ಅಪರಾಧ

ನಕ್ಸಲರಿಗೆ ಅಸ್ತ್ರವಾಗಿ ಸಿಕ್ಕಿದ ಕಸ್ತೂರಿ ರಂಗನ್‌ ವರದಿ ಜಾರಿ ವಿಷಯ

ಮುಂಡಗಾರು ಲತಾ ನೇAತೃತ್ವದ ನಕ್ಸಲ್‌ ತಂಡ ಸಕ್ರಿಯ ಕಾರ್ಕಳ : ಪಶ್ಚಿಮ ಘಟ್ಟದ ಕಾಡಿನಂಚಿನಲ್ಲಿ ಕೊಂಚ ಸಮಯ ತಣ್ಣಗಾಗಿದ್ದ ನಕ್ಸಲ್‌ ಚಟುವಟಿಕೆ ಮತ್ತೆ ಜೀವ ಪಡೆದುಕೊಂಡಿರುವುದು ಕಳೆದ ಒಂದು ವಾರದ ಬೆಳವಣಿಗೆಯಿಂದ ದೃಢಪಟ್ಟಿದೆ. ಹೋರಾಡಲು ಗಟ್ಟಿಯಾದ ವಿಷಯ ಇಲ್ಲದೆ ಮತ್ತು ನಿರಂತರವಾದ ಪ್ರತಿರೋಧದಿಂದಾಗಿ ಕಳೆದ ಕೆಲ ವರ್ಷಗಳಿಂದ ಪಶ್ಚಿಮ ಘಟ್ಟದ ಅಂಚಿನ ಪ್ರದೇಶಗಳಲ್ಲಿ ನಕ್ಸಲರು ಹೆಚ್ಚು ಚಟುವಟಿಕೆ ನಡೆಸುತ್ತಿರಲಿಲ್ಲ. ಆದರೆ ಯಾವಾಗ ಸರಕಾರ ಕುದುರೆಮುಖ ರಾಷ್ಟ್ರೀಯ ಅರಣ್ಯದ ಒತುವರಿ ತೆರವಿಗೆ ಆದೇಶಿಸಿತೋ ಆಗಲೇ ಎದ್ದು ಕುಳಿತ ನಕ್ಸಲರು […]

ನಕ್ಸಲರಿಗೆ ಅಸ್ತ್ರವಾಗಿ ಸಿಕ್ಕಿದ ಕಸ್ತೂರಿ ರಂಗನ್‌ ವರದಿ ಜಾರಿ ವಿಷಯ Read More »

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ | ಆರೋಪಿಗೆ 3 ವರ್ಷಗಳ ಜೈಲು ಶಿಕ್ಷೆ ವಿಧಿಸಿದ ಜಿಲ್ಲಾ ಸತ್ರ ನ್ಯಾಯಾಲಯ

ಪುತ್ತೂರು: ಅಪ್ರಾಪ್ತ ಬಾಲಕಿಯ ಜೊತೆಗೆ ಅನುಚಿತವಾಗಿ ವರ್ತಿಸಿದ ಪ್ರಕರಣಕ್ಕೆ ಸಂಬಂಧಿಸಿ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ಅಪರಾಧಿಗೆ ಪೋಕ್ಸೋ ಕಾಯ್ದೆಯಡಿ 3 ವರ್ಷಗಳ ಜೈಲು ಶಿಕ್ಷೆ ಮತ್ತು ರೂ.20 ಸಾವಿರ ದಂಡ ವಿಧಿಸಿದೆ. ದಂಡ ತೆರಲು ತಪ್ಪಿದಲ್ಲಿ ಮತ್ತೆ 6 ತಿಂಗಳ ಕಾರಾಗೃಹ ಶಿಕ್ಷೆ ವಿಧಿಸಿ ಪುತ್ತೂರು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಧೀಶ ಸರಿತಾ ಡಿ ಅವರು ತೀರ್ಪು ನೀಡಿದ್ದಾರೆ. ಕಬಕ ಗ್ರಾಮದ ವಿದ್ಯಾಪುರ ನಿವಾಸಿ ಮಹಮ್ಮದ್ ಮುಸ್ತಾಫ ಯಾನೆ ಮುಸ್ತಾಫ

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ | ಆರೋಪಿಗೆ 3 ವರ್ಷಗಳ ಜೈಲು ಶಿಕ್ಷೆ ವಿಧಿಸಿದ ಜಿಲ್ಲಾ ಸತ್ರ ನ್ಯಾಯಾಲಯ Read More »

ಕೊಪ್ಪದ ಮನೆಯೊಂದರಲ್ಲಿ ಮೂರು ಬಂದೂಕು ಪತ್ತೆ : ನಕ್ಸಲರು ನುಸುಳಿರುವ ಶಂಕೆ

ಅರಣ್ಯ ಒತ್ತುವರಿ ತೆರವು ಆದೇಶದ ಬಳಿಕ ನಕ್ಸಲರು ಸಕ್ರಿಯ? ಕೊಪ್ಪ : ಕಾರ್ಕಳ ಮತ್ತು ಚಿಕ್ಕಮಗಳೂರಿನಲ್ಲಿ ಇತ್ತೀಚೆಗೆ ನಕ್ಸಲ್‌ ಓಡಾಟದ ಶಂಕೆ ವ್ಯಕ್ತವಾದ ಬೆನ್ನಲ್ಲೇ ನಕ್ಸಲ್‌ ನಿಗ್ರಹ ಪಡೆಯವರು ಚಿಕ್ಕಮಗಳೂರಿನ ಕೊಪ್ಪದಲ್ಲಿ ಕಾಡಂಚಿನಲ್ಲಿರುವ ಮನೆಯೊಂದರಿಂದ ಮೂರು ಬಂದೂಕುಗಳನ್ನು ವಶಪಡಿಸಿಕೊಂಡಿದ್ದಾರೆ. ಇದು ಈ ಭಾಗದಲ್ಲಿ ನಕ್ಸಲರು ಓಡಾಡಿದ ಅನುಮಾನವನ್ನು ದೃಢಪಡಿಸುತ್ತದೆ ಎನ್ನಲಾಗಿದೆ. ಚಿಕ್ಕಮಗಳೂರಿನಲ್ಲಿ ಕೆಲ ದಿನಗಳ ಹಿಂದೆ ನಕ್ಸಲರು ಓಡಾಡಿದ ಬಗ್ಗೆ ಸುದ್ದಿಗಳು ಹರಿದಾಡಿದ್ದವು. ಇದಕ್ಕೂ ಎರಡು ದಿನ ಮೊದಲು ಕಾರ್ಕಳದ ಈದು ಪರಿಸರದಲ್ಲೂ ಇದೇ ಮಾದರಿಯ ಸುದ್ದಿ

ಕೊಪ್ಪದ ಮನೆಯೊಂದರಲ್ಲಿ ಮೂರು ಬಂದೂಕು ಪತ್ತೆ : ನಕ್ಸಲರು ನುಸುಳಿರುವ ಶಂಕೆ Read More »

ಅಲ್‌ ಖೈದಾ ನಂಟಿನ ಶಂಕೆ : ಬಾಂಗ್ಲಾದೇಶ ಪ್ರಜೆಗಳಿಗೆ ಎನ್‌ಐಎ ಶೋಧ

ಕರ್ನಾಟಕ ಸೇರಿ ಒಂಬತ್ತು ರಾಜ್ಯಗಳಲ್ಲಿ ಎನ್‌ಐಎ ದಾಳಿ ಬೆಂಗಳೂರು : ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಅಧಿಕಾರಿಗಳು ಅಲ್‌ ಖೈದಾ ಜಾಲವನ್ನು ಬಯಲಿಗೆಳೆಯುವ ನಿಟ್ಟಿನಲ್ಲಿ ಕರ್ನಾಟಕ ಸೇರಿದಂತೆ ಒಂಬತ್ತು ರಾಜ್ಯಗಳಲ್ಲಿ ಏಕಕಾಲಕ್ಕೆ ದಾಳಿ ಮಾಡಿ, ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಭಾರತವನ್ನು ಅಸ್ಥಿರಗೊಳಿಸಲು ಅಲ್​ ಖೈದಾ ಉಗ್ರ ಸಂಘಟನೆಯ ಸಂಚು ಮಾಡಿರುವ ಕುರಿತು ಖಚಿತ ಮಾಹಿತಿ ಸಿಕ್ಕಿದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎಂದು ತಿಳಿದುಬಂದಿದೆ. ಭಾರತದಲ್ಲಿ ನೆಲೆಸಿರುವ ಬಾಂಗ್ಲಾದೇಶ ಪ್ರಜೆಗಳು ಅಲ್ ಖೈದಾ ಜೊತೆಗೆ ನಂಟು ಹೊಂದಿದ್ದಾರೆ.

ಅಲ್‌ ಖೈದಾ ನಂಟಿನ ಶಂಕೆ : ಬಾಂಗ್ಲಾದೇಶ ಪ್ರಜೆಗಳಿಗೆ ಎನ್‌ಐಎ ಶೋಧ Read More »

ಬಿಜೆಪಿ ಸದಸ್ಯತ್ವ ಅಭಿಯಾನದ ವೇಳೆ ಕಾಂಗ್ರೆಸ್ ವಲಯಾಧ್ಯಕ್ಷರಿಂದ ವೀಡಿಯೋ ಚಿತ್ರೀಕರಣ : ಮಾತಿನ ಚಕಮಕಿ

ಪುತ್ತೂರು: ಬಿಜೆಪಿ ಸದಸ್ಯತ್ವ ಅಭಿಯಾನದ ವೇಳೆ ಕಾಂಗ್ರೆಸ್ ವಲಯಾಧ್ಯಕ್ಷರೊಬ್ಬರು ವೀಡಿಯೋ ಚಿತ್ರೀಕರಣ ಮಾಡಿದ ಪರಿಣಾಮ ಮಾತಿಕನ ಚಕಮಕಿ ನಡೆದಿದೆ. ಪುತ್ತೂರು ನಗರಸಭೆಯ ಮುಂಭಾಗ ಕೌಂಟರ್ ಹಾಕಿ ಬಿಜೆಪಿ ಸದಸ್ಯತ್ವ ಅಭಿಯಾನ ನಡೆಯುತ್ತಿದ್ದ ವೇಳೆ ಈ ವೀಡಿಯೋ ಚಿತ್ರೀಕರಣ ಮಾಡಿದ್ದಾರೆ. ಈ ವೇಳೆ ಬಿಜೆಪಿ ಕಾರ್ಯಕರ್ತರು ಆಕ್ಷೇಪ ವ್ಯಕ್ತ ಪಡಿಸಿ ಮಾತಿನ ಚಕಮಕಿ ನಡೆದಿದೆ. ಮುಂಡೂರು ವಲಯ ಕಾಂಗ್ರೆಸ್ ಅಧ್ಯಕ್ಷ ಸುಪ್ರೀತ್ ಕಣ್ಮರಾಯ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದರು. ಇದನ್ನು ಗಮನಿಸಿದ ಬಿಜೆಪಿ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಮೇಲೆ

ಬಿಜೆಪಿ ಸದಸ್ಯತ್ವ ಅಭಿಯಾನದ ವೇಳೆ ಕಾಂಗ್ರೆಸ್ ವಲಯಾಧ್ಯಕ್ಷರಿಂದ ವೀಡಿಯೋ ಚಿತ್ರೀಕರಣ : ಮಾತಿನ ಚಕಮಕಿ Read More »

ಭದ್ರತಾ ಪಡೆ ಗುಂಡಿಗೆ 11 ಉಗ್ರರು ಬಲಿ

ಹೊಸದಿಲ್ಲಿ : ಮಣಿಪುರದ ಜಿರಿಬಾಮ್‌ ಎಂಬಲ್ಲಿ ಭದ್ರತಾ ಪಡೆಗಳು 11 ಕುಕಿ ಉಗ್ರರನ್ನು ಹತ್ಯೆ ಮಾಡಿದೆ. ಭದ್ರತಾ ಪಡೆ ಶಿಬಿರದ ಮೇಲೆ ನಿನ್ನೆ ರಾತ್ರಿ ಕುಕಿ ಉಗ್ರರು ದಾಳಿ ಮಾಡಿದ್ದು, ಈ ಸಂದರ್ಭದಲ್ಲಿ ನಡೆದ ಭೀಕರ ಗುಂಡಿನ ಕಾಳದಲ್ಲಿ 11 ಕುಕಿ ಉಗ್ರರು ಹತ್ಯೆಯಾಗಿ ಓರ್ವ ಸಿಆರ್‌ಪಿಎಫ್‌ ಜವಾನ ಗಂಭೀರವಾಗಿ ಗಾಯಗೊಂಡಿದ್ದಾರೆ.ಭದ್ರತಾ ಪಡೆ ಶಿಬಿರಕ್ಕೆ ಸಮೀಪವಿದ್ದ ಜಾಕರ್‌ಧುರ್‌ ಎಂಬಲ್ಲಿ ಕುಕಿ ಉಗ್ರರು ಜನವಸತಿಯಿಲ್ಲದ ಮೈತೇಯಿ ಸಮುದಾಯದವರ ನಾಲ್ಕು ಮನೆಗಳನ್ನು ಸುಟ್ಟು ಹಾಕಿದ್ದಾರೆ. ಭಾನುವಾರದಿಂದೀಚೆಗೆ ಮಣಿಪುರದಲ್ಲಿ ಮತ್ತೆ ಹಿಂಸಾಚಾರ

ಭದ್ರತಾ ಪಡೆ ಗುಂಡಿಗೆ 11 ಉಗ್ರರು ಬಲಿ Read More »

ಪತ್ನಿ, ಮಗುವನ್ನು ಕೊಂದು ಆತ್ಮಹತ್ಯೆ ಪ್ರಕರಣ : ಇಬ್ಬರ ಬಂಧನ

ಡೆತ್‌ನೋಟ್‌ನಲ್ಲಿತ್ತು ಪಕ್ಷಿಕೆರೆಯಲ್ಲಿ ನಡೆದ ಬೆಚ್ಚಿಬೀಳಿಸಿದ ಕೃತ್ಯದ ಹಿಂದಿನ ಕಾರಣ ಮಂಗಳೂರು: ಮೂಲ್ಕಿ ಸಮೀಪ ಕೆಮ್ರಾಲ್‌ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಪಕ್ಷಿಕೆರೆಯಲ್ಲಿ ಸಂಭವಿಸಿದ್ದ ಪತ್ನಿ, ಮಗುವನ್ನು ಕೊಂದು ಪತಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಇಬ್ಬರನ್ನು ಮೂಲ್ಕಿ ಠಾಣೆ ಪೊಲೀಸರು ಬಂಧಿಸಿದ್ದಾರೆ.ಮೃತ ಕಾರ್ತಿಕ್‌ನ ತಾಯಿ ಶ್ಯಾಮಲಾ ಭಟ್, ಸಹೋದರಿ ಕಣ್ಮಣಿ ಬಂಧಿತರು. ಆತ್ಮಹತ್ಯೆಗೆ ಮೊದಲು ಕೌಟುಂಬಿಕ ಕಲಹದ ಬಗ್ಗೆ ಕಾರ್ತಿಕ್ ಭಟ್ ಡೆತ್‌ನೋಟ್ ಬರೆದಿದ್ದ. ಈ ಹಿನ್ನೆಲೆಯಲ್ಲಿ ಕಾರ್ತಿಕ್ ಕುಟುಂಬದ ಇಬ್ಬರನ್ನು ಪೊಲೀಸರು

ಪತ್ನಿ, ಮಗುವನ್ನು ಕೊಂದು ಆತ್ಮಹತ್ಯೆ ಪ್ರಕರಣ : ಇಬ್ಬರ ಬಂಧನ Read More »

ಸ್ಯಾನಿಟೈಸರ್ ಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ

ವಿದ್ಯಾರ್ಥಿನಿಯೊಬ್ಬರು ಸ್ಯಾನಿಟೈಸರ್ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನೆರಿಯದ ಹಾಸ್ಟೇಲ್‍ ನಲ್ಲಿ ಇಂದು ಬೆಳಿಗ್ಗೆ ನಡೆದಿದೆ. ನೆರಿಯ ಗ್ರಾಮದ ಅಲಂಗಾಯಿ ವಾಲ್ಮೀಕಿ ಆಶ್ರಮ ಶಾಲೆಯ ಹಾಸ್ಟೆಲ್ ನ ಎಂಟನೇ ತರಗತಿಯಲ್ಲಿ ಓದುತ್ತಿದ್ದ ವಿಜಯಪುರದ ವಿದ್ಯಾರ್ಥಿನಿ ಇಂದು ಬೆಳಿಗ್ಗೆ, ಸ್ಯಾನಿಟೈಸರ್ ಸೇವಿಸಿ ವಾಂತಿ ಮಾಡಿಕೊಂಡು ಅಸ್ವಸ್ಥಗೊಂಡಿದ್ದರು. ತಕ್ಷಣ ಅವಳನ್ನು ಬೆಳ್ತಂಗಡಿ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಕಳೆದ ಕೆಲವು ದಿನಗಳಿಂದ ಮನೆಗೆ ಹೋಗುತ್ತೇನೆ ಇಲ್ಲಿ ಇರುವುದಿಲ್ಲ ಎಂದು ಹೇಳುತಿದ್ದಳು ಎನ್ನಲಾಗಿದ್ದು, ಆತ್ಮಹತ್ಯೆಗೆ ಕಾರಣಗಳು

ಸ್ಯಾನಿಟೈಸರ್ ಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ Read More »

ಮಗುವಿನ ಜೊತೆ ಸೇತುವೆಯಿಂದ ಜಿಗಿಯಲು ಯತ್ನಿಸಿದ ಯುವಕ

ರಕ್ಷಿಸಿ ಎರಡೇಟು ಬಿಗಿದು ಬುದ್ಧಿ ಕಲಿಸಿದ ಜನ ಮಂಗಳೂರು : ಗುರುಪುರ ಸೇತುವೆ ಮೇಲಿಂದ ವ್ಯಕ್ತಿಯೊಬ್ಬ 2 ವರ್ಷದ ಮಗುವಿನ ಜೊತೆ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಿನ್ನೆ ಸಂಜೆ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ಕೈಕಂಬ ನಿವಾಸಿ ಸಂದೀಪ್ ಎಂದು ಗುರುತಿಸಲಾಗಿದೆ. ಸೇತುವೆಯ ತಡೆಗೋಡೆ ಏರಿ ಮಗುವಿನ ಜೊತೆ ಆತ್ಮಹತ್ಯೆಗೆ ಯತ್ನಿಸಿದ್ದು ವಾಹನ ಸವಾರರು ತಡೆದು ರಕ್ಷಿಸಿ ಥಳಿಸಿದ್ದಾರೆ. ಮೊದಲಿಗೆ ಕೆಲ ಮುಸ್ಲಿಂ ಯುವಕರು ಸಂದೀಪ್‌ನ ಮನವೊಲಿಸುವ ಪ್ರಯತ್ನ ಮಾಡಿದ್ದಾಗ ಅವನು ಯಾರನ್ನೂ ಸಮೀಪಕ್ಕೆ ಬಿಟ್ಟುಕೊಂಡಿಲ್ಲ. ಈ

ಮಗುವಿನ ಜೊತೆ ಸೇತುವೆಯಿಂದ ಜಿಗಿಯಲು ಯತ್ನಿಸಿದ ಯುವಕ Read More »

ಬಾಲಕಿಯರ ಹಾಸ್ಟೇಲ್‍ ನಲ್ಲಿ ಸುತ್ತಾಡುತ್ತಿರುವ ಯುವಕ | ಪೊಲೀಸರಿಂದ ತನಿಖೆ

ಪುತ್ತೂರು: ಪುತ್ತೂರಿನ ಬಾಲಕಿಯರ ಹಾಸ್ಟೆಲ್‍ ನಲ್ಲಿ ಯುವಕನೊಬ್ಬ ಸುತ್ತಾಡುತ್ತಿದ್ದ ದೃಶ್ಯಗಳು ಸಿಸಿಟಿವಿ ಯಲ್ಲಿ ಸೆರೆಯಾಗಿದೆ. ಇದೀಗ ಈ ಘಟನೆ ಬಾರಿ ಸದ್ದು ಮಾಡುತ್ತಿದ್ದು ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾದ ದೃಶ್ಯಗಳ ಆಧಾರದ ಮೇರೆಗೆ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಯುವಕ ಕಳ್ಳತನಕ್ಕೆ ಯತ್ನಿಸಿರಬಹುದೆಂಬ ಅನುಮಾನ ಮೂಡಿದ್ದು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.

ಬಾಲಕಿಯರ ಹಾಸ್ಟೇಲ್‍ ನಲ್ಲಿ ಸುತ್ತಾಡುತ್ತಿರುವ ಯುವಕ | ಪೊಲೀಸರಿಂದ ತನಿಖೆ Read More »

error: Content is protected !!
Scroll to Top