ಅಪರಾಧ

ಕರ್ನಾಟಕಕ್ಕೆ ಸಾಗಿಸಲು ಕಾಸರಗೋಡಿನಲ್ಲಿ ಸ್ಫೋಟಕ ದಾಸ್ತಾನು | ಭಾರೀ ಪ್ರಮಾಣದ ಸ್ಫೋಟಕ ಅಬಕಾರಿ ಅಧಿಕಾರಿಗಳ ವಶ

ಕಾಸರಗೋಡು: ಕರ್ನಾಟಕಕ್ಕೆ ಸಾಗಿಸಲು ಕಾಸರಗೋಡಿನಲ್ಲಿ ದಾಸ್ತಾನು ಇಟ್ಟಿದ್ದ ಭಾರೀ ಪ್ರಮಾಣದ ಸ್ಫೋಟಕಗಳನ್ನು ಅಬಕಾರಿ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿದ್ದಾರೆ. ಆರೋಪಿ ಮಹಮ್ಮದ್ ಮುಸ್ತಫಾ ಆತ್ಮಹತ್ಯೆಗೆ ಪ್ರಯತ್ನಿಸಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ಮಂಗಳವಾರ ಮುಂಜಾನೆ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿ, 7 ಸಾವಿರ ಡಿಟೋನೇಟರ್‌ಗಳು, 2,800 ಜಿಲೆಟಿನ್ ಕಡ್ಡಿಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಅಧಿಕಾರಿಗಳು ದಿನನಿತ್ಯದಂತೆ ವಾಹನ ತಪಾಸಣೆ ನಡೆಸುತ್ತಿದ್ದ ಸಂದರ್ಭದಲ್ಲಿ ಮಹಮ್ಮದ್ ಮುಸ್ತಫಾ ಎಂಬವನ ವಾಹನದಲ್ಲಿ ಸ್ಫೋಟಕ ಸಾಮಗ್ರಿಗಳು ಪತ್ತೆಯಾಗಿವೆ. ನಂತರ ಅವನ ಮನೆಗೆ ತೆರಳಿದಾಗ ಅಲ್ಲಿ […]

ಕರ್ನಾಟಕಕ್ಕೆ ಸಾಗಿಸಲು ಕಾಸರಗೋಡಿನಲ್ಲಿ ಸ್ಫೋಟಕ ದಾಸ್ತಾನು | ಭಾರೀ ಪ್ರಮಾಣದ ಸ್ಫೋಟಕ ಅಬಕಾರಿ ಅಧಿಕಾರಿಗಳ ವಶ Read More »

ಬನ್ನೂರು: ಹಾಡಹಗಲೇ ಮನೆಯಿಂದ ಕಳ್ಳತನ

ಪುತ್ತೂರು: ಸೋಮವಾರ ಹಾಡಹಗಲೇ ಮನೆಯಿಂದ ಕಳ್ಳತನ ನಡೆಸಿರುವ ಘಟನೆ ಬನ್ನೂರಿನಲ್ಲಿ ನಡೆದಿದೆ. ಬನ್ನೂರು ಕುಂಟ್ಯಾನ ಸದಾಶಿವ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಮೌನಿಶ್‌ ಎಂಬವರ ಮನೆಯಲ್ಲಿ ಯಾರೂ ಇಲ್ಲದ ವೇಳೆ ಈ ಘಟನೆ ನಡೆದಿದೆ. ಸೋಮವಾರ ಮಧ್ಯಾಹ್ನ 12 ಗಂಟೆಗೆ ಮನೆಯವರು ಬಂದಾಗ ಮನೆ ಹಿಂಭಾಗ ಬೀಗ ಮುರಿದು ಕಳ್ಳರು ಒಳಹೊಕ್ಕು ಕಳ್ಳತನ ಮಾಡಿರುವುದು ಗಮನಕ್ಕೆ ಬಂದಿದೆ. ಮನೆಯ ವಸ್ತುಗಳೆಲ್ಲಾ ಚಿಲ್ಲಾಪಿಲ್ಲಿಯಾಗಿ ಬಿದ್ದಿದ್ದು ಪೊಲೀಸರಿಗೆ ದೂರು ನೀಡಲಾಗಿದೆ. ಬೆರಳಚ್ಚು ತಜ್ಞರು ಮತ್ತು ಶ್ವಾನದಳ ಘಟನಾ ಸ್ಥಳಕ್ಕೆ ಆಗಮಿಸಿದ್ದು

ಬನ್ನೂರು: ಹಾಡಹಗಲೇ ಮನೆಯಿಂದ ಕಳ್ಳತನ Read More »

ಆಲಂಕಾರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ನದಿಗೆ ಹಾರಿ ಆತ್ಮಹತ್ಯೆ

ಕಡಬ : ವ್ಯಕ್ತಿಯೊಬ್ಬರು ಕುದ್ಮಾರು ಗ್ರಾಮದ ಶಾಂತಿಮೊಗರು ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆಲಂಕಾರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ಚಂದ್ರಶೇಖರ ಎಂಬವರೇ ಆತ್ಮಹತ್ಯೆ ಮಾಡಿಕೊಂಡವರು. ಶಾಂತಿಮೊಗರು ಸೇತುವೆಯ ಮೇಲೆ ತನ್ನ ಕಾರು ನಿಲ್ಲಿಸಿ ಬಲೂನ್ ಕಟ್ಟಿ ನೀರಿಗೆ ಜಿಗಿದಿದ್ದಾರೆ ಎನ್ನಲಾಗಿದ್ದು, ಸ್ಥಳದಲ್ಲಿ ನೂರಾರು ಮಂದಿ ಸೇರಿದ್ದು, ಶವವನ್ನು ಮೇಲಕ್ಕೆತ್ತಲಾಗಿದೆ ಎಂದು  ತಿಳಿದು ಬಂದಿದೆ. ಆತ್ಮಹತ್ಯೆಗೆ ಕಾರಣಗಳು ತಿಳಿದು ಬಂದಿಲ್ಲ. ಹೆಚ್ಚಿನ ಮಾಹಿತಿ ತನಿಖೆಯಿಂದಷ್ಟೇ ತಿಳಿದು ಬರಬೇಕಿದೆ.

ಆಲಂಕಾರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ನದಿಗೆ ಹಾರಿ ಆತ್ಮಹತ್ಯೆ Read More »

ಹಲ್ಲೆ ನಡೆದದ್ದು ಕಟ್ಟಿಗೆಯಿಂದ, ತಲ್ವಾರಿನಿಂದಲ್ಲ: ಎಸ್ಪಿ‌ ಸ್ಪಷ್ಟನೆ

ಮಾಣಿ : ಬಜರಂಗದಳ, ಬಿಜೆಪಿ ಹಾಗೂ ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ಮಾಣಿಯಲ್ಲಿ ನಡೆದ ಜಗಳದಲ್ಲಿ ಕಟ್ಟಿಗೆಯಿಂದ ಹಲ್ಲೆ ನಡೆಸಲಾಗಿದೆಯೇ ಹೊರತು, ತಲವಾರಿನಿಂದಲ್ಲ ಎಂದು ಜಿಲ್ಲಾ‌ ಪೊಲೀಸ್ ವರಿಷ್ಠಾಧಿಕಾರಿ ಸ್ಪಷ್ಟನೆ ನೀಡಿದ್ದಾರೆ. ಘಟನೆಯಲ್ಲಿ ಪೆರಾಜೆ ಬಜರಂಗದಳ ಸಂಚಾಲಕ ಮಹೇಂದ್ರ ಹಾಗೂ ಬಿಜೆಪಿ ಕಾರ್ಯಕರ್ತ ಪ್ರಶಾಂತ್ ನಾಯ್ಕ್ ಗಾಯಗೊಂಡಿದ್ದು, ಇಬ್ಬರು ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚುನಾವಣಾ ಫಲಿತಾಂಶದ ದಿನ ಬಂಟ್ವಾಳ ಶಾಸಕರ ಗೆಲುವಿನ ಹರ್ಷ ಆಚರಣೆ ವೇಳೆ ಪಟಾಕಿ ಸಿಡಿಸಿ ಸಂಭ್ರಮ ಮಾಡುವ ವೇಳೆ ಇದೇ ತಂಡಗಳ

ಹಲ್ಲೆ ನಡೆದದ್ದು ಕಟ್ಟಿಗೆಯಿಂದ, ತಲ್ವಾರಿನಿಂದಲ್ಲ: ಎಸ್ಪಿ‌ ಸ್ಪಷ್ಟನೆ Read More »

ಪೊಲೀಸ್ ದೌರ್ಜನ್ಯಕ್ಕೊಳಗಾದ ಯುವಕರ ಭೇಟಿಯಾದ ಜಗದೀಶ್ ಕಾರಂತ್

ಪುತ್ತೂರು : ಬ್ಯಾನರ್ ಪ್ರಕರಣದಲ್ಲಿ ಪೊಲೀಸ್ ದೌರ್ಜನ್ಯಕ್ಕೊಳಗಾಗಿ ಆಸ್ಪತ್ರೆಗೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಯುವಕರನ್ನು ಬುಧವಾರ ಹಿಂದೂ ಜಾಗರಣ ವೇದಿಕೆ ಮುಖಂಡ ಜಗದೀಶ್ ಕಾರಂತ್ ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ಕಾರ್ಯಕರ್ತರ ಜೊತೆ ಮಾತನಾಡಿದ ಅವರು ಕಾರ್ಯಕರ್ತರಿಗೆ ಧೈರ್ಯ ತುಂಬಿದರು. ಈ ಸಂದರ್ಭ ಪ್ರಮುಖರು ಉಪಸ್ಥಿತರಿದ್ದರು.

ಪೊಲೀಸ್ ದೌರ್ಜನ್ಯಕ್ಕೊಳಗಾದ ಯುವಕರ ಭೇಟಿಯಾದ ಜಗದೀಶ್ ಕಾರಂತ್ Read More »

ಕಲ್ಲಾರೆಯಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆ

ಪುತ್ತೂರು: ಕಲ್ಲಾರೆ ಕಟ್ಟಡವೊಂದರ ಬಳಿ ವ್ಯಕ್ತಿಯೊಬ್ಬರ ಶವ ಬುಧವಾರ ಪತ್ತೆಯಾಗಿದೆ. ಉಪ್ಪಿನಂಗಡಿ ಮೂಲದ, ಗುಜರಿ ಹೆಕ್ಕುತ್ತಿದ್ದ ಮಂಜುನಾಥ ಮೃತಪಟ್ಟ ರೀತಿಯಲ್ಲಿ ಪತ್ತೆಯಾದವರು. ಮಂಜುನಾಥ್ ಅವರು ನಿತ್ಯ ಗುಜುರಿ ಹೆಕ್ಕಿ ಜೀವನ ಸಾಗಿಸುತ್ತಿದ್ದರು. ಕಲ್ಲಾರೆ ಕಟ್ಟಡವೊಂದರ ಬಳಿ ಅವರು ಮಲಗುತ್ತಿದ್ದರು. ಕಳೆದ ಮೂರು ತಿಂಗಳ ಹಿಂದೆ ಪಕ್ಷಪಾತಕ್ಕೀಡಾಗಿ ಮಂಗಳೂರಿನ ವೆನ್‍ಲಾಕ್ ಆಸ್ಪತ್ರೆಗೆ ದಾಖಲಾಗಿದ್ದು, ಚೇತರಿಕೆಗೊಂಡ ಬಳಿಕ ಮತ್ತೆ ಅದೇ ಕಾಯಕ ಮಾಡುತ್ತಿದ್ದರು. ಇದೀಗ ಅವರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಮಾಹಿತಿ ಕಲೆ ಹಾಕಿದ್ದಾರೆ.

ಕಲ್ಲಾರೆಯಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆ Read More »

ಹಿಂ.ಜಾ.ವೇ ಕಾರ್ಯಾಚರಣೆ : ಅಕ್ರಮ ಗೋ ಸಾಗಾಟದ ವಾಹನ ಪೊಲೀಸ್ ವಶ

ವಿಟ್ಲ : ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಕಾರ್ಯಾಚರಣೆ ನಡೆಸಿ ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ವಾಹನವನ್ನು ಪೊಲೀಸರಿಗೊಪ್ಪಿಸಿ ಎರಡು ಜಾನುವಾರುಗಳನ್ನು ರಕ್ಷಣೆ ಮಾಡಿದ ಘಟನೆ ವಿಟ್ಲ ಸಮೀಪದ ಸಾಲೆತ್ತೂರು ಎಂಬಲ್ಲಿ ನಡೆದಿದೆ. ಕಂಬಳ ಕೋಣ ಎಂದು ನೆಪವೊಡ್ಡಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದರು ಎನ್ನಲಾಗಿದೆ. ಈ ಬಗ್ಗೆ ತಿಳಿದ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಪಿಕಪ್ ವಾಹನವನ್ನು ತಡೆದು ಪೊಲೀಸರಿಗೊಪ್ಪಿಸಿದ್ದಾರೆ ಎಂದು ತಿಳಿದು ಬಂದಿದೆ.

ಹಿಂ.ಜಾ.ವೇ ಕಾರ್ಯಾಚರಣೆ : ಅಕ್ರಮ ಗೋ ಸಾಗಾಟದ ವಾಹನ ಪೊಲೀಸ್ ವಶ Read More »

ಪೊಲೀಸ್ ದೌರ್ಜನ್ಯ: ಯುವಕರಿಗೆ ಧೈರ್ಯ ತುಂಬಿದ ಕುಂಟಾರು ರವೀಶ ತಂತ್ರಿ

ಪುತ್ತೂರು: ಪೊಲೀಸ್ ದೌರ್ಜನ್ಯಕ್ಕೆ ಒಳಗಾದ ಹಿಂದೂ ಕಾರ್ಯಕರ್ತರನ್ನು ಭಾನುವಾರ ಕಾಸರಗೋಡು ಬಿಜೆಪಿ ಜಿಲ್ಲಾಧ್ಯಕ್ಷ ಕುಂಟಾರು ರವೀಶ ತಂತ್ರಿ ಭೇಟಿಯಾಗಿ ಧೈರ್ಯ ತುಂಬಿದರು. ಬ್ಯಾನರ್ ಪ್ರಕರಣದಲ್ಲಿ ಪೊಲೀಸರ ಬಂಧಿಯಾಗಿ ಹಲ್ಲೆಗೊಳಗಾದ ಯುವಕರನ್ನು ಪುತ್ತೂರಿನ ಮಹಾವೀರ ಆಸ್ಪತ್ರೆಯಲ್ಲಿ ಭೇಟಿಯಾದರು. ಪ್ರಮುಖರು ಉಪಸ್ಥಿತರಿದ್ದರು.

ಪೊಲೀಸ್ ದೌರ್ಜನ್ಯ: ಯುವಕರಿಗೆ ಧೈರ್ಯ ತುಂಬಿದ ಕುಂಟಾರು ರವೀಶ ತಂತ್ರಿ Read More »

ಕುಲ್ಕುಂದ ನಿವಾಸಿ ಕಡಬದಲ್ಲಿ ಮೃತ್ಯು

ಕಡಬ: ಕುಲ್ಕುಂದ ನಿವಾಸಿಯೊಬ್ಬರು ಕಡಬದಲ್ಲಿ ಮೃತಪಟ್ಟ ಘಟನೆ ನಡೆದಿದೆ. ಕಡಬ ತಾಲೂಕಿನ ಸುಬ್ರಹ್ಮಣ್ಯ ಗ್ರಾಮದ ಕುಲ್ಕುಂದ ಕಾಲೊನಿ ನಿವಾಸಿ ನರಸಿಂಹ (60) ಮೃತಪಟ್ಟವರಾಗಿದ್ದಾರೆ. ಮೃತರು ಸುಬ್ರಹ್ಮಣ್ಯ ಐನೆಕಿದು ಸೊಸೈಟಿಯಲ್ಲಿ ಗುಮಾಸ್ತರಾಗಿ ಕೆಲಸದಲ್ಲಿದ್ದವರು ಪ್ರಸ್ತುತ ಯಾವುದೇ ಕೆಲಸವಿಲ್ಲದೆ ಮನೆಯಲ್ಲಿದ್ದರು. 15 ವರ್ಷದ ಹಿಂದೆ ಇವರು ಪಾರ್ಶ್ವವಾಯು ಪೀಡಿತರಾಗಿದ್ದರು. ಅಲ್ಲದೇ ಮೂರ್ಛೆರೋಗದ ಬಗ್ಗೆ ಮಾತ್ರೆಯನ್ನು ಸೇವಿಸುತ್ತಿದ್ದರು. ಇದರ ಜೊತೆಗೆ ಕುಡಿತದ ಚಟವನ್ನು ಹೊಂದಿದ್ದರು. ಅವರು ಬುಧವಾರ  ಕಡಬ ಪೇಟೆಯ ಹಳೇ ಪ್ರವಾಸಿ ಮಂದಿರದ ಕಟ್ಟಡದ ಬಳಿ ಬಿದ್ದುಕೊಂಡಿರುವುದನ್ನು ಪಕ್ಕದ ಬಾರ್

ಕುಲ್ಕುಂದ ನಿವಾಸಿ ಕಡಬದಲ್ಲಿ ಮೃತ್ಯು Read More »

ಹಿಂದೂ ಮುಖಂಡ ಅಜಿತ್ ರೈ ಹೊಸಮನೆಯನ್ನು ಹೊರದಬ್ಬಿದ ಕಾರ್ಯಕರ್ತರು

ಪುತ್ತೂರು : ಹಿಂದೂ ಮುಖಂಡ ಅಜಿತ್‌ ರೈ ಹೊಸಮನೆಯನ್ನು ಕಾರ್ಯಕರ್ತರು ಹೊರದೂಡಿದ ಘಟನೆ ಪುತ್ತೂರು ಮಹಾವೀರ ಆಸ್ಪತ್ರೆಯಲ್ಲಿ ಮೇ 19 ರಂದು ನಡೆದಿದೆ. ಬಿಜೆಪಿ ನಾಯಕ ಬಸನಗೌಡ ಪಾಟೀಲ ಯತ್ನಾಳ್‌ ಪುತ್ತೂರಿಗೆ ಆಗಮಿಸಿ ಬ್ಯಾನರ್‌ ಪ್ರಕರಣದಲ್ಲಿ ಪೊಲೀಸ್‌ ದೌರ್ಜನ್ಯಕ್ಕೊಳಗಾಗಿ ಮಹಾವೀರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿಂದೂ ಕಾರ್ಯಕರ್ತರನ್ನು ಭೇಟಿ ಮಾಡಿ ಯೋಗಕ್ಷೇಮ ವಿಚಾರಿಸಿದರು. ಈ ಸಂದರ್ಭ ಅವರೊಂದಿಗೆ ಅರುಣ್ ಪುತ್ತಿಲ ಮತ್ತು ಅವರ ಬೆಂಬಲಿಗರು ಇದ್ದು, ಯತ್ನಾಳ್‌ ಗಾಯಾಳು ಕೊಠಡಿಗೆ ಹೋಗುವ ಸಂದರ್ಭ ಅವರ ಹಿಂದೆ ಅಜಿತ್‌

ಹಿಂದೂ ಮುಖಂಡ ಅಜಿತ್ ರೈ ಹೊಸಮನೆಯನ್ನು ಹೊರದಬ್ಬಿದ ಕಾರ್ಯಕರ್ತರು Read More »

error: Content is protected !!
Scroll to Top