ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ : ಮತ್ತಿಬ್ಬರು ಪೊಲೀಸರ ವಶಕ್ಕೆ
ಬಂಟ್ವಾಳ: ಇಲ್ಲಿನ ಗ್ರಾಮಾಂತರ ಠಾಣಾ ವ್ಯಾಪ್ತಿಯ ಕುರಿಯಾಳ ಗ್ರಾಮದ ಇರಾಕೋಡಿ ಎಂಬಲ್ಲಿ ಮೇ 27ರಂದು ನಡೆದ ಅಬ್ದುಲ್ ರಹಿಮಾನ್ ಕೊಲೆ ಮತ್ತು ಕಲಂದರ್ ಶಾಫಿ ಎಂಬವರ ಮೇಲೆ ನಡೆದ ಗಂಭೀರ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಮತ್ತೆ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಮೊದಲು ಮೂವರು ಆರೋಪಿಗಳನ್ನು ಬಂಧಿಸಲಾಗಿತ್ತು. ಬಂಟ್ವಾಳದ ತೆಂಕಬೆಳ್ಳೂರು ಗ್ರಾಮದ ಸುಮಿತ್ ಆಚಾರ್ಯ (27) ಹಾಗೂ ಬಂಟ್ವಾಳದ ಬಡಗಬೆಳ್ಳೂರು ಗ್ರಾಮದ ರವಿರಾಜ್ (23) ಎಂಬುವವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಈಗಾಗಲೇ […]
ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ : ಮತ್ತಿಬ್ಬರು ಪೊಲೀಸರ ವಶಕ್ಕೆ Read More »










