ಅಪರಾಧ

ರೈಲ್ವೆ ಪೊಲೀಸರಿಂದ ವಾಯುಪಡೆಯ ನಿವೃತ್ತ ಅಧಿಕಾರಿಗೆ ಹಲ್ಲೆ  ನಡೆಸಿರುವ ಆರೋಪ

ಮಂಗಳೂರು: ಮಂಗಳೂರಿನ ಸೆಂಟ್ರಲ್ ರೈಲ್ವೆ ನಿಲ್ದಾಣದ ಬೆಂಚ್ ಮೇಲೆ ನಿಶಕ್ತಿಯಿಂದ ಮಲಗಿದ್ದ ವ್ಯಕ್ತಿಗೆ ರೈಲ್ವೆ ಪೊಲೀಸರು ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಪೊಲೀಸರು ಹಲ್ಲೆ ಮಾಡಿದ ಪರಿಣಾಮ ಕಾಲು ತುಂಡರಿಸುವಂತಾಗಿದೆ ಎಂದು ಕೇರಳ ಮೂಲದ ವಾಯುಪಡೆಯ ನಿವೃತ್ತ ಅಧಿಕಾರಿ ಪಿ.ವಿ. ಸುರೇಶನ್ ಎಂಬವರ ಆರೋಪವನ್ನು ದಕ್ಷಿಣ ರೈಲ್ವೇಯ ಪಾಲಕ್ಕಾಡ್ ವಿಭಾಗ ತಳ್ಳಿಹಾಕಿದೆ. ಘಟನೆಗೆ ಸಂಬಂಧಿಸಿದ ಸಂಪೂರ್ಣ ಚಿತ್ರಣ ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಕರ್ತವ್ಯದಲ್ಲಿದ್ದ ರೈಲ್ವೆ ಪೊಲೀಸ್ ಸಿಬ್ಬಂದಿ ಫೆ.1 ರಂದು ದೂರುದಾರ ಸುರೇಶನ್‌ಗೆ […]

ರೈಲ್ವೆ ಪೊಲೀಸರಿಂದ ವಾಯುಪಡೆಯ ನಿವೃತ್ತ ಅಧಿಕಾರಿಗೆ ಹಲ್ಲೆ  ನಡೆಸಿರುವ ಆರೋಪ Read More »

ಕಾರವಾರ ನೌಕಾನೆಲೆ ಮಾಹಿತಿ ಪಾಕಿಸ್ಥಾನಕ್ಕೆ ಸೋರಿಕೆ : ಇಬ್ಬರ ಬಂಧನ

ಐಎಸ್‌ಐ ಏಜೆಂಟ್‌ ಹನಿಟ್ರ್ಯಾಪ್‌ಗೆ ಬಿದ್ದು ಮಹತ್ವದ ಮಾಹಿತಿಗಳನ್ನು ನೀಡಿದ್ದ ನೌಕರರು ಕಾರವಾರ : ಕಾರವಾರ ನೌಕಾನೆಲೆಯ ಮಾಹಿತಿ ಸೋರಿಕೆ ಮಾಡುತ್ತಿದ್ದ ಆರೋಪದಲ್ಲಿ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಮುದುಗಾ ಗ್ರಾಮದ ವೇತನ ತಾಂಡೇಲ್ ಹಾಗೂ ಹಳವಳ್ಳಿಯ ಅಕ್ಷಯ್ ನಾಯ್ಕ್ ಎಂಬಿಬ್ಬರನ್ನು ಹೈದರಾಬಾದ್ ಮೂಲದ ಎನ್​ಐಎ ಪೊಲೀಸರು ಬಂಧಿಸಿದ್ದಾರೆ. ಇಬ್ಬರ ಬಗ್ಗೆ ಮಾಹಿತಿ ಕಲೆಹಾಕಿದ್ದ ಎನ್​ಐಎ ತಂಡ ಸೋಮವಾರ ಕಾರವಾರಕ್ಕೆ ಆಗಮಿಸಿ ಕಾರ್ಯಾಚರಣೆ ನಡೆಸಿದೆ.ಕಾರವಾರ ನೌಕಾನೆಲೆಯ ಮಾಹಿತಿ ಸೋರಿಕೆ ವಿಚಾರವಾಗಿ 2024ರ ಆಗಸ್ಟ್ ತಿಂಗಳಲ್ಲಿ ಮೂವರನ್ನು ವಿಚಾರಣೆ

ಕಾರವಾರ ನೌಕಾನೆಲೆ ಮಾಹಿತಿ ಪಾಕಿಸ್ಥಾನಕ್ಕೆ ಸೋರಿಕೆ : ಇಬ್ಬರ ಬಂಧನ Read More »

ರೈಲು ಹಳಿಯ ಕಬ್ಬಿಣ ಹೆಕ್ಕಿದ ಬಾಲಕರಿಗೆ ಹಲ್ಲೆ ಮಾಡಿದ ಕೊಂಕಣ ರೈಲ್ವೇ ಗ್ಯಾಂಗ್‌ಮ್ಯಾನ್

ರೈಲ್ವೇ ಗ್ಯಾಂಗ್‌ಮ್ಯಾನ್ ವಿರುದ್ದ ಪ್ರಕರಣ ದಾಖಲು ಪಡುಬಿದ್ರಿ : ರೈಲು ಹಳಿಯ ಕಬ್ಬಿಣ ಹೆಕ್ಕಿದ ಬಾಲಕರಿಗೆ ಕೊಂಕಣ ರೈಲ್ವೇ ಗ್ಯಾಂಗ್‌ಮ್ಯಾನ್ ಹಲ್ಲೆ ನಡೆಸಿರುವ ಘಟನೆ ಫೆ. 17ರಂದು ನಡೆದಿದೆ. ಹಲ್ಲೆ ಮಾಡಿದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿರುವ ಕೊಂಕಣ ರೈಲ್ವೇ ಗ್ಯಾಂಗ್‌ಮ್ಯಾನ್ ವಿರುದ್ಧ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಾಲಕನೋರ್ವನ ತಂದೆ ಹೆಜಮಾಡಿಯ ಅಬ್ದುಲ್ ಖಾದರ್ ಈ ಬಗ್ಗೆ ಪೊಲೀಸರಿಗೆ ದೂರಿದ್ದಾರೆ. ಗ್ರಾಮದ ಅವರಾಲು ಮಟ್ಟು ಎಂಬಲ್ಲಿರುವ ಅಜ್ಜನ ಮನೆಗೆ ಬಾಲಕನೋರ್ವ ತನ್ನ ಗೆಳೆಯನೊಂದಿಗೆ

ರೈಲು ಹಳಿಯ ಕಬ್ಬಿಣ ಹೆಕ್ಕಿದ ಬಾಲಕರಿಗೆ ಹಲ್ಲೆ ಮಾಡಿದ ಕೊಂಕಣ ರೈಲ್ವೇ ಗ್ಯಾಂಗ್‌ಮ್ಯಾನ್ Read More »

ಅಕ್ರಮವಾಗಿ ಕಾರ್ಯಾಚರಿಸುತ್ತಿದ್ದ ಕಸಾಯಿಖಾನೆ ಮೇಲೆ ಪೊಲೀಸರ ದಾಳಿ | ಇಬ್ಬರ ಬಂಧನ

ಗುರುವಾಯನಕೆರೆ : ಶಕ್ತಿನಗರದಲ್ಲಿ ಅಕ್ರಮವಾಗಿ ಕಾರ್ಯಾಚರಿಸುತ್ತಿದ್ದ ಕಸಾಯಿಖಾನೆಗೆ ಬೆಳ್ತಂಗಡಿ ಪೊಲೀಸರು ದಾಳಿ ನಡೆಸಿದ್ದಾರೆ. ಹಿಂದೂ ಸಂಘಟನೆಯ ಕಾರ್ಯಕರ್ತರು ನೀಡಿದ ಮಾಹಿತಿ ಮೇರೆಗೆ ದಾಳಿ ಮಾಡಿದ ಪೊಲೀಸರಿಗೆ ದನದ ಮಾಂಸ ಕತ್ತರಿಸುತ್ತಿದ್ದ ಇಬ್ಬರು ಸಿಕ್ಕಿಹಾಕಿಕೊಂಡಿದ್ದಾರೆ. ದಾಳಿ ವೇಳೆ ದನದ ಮಾಂಸ ಮತ್ತು ಪುಟ್ಟ ಕರು ಪತ್ತೆಯಾಗಿದ್ದು, ಪೊಲೀಸರ ಕಣ್ಣು ತಪ್ಪಿಸಲು ರಾತ್ರಿಯ ಬದಲು ಹಗಲಿನಲ್ಲಿ ಕಾರ್ಯಾಚರಿಸುತ್ತಿದ್ದಾರೆಂದು ಸ್ಥಳೀಯರು ಆರೋಪಿಸಿದ್ದಾರೆ ಅನ್ವ‌ರ್ ಎಂಬವರಿಗೆ ಸೇರಿದ ಜಾಗದಲ್ಲಿ ಅಕ್ರಮ ಕಸಾಯಿಖಾನೆ ನಡೆಸುತ್ತಿದ್ದು, ವಿಷಯ ತಿಳಿದು ಸ್ಥಳೀಯರು ಅಪಾರ ಸಂಖ್ಯೆಯಲ್ಲಿ ಸೇರಿದ್ದರು.

ಅಕ್ರಮವಾಗಿ ಕಾರ್ಯಾಚರಿಸುತ್ತಿದ್ದ ಕಸಾಯಿಖಾನೆ ಮೇಲೆ ಪೊಲೀಸರ ದಾಳಿ | ಇಬ್ಬರ ಬಂಧನ Read More »

ಬಾಲಕಿಯ ಪ್ರಜ್ಞೆ ತಪ್ಪಿಸಿ ಮನೆಯಿಂದ ಹಾಡಹಗಲೇ ದರೋಡೆ

ಅರಿವಳಿಕೆ ಸ್ಪ್ರೇ ಮಾಡಿ 30 ಪವನ್‌ ಆಭರಣ ದರೋಡೆ ಮೂಡುಬಿದಿರೆ : ಹಾಡಹಗಲೇ ಮನೆಗೆ ನುಗ್ಗಿ ಮನೆಯಲ್ಲಿದ್ದ ಬಾಲಕಿಯ ಪ್ರಜ್ಞೆ ತಪ್ಪಿಸಿ ಸುಮಾರು 30 ಪವನ್‌ ಚಿನ್ನಾಭರಣ ದರೋಡೆ ಮಾಡಿದ ಘಟನೆ ನಿನ್ನೆ ಮೂಡುಬಿದಿರೆ ಸಮೀಪ ಸಂಭವಿಸಿದೆ. ಮೂಡುಬಿದಿರೆ ತಾಲೂಕಿನ ಅಳಿಯೂರಿನ ನೇಲಡೆಯ ಪ್ರಶಾಂತ್ ಜೈನ್ ಎಂಬವರ ಮನೆಗೆ ಹಾಡಹಗಲೇ ನುಗ್ಗಿದ ದರೋಡೆಕೋರರು ಮೂರೂವರೆ ಲಕ್ಷ ರೂ. ಮೌಲ್ಯದ ಸುಮಾರು 30 ಪವನ್ ತೂಕದ ಚಿನ್ನಾಭರಣಗಳನ್ನು ದೋಚಿದ್ದಾರೆ. ಪ್ರಶಾಂತ್ ಜೈನ್ ಮತ್ತು ಅವರ ಪುತ್ರ ಮೂಲ್ಕಿಯಲ್ಲಿ ಅಡುಗೆ

ಬಾಲಕಿಯ ಪ್ರಜ್ಞೆ ತಪ್ಪಿಸಿ ಮನೆಯಿಂದ ಹಾಡಹಗಲೇ ದರೋಡೆ Read More »

ಅಪಾರ್ಟ್‌ಮೆಂಟ್‌ನಲ್ಲಿ ಒಂದೇ ಕುಟುಂಬದ ನಾಲ್ವರ ಶವ ಪತ್ತೆ

ಮೈಸೂರು: ನಗರದ ಅಪಾರ್ಟ್‍ಮೆಂಟ್ ಒಂದರಲ್ಲಿ ಒಂದೇ ಕುಟುಂಬದ ನಾಲ್ವರ ಶವ ಪತ್ತೆಯಾಗಿದೆ. ಪತ್ನಿ ಹಾಗೂ ಮಕ್ಕಳಿಗೆ ವಿಷ ನೀಡಿ ವ್ಯಕ್ತಿ ನೇಣಿಗೆ ಶರಣಾಗಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ವಿಶ್ವೇಶ್ವರಯ್ಯ ನಗರದ ಅಪಾರ್ಟ್‍ಮೆಂಟ್‍ನಲ್ಲಿ ಈ ಘಟನೆ ನಡೆದಿದೆ. ಮೃತರನ್ನು ಚೇತನ್ (45), ರೂಪಾಲಿ (43), ಪ್ರಿಯಂವದಾ ಮತ್ತು ಕುಶಾಲ್ (15) ಎಂದು ಗುರುತಿಸಲಾಗಿದೆ. ಚೇತನ್ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಉಳಿದವರ ಮೃತದೇಹಗಳು ಅಪಾರ್ಟ್‍ಮೆಂಟ್‍ನಲ್ಲಿ ಪತ್ತೆಯಾಗಿವೆ. ಚೇತನ್ ವಿಷ ನೀಡಿ ಮನೆಯವರನ್ನು ಸಾಯಿಸಿ, ಬಳಿಕ ತಾನು ನೇಣು

ಅಪಾರ್ಟ್‌ಮೆಂಟ್‌ನಲ್ಲಿ ಒಂದೇ ಕುಟುಂಬದ ನಾಲ್ವರ ಶವ ಪತ್ತೆ Read More »

ಕಳ್ಳ ಪೊಲೀಸ್‌ ಆಟವಾಡುವಾಗ ಬಾಲಕನ ಕೈಯಲಿದ್ದ ಬಂದೂಕಿನಿಂದ ಸಿಡಿದ ಗುಂಡು : 3 ವರ್ಷದ ಮಗು ಸಾವು

ಮಂಡ್ಯ : ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನಲ್ಲಿ 13 ವರ್ಷದ ಬಾಲಕನೊಬ್ಬ ಆಟವಾಡುವಾಗ ಆಕಸ್ಮಿಕವಾಗಿ ತನ್ನ 3 ವರ್ಷದ ತಮ್ಮನನ್ನು ಮೇಲೆ ಗುಂಡು ಹಾರಿಸಿ ಕೊಂದಿರುವ ಘಟನೆ ಸಂಭವಿಸಿದೆ. ಗುಂಡು ತಗುಲಿದ ಪರಿಣಾಮ ಮಗುವಿನ ಹೊಟ್ಟೆ ಛಿದ್ರವಾಗಿದ್ದು ಪ್ರಾಣಬಿಟ್ಟಿದೆ. ನಾಗಮಂಗಲದ ದೊಂದೇಮಾದಿಹಳ್ಳಿಯಲ್ಲಿ ಕಾಂಗ್ರೆಸ್ ಮುಖಂಡ ನರಸಿಂಹಮೂರ್ತಿ ಎಂಬುವರಿಗೆ ಸೇರಿದ ಕೋಳಿ ಫಾರಂನಲ್ಲಿ ಈ ಘಟನೆ ನಡೆದಿದೆ. ಕೋಳಿಫಾರಂನಲ್ಲಿ ಭದ್ರತೆಗಾಗಿ ಗುಂಡು ತುಂಬಿದ ಒಂದು ಅಸಲಿ ಗನ್‌ ಇಡಲಾಗಿತ್ತು. ಪಶ್ಚಿಮ ಬಂಗಾಳ ಮೂಲದ ಶಶಾಂಕ್ ಹಾಗೂ ಲಿಪಿಕ ದಂಪತಿ

ಕಳ್ಳ ಪೊಲೀಸ್‌ ಆಟವಾಡುವಾಗ ಬಾಲಕನ ಕೈಯಲಿದ್ದ ಬಂದೂಕಿನಿಂದ ಸಿಡಿದ ಗುಂಡು : 3 ವರ್ಷದ ಮಗು ಸಾವು Read More »

ನಾರ್ಶದ ಬೀಡಿ ಉದ್ಯಮಿ ಮನೆ ದರೋಡೆ ಪ್ರಕರಣ : ಪೊಲೀಸ್‌ ಅಧಿಕಾರಿ ಸಹಿತ ಇನ್ನೂ ನಾಲ್ವರು ಸೆರೆ

ಮಂಗಳೂರು : ವಿಟ್ಲ ಸಮೀಪ ಬೋಳಂತೂರಿನ ನಾರ್ಶದ ಬೀಡಿ ಉದ್ಯಮಿ ಸುಲೈಮಾನ್‌ ಹಾಜಿಯವರ ಮನೆಯಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಸೋಗಿನಲ್ಲಿ ದರೋಡೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದ ಪೊಲೀಸ್‌ ಅಧಿಕಾರಿಯೊಬ್ಬನ ಸಹಿತ ಇನ್ನೂ ನಾಲ್ವರನ್ನು ತನಿಖಾ ತಂಡ ಬಂಧಿಸಿದೆ. ಕೇರಳದ ಕೊಡಂಗಲ್ಲೂರು ಪೊಲೀಸ್‌ ಠಾಣೆಯ ಎಎಸ್‌ಐ ಶಹೀರ್‌ ಬಾಬು ಸೆರೆಯಾಗಿರುವ ಪೊಲೀಸ್‌ ಅಧಿಕಾರಿ. ಈತನ ಸೆರೆಯೊಂದಿಗೆ ಈ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾದ ಆರೋಪಿಗಳ ಸಂಖ್ಯೆ ಏಳಕ್ಕೇರಿದೆ. ಇಕ್ಬಾಲ್‌ ಪರ್ಲಿಯ ಬಂಟ್ವಾಳ (38), ಸಿರಾಜುದ್ದೀನ್‌ ನಾರ್ಶ (37) ಮತ್ತು ಅಬ್ಸಾರ್‌

ನಾರ್ಶದ ಬೀಡಿ ಉದ್ಯಮಿ ಮನೆ ದರೋಡೆ ಪ್ರಕರಣ : ಪೊಲೀಸ್‌ ಅಧಿಕಾರಿ ಸಹಿತ ಇನ್ನೂ ನಾಲ್ವರು ಸೆರೆ Read More »

ಕೆರೆಗೆ ಹಾರಿ ಆತ್ಮಹತ್ಯೆ

ವಿಟ್ಲ: ವ್ಯಕ್ತಿಯೊಬ್ಬರುರ್ವರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಟ ಮುಡೂರುನ ಅಲಂಗಾರು ಎಂಬಲ್ಲಿ ನಡೆದಿದೆ. ರಮೇಶ್ ಪಲ್ಲೆದಗುರಿ (37) ಆತ್ಮಹತ್ಯೆ ಮಾಡಿಕೊಂಡವರು. ಕೂಲಿ ಕೆಲಸ ಮಾಡಿಕೊಂಡಿದ್ದ ರಮೇಶ್ ಶನಿವಾರ ಕೆರೆಗೆ ಹಾರಿದ್ದರು. ಭಾನುವಾರ ಅವರ ಮೃತದೇಹ ಪತ್ತೆಯಾಗಿದೆ. ಬಳಿಕ ಶವ ಮೇಲಕ್ಕೆತ್ತುವಲ್ಲಿ ಪ್ರೆಂಡ್ಸ್ ವಿಟ್ಲದ ಮುರಳಿ ಎಂಡ್ ಟೀಮ್ ಸಹಕರಿಸಿದರು.  ಮೃತರು ಪತ್ನಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ.

ಕೆರೆಗೆ ಹಾರಿ ಆತ್ಮಹತ್ಯೆ Read More »

ದಿಲ್ಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ ಸಂಭವಿಸಿದ್ದು ಹೇಗೆ?

ಮೃತಪಟ್ಟವರ ಕುಟುಂಬಗಳಿಗೆ ತಲಾ 10 ಲ.ರೂ. ಪರಿಹಾರ ಹೊಸದಿಲ್ಲಿ: ಇಲ್ಲಿನ ರೈಲು ನಿಲ್ದಾಣದಲ್ಲಿ ನಿನ್ನೆ ರಾತ್ರಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ತಲಾ 10 ಲಕ್ಷ ರೂ. ಹಾಗೂ ಗಂಭೀರವಾಗಿ ಗಾಯಗೊಂಡವರಿಗೆ ತಲಾ 2.5 ಲಕ್ಷ ರೂ. ಪರಿಹಾರ ಕೇಂದ್ರ ಸರ್ಕಾರ ಘೋಷಿಸಿದೆ.ಹೊಸದಿಲ್ಲಿ ರೈಲು ನಿಲ್ದಾಣದಲ್ಲಿ ಶನಿವಾರ ರಾತ್ರಿ ಭೀಕರ ಕಾಲ್ತುಳಿತದಿಂದ ಕುಂಭಮೇಳಕ್ಕೆ ಹೊರಟಿದ್ದ 18 ಜನ ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಮೃತರಲ್ಲಿ 11 ಮಹಿಳೆಯರು ಹಾಗೂ ನಾಲ್ಕು ಮಕ್ಕಳು ಸೇರಿದ್ದಾರೆ ಎಂದು ವರದಿಯಾಗಿದೆ.

ದಿಲ್ಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ ಸಂಭವಿಸಿದ್ದು ಹೇಗೆ? Read More »

error: Content is protected !!
Scroll to Top