ಅಪರಾಧ

ಸೈಫ್‌ ಅಲಿ ಖಾನ್‌ಗೆ ಸರ್ಜರಿ : ಪ್ರಾಣಾಪಾಯದಿಂದ ಪಾರು

ಆರು ಕಡೆ ಇರಿದು ಗಾಯಗೊಳಿಸಿದ್ದ ದರೋಡೆಕೋರರು ಮುಂಬಯಿ : ಇಂದು ನಸುಕಿನ ಹೊತ್ತು ದರೋಡೆಕೋರರಿಂದ ಇರಿತಕ್ಕೊಳಗಾಗಿದ್ದ ಬಾಲಿವುಡ್‌ ನಟ ಸೈಫ್‌ ಅಲಿ ಖಾನ್‌ ಅವರಿಗೆ ನಗರದ ಲೀಲಾವತಿ ಆಸ್ಪತ್ರೆಯಲ್ಲಿ ಸರ್ಜರಿ ಮಾಡಲಾಗಿದೆ. ಈ ವೇಳೆ ಸೈಫ್‌ ಮೈಮೇಲಾದ ಗಾಯದಲ್ಲಿ ಚಾಕುವಿನ ತುಂಡೊಂದು ಸಿಕ್ಕಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸವೆ.ಸೈಫ್‌ಗೆ ಆರು ಕಡೆ ಇರಿಯಲಾಗಿತ್ತು. ಕೂಡಲೇ ಆಸ್ಪತ್ರೆಗೆ ಕರೆತಂದ ಕಾರಣ ಅಪಾಯದಿಂದ ಪಾರಾಗಿದ್ದಾರೆ. ಸುಮಾರು ಮೂರು ತಾಸು ಶಸ್ತ್ರಚಿಕಿತ್ಸೆ ಮಾಡಿದ ಬಳಿಕ ಅವರನ್ನು ಐಸಿಯುಗೆ ಸ್ಥಳಾಂತರಿಸಲಾಗಿದೆ. ಸದ್ಯ ಅವರ […]

ಸೈಫ್‌ ಅಲಿ ಖಾನ್‌ಗೆ ಸರ್ಜರಿ : ಪ್ರಾಣಾಪಾಯದಿಂದ ಪಾರು Read More »

6.80 ಕೋ.ರೂ. ಮೌಲ್ಯದ ಡ್ರಗ್ಸ್‌ ನಾಶ ಮಾಡಿದ ಮಂಗಳೂರು ಪೊಲೀಸರು

ಮಂಗಳೂರು: ಮಂಗಳೂರು ಪೊಲೀಸರು ಕಳೆದ ವರ್ಷ ನಗರ ವ್ಯಾಪ್ತಿಯಲ್ಲಿ ವಶಪಡಿಸಿಕೊಂಡ ಸುಮಾರು 6.80 ಕೋಟಿ ರೂ. ಮೌಲ್ಯದ ಮಾದಕ ವಸ್ತುಗಳನ್ನು ನಾಶ ಮಾಡಿದ್ದಾರೆ. ಮೂಲ್ಕಿ ಸಮೀಪದ ಕೈಗಾರಿಕಾ ಪ್ರದೇಶದಲ್ಲಿ ಮಾದಕ ವಸ್ತುಗಳನ್ನು ನಿನ್ನೆ ನಾಶ ಮಾಡಲಾಗಿದೆ. ನ್ಯಾಯಾಲಯದ ಅನುಮತಿಯೊಂದಿಗೆ 2024 ಮತ್ತು 2023ರಲ್ಲಿ ವಶಪಡಿಸಿಕೊಂಡ ಮಾದಕ ವಸ್ತುಗಳನ್ನು ವಿಲೇವಾರಿ ಮಾಡಲಾಗಿದೆ. ಇದು ಪ್ರತಿ ವರ್ಷದ ಪ್ರಕ್ರಿಯೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರವಾಲ್ ತಿಳಿಸಿದ್ದಾರೆ. 37 ಪ್ರಕರಣಗಳಲ್ಲಿ ವಶಪಡಿಸಿಕೊಂಡ ಮಾದಕ ವಸ್ತುಗಳನ್ನು ವಿಲೇವಾರಿ ಮಾಡಲಾಗಿದೆ. ಸುಮಾರು

6.80 ಕೋ.ರೂ. ಮೌಲ್ಯದ ಡ್ರಗ್ಸ್‌ ನಾಶ ಮಾಡಿದ ಮಂಗಳೂರು ಪೊಲೀಸರು Read More »

ನಟ ಸೈಫ್‌ ಅಲಿ ಖಾನ್‌ ಮೇಲೆ ಮಾರಕಾಸ್ತ್ರದಿಂದ ದಾಳಿ

ದರೋಡೆ ಮಾಡಲು ಮನೆಗೆ ನುಗ್ಗಿದವರಿಂದ ಚಾಕು ಇರಿತ ಮುಂಬಯಿ : ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ನಿನ್ನೆ ರಾತ್ರಿ ಮಾರಕಾಸ್ತ್ರದಿಂದ ದಾಳಿ ಮಾಡಲಾಗಿದೆ. ಮನೆಗೆ ನುಗ್ಗಿದ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಗಾಯಗೊಳಿಸಿದ್ದು, ನಟನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ತಡರಾತ್ರಿ 2.30ರ ವೇಳೆಗೆ ಈ ಘಟನೆ ನಡೆದಿದೆ. ದರೋಡೆಕೋರರು ಅವರ ಮನೆಗೆ ಕನ್ನ ಹಾಕಲು ಪ್ರಯತ್ನಿಸಿದ್ದಾರೆ. ಈ ವೇಳೆ ಸೈಫ್ ಅಲಿ ಖಾನ್ ಅವರು ತಡೆಯಲು ಪ್ರಯತ್ನಿಸಿದ್ದಾರೆ. ಆಗ ಅವರಿಗೆ ಗಾಯ ಆಗಿದೆ. ಅವರನ್ನು ಆಸ್ಪತ್ರೆಗೆ ದಾಖಲು

ನಟ ಸೈಫ್‌ ಅಲಿ ಖಾನ್‌ ಮೇಲೆ ಮಾರಕಾಸ್ತ್ರದಿಂದ ದಾಳಿ Read More »

ಡೀಸೆಲ್‍ ಕಳವು ಪ್ರಕರಣ| ನಾಲ್ವರ ಬಂಧನ

ಮಂಗಳೂರು : ಮಂಗಳೂರು ತಾಲೂಕಿನ ಬಾಳ ಗ್ರಾಮದ ಟ್ಯಾಂಕರ್ ಯಾರ್ಡಿನಲ್ಲಿರುವ ಟ್ಯಾಂಕರುಗಳಿಂದ ಮಾಲಕರಿಗೆ ತಿಳಿಯದೇ ಡೀಸೆಲ್‌ನ್ನು ಕಳವು ಮಾಡಿ ದಾಸ್ತಾನು ಮಾಡಿರುವ ಘಟನೆ ನಡೆದಿದೆ. ಈ ಪ್ರಕರಣಕ್ಕೆ ಸಂಬಂದಿಸಿ ಪತ್ತೆ ಹಚ್ಚಿರುವ ಮಂಗಳೂರು ನಗರ ಪೊಲೀಸರು ಈ ಸಂಬಂಧ ನಾಲ್ವರನ್ನು ಬಂಧಿಸಿದ್ದಾರೆ. ಬಂಧಿತರನ್ನು ಕುಳಾಯಿಗುಡ್ಡೆಯ ಸಂತೋಷ್ (42), ಕಾಟಿಪಳ್ಳದ ಐರನ್ ರಿತೇಶ್ ಮಿನೇಜ್ (36), ಟ್ಯಾಂಕರ್ ಚಾಲಕ ಕಡಿರುದ್ಯಾವರ, ನಾರಾಯಣ ( 23 ) ಮತ್ತು ಹೆಜಮಾಡಿಯ ರವಿ ಜನಾಂದ್ರ ಪುತ್ರನ್ (59)ಎಂದು ತಿಳಿದು ಬಂದಿದೆ. ಬಂಧಿತ

ಡೀಸೆಲ್‍ ಕಳವು ಪ್ರಕರಣ| ನಾಲ್ವರ ಬಂಧನ Read More »

ಪುತ್ತೂರಿನ ಬ್ಯಾನರ್ ಪ್ರಕರಣ | ಪೊಲೀಸ್ ದೌರ್ಜನ್ಯ ತನಿಖೆಗೆ  ‘ಬಿ’ ರಿಪೋರ್ಟ್ ತಿರಸ್ಕರಿಸಿದ ನ್ಯಾಯಾಲಯ

ಪುತ್ತೂರು: ಬ್ಯಾನರ್ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸಿದ ಉಡುಪಿಯ ತನಿಖಾಧಿಕಾರಿ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಸಲ್ಲಿಸಿದ ” ಬಿ ” ರಿಪೋರ್ಟ್ ನ್ನು ಪುತ್ತೂರು 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತಿರಸ್ಕರಿಸಿದೆ. ವರ್ಷದ ಹಿಂದೆ ಪುತ್ತೂರಿನ ನಗರದಲ್ಲಿ ಬ್ಯಾನರ್ ಅಳವಡಿಸಿ ಚಪ್ಪಲಿ ಹಾರ ಹಾಕಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧಿತ ಯುವಕರ ಮೇಲೆ ನಡೆದಿದ್ದ ಪೊಲೀಸ್ ದೌರ್ಜನ್ಯದ ಹಿನ್ನೆಲೆಯಲ್ಲಿ ಡಿವೈಎಸ್ಪಿ ಡಾ.ವೀರಯ್ಯ ಹಿರೇಮಠ, ಪುತ್ತೂರು ಗ್ರಾಮಾಂತರ ಠಾಣೆಯ ಆಗಿನ ಎಸ್‌ಐ ಶ್ರೀನಾಥ್

ಪುತ್ತೂರಿನ ಬ್ಯಾನರ್ ಪ್ರಕರಣ | ಪೊಲೀಸ್ ದೌರ್ಜನ್ಯ ತನಿಖೆಗೆ  ‘ಬಿ’ ರಿಪೋರ್ಟ್ ತಿರಸ್ಕರಿಸಿದ ನ್ಯಾಯಾಲಯ Read More »

ಖಲಿಸ್ಥಾನಿ ಉಗ್ರರ ಹಿಟ್‌ಲಿಸ್ಟ್‌ನಲ್ಲಿ ಅರವಿಂದ ಕೇಜ್ರಿವಾಲ್‌

ಹತ್ಯೆಗೆ ಸಂಚು ರೂಪಿಸಿರುವ ಕುರಿತು ಗುಪ್ತಚರ ಪಡೆ ಮಾಹಿತಿ ಹೊಸದಿಲ್ಲಿ : ಆಮ್ ಆದ್ಮಿ ಪಕ್ಷದ ಸಂಚಾಲಕ ಹಾಗೂ ದಿಲ್ಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮೇಲೆ ದಾಳಿ ನಡೆಸಲು ಖಲಿಸ್ಥಾನಿ ಉಗ್ರರು ಸಂಚು ರೂಪಿಸಿದ್ದಾರೆ ಎಂದು ಗುಪ್ತಚರ ಸಂಸ್ಥೆಗಳು ಮಾಹಿತಿ ನೀಡಿವೆ. ದಿಲ್ಲಿ ಚುನಾವಣೆ ವೇಳೆ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಹಲವು ನಾಯಕರ ಮೇಲೆ ದಾಳಿ ನಡೆಯುವ ಸಾಧ್ಯತೆ ಇದೆ ಎಂದು ಗುಪ್ತಚರ ಪಡೆ ಎಚ್ಚರಿಕೆ ನೀಡಿದೆ.ಖಲಿಸ್ಥಾನಿ ಭಯೋತ್ಪಾದಕರು ದಿಲ್ಲಿ ಚುನಾವಣೆ ಹಾಳುಗೆಡವಲು ನಾಯಕರ ಮೇಲೆ

ಖಲಿಸ್ಥಾನಿ ಉಗ್ರರ ಹಿಟ್‌ಲಿಸ್ಟ್‌ನಲ್ಲಿ ಅರವಿಂದ ಕೇಜ್ರಿವಾಲ್‌ Read More »

ತಿರುಪತಿ : ದೇವರ ಅರ್ಧ ಕೆಜಿಗೂ ಅಧಿಕ ಚಿನ್ನ ಕಳ್ಳತನ

ಚಿನ್ನದ ಕಾಣಿಕೆಗಳನ್ನು ವಿಂಗಡಿಸುವಾಗ ಎಗರಿಸುತ್ತಿದ್ದ ನೌಕರ ಸೆರೆ ತಿರುಪತಿ: ಭಕ್ತರು ತಿರುಪತಿಯ ತಿಮ್ಮಪ್ಪನಿಗೆ ಭಕ್ತಿಯಿಂದ ಸಮರ್ಪಿಸಿದ್ದ ಅರ್ಧ ಕೆಜಿಗೂ ಅಧಿಕ ಬಂಗಾರದ ಒಡವೆಗಳು ಕಳವು ಮಾಡಿರುವ ಕೃತ್ಯ ಬೆಳಕಿಗೆ ಬಂದಿದೆ. ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ)ಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ನೌಕರನೊಬ್ಬನನ್ನು ಕಳ್ಳತನಕ್ಕೆ ಸಂಬಂಧಿಸಿ ಪೊಲೀಸರು ಬಂಧಿಸಿದ್ದಾರೆ.ವಿ. ಪೆಂಚಲಯ್ಯ ಬಂಧಿತ ಆರೋಪಿ. ಈತ ಕಳೆದ ಒಂದು ವರ್ಷದಲ್ಲಿ 10 ರಿಂದ 15 ಸಲ ಚಿನ್ನದ ಬಿಸ್ಕೆಟ್‌ ಮತ್ತು ಇತರ ಆಭರಣಗಳು ಸೇರಿ ಸುಮಾರು 46 ಲಕ್ಷ

ತಿರುಪತಿ : ದೇವರ ಅರ್ಧ ಕೆಜಿಗೂ ಅಧಿಕ ಚಿನ್ನ ಕಳ್ಳತನ Read More »

ಮಲ್ಪೆಯ ಮೀನುಗಾರಿಕೆ ದೋಣಿ ಕಾರವಾರದಲ್ಲಿ ಮುಳುಗಡೆ

ಉಡುಪಿ: ಮೀನುಗಾರಿಕೆಗೆ ತೆರಳಿದ್ದ ಮಲ್ಪೆಯ ದೋಣಿ ಕಾರವಾರ ಸಮೀಪ ಮುಳುಗಿ ಅಪಾರ ನಷ್ಟ ಉಂಟಾಗಿದೆ. ಮಲ್ಪೆಯ ಸೀ ಹಂಟರ್ ಹೆಸರಿನ ದೋಣಿಯ ತಳಭಾಗದ ಕಬ್ಬಿಣದ ವೆಲ್ಡಿಂಗ್ ಬಿಟ್ಟುಹೋದ ಪರಿಣಾಮ ನೀರು ತುಂಬಿಕೊಂಡು ಮುಳುಗಿದೆ. ಬೋಟ್‌ನಲ್ಲಿದ್ದ 8 ಮೀನುಗಾರರನ್ನು ಸ್ಥಳೀಯ ಮೀನುಗಾರರು ರಕ್ಷಣೆ ಮಾಡಿದ್ದಾರೆ. ಮಲ್ಪೆಯಿಂದ ಮಹಾರಾಷ್ಟ್ರದ ಕಡೆ ಈ ಬೋಟ್ ಚಲಿಸುತಿತ್ತು. ಕಾರವಾರದಿಂದ 9 ನಾಟಿಕನ್ ಮೈಲು ದೂರದ ಲೈಟ್‌ಹೌಸ್ ಬಳಿ ಬೋಟ್ ತಳಭಾಗದ ಕಬ್ಬಿಣದ ಭಾಗದಲ್ಲಿ ವೆಲ್ಡಿಂಗ್ ಬಿಟ್ಟುಹೋಗಿದೆ. ವೆಲ್ಡಿಂಗ್ ಬಿಟ್ಟುಹೋದ ಪರಿಣಾಮ ಬೋಟ್ ಇಂಜಿನ್

ಮಲ್ಪೆಯ ಮೀನುಗಾರಿಕೆ ದೋಣಿ ಕಾರವಾರದಲ್ಲಿ ಮುಳುಗಡೆ Read More »

ದುಷ್ಕರ್ಮಿಗಳಿಂದ ಕೆಎಸ್‍ ಆರ್ ಟಿಸಿ ಬಸ್ ಚಾಲಕ-ನಿರ್ವಾಹಕರಿಗೆ ಹಲ್ಲೆ | ದುಷ್ಕರ್ಮಿಗಳನ್ನು ಬಂಧಿಸುವಂತೆ ಪ್ರಯಾಣಿಕರಿಂದ ಒತ್ತಾಯ

ಕಬಕ: ಕೆಎಸ್‌ಆರ್‌ಟಿಸಿ ಸಿಬ್ಬಂದಿಗಳ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿದ ಘಟನೆ ಕಬಕದಲ್ಲಿ ಇಂದು ನಡೆದಿದೆ. ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿ ಈ ಹಲ್ಲೆ ನಡೆದಿದ್ದು, ಉರಿಮಜಲು ಬಳಿ ಕಬಕ-ವಿಟ್ಲ ರಸ್ತೆಯಲ್ಲಿನ ಹಾರ್ಡ್ ವೇ‌ರ್ ಅಂಗಡಿಯೊಂದಕ್ಕೆ ಸೇರಿದ ಪಿಕಪ್ ವಾಹನದಲ್ಲಿ ಕಬಕದಿಂದ ಹಿಂಬಾಲಿಸಿಕೊಂಡು ಬಂದು ಉರಿಮಜಲು ಎಂಬಲ್ಲಿ ಕೆಎಸ್‌ಆರ್‌ಟಿಸಿ ಚಾಲಕ-ನಿರ್ವಾಹಕನ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿ ಪ್ರಯಾಣಿಕರ ಮುಂದೆಯೇ ಬಸ್ ಸಿಬ್ಬಂದಿಗಳ ಮೇಲೆ ಹಲ್ಲೆ ಮಾಡಿ ಜೀವಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಕೆಎಸ್‌ಆರ್‌ಟಿಸಿ ಬಸ್‌ ಸೈಡ್ ಕೊಡಲಿಲ್ಲ

ದುಷ್ಕರ್ಮಿಗಳಿಂದ ಕೆಎಸ್‍ ಆರ್ ಟಿಸಿ ಬಸ್ ಚಾಲಕ-ನಿರ್ವಾಹಕರಿಗೆ ಹಲ್ಲೆ | ದುಷ್ಕರ್ಮಿಗಳನ್ನು ಬಂಧಿಸುವಂತೆ ಪ್ರಯಾಣಿಕರಿಂದ ಒತ್ತಾಯ Read More »

ಅಕ್ರಮ ದನ ಸಾಗಾಟ ಲಾರಿಯನ್ನು ತಡೆ ಹಿಡಿದ ಪೊಲೀಸರು | ವಾಹನ ವಶಕ್ಕೆ

ಕಡಬ: ಅಕ್ರಮ ದನ ಸಾಗಾಟದ ಲಾರಿಯನ್ನು ಕಡಬ ಠಾಣಾ ಪೊಲೀಸರು ತಡೆಹಿಡಿದ ಘಟನೆ ಕಡಬ ಠಾಣಾ ವ್ಯಾಪ್ತಿಯ ಕೊಯಿಲ ಬಳಿ ನಡೆದಿದೆ. ಲಾರಿ ತಡೆಹಿಡಿದ ಸಂದರ್ಭ ಲಾರಿ ಚಾಲಕ ಪರಾರಿಯಾಗಿರುವುದಾಗಿ ತಿಳಿದು ಬಂದಿದೆ. ಇಂದು ಮುಂಜಾನೆ ಘಟನೆ ನಡೆದಿದ್ದು, ಸ್ಥಳದಲ್ಲಿ ಹಿಂದೂಪರ ಸಂಘಟನೆಯ ಕಾರ್ಯಕರ್ತರು ಜಮಾಯಿಸಿದ್ದಾರೆ. ಪಿಕಪ್ ವಾಹನದಲ್ಲಿ ಸುಮಾರು ಎಂಟು ಜಾನುವಾರುಗಳಿದ್ದು, ಒಂದು ದನ ಮೃತಪಟ್ಟಿರುವುದಾಗಿ ಮಾಹಿತಿ ಲಭಿಸಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದಲ್ಲದೆ ಅಕ್ರಮ ಜಾನುವಾರು ಸಾಗಾಟಕ್ಕೆ ಬಳಸಿದ ವಾಹನವನ್ನು ವಶಕ್ಕೆ

ಅಕ್ರಮ ದನ ಸಾಗಾಟ ಲಾರಿಯನ್ನು ತಡೆ ಹಿಡಿದ ಪೊಲೀಸರು | ವಾಹನ ವಶಕ್ಕೆ Read More »

error: Content is protected !!
Scroll to Top