ಅಪರಾಧ

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ : ಇನ್ನೋರ್ವ ಆರೋಪಿ ಬಂಧನ

ಕೊಲೆಗೆ ಸಂಚು ರೂಪಿಸಿ, ಆರೋಪಿಗಳಿಗೆ ತಪ್ಪಿಸಿಕೊಳ್ಳಲು ಸಹಾಯ ಮಾಡಿದ ಆರೋಪ ಮಂಗಳೂರು : ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ನಗರ ಸಿಸಿಬಿ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಮೇ 1ರಂದು ಬಜ್ಪೆಯಲ್ಲಿ ಸುಹಾಸ್ ಶೆಟ್ಟಿ ಕೊಲೆ ಮಾಡಲಾಗಿತ್ತು. ಬಂಧಿತ ವ್ಯಕ್ತಿಯ ಮೇಲೆ ಪ್ರಮುಖ ಆರೋಪಿಗಳೊಂದಿಗೆ ಸೇರಿ ಕೊಲೆಗೆ ಸಂಚು ರೂಪಿಸಿದ ಮತ್ತು ಪೊಲೀಸರಿಂದ ತಪ್ಪಿಸಿಕೊಳ್ಳಲು ಸಹಾಯ ಮಾಡಿದ ಆರೋಪವಿದೆ. ಬಂಧಿತನನ್ನು ಮಂಗಳೂರು ಬಜ್ಪೆ ಶಾಂತಿಗುಡ್ಡೆಯ ಬದ್ರಿಯಾ ಜುಮಾ ಮಸೀದಿ ಬಳಿಯ […]

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ : ಇನ್ನೋರ್ವ ಆರೋಪಿ ಬಂಧನ Read More »

ಘನ ವಾಹನಗಳಿಗೆ ತಡೆ : ಹಲವರ ವಿರುದ್ಧ ಪ್ರಕರಣ ದಾಖಲು

ವಿಟ್ಲ: ವಿಟ್ಲ: ಘನ ವಾಹನಗಳಿಗೆ ತಡೆಯೊಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಟ್ಲ ಪೊಲೀಸರು ಹಲವರ ಮೇಲೆ ಪ್ರಕರಣ  ದಾಖಲಿಸಿದ್ದಾರೆ. ಅಪಘಾತದ ಹಿನ್ನಲೆಯಲ್ಲಿ ರಿಯಾಝ್‌, ಸಮದ್‌,  ಕುಂಞಿಮೋನು, ರಹಿಮಾನ್‌, ಸುಲೈಮಾನ್‌ ಮತ್ತು ಇತರ 25 ರಿಂದ 30 ಜನರು ರಸ್ತೆಯಲ್ಲಿ ಘನ ವಾಹನಗಳು ಸಂಚರಿಸದಂತೆ ತಡೆಯೊಡ್ಡಿದ್ದರು. ಜೂ. 2ರಂದು ರಾತ್ರಿ ವಿಟ್ಲ ಸಮೀಪದ ಮಂಗಳಪದವು ಎಂಬಲ್ಲಿ ಕೆಲವರು ವಿಟ್ಲ-ಕಲ್ಲಡ್ಕ ರಸ್ತೆಯಲ್ಲಿ ಹೋಗುವ ಲಾರಿಗಳನ್ನು ತಡೆದು ನಿಲ್ಲಿಸಿದ ಮಾಹಿತಿ ಬಂದ ಮೇರೆಗೆ, ವಿಟ್ಲ ಠಾಣಾ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲಿಸಿದರು. ಈ

ಘನ ವಾಹನಗಳಿಗೆ ತಡೆ : ಹಲವರ ವಿರುದ್ಧ ಪ್ರಕರಣ ದಾಖಲು Read More »

ಆಪರೇಷನ್‌ ಸಿಂದೂರ ಮಾಹಿತಿ ರವಾನಿಸಿದ್ದ ಪಾಕ್‌ ಗೂಢಚಾರ ಸೆರೆ

ಕಾರ್ಯಾಚರಣೆ ನಡೆಯುತ್ತಿರುವಾಗಲೇ ಮಾಹಿತಿ ರವಾನಿಸುತ್ತಿದ್ದ ಗೂಢಚಾರ ನವದೆಹಲಿ: ಇನ್ನೋರ್ವ ಪಾಕಿಸ್ತಾನಿ ಗೂಢಚಾರ ಸೆರೆಯಾಗಿದ್ದಾನೆ. ಆಪರೇಷನ್ ಸಿಂದೂರ ಕಾರ್ಯಾಚರಣೆ ನಡೆಯುತ್ತಿರುವಾಗ ಪಾಕಿಸ್ತಾನದ ಐಎಸ್​ಐ ಜತೆ ಸೇನೆಯ ಚಲನವಲನದ ಹಂಚಿಕೊಂಡಿದ್ದ ಗೂಢಚಾರನನ್ನು ಪಂಜಾಬ್ ಪೊಲೀಸರು ಬಂಧಿಸಿದ್ದಾರೆ. ಐಎಸ್‌ಐ ಜೊತೆ ಬಲವಾದ ಸಂಪರ್ಕ ಹೊಂದಿರುವ ಆರೋಪದ ಮೇಲೆ ಗೂಢಚಾರ ಗಗನ್‌ದೀಪ್ ಸಿಂಗ್​​ನನ್ನು ಬಂಧಿಸಲಾಗಿದೆ. ಆತ ಖಲಿಸ್ತಾನಿ ಉಗ್ರ ಗೋಪಾಲ್ ಸಿಂಗ್ ಚಾವ್ಲಾನೊಂದಿಗೂ ಸಂಬಂಧ ಹೊಂದಿದ್ದಾನೆ. ಆರೋಪಿಯು ಆಪರೇಷನ್ ಸಿಂದೂರ ಸೇರಿದಂತೆ ಗಡಿಯಾಚೆಗಿನ ಏಜೆಂಟರೊಂದಿಗೆ ಸೇನಾ ಚಲನವಲನಗಳ ಬಗ್ಗೆ ಮಹತ್ವದ ಮಾಹಿತಿಯನ್ನು ಹಂಚಿಕೊಂಡಿದ್ದಾನೆ

ಆಪರೇಷನ್‌ ಸಿಂದೂರ ಮಾಹಿತಿ ರವಾನಿಸಿದ್ದ ಪಾಕ್‌ ಗೂಢಚಾರ ಸೆರೆ Read More »

ಕಂಟೈನರ್ ನಲ್ಲಿ ಅಕ್ರಮ ದನ ಸಾಗಾಟ : ಓರ್ವ ಆರೋಪಿ ಬಂಧನ

ಕೇರಳ : ಕಂಟೈನರ್‌ ನಲ್ಲಿ ಕೂಡಿಹಾಕಿ ಅಕ್ರಮವಾಗಿ ಸಾಗಿಸುತ್ತಿದ್ದ 24 ದನಗಳನ್ನು ರಕ್ಷಿಸಿದ ಸಿಸಿಬಿ ಪೊಲೀಸರು ಕಂಟೈನರ್ ಲಾರಿಯನ್ನು ವಶಕ್ಕೆ ಪಡೆದುಕೊಂಡು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಚಾಲಕ ಉತ್ತರ ಪ್ರದೇಶ ಮುಜಾಫರ್ ನಗರದ ಆಸಿಫ್ (25) ಬಂಧಿತ ಆರೋಪಿ. ಮತ್ತೋರ್ವ ಆರೋಪಿ ಪರಾರಿಯಾಗಿದ್ದಾನೆ. ನೂತನ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅವರಿಗೆ ಬಂದ ಮಾಹಿತಿ ಮೇರೆಗೆ ಮಂಗಳೂರು ಸಿಸಿಬಿ ಘಟಕದ ಪಿಎಸ್ ಐ. ಶರಣಪ್ಪ ಭಂಡಾರಿ ನೇತೃತ್ವದ ತಂಡ ಜು. 1ರ ನಸುಕಿನ ಜಾವ ತಲಪಾಡಿ

ಕಂಟೈನರ್ ನಲ್ಲಿ ಅಕ್ರಮ ದನ ಸಾಗಾಟ : ಓರ್ವ ಆರೋಪಿ ಬಂಧನ Read More »

ದಕ್ಷಿಣ ಕನ್ನಡದಲ್ಲಿ ಪೊಲೀಸರಿಂದ ಆಪರೇಷನ್‌ ಗಡಿಪಾರು ಅಸ್ತ್ರ ಪ್ರಯೋಗ

36 ಮಂದಿಯ ಗಡಿಪಾರು ಪ್ರಕ್ರಿಯೆ ಶುರು; ಬಿಜೆಪಿಯಿಂದ ಹೋರಾಟದ ಎಚ್ಚರಿಕೆ ಮಂಗಳೂರು : ಸರಣಿ ಹತ್ಯೆಗಳು ಮತ್ತು ಪ್ರಚೋದನಕಾರಿ ಭಾಷಣಗಳಿಂದ ಪ್ರಕ್ಷುಬ್ಧಗೊಂಡಿರುವ ದಕ್ಷಿಣ ಕನ್ನಡ ಜಿಲ್ಲೆಯನ್ನು ಸಹಜ ಸ್ಥಿತಿಗೆ ತರಲು ಪೊಲೀಸರು ಆಪರೇಷನ್‌ ಗಡಿಪಾರು ಅಸ್ತ್ರ ಪ್ರಯೋಗಕ್ಕೆ ಮುಂದಾಗಿದ್ದಾರೆ. ಹಿಂದು ಮುಖಂಡ ಅರುಣ್‌ ಪುತ್ತಿಲ ಅವರಿಗೆ ಗಡಿಪಾರು ನೋಟಿಸ್‌ ಕೊಟ್ಟ ಬೆನ್ನಲ್ಲೇ ಇದೇ ಮಾದರಿಯಲ್ಲಿ ಇನ್ನೂ 36 ಜನರಿಗೆ ನೋಟಿಸ್‌ ನೀಡಲಾಗಿದೆ. ಕೋಮು ಗಲಭೆಗೆ ಪ್ರಚೋದನೆ ನೀಡುತ್ತಿದ್ದಾರೆ ಎಂದು ಆರೋಪಿಸಿ 36 ಜನರ ಗಡಿಪಾರು ಪ್ರಕ್ರಿಯೆ ಪ್ರಾರಂಭಿಸಲಾಗಿದೆ.

ದಕ್ಷಿಣ ಕನ್ನಡದಲ್ಲಿ ಪೊಲೀಸರಿಂದ ಆಪರೇಷನ್‌ ಗಡಿಪಾರು ಅಸ್ತ್ರ ಪ್ರಯೋಗ Read More »

ಕಲ್ಲಡ್ಕ ಪ್ರಭಾಕರ ಭಟ್‌ ಬಂಧಿಸದಂತೆ ಹೈಕೋರ್ಟ್‌ ಆದೇಶ

ದುರುದ್ದೇಶದಿಂದ ಎಫ್​ಐಆರ್​ ದಾಖಲಿಸಲಾಗಿದೆ ಎಂದು ವಾದ ಮಂಗಳೂರು: ಆರ್​ಎಸ್​ಎಸ್​ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಅವರ ಬಂಧನ ಸಹಿತ ಯಾವುದೇ ಒತ್ತಡದ ಕ್ರಮ ಕೈಗೊಳ್ಳದಂತೆ ನ್ಯಾ‌.ಕೃಷ್ಣಕುಮಾರ್ ಅವರಿದ್ದ ಹೈಕೋರ್ಟ್​ನ ಏಕಸದಸ್ಯ ಪೀಠ ಆದೇಶ ಹೊರಡಿಸಿ ಜೂನ್ 10ಕ್ಕೆ ವಿಚಾರಣೆ ಮುಂದೂಡಿದೆ. ಕಲ್ಲಡ್ಕ ಪ್ರಭಾಕರ ಭಟ್ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ವಾದ ಮಂಡಿಸಿದ್ದರು. ಎಫ್‌ಐಆರ್‌ ದಾಖಲಾದ ಬಳಿಕ ಪ್ರಕರಣ ರದ್ದು ಕೋರಿ ಕಲ್ಲಡ್ಕ ಪ್ರಭಾಕರ ಭಟ್ ನಿನ್ನೆಯೇ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಭಾಷಣ ಮಾಡಿದ ಹಲವು

ಕಲ್ಲಡ್ಕ ಪ್ರಭಾಕರ ಭಟ್‌ ಬಂಧಿಸದಂತೆ ಹೈಕೋರ್ಟ್‌ ಆದೇಶ Read More »

ಕೆನರಾ ಬ್ಯಾಂಕ್‌ನಿಂದ 59 ಕೆಜಿ ಚಿನ್ನ ಕಳ್ಳತನ

ಪೊಲೀಸರಿಗೆ ಸವಾಲಾಗಿ ಪರಿಣಮಿಸಿರುವ ಭಾರಿ ದೊಡ್ಡ ಕಳ್ಳತನ ಕೃತ್ಯ ಬೆಂಗಳೂರು: ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿಯ ಕೆನರಾ ಬ್ಯಾಂಕ್ ಶಾಖೆಯಿಂದ ಕಳ್ಳರು ಕಳೆದ ಮೇ 25ರಂದು ಬರೋಬ್ಬರಿ 58.975 ಕಿಲೋ ಚಿನ್ನ ಮತ್ತು 5.20 ಲ.ರೂ. ನಗದು ಕಳ್ಳತನ ಮಾಡಿದ್ದು, ಈ ಕಳ್ಳತನ ಪ್ರಕರಣ ಪೊಲೀಸರಿಗೆ ಸವಾಲಾಗಿ ಪರಿಣಮಿಸಿದೆ. ಸಿನಿಮೀಯ ರೀತಿಯಲ್ಲಿ, ಮಾಸ್ಟರ್ ಪ್ಲ್ಯಾನ್ ಮಾಡಿ ಕಳ್ಳರು ಕೋಟಿ ಕೋಟಿ ಮೌಲ್ಯದ ಚಿನ್ನಾಭರಣಗಳನ್ನು ಕದ್ದಿದ್ದಾರೆ. ಖದೀಮರ ಪತ್ತೆಗೆ ಪೊಲೀಸ್​ ಇಲಾಖೆ ಎಂಟು ವಿಶೇಷ ತಂಡಗಳನ್ನು ರಚಿಸಿದೆ. ಬ್ಯಾಂಕ್​ನಲ್ಲಿದ್ದ 58

ಕೆನರಾ ಬ್ಯಾಂಕ್‌ನಿಂದ 59 ಕೆಜಿ ಚಿನ್ನ ಕಳ್ಳತನ Read More »

ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲರಿಗೆ ಕಲಬುರ್ಗಿಗೆ ಗಡಿಪಾರು ಆದೇಶ | ವಿಚಾರಣೆಗೆ ಹಾಜರಾಗಲು ಸೂಚನೆ

ಪುತ್ತೂರು: ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲರಿಗೆ ದ.ಕ.ಜಿಲ್ಲೆಯಿಂದ ಕಲುಬುರ್ಗಿ ಜಿಲ್ಲೆಯ ಶಹಬಾದ್‍ ಪೊಲೀಸ್‍ ಠಾಣಾ ವ್ಯಾಪ್ತಿಗೆ ಗಡಿಪಾರು ಆದೇಶ ಹೊರಡಿಸಿದ್ದು, ಈ ಕುರಿತು ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ. ಕರ್ನಾಟಕ ಪೊಲೀಸ್ ಕಾಯ್ದೆ ಕಲಂ 55 ರಂತೆ ಈ ಆದೇಶ ಹೊರಡಿಸಲಾಗಿದ್ದು, ಈ ಕುರಿತು ಜೂ.6 ರಂದು ವಿಚಾರಣೆಗೆ ನ್ಯಾಯವಾದಿಗಳ ಮೂಲಕ ಹಾಜರಾಗಿ ವಾದಿಸುವಂತೆ ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತರು ಸೂಚನೆ ನೀಡಿದ್ದಾರೆ. ತಪ್ಪಿದಲ್ಲಿ ಈ ಪ್ರಕರಣದಲ್ಲಿ  ನಿಮಗೆ ಆಸಕ್ತಿ ಇಲ್ಲವೆಂದು ಭಾವಿಸಿ ಲಭ್ಯವಿರುವ ಮಾಹಿತಿ ಆಧಾರದಲ್ಲಿ

ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲರಿಗೆ ಕಲಬುರ್ಗಿಗೆ ಗಡಿಪಾರು ಆದೇಶ | ವಿಚಾರಣೆಗೆ ಹಾಜರಾಗಲು ಸೂಚನೆ Read More »

ವಿರಾಟ್‌ ಕೊಹ್ಲಿ ಪಬ್‌ ಮೇಲೆ ಇನ್ನೊಂದು ಕೇಸ್‌

ಕಾನೂನು ಉಲ್ಲಂಘಿಸಿ ಕಾರ್ಯಾಚರಿಸುತ್ತಿರುವ ಪಬ್‌ ಬೆಂಗಳೂರು: ಟೀಂ ಇಂಡಿಯಾ ಆಟಗಾರ ವಿರಾಟ್ ಕೊಹ್ಲಿ ಮಾಲೀಕತ್ವದ ಬೆಂಗಳೂರಿನಲ್ಲಿರುವ ಪಬ್ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.ಪ್ರತ್ಯೇಕ ಸ್ಥಳ ಮೀಸಲಿಡದೆ ಧೂಮಪಾನಕ್ಕೆ ಅವಕಾಶ ನೀಡಿದ್ದಕ್ಕಾಗಿ ಬೆಂಗಳೂರಿನ ಕಸ್ತೂರ್‌ಬಾ ರಸ್ತೆಯಲ್ಲಿರುವ ಒನ್ 8 ಕಮ್ಯೂನ್ ಬಾರ್ & ರೆಸ್ಟೋರೆಂಟ್‌ನ ಮ್ಯಾನೇಜರ್ ಹಾಗೂ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ಮೇ 29ರಂದು ಕಬ್ಬನ್ ಪಾರ್ಕ್ ಪೊಲೀಸರು ಬಾರ್ ಮೇಲೆ ದಾಳಿ ಮಾಡಿ, ಸ್ವಯಂಪ್ರೇರಿತವಾಗಿ ಎನ್‌ಸಿಆರ್ ದಾಖಲಿಸಿಕೊಂಡಿದ್ದರು. ಇದೀಗ ನ್ಯಾಯಾಲಯದ ಅನುಮತಿ ಪಡೆದು, ಕೊಟ್ಪಾ ಕಾಯ್ದೆಯಡಿ

ವಿರಾಟ್‌ ಕೊಹ್ಲಿ ಪಬ್‌ ಮೇಲೆ ಇನ್ನೊಂದು ಕೇಸ್‌ Read More »

ಕೋಮು ಪ್ರಚೋದನಕಾರಿ ಭಾಷಣ : ಡಾ.ಕಲ್ಲಡ್ಕ ಪ್ರಭಾಕರ ಭಟ್‍ ವಿರುದ್ಧ ಪ್ರಕರಣ ದಾಖಲು

ಬಂಟ್ವಾಳ: ಮಂಗಳೂರಿನಲ್ಲಿ ಇತ್ತೀಚೆಗೆ ಕೊಲೆಯಾದ ಯುವಕನ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಸಮಾಜದ ಸ್ವಾಸ್ಥ್ಯ ಕದಡುವ ಮತ್ತು ಕೋಮು ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಕಲ್ಲಡ್ಕ ಪ್ರಭಾಕರ್ ಭಟ್ ಅವರ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಟ್ವಾಳ ತಾಲೂಕಿನ ಕಾವಳಪಡೂರು ಗ್ರಾಮದ ಮಧ್ಯ ಪ್ಯಾಲೇಸ್ ಕಲ್ಯಾಣ ಮಂಟಪದ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಕಲ್ಲಡ್ಕ ಪ್ರಭಾಕ‌ರ್ ಭಟ್ ಅವರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಅಲ್ಲಿ ನೆರೆದಿದ್ದ ಸುಮಾರು 300 ಜನರನ್ನು ಉದ್ದೇಶಿಸಿ ಅವರು ಮಾತನಾಡಿ.

ಕೋಮು ಪ್ರಚೋದನಕಾರಿ ಭಾಷಣ : ಡಾ.ಕಲ್ಲಡ್ಕ ಪ್ರಭಾಕರ ಭಟ್‍ ವಿರುದ್ಧ ಪ್ರಕರಣ ದಾಖಲು Read More »

error: Content is protected !!
Scroll to Top