ಅಪರಾಧ

ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದ ದುರುಳರು

ರಸ್ತೆಯಲ್ಲಿ ಮೇಲೆ ಮಲಗಿದ್ದ ದನಗಳ ಮೇಲೆ ಕ್ರೌರ್ಯ ಬೆಂಗಳೂರು: ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದಿರುವ ಘಟನೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ಚಾಮರಾಜಪೇಟೆಯ ಓಲ್ಡ್ ಪೆನ್ಶನ್ ಮೊಹಲ್ಲಾದಲ್ಲಿ ಮಲಗಿದ್ದ ಮೂರು ಹಸುಗಳ ಕೆಚ್ಚಲು ಕೊಯ್ದ ರಕ್ತದ ಕೋಡಿಯನ್ನೇ ಹರಿಸಿದ್ದಾರೆ. ಇಂದು ಬೆಳಗ್ಗೆ ಘಟನೆ ಬೆಳಕಿಗೆ ಬಂದಿದ್ದು, ಹಸುಗಳಿಗೆ ಚಾಮರಾಜಪೇಟೆ ಪಶು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಚಾಮರಾಜಪೇಚೆಯ ಕರ್ಣ ಎಂಬುವವರಿಗೆ ಸೇರಿದ ಹಸುಗಳ ಕೆಚ್ಚಲನ್ನು ಕೊಯ್ದು ದುರುಳರು ವಿಕೃತಿ ಮೆರೆದಿದ್ದಾರೆ. ಅವರ ಬಳಿ 8 ಹಸುಗಳಿದ್ದು, ಈ […]

ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದ ದುರುಳರು Read More »

ಅಪ್ರಾಪ್ತ ಬಾಲಕಿ ಮೇಲೆ 64 ಜನರಿಂದ ಅತ್ಯಾಚಾರ : ಕೇರಳದಲ್ಲಿ ಬೆಳಕಿಗೆ ಬಂದ ಆಘಾತಕಾರಿ ಲೈಂಗಿಕ ಶೋಷಣೆ ಪ್ರಕರಣ

ಪತ್ತನಂತಿಟ್ಟ : ಲೈಂಗಿಕ ಹಗರಣಗಳಿಗೆ ಕುಖ್ಯಾತವಾಗಿರುವ ಕೇರಳದಲ್ಲಿ ಇನ್ನೊಂದು ಬೆಚ್ಚಿಬೀಳಿಸುವ ಪ್ರಕರಣ ಬೆಳಕಿಗೆ ಬಂದಿದೆ.ಈಗ 18 ವರ್ಷ ಪ್ರಾಯವಾಗಿರುವ ದಲಿತ ಸಮುದಾಯದ ಕ್ರೀಡಾಪಟುವೊಬ್ಬಳ ಮೇಲೆ ಕಳೆದ ಐದು ವರ್ಷಚಗಳಿಂದ 60ಕ್ಕೂ ಹೆಚ್ಚು ಮಂದಿ ಅತ್ಯಾಚಾರ ಎಸಗಿರುವ ಘಟನೆ ಸಂಭವಿಸಿದೆ. ಅಪ್ರಾಪ್ತ ವಯಸ್ಸಿನವಳ ಆಕೆಯ ಕ್ರೀಡಾ ಕೋಚ್‌ಗಳು, ಸಹ ಆಟಗಾರರು ಸೇರಿದಂತೆ 64 ಪುರುಷರು 5 ವರ್ಷಗಳಿಂದ ಅತ್ಯಾಚಾರ ಎಸಗಿದ್ದಾರೆ. ಸಂತ್ರಸ್ತೆ ಇದೀಗ ದೂರು ನೀಡಿದ್ದು, ಇದರನ್ವಯ ಪೊಲೀಸರು ಆರೋಪಿಗಳ ವಿರುದ್ಧ 4 ಎಫ್‌ಐಆರ್‌ ದಾಖಲಿಸಿ 15 ಮಂದಿಯನ್ನು

ಅಪ್ರಾಪ್ತ ಬಾಲಕಿ ಮೇಲೆ 64 ಜನರಿಂದ ಅತ್ಯಾಚಾರ : ಕೇರಳದಲ್ಲಿ ಬೆಳಕಿಗೆ ಬಂದ ಆಘಾತಕಾರಿ ಲೈಂಗಿಕ ಶೋಷಣೆ ಪ್ರಕರಣ Read More »

ತಂಡದಿಂದ ಹಲ್ಲೆ : ಗಾಯಾಳು ಆಸ್ಪತ್ರೆಗೆ ದಾಖಲು

ಬೆಳ್ಳಾರೆ: ಯುವಕನೊಬ್ಬನ ಮೇಲೆ ತಂಡವೊಂದು ಹಲ್ಲೆ ನಡೆಸಿದ ಘಟನೆ ಶನಿವಾರ ರಾತ್ರಿ ಬೆಳ್ಳಾರೆ ಪೇಟೆಯಲ್ಲಿ ನಡೆದಿದೆ.. ಆಶೀರ್ ಬೆಳ್ಳಾರೆ ಹಲ್ಲೆಯಿಂದ ಗಾಯಗೊಂಡಿದ್ದು, ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗಿದೆ. ರಾತ್ರಿ 9:30 ಸಮಯಕ್ಕೆ ಬೆಳ್ಳಾರ ಪೇಟೆಯಲ್ಲಿ ಅಜರುದ್ದೀನ್ ಮತ್ತು ಜಮಾಲ್ ಬೆಳ್ಳಾರೆ ಎಂಬವರು ಆಶೀರ್ ಎಂಬ ಯುವಕ ಬೈಕ್ ನಲ್ಲಿ ಬರುವ ವೇಳೆ ಕಬ್ಬಿಣದ ರಾಡಿನಿಂದ ತಲೆಗೆ ಹೊಡೆದು ಕೊಲೆಗೆ ಯತ್ನಿಸಿದ್ದಾರೆ ಎಂಬ ಆರೋಪವು ಕೇಳಿ ಬಂದಿದೆ. ಹೆಚ್ಚಿನ ಮಾಹಿತಿ ತಿಳಿದು ಬರಬೇಕ

ತಂಡದಿಂದ ಹಲ್ಲೆ : ಗಾಯಾಳು ಆಸ್ಪತ್ರೆಗೆ ದಾಖಲು Read More »

ಸಿ.ಟಿ.ರವಿಗೆ ಜೀವ ಬೆದರಿಕೆ ಪತ್ರ : ಬಿಜೆಪಿ ಕಿಡಿ

ಕ್ಷಮೆ ಕೇಳದಿದ್ದರೆ ನಿಮ್ಮನ್ನು ಮತ್ತು ನಿಮ್ಮ ಪುತ್ರನನ್ನು ಸಾಯಿಸುತ್ತೇವೆ ಎಂದು ಬೆದರಿಕೆ ಬೆಂಗಳೂರು: ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ಅವರಿಗೆ ಜೀವ ಬೆದರಿಕೆ ಒಡ್ಡಿ ಬಂದಿರುವ ಪತ್ರ ರಾಜ್ಯ ರಾಜಕೀಯದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ ನಡುವೆ ಇನ್ನೊಂದು ಸಮರಕ್ಕೆ ಕಾರಣವಾಗಿದೆ. ಬೆದರಿಕೆ ಒಡ್ಡುತ್ತಿರುವ ಶಕ್ತಿಗಳು ಯಾವುದು ಎಂಬುದು ಸರ್ಕಾರ ಹಾಗೂ ಪೊಲೀಸರಿಗೆ ತಿಳಿದೇ ಇದೆ, ಇಷ್ಟಾಗಿಯೂ ದುಷ್ಟಶಕ್ತಿಗಳ ಮೇಲೆ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಬಿಜೆಪಿ ಕಿಡಿಕಾರಿದೆ.ಈ ಕುರಿತು ಟ್ವೀಟ್‌ ಮಾಡಿರುವ ಬಿಜಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ,

ಸಿ.ಟಿ.ರವಿಗೆ ಜೀವ ಬೆದರಿಕೆ ಪತ್ರ : ಬಿಜೆಪಿ ಕಿಡಿ Read More »

ಅಂತರ್ ರಾಜ್ಯ ಮನೆಕಳ್ಳತನ ಆರೋಪಿ ಬಂಧನ | ಲಕ್ಷಾಂತರ ಮೌಲ್ಯದ ಚಿನ್ನಾಭರಣ ಸಹಿತ ವಸ್ತುಗಳನ್ನು ವಶಪಡಿಸಿಕೊಂಡ ಪೊಲೀಸರು

ಪುತ್ತೂರು  : ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಸರ್ವೆ ಗ್ರಾಮದ ಭಕ್ತಕೋಡಿ ಎನ್ನುವ ಓರ್ವರ ಮನೆಯಲ್ಲಿ  ಯಾರು ಇಲ್ಲದೇ ಇರುವ ಸಂದರ್ಭದಲ್ಲಿ  ಮನೆಯ ಹಿಂಬಾಗಿಲನ್ನು ಕಾಲಿನಿಂದ ಒದ್ದು ಬಾಗಿಲು ಮುರಿದು ಮನೆಯ ಒಳಗಿದ್ದ ಕಪಾಟಿನಲ್ಲಿದ್ದ ಚಿನ್ನಾಭರಣವನ್ನು ಕಳವು ಮಾಡಿಕೊಂಡು ಹೋಗಿರುವ ಘಟನೆ ದಿನಾಂಕ 20.12.2024ರಂದು ನಡೆದಿದೆ.   ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಕಳ್ಳತನ ಪ್ರಕರಣ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಹಲವು ಕಡೆಗಳಲ್ಲಿ ನಡೆಯುತ್ತಿದ್ದು, ಜಿಲ್ಲಾ, ಪೊಲೀಸ್ ಅಧೀಕ್ಷಕರ ಸೂಚನೆಯಂತೆ ಜಂಟಿ ಕಾರ್ಯಾಚರಣೆ ನಡೆಸಿ ಹಗಲು

ಅಂತರ್ ರಾಜ್ಯ ಮನೆಕಳ್ಳತನ ಆರೋಪಿ ಬಂಧನ | ಲಕ್ಷಾಂತರ ಮೌಲ್ಯದ ಚಿನ್ನಾಭರಣ ಸಹಿತ ವಸ್ತುಗಳನ್ನು ವಶಪಡಿಸಿಕೊಂಡ ಪೊಲೀಸರು Read More »

ಗುತ್ತಿಗೆದಾರ ಆತ್ಮಹತ್ಯೆ : ಸಚಿವ ಪ್ರಿಯಾಂಕ್‌ ಖರ್ಗೆ ಆಪ್ತರು ಸಿಐಡಿ ಕಸ್ಟಡಿಗೆ

ಬೆಂಗಳೂರು: ಯುವ ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಸೆರೆಯಾಗಿರುವ ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ರಾಜು ಕಪನೂರ್​ ಸೇರಿದಂತೆ ಐವರು ಆರೋಪಿಗಳನ್ನು ಬೀದರ್​ನ ಜೆಎಂಎಫ್​ಸಿ ನ್ಯಾಯಾಲಯ 5 ದಿನ ಸಿಐಡಿ ಕಸ್ಟಡಿಗೆ ನೀಡಿದೆ. ಆರೋಪಿಗಳಾದ ರಾಜು ಕಪನೂರ್​​​, ಗೋರಕ್​ನಾಥ್​​, ಸತೀಶ್​, ನಂದಕುಮಾರ್​​ ನಾಗಭುಂಜಗೆ, ರಾಮಾಗೌಡ ಪಾಟೀಲ್​ ಸಿಐಡಿ ಕಸ್ಟಡಿಯಲ್ಲಿದ್ದು, ವಿಚಾರಣೆ ಎದುರಿಸುತ್ತಿದ್ದಾರೆ. ಎಂಟು ಜನರ ಪೈಕಿ ಐವರ ಬಂಧನವಾಗಿದ್ದು, ಇನ್ನೂ ಮೂವರಿಗಾಗಿ ಸಿಐಡಿಯಿಂದ ಶೋಧ ನಡೆಸುತ್ತಿದೆ.2024 ಡಿಸೆಂಬರ್ 26 ರಂದು ಬೀದರ್ ನಗರದ ಬಸವೇಶ್ವರ

ಗುತ್ತಿಗೆದಾರ ಆತ್ಮಹತ್ಯೆ : ಸಚಿವ ಪ್ರಿಯಾಂಕ್‌ ಖರ್ಗೆ ಆಪ್ತರು ಸಿಐಡಿ ಕಸ್ಟಡಿಗೆ Read More »

ಕೊಪ್ಪದ ಕಾಡಿನಲ್ಲಿ ಎಕೆ 47 ಬಂದೂಕು ಸಹಿತ ಶಸ್ತ್ರಾಸ್ತ್ರ ಪತ್ತೆ

ನಕ್ಸಲರು ಅಡಗಿಸಿಟ್ಟಿದ್ದ ಶಸ್ತ್ರಾಸ್ತ್ರಗಳು ಎಂಬ ಅನುಮಾನ ಚಿಕ್ಕಮಗಳೂರು: ಕೊಪ್ಪ ತಾಲೂಕಿನ ಜಯಪುರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿರುವ ಕಿತ್ತಲೆಗಂಡಿ ಕಾಡಿನಲ್ಲಿ ಶಸ್ತ್ರಾಸ್ತ್ರಗಳು ಪತ್ತೆಯಾಗಿವೆ. ಇವುಗಳು ಇತ್ತೀಚೆಗೆ ಶರಣಾಗಿರುವ ನಕ್ಸಲರು ಅಡಗಿಸಿಟ್ಟಿದ್ದ ಶಸ್ತ್ರಾಸ್ತ್ರಗಳು ಎನ್ನಲಾಗಿದೆ. ಆದರೆ ಪೊಲೀಸರು ಇದನ್ನು ಇನ್ನೂ ದೃಢಪಡಿಸಿಲ್ಲ. ಮೇಲ್ನೋಟಕ್ಕೆ ನಕ್ಸಲರದ್ದೇ ಎಂದು ಹೇಳಲಾಗುತ್ತಿದ್ದರೂ ಇನ್ನೂ ಖಚಿತವಾಗಿಲ್ಲ. ತನಿಖೆಯಿಂದ ಗೊತ್ತಾಗಬೇಕು ಎಂದು ಪೊಲೀಸರು ತಿಳಿಸಿದ್ದಾರೆ. ಒಂದು ಎಕೆ-47, ಐದು 303 ಕೋವಿ , ಒಂದು ಪಿಸ್ತೂಲ್, 100ಕ್ಕೂ ಹೆಚ್ಚು ಗುಂಡುಗಳು ಮೇಗೂರು ಅರಣ್ಯ ವ್ಯಾಪ್ತಿಯ ಕಿತ್ತಲೆಗಂಡಿ ಅರಣ್ಯ

ಕೊಪ್ಪದ ಕಾಡಿನಲ್ಲಿ ಎಕೆ 47 ಬಂದೂಕು ಸಹಿತ ಶಸ್ತ್ರಾಸ್ತ್ರ ಪತ್ತೆ Read More »

ಆಕಸ್ಮಿಕವಾಗಿ ಗುಂಡು ಸಿಡಿದು ಶಾಸಕ ಸಾವು

ಹೊಸದಿಲ್ಲಿ: ಪಂಜಾಬ್‌ನ ಲುಧಿಯಾನ ಕ್ಷೇತ್ರದ ಆಮ್‌ ಆದ್ಮಿ ಪಕ್ಷದ ಶಾಸಕ ಗುರುಪ್ರೀತ್ ಗೋಗಿ ಆಕಸ್ಮಿಕವಾಗಿ ಗುಂಡುಸಿಡಿದು ಶುಕ್ರವಾರ ತಡರಾತ್ರಿ ಸಾವನ್ನಪ್ಪಿದ್ದಾರೆ. ಗುರುಪ್ರೀತ್ ಗೋಗಿ (58) ಅವರ ತಲೆಗೆ ಗುಂಡು ತಗುಲಿದ ನಂತರ ಕುಟುಂಬಸ್ಥರು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಷ್ಟು ಹೊತ್ತಿಗಾಗಲೇ ಶಾಸಕರು ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಜಸ್ಕರ್ ಸಿಂಗ್ ತೇಜ ತಿಳಿಸಿದ್ದಾರೆ. ಗೋಗಿ ಅವರ ಮೃತದೇಹವನ್ನು ಡಿಎಂಸಿ ಆಸ್ಪತ್ರೆಯ ಶವಾಗಾರದಲ್ಲಿ ಇಡಲಾಗಿದ್ದು, ಮರಣೋತ್ತರ ಪರೀಕ್ಷೆ ನಡೆಸಲಾಗುವುದು. ತಲೆಗೆ ಆಕಸ್ಮಿಕವಾಗಿ ಗುಂಡು

ಆಕಸ್ಮಿಕವಾಗಿ ಗುಂಡು ಸಿಡಿದು ಶಾಸಕ ಸಾವು Read More »

ನಿಷೇಧಿತ ಉಗ್ರ ಸಂಘಟನೆ ಪಿಎಫ್ ಐ ಮುಖಂಡನ ಬಳಿ ಅಕ್ರಮ ಪಿಸ್ತೂಲು | ಹಿಂದೂಗಳ ಹತ್ಯೆಗೆ ಸಂಚು | ಉನ್ನತ ಮಟ್ಟದ ತನಿಖೆಗೆ ವಿಶ್ವ ಹಿಂದೂ ಪರಿಷದ್ ನಿಂದ ಆಗ್ರಹ

ಮಂಗಳೂರು: ಮೂಡುಶೆಡ್ಡೆಯಲ್ಲಿ ನಿಷೇಧಿತ ಉಗ್ರ ಸಂಘಟನೆ ಪಿಫ್ಐ ಮುಖಂಡ ಬದ್ರುದ್ದೀನ್  ಅಕ್ರಮ ಪಿಸ್ತೂಲಿನಿಂದ ಗುಂಡು ಹರಿಸಿದ ಪರಿಣಾಮ ಒಬ್ಬ ವ್ಯಕ್ತಿಗೆ ಗಂಭೀರ ಗಾಯವಾಗಿದೆ. ಅಕ್ರಮವಾಗಿ ಪಿಸ್ತೂಲು ಮದ್ದುಗುಂಡುಗಳನ್ನು ಇಟ್ಟುಕೊಂಡು ಹಿಂದುಗಳ ಮತ್ತು ಹಿಂದೂ ಮುಖಂಡರ ಕೊಲೆಗೆ ಸಂಚು ರೂಪಿಸಿತ್ತಿರುವ ಬಗ್ಗೆ ಸಂಶಯ ವ್ಯಕ್ತವಾಗುತ್ತಿದ್ದು, ಪಿಎಫ್ ಐ ಸಂಘಟನೆಯನ್ನು ಇಂತಹದ್ದೇ ಕಾರಣಕ್ಕಾಗಿ ನಿಷೇದಿಸಿದ್ದು ಅಲ್ಲದೆ ಇದರ ಮುಖಂಡರು ಅಕ್ರಮ ಪಿಸ್ತೂಲು ಹೊಂದಿರುವುದು ಇಡೀ ಜಿಲ್ಲೆಯಲ್ಲಿ ಆತಂಕಕ್ಕೆ ಕಾರಣವಾಗಿದೆ. ಹಾಗಾಗಿ ಈ ಪ್ರಕರಣವನ್ನು ಉನ್ನತ ಮಟ್ಟದ ತನಿಖೆ ನಡೆಸಲು ವಿಶ್ವ

ನಿಷೇಧಿತ ಉಗ್ರ ಸಂಘಟನೆ ಪಿಎಫ್ ಐ ಮುಖಂಡನ ಬಳಿ ಅಕ್ರಮ ಪಿಸ್ತೂಲು | ಹಿಂದೂಗಳ ಹತ್ಯೆಗೆ ಸಂಚು | ಉನ್ನತ ಮಟ್ಟದ ತನಿಖೆಗೆ ವಿಶ್ವ ಹಿಂದೂ ಪರಿಷದ್ ನಿಂದ ಆಗ್ರಹ Read More »

ಬೈಕ್‌ನಿಂದ ಬಿದ್ದ ಅರ್ಚಕರಿಗೆ ಮಸೀದಿಯಲ್ಲಿ ಚಿಕಿತ್ಸೆ

ಪುತ್ತೂರು  : ಅರ್ಚಕರೊಬ್ಬರು ಬೈಕ್‌ನಿಂದ ರಸ್ತೆ ಬಿದ್ದು ಗಾಯಗೊಂಡ ಘಟನೆ ಪುತ್ತೂರು ತಾಲ್ಲೂಕಿನ ಒಳಮೊಗ್ರು ಗ್ರಾಮದ ಕುಂಬ್ರದಲ್ಲಿ ನಡೆದಿದೆ. ಗಾಯಗೊಂಡ ಅರ್ಚಕರೊರ್ವರ ನೆರವಿಗೆ ದಾವಿಸಿದ್ದು ಸಮೀಪದ ಮಸೀದಿಯಲ್ಲಿರುವವರೆನ್ನಲಾಗಿದೆ. ಅರ್ಚಕರನ್ನು ಮಸೀದಿಗೆ ಕರೆದುಕೊಂಡು ಹೋಗಿ ಪ್ರಾಥಮಿಕ ಚಿಕಿತ್ಸೆ ನೀಡಿ ಉಪಚರಿಸಿದ್ದಾರೆ. ನೆಟ್ಟಣಿಗೆ ಮುನ್ನೂರು ಗ್ರಾಮದ ಈಶ್ವರಮಂಗಲ ಸಮೀಪದ ಮುಂಡ್ಯ ಎಂಬಲ್ಲಿರುವ ಶಾಸ್ತಾರ ದೇವಸ್ಥಾನದಲ್ಲಿ ಅರ್ಚಕರಾಗಿರುವ ರಘುರಾಮ ಭಟ್ ಬುಧವಾರ ಬೈಕ್‌ನಲ್ಲಿ ಬರುವಾಗ, ಕುಂಬ್ರ ಬದ್ರಿಯಾ ಮಸೀದಿಯ ಎದುರು ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿದ್ದು ಗಾಯಗೊಂಡಿದ್ದರು. ಬೈಕ್‍ನಿಂದ ಬಿದ್ದಿದರಿಂದ ಕಾಲಿಗೆ

ಬೈಕ್‌ನಿಂದ ಬಿದ್ದ ಅರ್ಚಕರಿಗೆ ಮಸೀದಿಯಲ್ಲಿ ಚಿಕಿತ್ಸೆ Read More »

error: Content is protected !!
Scroll to Top