ಅಪರಾಧ

ಜಾನುವಾರು ಅಕ್ರಮ ಸಾಗಾಟ : ಓರ್ವ ಸೆರೆ

ಉಪ್ಪಿನಂಗಡಿ: ಇಲ್ಲಿಗೆ ಸಮೀಪದ ಉರುವಾಲು ಗ್ರಾಮದ ಕುಪ್ಪೆಟ್ಟಿ ಎಂಬಲ್ಲಿ ಗೂಡ್ಸ್ ವಾಹನದಲ್ಲಿ ಜಾನವಾರುಗಳನ್ನು ಅಕ್ರಮವಾಗಿ ಸಾಗಿಸುತ್ತಿವುದನ್ನು ಉಪ್ಪಿನಂಗಡಿ ಪೊಲೀಸರು ಪತ್ತೆ ಹಚ್ಚಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಜಾನುವಾರು ಸಾಗಿಸುತ್ತಿದ್ದ ಗೂಡ್ಸ್‌ ವಾಹನದ ಚಾಲಕ ಜಯಂತ್ ಗೌಡ ಎಂಬಾತನನ್ನು ಬಂಧಿಸಿದ್ದಾರೆ. ಕುಪ್ಪೆಟ್ಟಿಯ ಬದ್ರುದ್ದೀನ್ ಎಂಬಾತನಿಗೆ ಜಾನುವಾರುಗಳನ್ನು ತಲುಪಿಸುತ್ತಿದ್ದೆ ಏಂದು ಜಯಂತ್ ಗೌಡ ವಿಚಾರಣೆ ವೇಳೆ ಪೊಲೀಸರಿಗೆ ತಿಳಿಸಿದ್ದಾನೆ. ಜಾನುವಾರ ಸಾಗಾಟದ ಬಗ್ಗೆ ಮಾಹಿತಿ ಪಡೆದ ಪೊಲೀಸರು ಪರಿಶೀಲನೆ ನಡೆಸಿದಾಗ ವಾಹನದಲ್ಲಿ ದಾಖಲೆ ಇಲ್ಲದೆ ಸಾಗಾಟ ಮಾಡಲಾಗುತ್ತಿದ್ದ ನಾಲ್ಕು ಜಾನುವಾರುಗಳು ಪತ್ತೆಯಾಗಿದ್ದು, […]

ಜಾನುವಾರು ಅಕ್ರಮ ಸಾಗಾಟ : ಓರ್ವ ಸೆರೆ Read More »

ಪ್ರಚೋದನಕಾರಿ ಭಾಷಣ ಆರೋಪ : ಶಾಸಕ ಹರೀಶ್‌ ಪೂಂಜ ವಿರುದ್ಧ ಎಫ್‌ಐಆರ್‌

ತೆಕ್ಕಾರು ಬ್ರಹ್ಮಕಲಶೋತ್ಸವ ಧಾರ್ಮಿಕ ಸಭೆಯಲ್ಲಿ ಆಕ್ಷೇಪಾರ್ಹ ಭಾಷಣ ಮಾಡಿದ ಆರೋಪ ಉಪ್ಪಿನಂಗಡಿ: ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಕುರಿತು ಎಫ್ಐಆರ್ ದಾಖಲಾಗಿದೆ. ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದಲ್ಲಿ ಶನಿವಾರ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ನಡೆದಿದ್ದು, ಇದರ ಧಾರ್ಮಿಕ ಸಭೆಯಲ್ಲಿ ಹರೀಶ್‌ ಪೂಂಜ ಮುಸ್ಲಿಮರನ್ನು ತೆಗಳಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ದೇವಸ್ಥಾನದ ಬ್ರಹ್ಮಕಲಶೋತ್ಸವದ ವೇದಿಕೆಯಲ್ಲಿ ಹರೀಶ್‌ ಪೂಂಜ ಮಾಡಿದ ಪ್ರಚೋದನಕಾರಿ ಭಾಷಣದ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ

ಪ್ರಚೋದನಕಾರಿ ಭಾಷಣ ಆರೋಪ : ಶಾಸಕ ಹರೀಶ್‌ ಪೂಂಜ ವಿರುದ್ಧ ಎಫ್‌ಐಆರ್‌ Read More »

ಅಕ್ರಮ ಕೂಟ ಸೇರಿ ಬಲವಂತವಾಗಿ ಅಂಗಡಿಗಳನ್ನು ಬಂದ್ ಮಾಡಿ ನಿಷೇಧಾಜ್ಞೆ ಉಲ್ಲಂಘನೆ |  30 ಮಂದಿ ವಿರುದ್ಧ ಪ್ರಕರಣ ದಾಖಲು

ಪುತ್ತೂರು: ನಿಷೇದಾಜ್ಞೆ ಜಾರಿಯಲ್ಲಿದ್ದರೂ ಮೇ 2ರಂದು ಪುತ್ತೂರು ಗಾಂಧಿಕಟ್ಟೆಯ ಬಳಿ ಸುಮಾರು 20 ರಿಂದ 30 ಜನ ಅಕ್ರಮ ಕೂಟ ಸೇರಿಕೊಂಡು ಬಸ್ ನಿಲ್ದಾಣದ ಬಳಿಯಲ್ಲಿರುವ ಅಂಗಡಿ ಮುಗ್ಗಟ್ಟುಗಳನ್ನು ಬಲವಂತವಾಗಿ ಮುಚ್ಚಿಸಿದ ಮತ್ತು ಸಮಾನ ಉದ್ದೇಶದಿಂದ ದೊಂಬಿ ಎಬ್ಬಿಸಿ ನಿಷೇದಾಜ್ಞೆ ಉಲ್ಲಂಘನೆ ಮಾಡಿರುವ ನಿಟ್ಟಿನಲ್ಲಿ ಸುಮಾರು 30 ಮಂದಿಯ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಸುಹಾಸ್ ಶೆಟ್ಟಿ ಎಂಬುವರ ಹತ್ಯೆ ಹಿನ್ನಲೆಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ

ಅಕ್ರಮ ಕೂಟ ಸೇರಿ ಬಲವಂತವಾಗಿ ಅಂಗಡಿಗಳನ್ನು ಬಂದ್ ಮಾಡಿ ನಿಷೇಧಾಜ್ಞೆ ಉಲ್ಲಂಘನೆ |  30 ಮಂದಿ ವಿರುದ್ಧ ಪ್ರಕರಣ ದಾಖಲು Read More »

ಸುಹಾಸ್ ಹತ್ಯೆ ಬೆನ್ನಲ್ಲೇ ಕರಾವಳಿಯ ಹಿಂದೂ ಮುಖಂಡರಿಗೆ ಕೊಲೆ ಬೆದರಿಕೆ | ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‍

ಪುತ್ತೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ವಿಚಾರಣೆ ನಡೆಯುತ್ತಿರುವ ಬೆನ್ನಲ್ಲೆ ಮತ್ತೊಬ್ಬ ಹಿಂದೂ ಮುಖಂಡನಿಗೆ ಬೆದರಿಕೆ ಹಾಕಲಾದ ಸಂದೇಶ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‍ ಆಗಿದೆ. ಹಿಂದೂ ಕಾರ್ಯಕರ್ತ ಭರತ್ ಕುಮ್ಮೇಲು ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮೂಲಕ ಜೀವ ಬೆದರಿಕೆಯನ್ನು ಹಾಕಲಾಗಿದೆ ಮೇ 5 ರಂದು ರಾತ್ರಿ 9:30ಕ್ಕೆ ನಿನ್ನ ಸ್ಥಳದಲ್ಲಿ ಬಂದು ಕೊಲೆ ಮಾಡುತ್ತೇವೆ’ ಎಂದು ಜೀವ ಬೆದರಿಕೆವುಳ್ಳ ಬರಹವನ್ನು ಹಾಕಿ ಪೋಸ್ಟ್ ಮಾಡಲಾಗಿದೆ. ಹನ ಶೆಟ್ಟಿ ಫೋಟೋಗೆ ರೈಟ್ ಮಾರ್ಕ್ ಹಾಕಿ ಪೊನ್ನು

ಸುಹಾಸ್ ಹತ್ಯೆ ಬೆನ್ನಲ್ಲೇ ಕರಾವಳಿಯ ಹಿಂದೂ ಮುಖಂಡರಿಗೆ ಕೊಲೆ ಬೆದರಿಕೆ | ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‍ Read More »

ಹಿಂದೂ ಕಾರ್ಯಕರ್ತ ಭರತ್‌ ಕುಮ್ಡೇಲುಗೆ ಜೀವ ಬೆದರಿಕೆ

ಮೇ 5ರಂದು ನಿನ್ನ ಸ್ಥಳಕ್ಕೆ ಬಂದು ಸಾಯಿಸುತ್ತೇವೆ ಎಂದು ಟಾರ್ಗೆಟ್‌ ಫಿಕ್ಸ್‌ ಮಂಗಳೂರು: ಸುಹಾಸ್ ಶೆಟ್ಟಿ ಹತ್ಯೆ ಬೆನ್ನಿಗೇ ಮಂಗಳೂರಲ್ಲಿ ಮತ್ತೊಬ್ಬ ಹಿಂದೂ ಮುಖಂಡನ ಹತ್ಯೆಗೆ ಸಂಚು ರೂಪಿಸಲಾಗಿದೆ. ಹಿಂದೂ ಕಾರ್ಯಕರ್ತ ಭರತ್‌ ಕುಮ್ಡೇಲು ಅವರಿಗೆ ಸೋಷಿಯಲ್‌ ಮೀಡಿಯಾದಲ್ಲಿ ಬಹಿರಂಗವಾಗಿ ಕೊಲೆ ಬೆದರಿಕೆ ಹಾಕಿರುವ ಸಂಗತಿ ಬೆಳಕಿಗೆ ಬಂದಿದೆ. ಮೇ 5ರಂದು ರಾತ್ರಿ 9.30ಕ್ಕೆ ನಿನ್ನ ಸ್ಥಳದಲ್ಲೇ ಬಂದು ಕೊಲೆ ಮಾಡುತ್ತೇವೆ ಎಂದು ಭರತ್‌ ಕುಮ್ಡೇಲು ಫೋಟೊ ಸಹಿತ ಸೋಷಿಯಲ್‌ ಮೀಡಿಯಾದಲಿ ಪೋಸ್ಟ್‌ ಮಾಡಲಾಗಿದೆ. ಸುಹಾಸ್‌ ಶೆಟ್ಟಿ

ಹಿಂದೂ ಕಾರ್ಯಕರ್ತ ಭರತ್‌ ಕುಮ್ಡೇಲುಗೆ ಜೀವ ಬೆದರಿಕೆ Read More »

ಸುಹಾಸ್‌ ಶೆಟ್ಟಿ ಮೇಲೂ ಕೇಸ್‌ಗಳಿರುವುದರಿಂದ ಮನೆಗೆ ಹೋಗಿಲ್ಲ : ಪರಮೇಶ್ವರ್ ಸ್ಪಷ್ಟನೆ

ಮುಸ್ಲಿಂ ಮುಖಂಡರು ಅವರಾಗಿಯೇ ಬಂದು ಭೇಟಿ ಮಾಡಿದರು ಎಂದು ಸಮಜಾಯಿಷಿ ಬೆಂಗಳೂರು: ಶನಿವಾರ ಮಂಗಳೂರಿಗೆ ಬಂದಿದ್ದರೂ ಕೊಲೆಯಾದ ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಮನೆಗೆ ಹೋಗಿ ತಂದೆ ತಾಯಿಗೆ ಸಾಂತ್ವನ ಹೇಳದ ಕುರಿತು ಇಂದು ಬೆಂಗಳೂರಿನಲ್ಲಿ ಸ್ಪಷ್ಟೀಕರಣ ನೀಡಿದ ಗೃಹ ಸಚಿವ ಜಿ.ಪರಮೇಶ್ವರ್‌, ಸುಹಾಸ್‌ ಶೆಟ್ಟಿ ಮೇಲೆ ಐದು ಕೇಸುಗಳಿದ್ದ ಕಾರಣ ಮನೆಗೆ ಹೋಗಿಲ್ಲ ಎಂದರು. ಸುಹಾಸ್ ಶೆಟ್ಟಿ ಕುಟುಂಬಕ್ಕೆ ಸರ್ಕಾರದ ವತಿಯಿಂದ ಯಾರೂ ಸಾಂತ್ವನ ಹೇಳದ ವಿಚಾರವಾಗಿ ಮಾತನಾಡಿದ ಅವರು, ಇದು ಒಂದು ಕೊಲೆ ಪ್ರಕರಣ.

ಸುಹಾಸ್‌ ಶೆಟ್ಟಿ ಮೇಲೂ ಕೇಸ್‌ಗಳಿರುವುದರಿಂದ ಮನೆಗೆ ಹೋಗಿಲ್ಲ : ಪರಮೇಶ್ವರ್ ಸ್ಪಷ್ಟನೆ Read More »

ಸುಹಾಸ್‌ ಶೆಟ್ಟಿ ಹತ್ಯೆ ಖಂಡಿಸಿ ಸೋಮವಾರ ಚಿಕ್ಕಮಗಳೂರು ಬಂದ್‌

ಚಿಕ್ಕಮಗಳೂರು : ಕಾಶ್ಮೀರದ ಪಹಲ್ಗಾಮ್​​ನಲ್ಲಿ ಹಿಂದುಗಳ ಮಾರಣಹೋಮ ಮತ್ತು ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ಸೋಮವಾರ ಚಿಕ್ಕಮಗಳೂರು ಬಂದ್‌ಗೆ ಕರೆನೀಡಿದೆ. ಬೆಳಗ್ಗೆ 6ರಿಂದ ಸಂಜೆ 6 ಗಂಟೆವರೆಗೆ ಚಿಕ್ಕಮಗಳೂರು ನಗರ ಸೇರಿದಂತೆ 9 ತಾಲೂಕುಗಳಲ್ಲಿ ಬಂದ್​ ಮಾಡಲು ನಿರ್ಧರಿಸಲಾಗಿದೆ. ಸ್ವಯಂಪ್ರೇರಿತರಾಗಿ ಅಂಗಡಿ ಮುಂಗಟ್ಟು ಬಂದ್​ ಮಾಡುವಂತೆ ಹಿಂದೂ ಸಂಘಟನೆಗಳು ಮನವಿ ಮಾಡಿವೆ. ಸರ್ಕಾರಿ ಬಸ್ ಸೇರಿದಂತೆ ಸಾರಿಗೆ ಸಂಚಾರಕ್ಕೆ ಯಾವುದೇ ಅಡ್ಡಿ ಮಾಡುವುದಿಲ್ಲ. ಸ್ವಯಂ ಪ್ರೇರಿತರಾಗಿ

ಸುಹಾಸ್‌ ಶೆಟ್ಟಿ ಹತ್ಯೆ ಖಂಡಿಸಿ ಸೋಮವಾರ ಚಿಕ್ಕಮಗಳೂರು ಬಂದ್‌ Read More »

ವಿಷ ಸೇವಿಸಿ ಆತ್ಮಹತ್ಯೆ

ಪುತ್ತೂರು: ಇಲ್ಲಿನ ತೆಂಕಿಲ ಕನ್ನೂರು ನಿವಾಸಿ ವೆಂಕಪ್ಪ (58) ಎಂಬವರು ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವೆಂಕಪ್ಪ ಅವರು ಮೇ 1ರಂದು ಮನೆಯಿಂದ ಪೇಟೆಗೆ ಹೋಗಿ ಬರುತ್ತೇನೆಂದು ಹೋದವರು ಮನೆಗೆ ಹಿಂದಿರುಗಿಲ್ಲ. ಮೇ 2ರಂದು ಅವರು ದರ್ಬೆ ಮಂಗಳ ಬಾರ್ ಬಳಿಯ ಮೈದಾನದಲ್ಲಿ ಮಲಗಿಕೊಂಡಿದ್ದ ಸ್ಥಿತಿಯಲ್ಲಿದ್ದರು. ಮಾಹಿತಿ ತಿಳಿದು ಮನೆಯವರು ಹೋಗಿ ನೋಡುವಾಗ ಮೃತಪಟ್ಟಿರುವುದು ಗೊತ್ತಾಗಿದೆ. ಮಲಗಿದ್ದ ಪಕ್ಕದಲ್ಲೇ ನೀರಿನ ಬಾಟಲಿಗೆ ನೇರಳೆ ಬಣ್ಣದ ಹುಡಿಯನ್ನು ಹಾಕಿದ್ದುದು ಬೆಳಕಿಗೆ ಬಂದಿದೆ. ಅವರು ವಿಷ ಪದಾರ್ಥ ಸೇವಿಸಿ

ವಿಷ ಸೇವಿಸಿ ಆತ್ಮಹತ್ಯೆ Read More »

ಆ್ಯಂಟಿ ಕಮ್ಯೂನಲ್ ಟಾಸ್ಕ್‌ಫೋರ್ಸ್‌ಗೆ ಬಿಜೆಪಿ ವಿರೋಧ

ಹಿಂದುಗಳನ್ನು ದಮನಿಸುವ ಷಡ್ಯಂತ್ರ ಎಂದು ಆರೋಪ ಮಂಗಳೂರು : ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಸಂಬಂಧ ಮಂಗಳೂರಿಗೆ ಶನಿವಾರ ಭೇಟಿ ನೀಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಕೋಮು ಹಿಂಸಾಚಾರ ನಿಗ್ರಹಕ್ಕೆ ಆ್ಯಂಟಿ ಕಮ್ಯೂನಲ್ ಟಾಸ್ಕ್‌ಫೋರ್ಸ್ ಸ್ಥಾಪನೆಯ ಘೋಷಣೆ ಮಾಡಿರುವುದು ಬಿಜೆಪಿ ನಾಯಕರ ಆಕ್ರೋಶಕ್ಕೆ ಕಾರಣವಾಗಿದೆ. ಇದು ಹಿಂದುಗಳನ್ನು ದಮನಿಸಲು, ಆ ಮೂಲಕ ತನ್ನ ವೋಟ್‌ಬ್ಯಾಂಕ್‌ ಪರವಾಗಿರುವವರನ್ನು ಖುಷಿಪಡಿಸಲು ಕಾಂಗ್ರೆಸ್‌ ಸರಕಾರ ಕೈಗೊಂಡಿರುವ ಕ್ರಮ ಎಂದು ಬಿಜೆಪಿ ನಾಯಕರು ಟೀಕಿಸಿದ್ದಾರೆ. ಈ ಸಂಬಂಧ ಮಾತನಾಡಿರುವ ಸಂಸದ ಕ್ಯಾ.ಬ್ರಿಜೇಶ್‌ ಚೌಟ,

ಆ್ಯಂಟಿ ಕಮ್ಯೂನಲ್ ಟಾಸ್ಕ್‌ಫೋರ್ಸ್‌ಗೆ ಬಿಜೆಪಿ ವಿರೋಧ Read More »

ಗಾಯಕ ಸೋನು ನಿಗಮ್‌ ವಿರುದ್ಧ ಕೇಸ್‌

ಕನ್ನಡಿಗರ ಅಭಿಮಾನವನ್ನು ಉಗ್ರರ ದಾಳಿಗೆ ಹೋಲಿಸಿ ವಿವಾದ ಸೃಷ್ಟಿಸಿರುವ ಗಾಯಕ ಬೆಂಗಳೂರು: ಕನ್ನಡಿಗರ ಅಭಿಮಾನವನ್ನು ಪಹಲ್ಗಾಮ್ ಉಗ್ರರ ದಾಳಿಗೆ ಹೋಲಿಸಿ ವಿವಾದ ಮೈಮೇಲೆ ಎಳೆದುಕೊಂಡಿರುವ ಜನಪ್ರಿಯ ಹಿನ್ನೆಲೆ ಗಾಯಕ ಸೋನು ನಿಗಮ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಅವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಬೆಂಗಳೂರು ನಗರ ಘಟಕದ ಅಧ್ಯಕ್ಷ ಧರ್ಮರಾಜ್ ಎಂಬವರು ನೀಡಿದ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ. ಖಾಸಗಿ ಕಾಲೇಜೊಂದರ ಕಾರ್ಯಕ್ರಮದಲ್ಲಿ ಕನ್ನಡ ಹಾಡು ಹೇಳುವಂತೆ ವಿದ್ಯಾರ್ಥಿಗಳು ಕೋರಿದಾಗ ಕನ್ನಡ…ಕನ್ನಡ… ಈ ರೀತಿಯ

ಗಾಯಕ ಸೋನು ನಿಗಮ್‌ ವಿರುದ್ಧ ಕೇಸ್‌ Read More »

error: Content is protected !!
Scroll to Top