ರೈಲ್ವೇ ನಿಲ್ದಾಣದಲ್ಲಿ ದ್ವಿಚಕ್ರ ವಾಹನಗಳಿಂದ ಪೆಟ್ರೋಲ್ ಕಳ್ಳತನ : ಸಾರ್ವಜನಿಕರಿಂದ ಆರೋಪಿಗಳನ್ನು ಹಿಡಿಯಲು ಕಾರ್ಯಾಚರಣೆ | ಆರೋಪಿಗಳು ಪರಾರಿ
ಪುತ್ತೂರು: ಪುತ್ತೂರು ರೈಲ್ವೇ ನಿಲ್ದಾಣದ ಬಳಿ ನಿಲ್ಲಿಸಲಾಗಿದ್ದ ಬೈಕ್ ನಿಂದ ಪೆಟ್ರೋಲ್ ಕಳ್ಳತನ ಮಾಡುತ್ತಿದ್ದವರನ್ನು ಸಾರ್ವಜನಿಕರು ಬೆಟ್ಟಿದ ಘಟನೆ ಮಂಗಳವಾರ ನಡೆದಿದೆ. ರೈಲ್ವೇ ನಿಲ್ದಾಣದಲ್ಲಿ ನಿಲ್ಲಿಸಲಾಗಿದ್ದ ದ್ವಿಚಕ್ರ ವಾಹನಗಳಿಂದ ಪೆಟ್ರೋಲ್ ಕದಿಯುತ್ತಿದ್ದ ಸಂದರ್ಭ ಸಾರ್ವಜನಿಕರು ಗಮನಿಸಿ ಆರೋಪಿಗಳನ್ನು ಹಿಡಿಯಲೆತ್ನಿಸಿದಾಗ ಆರೋಪಿಗಳು ಕೂದಲೆಳೆ ಅಂತರದಲ್ಲಿ ಪರಾರಿಯಾಗಿದ್ದಾರೆ. ಹಲವು ಸಮಯಗಳಿಂದ ರೈಲ್ವೇ ನಿಲ್ದಾಣದಲ್ಲಿ ನಿಲ್ಲಿಸಲಾಗಿದ್ದ ದ್ವಿಚಕ್ರ ವಾಹನಗಳಿಂದ ಪೆಟ್ರೋಲ್ ಕದಿಯುತ್ತಿದ್ದು, ಆರೋಪಿಗಳನ್ನು ರೆಡ್ ಹ್ಯಾಂಡ್ ಆಗಿ ಹಿಡಿಯಲು ಕಾದು ಕುಳಿತಿದ್ದರು. ಆದರೆ ಚಾಣಾಕ್ಷ ಕಳ್ಳರು ತಪ್ಪಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.