ಚೆಕ್ ಬೌನ್ಸ್ ಪ್ರಕರಣ : ಶಾಸಕರಿಗೆ 49.65 ಲಕ್ಷ ರೂ. ದಂಡ
ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣದಲ್ಲಿ ಮಾಲೂರು ಶಾಸಕ ಕೆ.ವೈ. ನಂಜೇಗೌಡ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ 49.65 ಲಕ್ಷ ರೂ.ದಂಡ ವಿಧಿಸಿದೆ.ರಾಮಚಂದ್ರ ಜಿ. ಎಂಬವರಿಂದ ನಂಜೇಗೌಡ ಅವರು 40 ಲಕ್ಷ ರೂಪಾಯಿ ಸಾಲ ಪಡೆದು ಮರುಪಾವತಿಗೆ ಚೆಕ್ ನೀಡಿದ್ದರು. ಆದರೆ ಚೆಕ್ ಬೌನ್ಸ್ ಆಗಿದ್ದರಿಂದ ಅವರನ್ನು ತಪ್ಪಿತಸ್ಥ ಎಂದು ಕೋರ್ಟ್ ತೀರ್ಪು ನೀಡಿದೆ. ದಂಡ ಪಾವತಿಸದಿದ್ದರೆ 6 ತಿಂಗಳ ಜೈಲು ಶಿಕ್ಷೆ ಅನುಭವಿಸಬೇಕು ಎಂದು 42ನೇ ಎಸಿಎಂಎಂ ಕೋರ್ಟ್ ಆದೇಶಿಸಿದೆ.
ಚೆಕ್ ಬೌನ್ಸ್ ಪ್ರಕರಣ : ಶಾಸಕರಿಗೆ 49.65 ಲಕ್ಷ ರೂ. ದಂಡ Read More »