ಅಪರಾಧ

ನದಿಗೆ ಹಾರಿದ ಯುವಕನ ಮೃತದೇಹ ಪತ್ತೆ !

ಸುಳ್ಯ: ನದಿಗೆ ಹಾರಿದ್ದ ಯುವಕನ ಮೃತದೇಹವೊಂದು ಇಂದು ಬೆಳಿಗ್ಗೆ ಪತ್ತೆಯಾಗಿದೆ. ಸುಳ್ಯ ತಾಲೂಕಿನ ಅಡ್ಕ ನಿವಾಸಿ ಸಿನಾನ್ (23) ಮೃತಪಟ್ಟ ಯುವಕ. ಅಜ್ಜಾವರ ಗ್ರಾಮದ ಕಾಂತಮಂಗಲ ಸೇತುವೆಯಿಂದ ಯುವಕ ಸಿನಾನ್ ಸೋಮವಾರ ಹೊಳೆಗೆ ಹಾರಿದ್ದರು. ಮಂಗಳವಾರ ಬೆಳಿಗ್ಗೆ ಮೃತದೇಹ ಪತ್ತೆಯಾಗಿರುವುದಾಗಿ ಮಾಹಿತಿ ಲಭಿಸಿದೆ. ಈ ಕುರಿತು ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನದಿಗೆ ಹಾರಿದ ಯುವಕನ ಮೃತದೇಹ ಪತ್ತೆ ! Read More »

‘ಐ ಲವ್ ಯೂ’ ಹೇಳಿದರೆ ಮಾತ್ರ ರಿಚಾರ್ಚ್ | ವಿದ್ಯಾರ್ಥಿನಿಯರಿಂದ ಅಂಗಡಿಯಾತನಿಗೆ ಹಿಗ್ಗಾಮುಗ್ಗ ಥಳಿತ

ರಾಜಸ್ಥಾನ: ಮೊಬೈಲ್ ರಿಚಾರ್ಚ್ ಮಾಡಲು ಮೊಬೈಲ್ ಅಂಗಡಿಗೆ ಬಂದ ಶಾಲಾ ವಿದ್ಯಾರ್ಥಿನಿಯರಿಗೆ ಮೊಬೈಲ್ ಅಂಗಡಿಯಾತ ‘ಐ ಲವ್ ಯೂ’ ಎಂದು ಹೇಳಿದರೆ ಮಾತ್ರ ರೀಚಾರ್ಚ್‍ ಮಾಡುವುದು ಹೇಳಿದ್ದರಿಂದ ಕುಪಿತಗೊಂಡ ವಿದ್ಯಾರ್ಥಿನಿಯರು ಆತನಿಗೆ ಹಿಗ್ಗಾಮುಗ್ಗ ಥಳಿಸಿದ ಘಟನೆ ರಾಜಸ್ಥಾನದ ದಿದ್ಯಾನಾ ಎಂಬಲ್ಲಿ ನಡೆದಿದೆ. ಈ ಕುರಿತು ವೀಡಿಯೋ ಇದೀಗ ವೈರಲ್ ಆಗುತ್ತಿದ್ದು, ಹುಡುಗೀರ ಈ ಕಾರ್ಯಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಒಂದಷ್ಟು ಸ್ಕೂಲ್ ಹುಡೀರು ಐ ಲವ್ ಯು ಹೇಳುವಂತೆ ಪೀಡಿಸಿದಾತನಿಗೆ ನಡು ರಸ್ತೆಯಲ್ಲಿಯೇ ಚಳಿ ಬಿಡಿಸಿದ್ದಾರೆ. ಸ್ಕೂಲ್

‘ಐ ಲವ್ ಯೂ’ ಹೇಳಿದರೆ ಮಾತ್ರ ರಿಚಾರ್ಚ್ | ವಿದ್ಯಾರ್ಥಿನಿಯರಿಂದ ಅಂಗಡಿಯಾತನಿಗೆ ಹಿಗ್ಗಾಮುಗ್ಗ ಥಳಿತ Read More »

ದನಗಳ್ಳನೆಂದು ಭಾವಿಸಿ ವಿದ್ಯಾರ್ಥಿಯನ್ನು ಗುಂಡಿಕ್ಕಿ ಕೊಂದ ಗೋರಕ್ಷಕರು

ಚಂಡೀಗಢ: ದನಗಳ್ಳನೆಂದು ಭಾವಿಸಿ ಪಿಯುಸಿ ವಿದ್ಯಾರ್ಥಿಯೊಬ್ಬನನ್ನು ಗೋರಕ್ಷಕರು ಕಾರಿನಲ್ಲಿ 30 ಕಿ.ಮೀ. ಹಿಂಬಾಲಿಸಿ ಗುಂಡಿಕ್ಕಿ ಹತ್ಯೆಗೈದ ಆಘಾತಕಾರಿ ಘಟನೆ ಹರ್ಯಾಣದ ಫರಿದಾಬಾದ್‍ನಲ್ಲಿ ನಡೆದಿದೆ.ಆರ್ಯನ್ ಮಿಶ್ರಾ ದುಷ್ಕರ್ಮಿಗಳ ದಾಳಿಗೆ ಬಲಿಯಾದ ದುರ್ದೈವಿ. ಆಗಸ್ಟ್ 23ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಅನಿಲ್ ಕೌಶಿಕ್, ವರುಣ್, ಕೃಷ್ಣ, ಆದೇಶ್ ಮತ್ತು ಸೌರಭ್ ಎಂದು ಗುರುತಿಸಲಾಗಿದೆ.ರೆನಾಲ್ಟ್ ಡಸ್ಟರ್ ಮತ್ತು ಟೊಯೊಟಾ ಫಾರ್ಚುನರ್ ಕಾರುಗಳಲ್ಲಿ ಕೆಲವರು ಜಾನುವಾರುಗಳನ್ನು ಕಳ್ಳಸಾಗಾಣಿಕೆ ಮಾಡುತ್ತಿದ್ದಾರೆ

ದನಗಳ್ಳನೆಂದು ಭಾವಿಸಿ ವಿದ್ಯಾರ್ಥಿಯನ್ನು ಗುಂಡಿಕ್ಕಿ ಕೊಂದ ಗೋರಕ್ಷಕರು Read More »

ಅರುಣ್ ಪುತ್ತಿಲರಿಗೆ ಜಾಮೀನು ಮಂಜೂರು | ಸುಳ್ಳು ಆರೋಪಕ್ಕೆ ಕಾನೂನು ಹೋರಾಟಕ್ಕೆ ತಯಾರಿ – ಪುತ್ತಿಲ

ಪುತ್ತೂರು: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಅರುಣ್ ಕುಮಾರ್ ಪುತ್ತಿಲ ಅವರಿಗೆ ಪುತ್ತೂರಿನ ಪ್ರಿನ್ಸಿಪಾಲ್  ಸಿವಿಲ್ ಜಡ್ಜ್ ಹಾಗೂ ಜೆಎಂಎಫ್ ಸಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಮಹಿಳಾ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣದ ಹಿನ್ನಲೆಯಲ್ಲಿ ಕಾನೂನಿಗೆ ಗೌರವ ನೀಡಿ ನ್ಯಾಯಾಲಯಕ್ಕೆ ತನ್ನ ವಕೀಲರಾದ ನರಸಿಂಹ ಪ್ರಸಾದ್ ಮೂಲಕ ಹಾಜರಾದ ಅರುಣ್ ಕುಮಾರ್ ಪುತ್ತಿಲರಿಗೆ ಪುತ್ತೂರಿನ ಪ್ರಿನ್ಸಿಪಾಲ್  ಸಿವಿಲ್ ಜಡ್ಜ್ ಹಾಗೂ ಜೆಎಂಎಫ್ ಸಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ನ್ಯಾಯಾಂಗ ವ್ಯವಸ್ಥೆಯಲ್ಲಿ ನಂಬಿಕೆ ಇದ್ದು ಮುಂದಿನ

ಅರುಣ್ ಪುತ್ತಿಲರಿಗೆ ಜಾಮೀನು ಮಂಜೂರು | ಸುಳ್ಳು ಆರೋಪಕ್ಕೆ ಕಾನೂನು ಹೋರಾಟಕ್ಕೆ ತಯಾರಿ – ಪುತ್ತಿಲ Read More »

ಅರುಣ್ ಕುಮಾರ್ ಪುತ್ತಿಲ ವಿರುದ್ಧ ಲೈಂಗಿಕ ದೌರ್ಜನ್ಯ ದೂರು | ಪ್ರಕರಣ ದಾಖಲು

ಪುತ್ತೂರು: ಪುತ್ತಿಲ ಪರಿವಾರ ಸಂಸ್ಥಾಪಕ ಅರುಣ್ ಕುಮಾ‌ರ್ ಪುತ್ತಿಲ ವಿರುದ್ಧ ಮಹಿಳೆಯೊಬ್ಬರು ಪುತ್ತೂರು ಮಹಿಳಾ ಠಾಣೆಗೆ ದೂರು  ನೀಡಿದ್ದು ಪ್ರಕರಣ ದಾಖಲಾಗಿದೆ. ಬೆಂಗಳೂರಿನ ಪೈ ವಿಸ್ಟಾ ಹೋಟೆಲ್ ಗೆ ಆತ್ಮಹತ್ಯೆ ಮಾಡುವುದಾಗಿ ಬೆದರಿಸಿ 2023ರ ಜೂನ್ ತಿಂಗಳಲ್ಲಿ ಮಹಿಳೆಯೊಬ್ಬರನ್ನು ಕರೆಸಿಕೊಂಡು ಇಚ್ಚೆಗೆ ವಿರುದ್ಧವಾಗಿ ಲೈಂಗಿಕ ದೌರ್ಜನ್ಯ ನಡೆಸಿದ್ದೂ ಅಲ್ಲದೆ, ನಂಬಿಕೆ ದ್ರೋಹ, ಮಾನಹಾನಿ, ಬ್ಲಾಕ್ ಮೇಲಿಂಗ್, ಶಾರೀರಿಕ ಮತ್ತು ಮಾನಸಿಕ ಪೀಡನೆ, ಕೊಲೆ ಬೆದರಿಕೆಯನ್ನು ಹಾಕುತ್ತಿರುವ ಬಗ್ಗೆ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 2023ರ ಜೂನ್‌ ತಿಂಗಳಲ್ಲಿ

ಅರುಣ್ ಕುಮಾರ್ ಪುತ್ತಿಲ ವಿರುದ್ಧ ಲೈಂಗಿಕ ದೌರ್ಜನ್ಯ ದೂರು | ಪ್ರಕರಣ ದಾಖಲು Read More »

ಬೆಂಗಳೂರು: ವಿಮಾನ ನಿಲ್ದಾಣದಲ್ಲಿ ಶಂಕಿತ ಉಗ್ರ ಸೆರೆ

ವಿದೇಶಕ್ಕೆ ಪಲಾಯನ ಮಾಡಲು ಯತ್ನಿಸುವಾಗ ಸಿಕ್ಕಿಬಿದ್ದ ಉಗ್ರ ಬೆಂಗಳೂರು : ಇಲ್ಲಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಶಂಕಿತ ಉಗ್ರನನ್ನು ಬಂಧಿಸಿದ್ದಾರೆ. ಅಜೀಜ್ ಅಹ್ಮದ್ ಬಂಧಿತ ಶಂಕಿತ ಉಗ್ರ. ಹಿಜ್ಬುಲ್ ತಹ್ರೀರ್ ಭಯೋತ್ಪಾದಕ ಸಂಘಟನೆಯ ಅಜೀಜ್​ ಅಹ್ಮದ್​ ಶುಕ್ರವಾರ ಬೆಳಗ್ಗೆ ಕೆಂಪೇಗೌಡ ವಿಮಾನ ನಿಲ್ದಾಣದ ಮೂಲಕ ಸೌದಿಯ ಜಿದ್ದಾಗೆ ಪಾರಾರಿಯಾಗುತ್ತಿದ್ದನು. ಈ ಮಾಹಿತಿಯನ್ನು ಇಮಿಗ್ರೇಷನ್ ಅಧಿಕಾರಿಗಳು ಎನ್​ಐಎಗೆ ನೀಡಿದ್ದಾರೆ. ಮಾಹಿತಿ ಆಧರಿಸಿ ಕೂಡಲೆ ಸ್ಥಳಕ್ಕೆ ತೆರಳಿದ ಎನ್ಐಎ ಅಧಿಕಾರಿಗಳು ಶಂಕಿತ ಉಗ್ರ

ಬೆಂಗಳೂರು: ವಿಮಾನ ನಿಲ್ದಾಣದಲ್ಲಿ ಶಂಕಿತ ಉಗ್ರ ಸೆರೆ Read More »

ವಿದೇಶದಲ್ಲಿ ಉದ್ಯೋಗಕ್ಕಾಗಿ ಹೋಗುವುದಾಗಿ ಮನೆಯವರನ್ನು ನಂಬಿಸಿದ ಯುವತಿ | ಅನ್ಯ ಕೋಮಿನ ಯುವಕನೊಂದಿಗೆ ಪರಾರಿಯಾಗಲು ಯತ್ನ

ಬೆಂಗಳೂರು: ಸುಳ್ಯದ ಯುವತಿಯೊಬ್ಬಳು ವಿದೇಶದಲ್ಲಿ ಉದ್ಯೋಗಕ್ಕೆಂದು ಹೋಗುವುದಾಗಿ ಮನೆಯವರಿಗೆ ತಿಳಿಸಿ ಅನ್ಯ ಕೋಮಿನ ಯುವಕನೊಂದಿಗೆ ಪರಾರಿಯಾಗಲು  ಯತ್ನಿಸಿದ ಘಟನೆ ನಡೆದಿದೆ. ಪಿಯುಸಿ ಮುಗಿಸಿದ್ದ ಯುವತಿ ಮುಂದಿನ ವಿದ್ಯಾಭ್ಯಾಸಕ್ಕೆಂದು ವಿದೇಶಕ್ಕೆ ತೆರಳುವುದಾಗಿ ಹೇಳಿ ಪೋಷಕರನ್ನು ನಂಬಿಸಿ ಆ.25 ರಂದು ಮನೆ ಬಿಟ್ಟಿದ್ದಳು. ಯುವತಿ ಪೋಷಕರು ತಮ್ಮ ಮಗಳು ವಿದೇಶಕ್ಕೆ ಹೋದಳೆಂದು ನಂಬಿದ್ದರೆ, ಸವಣೂರು ಮೂಲದ ಮುಸ್ಲಿಂ ಯುವಕನ ಜೊತೆ ಸೇರಿದ ಯುವತಿ ಬಳಿಕ ವಿಮಾನ ನಿಲ್ದಾಣದಿಂದ ಹೊರಬಂದು ವಾಪಾಸ್ ಬಸ್ ನಲ್ಲಿ ಪ್ರಯಾಣ ಬೆಳೆಸಿದ್ದಳು. ಈ ವೇಳೆ ಬಸ್

ವಿದೇಶದಲ್ಲಿ ಉದ್ಯೋಗಕ್ಕಾಗಿ ಹೋಗುವುದಾಗಿ ಮನೆಯವರನ್ನು ನಂಬಿಸಿದ ಯುವತಿ | ಅನ್ಯ ಕೋಮಿನ ಯುವಕನೊಂದಿಗೆ ಪರಾರಿಯಾಗಲು ಯತ್ನ Read More »

ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ | ಆರೋಪಿಗೆ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ

ಪುತ್ತೂರು: ಯುವತಿಯೊಬ್ಬಳಿಗೆ ಮದುವೆಯಾಗುವುದಾಗಿ ನಂಬಿಸಿ ಬಲವಂತವಾಗಿ ದೈಹಿಕ ಸಂಪರ್ಕ ನಡೆಸಿದ ಆರೋಪಿಯೊಬ್ಬನಿಗೆ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಆದೇಶ ನೀಡಿದೆ. ಪುತ್ತೂರು ಕಬಕದ ನಿವಾಸಿ ನಿತೇಶ್ (30) ಶಿಕ್ಷೆಗೊಳಗಾದವನು. ಈತನ ಜೊತೆಗೆ ಈತನ ತಂದೆ ರಾಮಣ್ಣ ಪೂಜಾರಿ (63) ಮತ್ತು ಬಾವ ನಿಖಿತಾಶ್ ಸುವರ್ಣ(40) ನಿಗೆ 5 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ. ನಿತೇಶ್ ಯುವತಿಯೊಬ್ಬಳನ್ನು ಮದುವೆಯಾಗುವುದಾಗಿ ನಂಬಿಸಿ ಆಕೆಯ ಸುತ್ತಾಡಿಸಿದ್ದ. ಬಳಿಕ

ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ | ಆರೋಪಿಗೆ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ Read More »

ಉಡುಪಿ ಮೂಲದ ಮಹಿಳೆಯಿಂದ 38 ಕೋ.ರೂ. ವಂಚನೆ

ಜೆಡಿಎಸ್‌ ಕಾರ್ಯಾಧ್ಯಕ್ಷೆ ಎಂದು ಹೇಳಿಕೊಂಡು ಎಂಟು ಮದುವೆಯಾಗಿದ್ದ ಮಹಿಳೆ ಬೆಂಗಳೂರು: ಉಡುಪಿ ಮೂಲದ ಮಹಿಳೆಯೊಬ್ಬಳು ಬಳ್ಳಾರಿಯಲ್ಲಿ ತನ್ನನ್ನು ಜೆಡಿಎಸ್ ಅಲ್ಪಸಂಖ್ಯಾತರ ಘಟಕದ ರಾಜ್ಯ ಕಾರ್ಯಾಧ್ಯಕ್ಷೆ ಎಂದು ಪರಿಚಯಿಸಿಕೊಂಡು ಹಲವರನ್ನು ಮದುವೆಯಾಗಿ ವಂಚಿಸಿದ ಪ್ರಕರಣ ಬೆಳಕಿಗೆ ಬಂದಿದೆ. ಅಲ್ಲದೇ ಹಲವಾರು ಜನರಿಗೆ ಲೋನ್ ಕೊಡಿಸುವುದಾಗಿ ಮಹಿಳೆ ಕೋಟಿಗಟ್ಟಲೆ ರೂ. ವಂಚಿಸಿದ್ದಾಳೆ ಎಂದು ತಿಳಿದು ಬಂದಿದೆ. ಉಡುಪಿ ನಿವಾಸಿ ತಬುಸುಮ್ ತಾಜ್ (40) ಎಂಬಾಕೆ ಇದುವರೆಗೆ 8 ಜನರನ್ನು ಮದುವೆಯಾಗಿ ವಂಚಿಸಿದ್ದಾಳೆ. ಮದುವೆಯಾಗಿ ಹೆಂಡತಿ ಬಿಟ್ಟಿರುವ ಅಥವಾ ವಿಧುರ ಶ್ರೀಮಂತ

ಉಡುಪಿ ಮೂಲದ ಮಹಿಳೆಯಿಂದ 38 ಕೋ.ರೂ. ವಂಚನೆ Read More »

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ | ತೀರ್ಪು ಪ್ರಕಟಿಸಿದ ಹೈಕೋರ್ಟ್

ಧರ್ಮಸ್ಥಳ: ಭಾರೀ ಸಂಚಲನ ಮೂಡಿಸಿ ಇನ್ನೂ ನಿಗೂಢವಾಗಿ ಉಳಿದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಇದೀಗ ತೀರ್ಪು ನೀಡಿದೆ. ಸೌಜನ್ಯ ಕೊಲೆಯಾಗಿ 12 ವರ್ಷ ಆದರೂ ಇಂದು ನ್ಯಾಯ ಸಿಕ್ಕಿಲ್ಲ. ಈ ಹಿಂದೆ ನಡೆದ ತನಿಖೆಗಳಲ್ಲಿ ಸೌಜನ್ಯಗಳಿಗೆ ಸರ್ಕಾರದ ಅಂಗ ಸಂಸ್ಥೆಗಳೇ ಅನ್ಯಾಯ ಮಾಡಿದ್ದವು. ಹೀಗಾಗಿ ಸೌಜನ್ಯ ಮರುತನಿಗೆ ಮಾಡಬೇಕು ಎನ್ನುವ ಹಕ್ಕೋತ್ತಾಯ ಜನರಿಂದ ಮೂಡಿಬಂದಿತ್ತು. ಈ ಸಂಬಂಧ ಮಹೇಶ್ ಶೆಟ್ಟಿ ತಿಮರೋಡಿ ನೇತೃತ್ವದ ಹೋರಾಟಗಾರರು ಹೈಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಹೈಕೋರ್ಟ್ ತೀರ್ಪು

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ | ತೀರ್ಪು ಪ್ರಕಟಿಸಿದ ಹೈಕೋರ್ಟ್ Read More »

error: Content is protected !!
Scroll to Top