಕ್ಕಮುಡ್ನೂರಿಗೆ ದಾಳಿ? | ಪುತ್ತೂರಿನ ನಾಲ್ವರನ್ನು ವಶಕ್ಕೆ ಪಡೆದುಕೊಂಡ ತಂಡ!

ಪುತ್ತೂರು: ಬುಧವಾರ ಬೆಳ್ಳಂಬೆಳಗ್ಗೆ ಮಿಂಚಿನ ಕಾರ್ಯಾಚರಣೆ ನಡೆಸಿದ ಎನ್.ಐ.ಎ. ತಂಡ ಪುತ್ತೂರು ನಗರಸಭೆ ಸಮೀಪದಲ್ಲೇ ಇರುವ ಚಿಕ್ಕಮುಡ್ನೂರು ಗ್ರಾಮಕ್ಕೂ ದಾಳಿ ನಡೆಸಿತ್ತು ಎಂಬ ಮಾಹಿತಿ ತಿಳಿದುಬಂದಿದೆ. ಬುಧವಾರ ನಡೆದ ದಾಳಿಯಲ್ಲಿ ಪುತ್ತೂರು ತಾಲೂಕಿನ 4 ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ಹೇಳಲಾಗಿದೆ. ಮಹಮ್ಮದ್ ಹ್ಯಾರೀಸ್ ಕುಂಬ್ರ (32), ಸಜ್ಜದ್ ಹುಸೈನ್ ಕೋಡಿಂಬಾಡಿ (37), ಫೈಜಲ್ ಅಹಮ್ಮದ್ ತಾರಿಗುಡ್ಡೆ, ಸಂಶುದ್ದೀನ್ ಕೂರ್ನಡ್ಕ ಎಂಬವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.

ಎನ್.ಐ.ಎ. ತಂಡ ಚಿಕ್ಕಮುಡ್ನೂರಿಗೆ ದಾಳಿ? | ಪುತ್ತೂರಿನ ನಾಲ್ವರನ್ನು ವಶಕ್ಕೆ ಪಡೆದುಕೊಂಡ ತಂಡ! Read More »

ಅಳಕೆಮಜಲು: ಯುವಕ ನೇಣು ಬಿಗಿದು ಆತ್ಮಹತ್ಯೆ

ವಿಟ್ಲ: ಇಲ್ಲಿನ ಅಳಕೆಮಜಲು ನಿವಾಸಿ ಧೀರಜ್ (30) ಬುಧವಾರ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅಳಕೆಮಜಲಿನಲ್ಲಿ ಸಮೀಪ ನಡೆದಿದೆ. ಧೀರಜ್ ಅವರು ಬಿ.ಸಿ.ರೋಡ್ ನ ಹೋಂಡಾ ಶೋ ರೂಂನಲ್ಲಿ ಕೆಲಸ ನಿರ್ವಹಿಸುತ್ತಿದ್ದು, ಒಂದು ವರುಷದ ಹಿಂದಷ್ಟೇ ವಿವಾಹವಾಗಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತರು ತಂದೆ, ತಾಯಿ, ಪತ್ನಿಯನ್ನು ಅಗಲಿದ್ದಾರೆ.

ಅಳಕೆಮಜಲು: ಯುವಕ ನೇಣು ಬಿಗಿದು ಆತ್ಮಹತ್ಯೆ Read More »

ಸಾಮಾಜಿಕ ಜಾಲತಾಣಗಳಲ್ಲಿ  ಒಂದು ಪಕ್ಷರ ಪರ ಪ್ರಚಾರ ಮಾಡುತ್ತಿರುವ ಗ್ರಂಥ ಪಾಲಕರನ್ನು ಕೆಲಸದಿಂದ ವಜಾ ಮಾಡುವಂತೆ ಮನವಿ

ಪುತ್ತೂರು: ಪುತ್ತೂರು ಸರಕಾರಿ ಪದವಿಪೂರ್ವ ಕಾಲೇಜಿನ ಗ್ರಂಥಪಾಲಕ ಪ್ರವೀಣ್ ವಗ್ಗ ಒಂದು ರಾಜಕೀಯ ಪಕ್ಷದ ಪರ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ಮಾಡುತ್ತಿದ್ದು ತಕ್ಷಣ ಅವರನ್ನು ಕೆಲಸದಿಂದ ವಜಾ ಮಾಡಬೇಕು ಎಂದು ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ಆಗ್ರಹಿಸಿದೆ. ಸರಕಾರಿ ಒದ್ಯೋಗಿಯಾಗಿದ್ದ ಈ ರೀತಿಯಾಗಿ ಒಂದು ಪಕ್ಷದ ಪರ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ಮಾಡುವುದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ತಪ್ಪು. ಯಾವುದೇ ಪಕ್ಷದ ಪರ ಇರುವಂತಿಲ್ಲ. ಬೇರೆ ಬೇರೆ ಧರ್ಮ ಜಾತಿಗಳ ವಿದ್ಯಾರ್ಥಿಗಳರುವ ಈ ಕಾಲೇಜನಲ್ಲಿ ಒಬ್ಬರು ಅಧ್ಯಾಪಕರು ಈ ರೀತಿ

ಸಾಮಾಜಿಕ ಜಾಲತಾಣಗಳಲ್ಲಿ  ಒಂದು ಪಕ್ಷರ ಪರ ಪ್ರಚಾರ ಮಾಡುತ್ತಿರುವ ಗ್ರಂಥ ಪಾಲಕರನ್ನು ಕೆಲಸದಿಂದ ವಜಾ ಮಾಡುವಂತೆ ಮನವಿ Read More »

ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆ ಎನ್ಐಎ ದಾಳಿ| ಪ್ರವೀಣ್ ನೆಟ್ಟಾರು ಹತ್ಯೆಯ ಬಳಿಕ ಮತ್ತೊಮ್ಮೆ ಚುರುಕು ಪಡೆದ ಎನ್.ಐ.ಎ. ದಾಳಿ

ಮಂಗಳೂರು: ಪ್ರವೀಣ್ ನೆಟ್ಟಾರು‌ ಪ್ರಕರಣದ ಬಳಿಕ ಉಗ್ರ ಕೃತ್ಯಗಳ ಜಾಡು‌ ಹಿಡಿದಿರುವ ಎನ್.ಐ.ಎ. ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಬೆಳ್ತಂಗಡಿ, ಉಪ್ಪಿನಂಗಡಿ, ವೇಣೂರು ಸೇರಿ 16 ಕಡೆ ಮಿಂಚಿನ ದಾಳಿ ನಡೆಸಿದೆ.  ಬಿಹಾರದಲ್ಲಿ ಪ್ರಧಾನಿ ಮೋದಿ ಮೇಲೆ ದಾಳಿಗೆ ಸಂಚು ಪ್ರಕರಣದಲ್ಲಿ ತನಿಖೆ ನಡೆಸಲಾಗುತ್ತಿದ್ದು, ಸಾಕಷ್ಟು ಮನೆ, ಕಚೇರಿ, ಒಂದು ಆಸ್ಪತ್ರೆ ಮೇಲೆ ರೇಡ್ ಮಾಡಲಾಗಿದೆ. ಸ್ಥಳೀಯ ಪೊಲೀಸ್ ಆಧಿಕಾರಿಗಳ ನೆರವು ಪಡೆದು ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದು, 16 ಕಡೆ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆ ಎನ್ಐಎ ದಾಳಿ| ಪ್ರವೀಣ್ ನೆಟ್ಟಾರು ಹತ್ಯೆಯ ಬಳಿಕ ಮತ್ತೊಮ್ಮೆ ಚುರುಕು ಪಡೆದ ಎನ್.ಐ.ಎ. ದಾಳಿ Read More »

ಕರ್ನಾಟಕಕ್ಕೆ ಸಾಗಿಸಲು ಕಾಸರಗೋಡಿನಲ್ಲಿ ಸ್ಫೋಟಕ ದಾಸ್ತಾನು | ಭಾರೀ ಪ್ರಮಾಣದ ಸ್ಫೋಟಕ ಅಬಕಾರಿ ಅಧಿಕಾರಿಗಳ ವಶ

ಕಾಸರಗೋಡು: ಕರ್ನಾಟಕಕ್ಕೆ ಸಾಗಿಸಲು ಕಾಸರಗೋಡಿನಲ್ಲಿ ದಾಸ್ತಾನು ಇಟ್ಟಿದ್ದ ಭಾರೀ ಪ್ರಮಾಣದ ಸ್ಫೋಟಕಗಳನ್ನು ಅಬಕಾರಿ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿದ್ದಾರೆ. ಆರೋಪಿ ಮಹಮ್ಮದ್ ಮುಸ್ತಫಾ ಆತ್ಮಹತ್ಯೆಗೆ ಪ್ರಯತ್ನಿಸಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ಮಂಗಳವಾರ ಮುಂಜಾನೆ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿ, 7 ಸಾವಿರ ಡಿಟೋನೇಟರ್‌ಗಳು, 2,800 ಜಿಲೆಟಿನ್ ಕಡ್ಡಿಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಅಧಿಕಾರಿಗಳು ದಿನನಿತ್ಯದಂತೆ ವಾಹನ ತಪಾಸಣೆ ನಡೆಸುತ್ತಿದ್ದ ಸಂದರ್ಭದಲ್ಲಿ ಮಹಮ್ಮದ್ ಮುಸ್ತಫಾ ಎಂಬವನ ವಾಹನದಲ್ಲಿ ಸ್ಫೋಟಕ ಸಾಮಗ್ರಿಗಳು ಪತ್ತೆಯಾಗಿವೆ. ನಂತರ ಅವನ ಮನೆಗೆ ತೆರಳಿದಾಗ ಅಲ್ಲಿ

ಕರ್ನಾಟಕಕ್ಕೆ ಸಾಗಿಸಲು ಕಾಸರಗೋಡಿನಲ್ಲಿ ಸ್ಫೋಟಕ ದಾಸ್ತಾನು | ಭಾರೀ ಪ್ರಮಾಣದ ಸ್ಫೋಟಕ ಅಬಕಾರಿ ಅಧಿಕಾರಿಗಳ ವಶ Read More »

ಬನ್ನೂರು: ಹಾಡಹಗಲೇ ಮನೆಯಿಂದ ಕಳ್ಳತನ

ಪುತ್ತೂರು: ಸೋಮವಾರ ಹಾಡಹಗಲೇ ಮನೆಯಿಂದ ಕಳ್ಳತನ ನಡೆಸಿರುವ ಘಟನೆ ಬನ್ನೂರಿನಲ್ಲಿ ನಡೆದಿದೆ. ಬನ್ನೂರು ಕುಂಟ್ಯಾನ ಸದಾಶಿವ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಮೌನಿಶ್‌ ಎಂಬವರ ಮನೆಯಲ್ಲಿ ಯಾರೂ ಇಲ್ಲದ ವೇಳೆ ಈ ಘಟನೆ ನಡೆದಿದೆ. ಸೋಮವಾರ ಮಧ್ಯಾಹ್ನ 12 ಗಂಟೆಗೆ ಮನೆಯವರು ಬಂದಾಗ ಮನೆ ಹಿಂಭಾಗ ಬೀಗ ಮುರಿದು ಕಳ್ಳರು ಒಳಹೊಕ್ಕು ಕಳ್ಳತನ ಮಾಡಿರುವುದು ಗಮನಕ್ಕೆ ಬಂದಿದೆ. ಮನೆಯ ವಸ್ತುಗಳೆಲ್ಲಾ ಚಿಲ್ಲಾಪಿಲ್ಲಿಯಾಗಿ ಬಿದ್ದಿದ್ದು ಪೊಲೀಸರಿಗೆ ದೂರು ನೀಡಲಾಗಿದೆ. ಬೆರಳಚ್ಚು ತಜ್ಞರು ಮತ್ತು ಶ್ವಾನದಳ ಘಟನಾ ಸ್ಥಳಕ್ಕೆ ಆಗಮಿಸಿದ್ದು

ಬನ್ನೂರು: ಹಾಡಹಗಲೇ ಮನೆಯಿಂದ ಕಳ್ಳತನ Read More »

error: Content is protected !!
Scroll to Top