ಅಪರಾಧ

ಸುಹಾಸ್‌ ಶೆಟ್ಟಿ ಹತ್ಯೆಯ ಎನ್‌ಐಎ ತನಿಖೆ : ಹಿಂದೂ ನಾಯಕರ ಸ್ವಾಗತ

ರಾಜ್ಯ ಸರ್ಕಾರದ ತನಿಖೆಯಲ್ಲಿ ನ್ಯಾಯ ಸಿಗುವ ವಿಶ್ವಾಸ ಇರಲಿಲ್ಲ ಎಂದ ಕ್ಯಾ.ಬ್ರಿಜೇಶ್‌ ಚೌಟ ಮಂಗಳೂರು: ರಾಜ್ಯಾದ್ಯಂತ ಭಾರಿ ಸಂಚಲನ ಉಂಟು ಮಾಡಿದ್ದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನು ಕೇಂದ್ರ ಗೃಹ ಸಚಿವಾಲಯ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)ಗೆ ವಹಿಸಿರುವುದನ್ನು ಬಿಜೆಪಿ ಸಂಸದರು, ಶಾಸಕರು ಮತ್ತು ಮುಖಂಡರು ಸ್ವಾಗತಿಸಿ ಇದರಿಂದ ನೈಜ ಆರೋಪಿಗಳು ಸೆರೆಯಾಗಿ ನ್ಯಾಯ ಸಿಗಲು ಸಾಧ್ಯ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸುಹಾಸ್ ಶೆಟ್ಟಿ ಅವರನ್ನು ಬಜಪೆಯಲ್ಲಿ ನಡುರಸ್ತೆಯಲ್ಲೇ ದುಷ್ಕರ್ಮಿಗಳು ಹತ್ಯೆ ಮಾಡಿದ್ದು, ಮೇ […]

ಸುಹಾಸ್‌ ಶೆಟ್ಟಿ ಹತ್ಯೆಯ ಎನ್‌ಐಎ ತನಿಖೆ : ಹಿಂದೂ ನಾಯಕರ ಸ್ವಾಗತ Read More »

ಮೊಬೈಲ್‍ ಕಳ್ಳನ ಬಂಧನ

ಪುತ್ತೂರು: ಮೊಬೈಲ್ ಕದ್ದು ಪರಾರಿಯಾಗಲು ಯತ್ನಿಸಿದ ಕಳ್ಳನೊಬ್ಬನನ್ನು ಪೊಲೀಸರು ಹಿಡಿದು ಠಾಣೆಗೆ ಕರೆದೊಯ್ದಿದ್ದಾರೆ. ಪುತ್ತೂರು ಕೆಎಸ್ ಆರ್ ಟಿ ಸಿ ಬಸ್ ನಿಲ್ದಾಣದಲ್ಲಿ ಮೊಬೈಲ್ ಫೋನ್ ಗಳನ್ನು ಕದ್ದು ಪರಾರಿಯಾಗಲು ಯತ್ನಿಸಿದ ವೇಳೆ ಪೊಲೀಸರು ಆತನನ್ನು ಬೆನ್ನಟ್ಟಿ ಅರುಣಾ ಚಿತ್ರ ಮಂದಿರದ ಬಳಿ ಹಿಡಿದಿದ್ದಾರೆ. ಸದ್ಯ ಆತನನ್ನು ಪುತ್ತೂರು ಠಾಣೆಗೆ ಕರೆದೊಯ್ದಿದ್ದಾರೆ.

ಮೊಬೈಲ್‍ ಕಳ್ಳನ ಬಂಧನ Read More »

ಹಿಂದೂ ಕಾರ್ಯಕರ್ತ ಸುಹಾಸ್‍ ಶೆಟ್ಟಿ ಕೊಲೆ ಪ್ರಕರಣದ ತನಿಖೆ ರಾಷ್ಟ್ರೀಯ ತನಿಖಾ ದಳದ ಹೆಗಲಿಗೆ

ನವದೆಹಲಿ: ಹಿಂದೂ ಕಾರ್ಯಕರ್ತ ಸುಹಾಸ್‍ ಶೆಟ್ಟಿ ಕೊಲೆ ಪ್ರಕರಣದ ತನಿಖೆಯನ್ನು ಕೇಂದ್ರ ಗೃಹ ಸಚಿವಾಲಯ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಿದೆ. ಬಿಜೆಪಿ ಕಾರ್ಯಕರ್ತರು, ನಾಯಕರು ಈ ಪ್ರಕರಣದ ತನಿಖೆಯನ್ನು ಎನ್‌ ಐಎಗೆ ಒಪ್ಪಿಸಬೇಕೆಂದು ಪಟ್ಟು ಹಿಡಿದು ಪ್ರತಿಭಟಿಸಿದ್ದರು. ಈ ಪ್ರಕರಣದ ಸಂಬಂಧ ಈಗಾಗಲೇ ಪೊಲೀಸರು 11 ಮಂದಿಯನ್ನು ಬಂಧಿಸಿದ್ದರು. ಮೇ 1 ರಂದು ಫಾಜಿಲ್ ಹತ್ಯೆಯ ಆರೋಪಿ ಸುಹಾಸ್ ಶೆಟ್ಟಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಹತ್ಯೆಗೆ ದೇಶ, ವಿದೇಶಗಳಿಂದ ಫಂಡಿಂಗ್ ನಡೆದಿದೆ. ರಾಜ್ಯದ ಪೊಲೀಸ್

ಹಿಂದೂ ಕಾರ್ಯಕರ್ತ ಸುಹಾಸ್‍ ಶೆಟ್ಟಿ ಕೊಲೆ ಪ್ರಕರಣದ ತನಿಖೆ ರಾಷ್ಟ್ರೀಯ ತನಿಖಾ ದಳದ ಹೆಗಲಿಗೆ Read More »

ಅಣ್ಣನನ್ನೇ ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿದ ತಮ್ಮ | ಗಾಯಾಳು ಆಸ್ಪತ್ರೆಗೆ ದಾಖಲು

ಕಡಬ: ತಮ್ಮ ಅಣ್ಣನ ಮೇಲೆ ಪೆಟ್ರೋಲ್‍ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯಂತ್ನಿಸಿದ ಘಟನೆ ಭಾನುವಾರ ಸಂಜೆ ಕಡಬ ತಾಲೂಕಿನ ಕೋಡಿಂಬಾಳದ ಬಳಿ ನಡೆದಿದೆ. ಗಂಭೀರ ಸುಟ್ಟ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾದ ವ್ಯಕ್ತಿಯನ್ನು ಹನುಮಪ್ಪ (45) ಎಂದು ಗುರುತಿಸಲಾಗಿದೆ. ಗದಗ ಮೂಲದ ಅಣ್ಣ ತಮ್ಮಂದಿರು ಪುತ್ತೂರಿನಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಜೂ.8ರ ಮಧ್ಯಾಹ್ನದ ಮಂಗಳೂರು- ಬೆಂಗಳೂರು ರೈಲು ಮಾರ್ಗದಲ್ಲಿ ಸಂಚರಿಸುವ ಪ್ಯಾಸೆಂಜರ್ ರೈಲಿನಲ್ಲಿ ಬಂದು ಬಜಕರೆ ರೈಲು ನಿಲ್ದಾಣದಲ್ಲಿ ಇಬ್ಬರು ಇಳಿದಿದ್ದರು. ರೈಲು ಹೋದ ಬಳಿಕ ಹನುಮಪ್ಪ

ಅಣ್ಣನನ್ನೇ ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿದ ತಮ್ಮ | ಗಾಯಾಳು ಆಸ್ಪತ್ರೆಗೆ ದಾಖಲು Read More »

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ : ಅಪಾರ ಹಾನಿ

ಮೈತೆಯಿ ಸಂಘಟನೆಯ ನಾಯಕನ ಬಂಧನ ವಿರೋಧಿಸಿ ಪ್ರತಿಭಟನೆ ಇಂಫಾಲ: ಮಣಿಪುರದಲ್ಲಿ ಹಿಂಸಾಚಾರ ಮತ್ತೆ ಭುಗಿಲೆದ್ದಿದೆ. ರಾತ್ರೋರಾತ್ರಿ ಎಲ್ಲ ಜಿಲ್ಲೆಗಳಲ್ಲಿ ಇಂಟರ್ನೆಟ್​​ ಸ್ಥಗಿತಗೊಳಿಲಾಗಿದ್ದು, ಹಲವೆಡೆ ಕರ್ಫ್ಯೂ ಜಾರಿ ಮಾಡಲಾಗಿದೆ. ಭದ್ರತಾ ಪಡೆಗಳು ಮಣಿಪುರದ ಇಂಫಾಲ್ ಪಶ್ಚಿಮದ ಕ್ವಾಕೆಟಾಲ್ ಪ್ರದೇಶದಲ್ಲಿ ಮೈತೆಯಿ ಸಂಘಟನೆಯ ನಾಯಕ ಅರಾಂಬೈ ಟೆಂಗೋಲ್ ಅವರನ್ನು ಬಂಧಿಸಿದ್ದು, ಇದು ಅವರ ಬೆಂಬಲಿಗರನ್ನು ಕೆರಳಿಸಿದೆ. ಇದರ ಬೆನ್ನಲ್ಲೇ ಮಣಿಪುರದಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ಹಿಂಸಾಚಾರ ಹಿನ್ನೆಲೆಯಲ್ಲಿ ಪೊಲೀಸರು ಹಲವು ಜಿಲ್ಲೆಗಳಲ್ಲಿ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಿದ್ದಾರೆ. ಇಂಫಾಲ್

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ : ಅಪಾರ ಹಾನಿ Read More »

ಸಿದ್ದರಾಮಯ್ಯ, ಖಾದರ್‌ ವಿರುದ್ಧ ಅವಹೇಳನಕಾರಿ ಸಂದೇಶ : ಕೇಸ್‌ ದಾಖಲು

ಬಕ್ರೀದ್‌ ಹಬ್ಬದ ಹಿನ್ನೆಲೆಯಲ್ಲಿ ವಾಟ್ಸಾಪ್‌ ಗ್ರೂಪ್‌ಗಳಲ್ಲಿ ಸಂದೇಶ ಹಂಚಿಕೆ ಮಂಗಳೂರು: ಸೋಷಿಯಲ್‌ ಮೀಡಿಯಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸ್ಪೀಕರ್‌ ಯು.ಟಿ. ಖಾದರ್‌ ಮತ್ತು ಕಾಂಗ್ರೆಸ್‌ ಪಕ್ಷದ ವಿರುದ್ಧ ಅವಹೇಳನಕಾರಿ ಸಂದೇಶ ಪೋಸ್ಟ್‌ ಮಾಡಿದ ಕುರಿತು ಮಂಗಳೂರು ಪೊಲೀಸರು ಕೇಸ್‌ ದಾಖಲಿಸಿಕೊಂಡಿದ್ದಾರೆ. ‘ಪಿರ್ಸ ಎಪ್ಪೊಲುಂ ಇಕ್ಕಟ್ಟ್’ ಎಂಬ ವಾಟ್ಸ್‌ಆ್ಯಪ್ ಗ್ರೂಪ್‌ನಲ್ಲಿ ಸ್ಪೀಕರ್ ಯು.ಟಿ.ಖಾದರ್, ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಪಕ್ಷ ಮತ್ತು ಪೊಲೀಸರ ವಿರುದ್ಧ ಅವಹೇಳನಕಾರಿಯಾಗಿ ಸಂದೇಶಗಳನ್ನು ಹರಿಯಬಿಡಲಾಗಿತ್ತು. ಈ ಗ್ರೂಪ್‌ನಲ್ಲಿ ಅಶ್ರಫ್ ಕಿನಾರ ಕುದ್ರೋಳಿ ಎಂಬ ಹೆಸರಿನ ವ್ಯಕ್ತಿ

ಸಿದ್ದರಾಮಯ್ಯ, ಖಾದರ್‌ ವಿರುದ್ಧ ಅವಹೇಳನಕಾರಿ ಸಂದೇಶ : ಕೇಸ್‌ ದಾಖಲು Read More »

ಕಾಲ್ತುಳಿದಲ್ಲಿ ಮಡಿದವರ ಕುಟುಂಬಗಳ ಪರಿಹಾರ ಮೊತ್ತ 25 ಲಕ್ಷಕ್ಕೇರಿಕೆ

ಅಲ್ಪ ಪರಿಹಾರ ನೀಡಿದ್ದಕ್ಕೆ ಟೀಕೆ ವ್ಯಕ್ತವಾದ ಬಳಿಕ ಹೆಚ್ಚಳ ಮಾಡಿದ ಸರ್ಕಾರ ಬೆಂಗಳೂರು: ಆರ್‌ಸಿಬಿ ವಿಜಯೋತ್ಸವ ವೇಳೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮಡಿದವರ ಕುಟುಂಬಗಳಿಗೆ ಬರೀ 10 ಲ.ರೂ. ಪರಿಹಾರ ಘೋಷಿಸಿದ್ದಕ್ಕೆ ಭಾರಿ ಟೀಕೆಗೆ ಗುರಿಯಾಗಿದ್ದ ಸರ್ಕಾರ ಇದೀಗ ಪರಿಹಾರ ಮೊತ್ತವನ್ನು 25 ಲ.ರೂ.ಗೆ ಏರಿಕೆ ಮಾಡಿದೆ. ಕಾಲ್ತುಳಿತದಿಂದ ಸಾವನ್ನಪ್ಪಿದ 11 ಮಂದಿಯ ಕುಟುಂಬಗಳ ಪರಿಹಾರ ಮೊತ್ತವನ್ನು ತಲಾ 25 ಲಕ್ಷ ರೂ.ಗೆ ಹೆಚ್ಚಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ. ಈ ಮೊದಲು ಮೃತರ ಕುಟುಂಬಗಳಿಗೆ

ಕಾಲ್ತುಳಿದಲ್ಲಿ ಮಡಿದವರ ಕುಟುಂಬಗಳ ಪರಿಹಾರ ಮೊತ್ತ 25 ಲಕ್ಷಕ್ಕೇರಿಕೆ Read More »

ಮಹಿಳೆಯ ಮಾನಭಂಗಕ್ಕೆ ಯತ್ನ : ಆರೋಪಿ ಬಂಧನ

ಧರ್ಮಸ್ಥಳ: ಮಹಿಳೆಯೊಬ್ಬರು ನಡೆದುಕೊಂಡು ಹೋಗುತ್ತಿದ್ದ ವೇಳೆ ವ್ಯಕ್ತಿಯೊಬ್ಬ ಹಿಂಬಾಲಿಸಿಕೊಂಡು ಹೋಗಿ ಮಾನಭಂಗಕ್ಕೆ ಯತ್ನಿಸಿದ ಘಟನೆ ಕಲ್ಮಂಜ ನೀರಚಿಲುಮೆ ರಸ್ತೆಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದ ಹುಕ್ಕೋಟ್ಟು ರಸ್ತೆಯಲ್ಲಿ ಮಹಿಳೆಯೊಬ್ಬರು ಜೂ.6ರಂದು ಸಂಜೆ ತನ್ನ ಮನೆಗೆ ನಡೆದುಕೊಂಡು ಹೋಗುತ್ತಿದ್ದಾಗ ಯುವಕನೊಬ್ಬ ಬೈಕ್ ನಲ್ಲಿ ಹಿಂಬಾಲಿಸಿಕೊಂಡು ಬಂದು ಮಹಿಳೆಯ ಮಾನಭಂಗಕ್ಕೆ ಯತ್ನಿಸಿದ್ದ ಈ ಬಗ್ಗೆ ನೊಂದ ಮಹಿಳೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಧರ್ಮಸ್ಥಳ ಪೊಲೀಸರು BNS74,78(2) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು. ತನಿಖೆ ನಡೆಸಿ ಇಂದು ಬೆಳ್ತಂಗಡಿ

ಮಹಿಳೆಯ ಮಾನಭಂಗಕ್ಕೆ ಯತ್ನ : ಆರೋಪಿ ಬಂಧನ Read More »

ಕಣಚೂರು ಆಸ್ಪತ್ರೆಗೆ ಹುಸಿ ಬಾಂಬ್‍ ಕರೆ | ಆರೋಪಿ ವಿದ್ಯಾರ್ಥಿನಿ ಬಂಧನ

ಮಂಗಳೂರು: ನಗರದ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ಉಳ್ಳಾಲ ಪೊಲೀಸ್ ಠಾಣಾ ಸರಹದ್ದಿನ ದೇರಳಕಟ್ಟೆ ನಾಟೆಕಲ್ ರೋಡ್‌ ಕಣಚೂರು ಆಸ್ಪತ್ರೆಗೆ ಅನಾಮಧೇಯ ವ್ಯಕ್ತಿಯು ಕರೆ ಮಾಡಿ, ಆಸ್ಪತ್ರೆಗೆ ಬಾಂಬ್ ಇರಿಸಲಾಗಿದೆ, 11-00 ಗಂಟೆಯೊಳಗಾಗಿ ಆಸ್ಪತ್ರೆಯನ್ನು ಖಾಲಿ ಮಾಡಬೇಕೆಂದು 5 ಬಾರಿ ಕರೆ ಮಾಡಿ ಬೆದರಿಕೆ ಹಾಕಿದ ಘಟನೆಗೆ ಸಂಬಂಧಿಸಿದಂತೆ ಆರೋಪಿ ವಿದ್ಯಾರ್ಥಿನಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಬೆದರಿಕೆಯ ಕರೆ ಬಂದ ಹಿನ್ನಲೆಯಲ್ಲಿ ಪೊಲೀಸರು, ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ತಂಡ, ಬಾಂಬ್ ನಿಷ್ಕ್ರಿಯ ತಂಡ ಹಾಗೂ

ಕಣಚೂರು ಆಸ್ಪತ್ರೆಗೆ ಹುಸಿ ಬಾಂಬ್‍ ಕರೆ | ಆರೋಪಿ ವಿದ್ಯಾರ್ಥಿನಿ ಬಂಧನ Read More »

ಲಾಡ್ಜ್ ನಲ್ಲಿ ವೈಶ್ಯಾವಾಟಿಕೆ : ಆರೋಪಿ ಬಂಧನ

ಉಡುಪಿ: ಲಾಡ್ಜ್ ಒಂದರಲ್ಲಿ  ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ದಾಳಿಯ ವೇಳೆ ಓರ್ವ ಮಹಿಳೆಯನ್ನು ರಕ್ಷಿಸಲಾಗಿದೆ. ಬಡಗಬೆಟ್ಟುವಿನ ದಶರಥನಗರದ ಲಾಡ್ಜ್ ವೊಂದರಲ್ಲಿ ಮಹಿಳೆಯನ್ನು ಬಲವಂತವಾಗಿ ಇರಿಸಿ ವೇಶ್ಯಾವಾಟಿಕೆ ನಡೆಸುತ್ತಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಗೊತ್ತಾಗಿದ್ದು, ಕೂಡಲೇ ದಾಳಿ ನಡೆಸಲಾಗಿದೆ. ದಾಳಿಯ ವೇಳೆ ಮಹಿಳೆಯನ್ನು ರಕ್ಷಿಸಿದ ಪೊಲೀಸರು ಆರೋಪಿಯನ್ನು ಬಂಧಿಸಿ ಕ್ರಮ ಕೈಗೊಂಡಿದ್ದಾರೆ. ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಲಾಡ್ಜ್ ನಲ್ಲಿ ವೈಶ್ಯಾವಾಟಿಕೆ : ಆರೋಪಿ ಬಂಧನ Read More »

error: Content is protected !!
Scroll to Top