ಅಪರಾಧ

ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣದ ಎಸ್‌ಐಟಿ ತನಿಖೆ ಆರಂಭ

ತೆರಿಗೆ ದಾಳಿ ವೇಳೆ ಆತ್ಮಹತ್ಯೆ ಮಾಡಿಕೊಂಡಿರುವ ಉದ್ಯಮಿಯ ಸಾವಿನ ಸುತ್ತ ಅನುಮಾನದ ಹುತ್ತ ಬೆಂಗಳೂರು: ರಿಯಲ್ ಎಸ್ಟೇಟ್ ಸಂಸ್ಥೆ ಕಾನ್ಫಿಡೆಂಟ್‌ ಗ್ರೂಪ್‌ ಸಂಸ್ಥಾಪಕ ಹಾಗೂ ಅಧ್ಯಕ್ಷ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ರಚಿಸಿರುವ ವಿಶೇಷ ತನಿಖಾ ತಂಡ ತನಿಖೆ ಆರಂಭಿಸಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ ಅವರು ಭಾನುವಾರ ತಿಳಿಸಿದ್ದಾರೆ. ಜನವರಿ 30ರಂದು ಬೆಂಗಳೂರು ನಗರದ ಅಶೋಕನಗರ ವ್ಯಾಪ್ತಿಯಲ್ಲಿರುವ ಕಚೇರಿಯಲ್ಲಿ ರಾಯ್ ಅವರು ಗುಂಡಿನ ಗಾಯಗಳೊಂದಿಗೆ ಮೃತಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಘಟನೆ ನಡೆದ […]

ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣದ ಎಸ್‌ಐಟಿ ತನಿಖೆ ಆರಂಭ Read More »

ಹತ್ಯೆಗೆ ಯತ್ನಿಸಿದ ಅಪರಾಧಿಗೆ 4 ವರ್ಷ ಜೈಲು ಶಿಕ್ಷೆ

ಆನ್‌ಲೈನ್‌ ಗೇಮ್‌ನಲ್ಲಿ ಸೋತ ಹಿನ್ನೆಲೆಯಲ್ಲಿ ಕೊಲೆಗೆ ಯತ್ನಿಸಿದ್ದ ಅಪರಾಧಿ ಮಂಗಳೂರು: ಮೊಬೈಲ್ ಆನ್‌ಲೈನ್ ಗೇಮ್ ಫ್ರೀ ಫೈರ್‌ನಲ್ಲಿ ಸೋತ ದ್ವೇಷದಿಂದ ಯುವಕನನ್ನು ಚೂರಿಯಿಂದ ಇರಿದು ಕೊಲ್ಲಲು ಯತ್ನಿಸಿದ ಪ್ರಕರಣದ ಅಪರಾಧಿಗೆ ನ್ಯಾಯಾಲಯ ನಾಲ್ಕು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಮಂಗಳೂರು ನಗರದ ಜಪ್ಪು ಬಪ್ಪಾಲ್ ನಿವಾಸಿ ಪ್ರತ್ಯುಶ್ ಸಾಲಿಯಾನ್ ಫ್ರೀ ಫೈರ್ ಮೊಬೈಲ್ ಗೇಮ್‌ನಲ್ಲಿ ಸಂಜಯ್ ಪೂಜಾರಿ ಎಂಬವನನ್ನು ಸೋಲಿಸಿದ್ದರು. ಈ ಕಾರಣದಿಂದಾಗಿ ಸಂಜಯ್ ಪೂಜಾರಿಗೆ ಪ್ರತ್ಯುಶ್ ಮೇಲೇ ದ್ವೇಷ ಇತ್ತು. 17-05-2023 ರಂದು ಮಧ್ಯಾಹ್ನ 3.40ರ

ಹತ್ಯೆಗೆ ಯತ್ನಿಸಿದ ಅಪರಾಧಿಗೆ 4 ವರ್ಷ ಜೈಲು ಶಿಕ್ಷೆ Read More »

ವಿಟ್ಲ: ವಿದ್ಯಾರ್ಥಿಗೆ ಬೆತ್ತದಿಂದ ಥಳಿಸಿದ ಶಿಕ್ಷಕನ ವಿರುದ್ಧ ದೂರು ದಾಖಲು

ವಿಟ್ಲ: ಇಡ್ಕಿದು ಗ್ರಾಮದ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ ವಿದ್ಯಾರ್ಥಿಗೆ ಬೆತ್ತದಿಂದ ಸಿಕ್ಕಾಪಟ್ಟೆ ಥಳಿಸಿದ ಘಟನೆ ವರದಿಯಾಗಿದೆ. ಗಂಭೀರವಾಗಿ ಹಲ್ಲೆ ನಡೆಸಿದ ಶಿಕ್ಷಕ ಇಸ್ತಿಕಾರ್ ವಿರುದ್ಧ ವಿಟ್ಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿದ್ಯಾರ್ಥಿ ಎಂದಿನಂತೆ ಶಾಲೆಗೆ ಹೋಗಿದ್ದು ಮಧ್ಯಾಹ್ನ 2 ಗಂಟೆಗೆ ನಿಮ್ಮ ಮಗು ಇತರ ಮಕ್ಕಳಿಗೆ ತೊಂದರೆ ಮಾಡಿದ್ದು ಹಾಗೂ ಈ ವಿಚಾರವಾಗಿ ಬೈದಾಗ ಅಲ್ಲಿಯೇ ಮೂತ್ರ ಮಾಡಿಕೊಂಡಿದ್ದು ನೀವು ಬಂದು ಮಗುವನ್ನು ಕರೆದುಕೊಂಡು ಹೋಗಿ ಎಂದು ಶಾಲೆಯ ಕಚೇರಿಯಿಂದ ಕರೆ ಹೆತ್ತವರಿಗೆ ಬಂದಿದೆ.

ವಿಟ್ಲ: ವಿದ್ಯಾರ್ಥಿಗೆ ಬೆತ್ತದಿಂದ ಥಳಿಸಿದ ಶಿಕ್ಷಕನ ವಿರುದ್ಧ ದೂರು ದಾಖಲು Read More »

ಬಾಲಿವುಡ್‌ ನಿರ್ದೇಶಕ ರೋಹಿತ್‌ ಶೆಟ್ಟೆ ಮನೆ ಬಳಿ ಗುಂಡಿನ ದಾಳಿ

ಗುಂಡು ಹಾರಿಸಿ ಆತಂಕ ಸೃಷ್ಟಿಸಿದ ಅಜ್ಞಾತ ವ್ಯಕ್ತಿಗಳು ಮುಂಬೈ: ಬಾಲಿವುಡ್‌ನ ಖ್ಯಾತ ನಿರ್ದೇಶಕ-ನಿರ್ಮಾಪಕ ರೋಹಿತ್ ಶೆಟ್ಟಿಯವರ ಜುಹುವನಲ್ಲಿರುವ ಮನೆಯ ಬಳಿ ಗುಂಡಿನ ದಾಳಿ ನಡೆಸಿ ಆತಂಕದ ವಾತಾವರಣ ಸೃಷ್ಟಿಲಾಗಿದ್ದು, ಪೊಲೀಸರು ತೀವ್ರ ತನಿಖೆ ಆರಂಭಿಸಿದ್ದಾರೆ. ಗುಂಡಿನ ಸದ್ದು ಕೇಳಿಬಂದ ಹಿನ್ನೆಲೆಯಲ್ಲಿ ಪೊಲೀಸರು ತಕ್ಷಣ ಕಾರ್ಯಾಚರಣೆ ನಡೆಸಿ ತನಿಖೆ ನಡೆಸುತ್ತಿದ್ದಾರೆ ಎಂದು ಪ್ರಾಥಮಿಕ ವರದಿಗಳು ಹೇಳಿವೆ. ಮುಂಬೈ ಪೊಲೀಸರು ಮತ್ತು ವಿಧಿವಿಜ್ಞಾನ ತಂಡದ ಶೆಟ್ಟಿ ನಿವಾಸಕ್ಕೆ ಧಾವಿಸಿ, ಮನೆಯ ಆವರಣದಲ್ಲಿ ಶೋಧ ಕಾರ್ಯ ಕೈಗೊಂಡಿದೆ. ಗುಂಡಿನ ಸದ್ದು ಕೇಳಿಬಂದ

ಬಾಲಿವುಡ್‌ ನಿರ್ದೇಶಕ ರೋಹಿತ್‌ ಶೆಟ್ಟೆ ಮನೆ ಬಳಿ ಗುಂಡಿನ ದಾಳಿ Read More »

ಪಿಲಿಕುಳ ಜೈವಿಕ ಪಾರ್ಕ್‌ ಅವ್ಯವಸ್ಥೆ : ಹೈಕೋರ್ಟ್‌ ಕೆಂಡಾಮಂಡಲ

ಪ್ರಾಣಿಗಳ ದಯನೀಯ ಸ್ಥಿತಿ ಕಂಡು ಜಡ್ಜ್‌ ಶಾಕ್‌ ಮಂಗಳೂರು: ಮಂಗಳೂರು ನಗರದ ಹೊರವಲಯದಲ್ಲಿರುವ ಪಿಲಿಕುಳ ಜೈವಿಕ ಪಾರ್ಕ್‌ನಲ ಅವ್ಯವಸ್ಥೆ ಕಂಡು ಹೈಕೋರ್ಟ್‌ ಗರಂ ಆಗಿದೆ. ಪ್ರಾಣಿಗಳ ದಯನೀಯ ಸ್ಥಿತಿಗೆ ಕೆಂಡಾಮಂಡಲವಾಗಿರುವ ನ್ಯಾಯಪೀಠ ಪ್ರಾಣಿಗಳನ್ನು ಸರಿಯಾಗಿ ನೋಡಿಕೊಳ್ಳಲು ಆಗದಿದ್ದರೆ ತಕ್ಷಣ ಮೃಗಾಲಯ ಬಂದ್ ಮಾಡಿ ಎಂದು ಸರ್ಕಾರಕ್ಕೆ ಹೇಳಿದೆ. ಸುಮಾರು 370 ಎಕರೆಗಳಷ್ಟು ವಿಶಾಲವಾಗಿ ಹಬ್ಬಿರುವ ಈ ಮೃಗಾಲಯ ದೇಶದ ಅತ್ಯಂತ ನೈಸರ್ಗಿಕವಾದ ಮೃಗಾಲಯಗಳಲ್ಲಿ ಒಂದು ಎಂದು ಹೆಸರುವಾಸಿ. ಒಂದು ಕಾಲದಲ್ಲಿ ಹುಲಿಗಳು ಬಂದು ನೀರು ಕುಡಿಯುತ್ತಿದ್ದ ಈ

ಪಿಲಿಕುಳ ಜೈವಿಕ ಪಾರ್ಕ್‌ ಅವ್ಯವಸ್ಥೆ : ಹೈಕೋರ್ಟ್‌ ಕೆಂಡಾಮಂಡಲ Read More »

ನೆಂಟರ ಮನೆಯಿಂದ ಚಿನ್ನಾಭರಣದ ಗಂಟು ಕದ್ದ ಆರೋಪಿಗಳ ಬಂಧನ

ಚಿಕ್ಕಬಳ್ಳಾಪುರ: ನೆಂಟರ ಮನೆಗೆ ಕಾರ್ಯಕ್ರಮಕ್ಕೆ ಬಂದು, ಚಿನ್ನಾಭರಣ ಕಳ್ಳತನ ಮಾಡಿದ ಎಂಜಿನಿಯರಿಂಗ್ ವಿದ್ಯಾರ್ಥಿನಿ ‌ಮತ್ತು ಆಕೆಯ ಗೆಳೆಯನನ್ನು ಪೇರೆಸಂದ್ರ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ಮುತ್ತುಕದಹಳ್ಳಿ ನಿವಾಸಿ ರಮ್ಯಾ ಮತ್ತು ಅವಳ ಪರಿಚಯಸ್ಥ, ವೃತ್ತಿಯಲ್ಲಿ ಚಾಲಕನಾಗಿರುವ ವಿನಯ ಕುಮಾರ್ ಎಂದು ಗುರುತಿಸಲಾಗಿದೆ. ಮುತ್ತುಕದಹಳ್ಳಿಯ ಪದ್ಮಾವತಮ್ಮ ಎಂಬವರ ಮನೆಯಲ್ಲಿ 2025 ರ ಡಿ. 18 ರಂದು ಒಂದು ತಿಥಿ ನಡೆದಿತ್ತು. ಈ ಕಾರ್ಯಕ್ರಮಕ್ಕೆ ರಮ್ಯಾ ಮತ್ತು ವಿನಯ್ ಸಹ ಹೋಗಿದ್ದು, ಅಲ್ಲಿ ನೆರೆದಿದ್ದವರ ಕಣ್ಣು ತಪ್ಪಿಸಿ ಕಪಾಟಿನಲ್ಲಿಟ್ಟಿದ್ದ ಚಿನ್ನಾಭರಣ ಎಗರಿಸಿದ್ದಾರೆ.

ನೆಂಟರ ಮನೆಯಿಂದ ಚಿನ್ನಾಭರಣದ ಗಂಟು ಕದ್ದ ಆರೋಪಿಗಳ ಬಂಧನ Read More »

ಐಟಿ ಅಧಿಕಾರಿಗಳ ಕಿರುಕುಳ ಉದ್ಯಮಿ ಸಿ.ಜೆ.ರಾಯ್ ಆತ್ಮಹತ್ಯೆಗೆ ಕಾರಣ : ಸಹೋದರನ ಆರೋಪ

ಪದೇ ಪದೆ ದಾಳಿ ನಡೆಸುತ್ತಿದ್ದ ಕೇರಳದ ಐಟಿ ಅಧಿಕಾರಿಗಳು ಬೆಂಗಳೂರು: ಉದ್ಯಮಿ ಸಿ.ಜೆ.ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಕಿರುಕುಳ ಹಾಗೂ ಒತ್ತಡವೇ ಕಾರಣ ಎಂದು ಸಹೋದರ ಸಿ.ಜೆ.ಬಾಬು ಗಂಭೀರ ಆರೋಪ ಮಾಡಿದ್ದಾರೆ. ಕೇರಳದ ಐಟಿ ಅಧಿಕಾರಿಗಳು ಜ.28ರಿಂದಲೂ ನನ್ನ ತಮ್ಮ ಸಿ.ಜೆ.ರಾಯ್ ಅವರನ್ನು ವಿಚಾರಣೆ ಮಾಡುತ್ತಿದ್ದರು. ಶುಕ್ರವಾರವೂ ಕಚೇರಿಗೆ ಬಂದು ವಿಚಾರಣೆ ಮಾಡಿದ್ದಾರೆ. ಐಟಿ ಇಲಾಖೆಯ ಅಡಿಷನಲ್ ಕಮಿಷನರ್ ಕೃಷ್ಣ ಪ್ರಸಾದ್ ಸಹ ಅಧಿಕಾರಿಗಳ ತಂಡದಲ್ಲಿದ್ದರು ಎಂದು ಹೇಳಿದ್ದಾರೆ. ಈ ಐಟಿ ಅಧಿಕಾರಿಗಳು ಜ.27ರಂದು ನನ್ನ ಮನೆಗೆ

ಐಟಿ ಅಧಿಕಾರಿಗಳ ಕಿರುಕುಳ ಉದ್ಯಮಿ ಸಿ.ಜೆ.ರಾಯ್ ಆತ್ಮಹತ್ಯೆಗೆ ಕಾರಣ : ಸಹೋದರನ ಆರೋಪ Read More »

ಲೋಕಾಯುಕ್ತ ಬಲೆಗೆ ಬಿದ್ದಾಗ ಕಿರುಚಾಡಿ ಹೈಡ್ರಾಮಾ ಸೃಷ್ಟಿಸಿದ ಭ್ರಷ್ಟ ಇನ್‌ಸ್ಪೆಕ್ಟರ್‌

ಭ್ರಷ್ಟರಿಗೆ ಕೊನೆಗೆ ಆಗುವುದು ಇದೇ ಗತಿ ಎಂದು ಪ್ರತಿಕ್ರಿಯಿಸಿದ ಜನ ಬೆಂಗಳೂರು: ನಾಲ್ಕು ಲಕ್ಷ ರೂ. ಲಂಚ ಪಡೆವಾಗ ರೆಡ್‌ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಅಕರಿಗಳ ಬಲೆಗೆ ಬಿದ್ದಿರುವ ಪೊಲೀಸ್ ಇನ್‌ಸ್ಪೆ ಕ್ಟರ್ ಮಾಡಿರುವ ಹೈಡ್ರಾಮಾದ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗಿದ್ದು, ಈ ವಿಡಿಯೋಗೆ ಜನರಿಂದಲೂ ನಾನಾ ರೀತಿಯ ಪ್ರತಿಕ್ರಿಯೆ ವ್ಯಕ್ತವಾಗಿದೆ. ಹೆಚ್ಚಿನವರು ಭ್ರಷ್ಟರಿಗೆ ಕೊನೆಗೆ ಆಗುವ ಗತಿ ಇದುವೆ ಎಂದು ಬರೆದುಕೊಂಡಿದ್ದಾರೆ. ಕೆ.ಪಿ. ಅಗ್ರಹಾರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಗೋವಿಂದರಾಜು 4 ಲಕ್ಷ ರೂ.

ಲೋಕಾಯುಕ್ತ ಬಲೆಗೆ ಬಿದ್ದಾಗ ಕಿರುಚಾಡಿ ಹೈಡ್ರಾಮಾ ಸೃಷ್ಟಿಸಿದ ಭ್ರಷ್ಟ ಇನ್‌ಸ್ಪೆಕ್ಟರ್‌ Read More »

12 ರೋಲ್ಸ್‌ರಾಯ್ಸ್‌ ಕಾರುಗಳ ಒಡೆಯ ಆತ್ಮಹತ್ಯೆ ಮಾಡಿಕೊಂಡದ್ದೇಕೆ?

ಉದ್ಯಮ ವಲಯವನ್ನು ಆಘಾತಕ್ಕೆ ತಳ್ಳಿದ ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷನ ಆತ್ಮಹತ್ಯೆ ಬೆಂಗಳೂರು: ಬೆಂಗಳೂರಿನಲ್ಲಿ ಸಾವಿರಾರು ಕೋಟಿ ರೂ. ಸಾಮ್ರಾಜ್ಯ ಕಟ್ಟಿದ ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಮತ್ತು ಸಂಸ್ಥಾಪಕ ಕೇರಳ ಮೂಲದ ಸಿ.ಜೆ ರಾಯ್ ಶುಕ್ರವಾರ ತಮ್ಮ ಕಚೇರಿಯಲ್ಲಿ ಆದಾಯ ಕರ ಇಲಾಖೆ ಅಧಿಅಕರಿಗಳ ದಾಳಿ ನಡೆಯುತ್ತಿರುವಾಗಲೇ ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಘಟನೆ ಉದ್ಯಮ ವಲಯಕ್ಕೆ ತೀವ್ರ ಆಘಾತ ಉಂಟು ಮಾಡಿದೆ. ದೇಶದ ಅತ್ಯಂತ ಶ್ರೀಮಂತ ಉದ್ಯಮಿಗಳಲ್ಲಿ ಒಬ್ಬರಾಗಿದ್ದ ಸಿ.ಜೆ ರಾಯ್ ಅವರ

12 ರೋಲ್ಸ್‌ರಾಯ್ಸ್‌ ಕಾರುಗಳ ಒಡೆಯ ಆತ್ಮಹತ್ಯೆ ಮಾಡಿಕೊಂಡದ್ದೇಕೆ? Read More »

ಬಸ್‌ ನಿಲ್ದಾಣಗಳಲ್ಲಿ ಬ್ಯಾಗ್‌ ಕಳ್ಳತನ ಮಾಡುತ್ತಿದ್ದ ಕಳ್ಳ ಸೆರೆ

ಮಂಗಳೂರು: ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬೆಲೆಬಾಳುವ ಸೊತ್ತುಗಳಿರುವ ಬ್ಯಾಗ್‌ಗಳನ್ನು ಕಳ್ಳತನ ಮಾಡುತ್ತಿದ್ದ ಅಂತರ್‌ಜಿಲ್ಲಾ ಕಳ್ಳನನ್ನು ಮಂಗಳೂರು ಬರ್ಕೆ ಪೊಲೀಸರು ಬಂಧಿಸಿ 46.28 ಗ್ರಾಂ ತೂಕದ 6,47,920 ರೂ. ಬೆಲೆಬಾಳುವ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತನನ್ನು ಮಡಿಕೇರಿಯ ತ್ಯಾಗರಾಜ್ ಕಾಲೋನಿ ನಿವಾಸಿ ಮಹಮ್ಮದ್ ಇಮ್ರಾನ್ ಎನ್.ಎಂ(44) ಎಂದು ಗುರುತಿಸಲಾಗಿದೆ. ಆರೋಪಿಯು ಬಸ್ ನಿಲ್ದಾಣಗಳಲ್ಲಿ ಒಟ್ಟು 11 ಬ್ಯಾಗ್ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ ಎಂದು ವಿಚಾರಣೆ ವೇಳೆ ತಿಳಿದುಬಂದಿದೆ. ಆತನ ಪತ್ತೆಗಾಗಿ ವಿಶೇಷ ತಂಡವನ್ನು ರಚಿಸಲಾಗಿತ್ತು. ಆರೋಪಿಯನ್ನು ಜ.28ರಂದು ಮಂಗಳೂರು ಸೆಂಟ್ರಲ್

ಬಸ್‌ ನಿಲ್ದಾಣಗಳಲ್ಲಿ ಬ್ಯಾಗ್‌ ಕಳ್ಳತನ ಮಾಡುತ್ತಿದ್ದ ಕಳ್ಳ ಸೆರೆ Read More »

error: Content is protected !!
Scroll to Top