ಅಪರಾಧ

ರೌಡಿಶೀಟರ್‌ ಆರಿಫ್‌ ಕೊಲೆ ಕೃತ್ಯ: ಆರೋಪಿಗಳ ಗುರುತು ಪತ್ತೆ

ತನಿಖೆ ಸಿಸಿಬಿ ಎಸಿಪಿ ತಂಡಕ್ಕೆ ವರ್ಗಾವಣೆ ಮಂಗಳೂರು: ತೊಕ್ಕೊಟ್ಟು ಫ್ಲೈಓವರ್‌ನಲ್ಲಿ ನಡೆದ ರೌಡಿಶೀಟರ್‌ ಆರಿಫ್ ಕೊಲೆ ಪ್ರಕರಣದ ತನಿಖೆಯನ್ನು ಸಿಸಿಬಿ ಎಸಿಪಿ ತಂಡಕ್ಕೆ ವರ್ಗಾಯಿಸಲಾಗಿದೆ. ಪ್ರಕರಣದಲ್ಲಿ ಆರು ಮಂದಿ ಆರೋಪಿಗಳು ಭಾಗಿಯಾಗಿರುವುದನ್ನು ಗುರುತಿಸಲಾಗಿದ್ದು, ಆರೋಪಿಗಳು ನಿರಂತರವಾಗಿ ಸ್ಥಳ ಬದಲಾವಣೆ ಮಾಡುತ್ತಿರುವುದರಿಂದ, ತನಿಖಾ ತಂಡಗಳಿಗೆ ಅವರನ್ನು ತಕ್ಷಣವೇ ಬಂಧಿಸುವುದು ಸವಾಲಾಗಿ ಪರಿಣಮಿಸಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಮಾಹಿತಿ ನೀಡಿದ್ದಾರೆ. ತನಿಖೆಯ ಸಮಯದಲ್ಲಿ ನಮ್ಮ ತಂಡಗಳು ಸಂಪೂರ್ಣ ಸಂಚು ಮತ್ತು ಘಟನೆಗಳ ಸರಣಿಯನ್ನು […]

ರೌಡಿಶೀಟರ್‌ ಆರಿಫ್‌ ಕೊಲೆ ಕೃತ್ಯ: ಆರೋಪಿಗಳ ಗುರುತು ಪತ್ತೆ Read More »

ಜಾನುವಾರು ಕಳವು ಪ್ರಕರಣ ಆರೋಪಿಗಳ ವಿರುದ್ಧ ಕೋಕಾ ಅನ್ವಯ

ಕಳೆದ ವರ್ಷ ಕಾರ್ಕಳದಲ್ಲಿ ನಡೆದಿದ್ದ ಗೋ ಕಳ್ಳತನ ಕಾರ್ಕಳ : ತಾಲೂಕಿನ ಶಿರ್ಲಾಲು ಗ್ರಾಮದ ಹಾಡಿಯಂಗಡಿ ಎಂಬಲ್ಲಿ ಕಳೆದ ವರ್ಷ ನಡೆದ ಜಾನುವಾರು ಕಳವು ಪ್ರಕರಣದ ಆರೋಪಿಗಳ ವಿರುದ್ದ ಕೋಕಾ ಕಾಯ್ದೆ ಅನ್ವಯಿಸಿ ಮರಳಿ ಬಂಧಿಸಲಾಗಿದೆ. ಜಯಶ್ರೀ ಪೂಜಾರಿ ಎಂಬವರ ಮನೆಯ ಹಟ್ಟಿಗೆ ನುಗ್ಗಿದ ಆರೋಪಿಗಳು ಜಾನುವಾರುಗಳನ್ನು ಕಳವು ಮಾಡಲು ಯತ್ನಿಸಿದಾಗ ತಡೆಯಲು ಬಂದ ಮನೆಯವರನ್ನು ತಲವಾರು ತೋರಿಸಿ ಬೆದರಿಸಿದ್ದರು. ಹಟ್ಟಿಯಲ್ಲಿದ್ದ ಮೂರು ಜಾನುವಾರುಗಳ ಹಗ್ಗಗಳನ್ನು ಕತ್ತರಿಸಿ ವಾಹನದಲ್ಲಿ ತುಂಬಿಕೊಂಡು ಹೋಗಿ ವಧೆ ಮಾಡಿರುವುದು ಬೆಳಕಿಗೆ ಬಂದಿದೆ.

ಜಾನುವಾರು ಕಳವು ಪ್ರಕರಣ ಆರೋಪಿಗಳ ವಿರುದ್ಧ ಕೋಕಾ ಅನ್ವಯ Read More »

ಕಾರ್ಕಳದ ಪತ್ನಿ ಮನೆಯಲ್ಲಿ ನೆಲ್ಯಾಡಿಯ ನವವಿವಾಹಿತ ಆತ್ಮಹತ್ಯೆ : ದೂರು ದಾಖಲು

ಪ್ರೀತಿಸಿ ಮದುವೆಯಾಗಿದ್ದ ಯುವ ಉದ್ಯಮಿಯ ಬದುಕು ಒಂದೇ ತಿಂಗಳಲ್ಲಿ ದುರಂತ ಅಂತ್ಯ ಕಾರ್ಕಳ : ಒಂದು ತಿಂಗಳ ಹಿಂದೆಯಷ್ಟೇ ಪ್ರೀತಿಸಿ ಮದುವೆಯಾಗಿದ್ದ ಯುವ ಉದ್ಯಮಿ ಕಾರ್ಕಳದಲ್ಲಿರುವ ಪತ್ನಿ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದು ನಾನಾ ಅನುಮಾನಗಳಿಗೆ ಕಾರಣವಾಗಿದೆ. ಮಾ.17ರಂದು ತಿಂಡಿಯ ಜೊತೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಜೀವನ್ಮರಣ ಹೊರಟದಲ್ಲಿದ್ದವರು ಚಿಕಿತ್ಸೆ ಫಲಿಸದೆ ಮಾ.29ರಂದು ಬೆಳಗ್ಗೆ ಸಾವನ್ನಪ್ಪಿದ್ದಾರೆ. ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಕರ್ನೋಡಿಯಲ್ಲಿ ಅಜ್ಜನ ಮನೆಯಲ್ಲಿ ವಾಸವಾಗಿದ್ದ ಮೂಲತಃ ಪುತ್ತೂರು ತಾಲೂಕಿನ ನೆಲ್ಯಾಡಿ

ಕಾರ್ಕಳದ ಪತ್ನಿ ಮನೆಯಲ್ಲಿ ನೆಲ್ಯಾಡಿಯ ನವವಿವಾಹಿತ ಆತ್ಮಹತ್ಯೆ : ದೂರು ದಾಖಲು Read More »

ಪತ್ನಿಯ ವಿಕೃತ ಬೇಡಿಕೆ : ಪೊಲೀಸ್‌ ಠಾಣೆ ಮೆಟ್ಟಿಲೇರಿದ ಪತಿ

ಪತ್ನಿಯ ಕಾಟದಿಂದ ಮುಕ್ತಿ ಕೊಡುವಂತೆ ಪೊಲೀಸರಿಗೆ ಮೊರೆ ಬೆಂಗಳೂರು: ಪತ್ನಿಯ ಲೈಂಗಿಕ ವಿಕೃತಿ ಮತ್ತು ನಿರಂತರ ಕಿರುಕುಳ ತಾಳಲಾರದೆ ಪತಿ ಪೊಲೀಸ್ ಠಾಣೆಯ ಮೆಟ್ಟಿಲೇರಿರುವ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಪತ್ನಿಯ ಮಾನಸಿಕ ಹಿಂಸೆ, ಲೈಂಗಿಕ ದೌರ್ಜನ್ಯ ತಾಳಲಾರದೆ ಪತಿ ಬೆಂಗಳೂರಿನ ಅಮೃತಹಳ್ಳಿ ಠಾಣೆಗೆ ದೂರು ನೀಡಿದ್ದಾರೆ. ಪತ್ನಿಯ ವಿಪರೀತ ವಿಕೃತ ಲೈಂಗಿಕ ಬೇಡಿಕೆ, ತಾನು ಮಾತ್ರವಲ್ಲದೆ ತನ್ನ ಸ್ನೇಹಿತೆಯ ಜೊತೆಗೂ ದೈಹಿಕ ಸಂಬಂಧ ಹೊಂದುವಂತೆ ಒತ್ತಾಯಿಸುತ್ತಿದ್ದಾಳೆಂದು ದೂರಿನಲ್ಲಿ ತಿಳಿಸಿದ್ದಾರೆ. ನನ್ನ ಪತ್ನಿ ಅಶ್ಲೀಲ ವೀಡಿಯೋಗಳನ್ನು ಕಳುಹಿಸಿ

ಪತ್ನಿಯ ವಿಕೃತ ಬೇಡಿಕೆ : ಪೊಲೀಸ್‌ ಠಾಣೆ ಮೆಟ್ಟಿಲೇರಿದ ಪತಿ Read More »

ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟ : ತಪ್ಪೊಪ್ಪಿಕೊಂಡ ಉಗ್ರ

2022ರ ನವೆಂಬರ್ 19ರಂದು ಆಟೋರಿಕ್ಷಾದಲ್ಲಿ ಸಂಭವಿಸಿದ ಸ್ಫೋಟ ಬೆಂಗಳೂರು: ನಾಲ್ಕು ವರ್ಷಗಳ ಹಿಂದೆ ಮಂಗಳೂರಿನಲ್ಲಿ ಸಂಭವಿಸಿದ್ದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಉಗ್ರ ಮೊಹಮ್ಮದ್ ಶಾರೀಕ್ ತಪ್ಪೊಪ್ಪಿಕೊಂಡಿದ್ದು, ಆತನ ಅರ್ಜಿಯನ್ನು ಎನ್‌ಐಎ ವಿಶೇಷ ನ್ಯಾಯಾಲಯ ಅಂಗೀಕರಿಸಿದೆ. ಶಿವಮೊಗ್ಗದ ಶಾರೀಕ್ (27) 2022ರ ನವೆಂಬರ್ 19ರಂದು ಆಟೋರಿಕ್ಷಾದಲ್ಲಿ ಸಾಗಿಸುತ್ತಿದ್ದ ಪ್ರೆಶರ್ ಕುಕ್ಕರ್ ಬಾಂಬ್ ಕಂಕನಾಡಿ ಸಮೀಪ ಅವನ ಮಡಿಲಲ್ಲೇ ಸ್ಫೋಟಗೊಂಡ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ. ಟೈಮರ್ ದೋಷದಿಂದ ಸಂಭವಿಸಿದ್ದ ಸ್ಫೋಟದಲ್ಲಿ ಆಟೋ ಚಾಲಕ ಗಂಭೀರವಾಗಿ ಗಾಯಗೊಂಡಿದ್ದರು. ಉಗ್ರನನ್ನು ಆಸ್ಪತ್ರೆಗೆ

ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟ : ತಪ್ಪೊಪ್ಪಿಕೊಂಡ ಉಗ್ರ Read More »

ಭೀಕರ ಅಪಘಾತ : ತಾಯಿ-ಮಗಳು ದುರ್ಮರಣ

ದೇವಸ್ಥಾನಗಳಿಗೆ ಭೇಟಿ ನೀಡಿ ಮರಳುತ್ತಿರುವಾಗ ಸಂಭವಿಸಿದ ಅಪಘಾತ ಉಡುಪಿ: ಟ್ರಕ್ ಹಾಗೂ ಕಾರು ನಡುವೆ ನಡೆದ ಭೀಕರ ಅಪಘಾತದಲ್ಲಿ ತಾಯಿ-ಮಗಳು ಸಾವನ್ನಪ್ಪಿ ನಾಲ್ವರು ಗಂಭೀರ ಗಾಯಗೊಂಡ ಘಟನೆ ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ನಾವುಂದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಶನಿವಾರ ಸಂಜೆ ಸಂಭವಿಸಿದೆ. ಬೆಂಗಳೂರಿನ ನೆಲಮಂಗಲ ನಿವಾಸಿ ರಾಘು ಎಂಬವರ ಪತ್ನಿ ಮಮತಾ (36), ಪುತ್ರಿ ಧೃತಿಕ (14) ಮೃತ ದುರ್ದೈವಿಗಳು. ಇನ್ನೊರ್ವ ಮಗಳು ಜಾಹ್ನವಿ (12) ಕುಂದಾಪುರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಘು ಕುಂದಾಪುರ

ಭೀಕರ ಅಪಘಾತ : ತಾಯಿ-ಮಗಳು ದುರ್ಮರಣ Read More »

ಎಂಟು ವರ್ಷದಿಂದ ತಲೆಮರೆಸಿಕೊಂಡಿದ್ದ ಕೊಲೆ ಅಪರಾಧಿ ಪತ್ತೆ

ಬಸವರಾಜು ಎಂದು ಹೆಸರು ಬದಲಿಸಿಕೊಂಡಿದ್ದ ಸುಳ್ಯದ ಅಜೀಜ್‌ ಮಂಗಳೂರು: ಎಂಟು ವರ್ಷಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿ ಹೆಸರು ಬದಲಿಸಿ ಆಂಧ್ರಪ್ರದೇಶದಲ್ಲಿ ಅಡಗಿದ್ದ ಸುಳ್ಯದ ಮೋಸ್ಟ್ ವಾಂಟೆಡ್ ಅಪರಾಧಿಯನ್ನು ಪೊಲೀಸರು ಬಂಧಿಸಿದ್ದಾರೆ. ಹತ್ಯೆ ಪ್ರಕರಣದಲ್ಲಿ ಶಿಕ್ಷೆಯಾದ ಬಳಿಕ ತಲೆಮರೆಸಿಕೊಂಡಿದ್ದ ಸುಳ್ಯ ಅಜ್ಜಾವರ ನಿವಾಸಿ ಎನ್.ಎಂ. ಅಜೀಜ್‌ ಎಂಬಾತನನ್ನು ಆಂಧ್ರದ ಚಿತ್ತೂರು ಜೈಲಿನಲ್ಲಿ ಪೊಲೀಸರು ಪತ್ತೆಹಚ್ಚಿದ್ದಾರೆ.​​ಕಡಬ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಪ್ರಕರಣವೊಂದರಲ್ಲಿ ಈತನಿಗೆ ಹೈಕೋರ್ಟ್ ಹತ್ತು ವರ್ಷಗಳ ಕಠಿಣ ಶಿಕ್ಷೆ ವಿಧಿಸಿತ್ತು. 2018ರಲ್ಲಿ ಕೇರಳ ಪೊಲೀಸರು ಈತನನ್ನು ಸುಳ್ಯ ನ್ಯಾಯಾಲಯಕ್ಕೆ

ಎಂಟು ವರ್ಷದಿಂದ ತಲೆಮರೆಸಿಕೊಂಡಿದ್ದ ಕೊಲೆ ಅಪರಾಧಿ ಪತ್ತೆ Read More »

ಈಜಲು ನದಿಗಿಳಿದ ಬಾಲಕ ಮುಳುಗಿ ಸಾವು

ಬೆಳ್ತಂಗಡಿ: ಈಜಲು ನದಿಗಿಳಿದ 14 ವರ್ಷದ ಬಾಲಕನೊಬ್ಬ ಮುಳುಗಿ ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಅಂತರಾಯ ಪಲ್ಕೆಯಲ್ಲಿ ಶನಿವಾರ ಸಂಜೆ ನಡೆದಿದೆ. ಉಜಿರೆ ಗ್ರಾಮದ ಕುಂಟಿನಿ ನಿವಾಸಿ ಹಸನಬ್ಬ ಎಂಬವರ ಪುತ್ರ ಮೊಹಮ್ಮದ್ ಹಫೀಜ್ ಮೃತ ಬಾಲಕ. ನೇತ್ರಾವತಿ ನದಿಯ ಅಂತ್ರಾಯ ಕೊಳದಲ್ಲಿ ನಾಲ್ವರು ಮಕ್ಕಳು ಈಜಲು ಇಳಿದಿಗಿದ್ದ ಹಫೀಜ್ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ಅಲ್ಲಿದ್ದವರು ರಕ್ಷಿಸಲು ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ. ಬಾಲಕನ ಮೃತದೇಹವನ್ನು ಬೆಳ್ತಂಗಡಿ ತಾಲೂಕು ಸರ್ಕಾರಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದ್ದು, ತನಿಖೆ ನಡೆಯುತ್ತಿದೆ.

ಈಜಲು ನದಿಗಿಳಿದ ಬಾಲಕ ಮುಳುಗಿ ಸಾವು Read More »

ಇಡೀ ಕುಟುಂಬ ಆತ್ಮಹತ್ಯೆಗೆ ಯತ್ನ : ಇಬ್ಬರು ಸಾವು

ಸಾಲಗಾರರ ಕಾಟದಿಂದ ಬೇಸತ್ತು ಕೃತ್ಯ – ಇಬ್ಬರ ಸ್ಥಿತಿ ಚಿಂತಾಜನಕ ಬೆಂಗಳೂರು: ಸಾಲಗಾರರ ಕಾಟಕ್ಕೆ ಬೇಸತ್ತು ಇಡೀ ಕುಟುಂಬ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ ಆಘಾತಕಾರಿ ಘಟನೆ ಘಟನೆ ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಮಲ್ಲೇನಹಳ್ಳಿಯಲ್ಲಿ ನಡೆದಿದೆ. ವ್ಯಕ್ತಿಯೋರ್ವ ತಾಯಿ, ಅಕ್ಕ ಮತ್ತು ಅಕ್ಕನ ಮಗನ ಕತ್ತು ಸೀಳಿ, ಬಳಿಕ ತಾನೂ ಆತ್ಮಹತ್ಯೆಗೆ ಮುಂದಾಗಿದ್ದಾನೆ. ತಾಯಿ ಮತ್ತು ಅಕ್ಕ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದರೆ, ಬಾಲಕ ಸೇರಿ ಇಬ್ಬರು ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ತಾಯಿ

ಇಡೀ ಕುಟುಂಬ ಆತ್ಮಹತ್ಯೆಗೆ ಯತ್ನ : ಇಬ್ಬರು ಸಾವು Read More »

ವಿದ್ಯಾರ್ಥಿಯನ್ನು ಟೆರರಿಸ್ಟ್‌ ಎಂದು ಕರೆದ ಪ್ರೊಫೆಸರ್‌ ಅಮಾನತು

ಎರಡು ದಿನ ಹಿಂದಿನ ಘಟನೆಯ ವಿಡಿಯೋ ವೈರಲ್‌ ಬೆಂಗಳೂರು : ಬೆಂಗಳೂರಿನ ಪ್ರತಿಷ್ಠಿತ ವಿಶ್ವವಿದ್ಯಾಲಯದ ಪ್ರೊಫೆಸರ್ ಡಾ.ಮೂರಳಿಧರ ದೇಶಪಾಂಡೆ ತರಗತಿಯಲ್ಲಿ ಪಾಠ ಮಾಡುತ್ತಿದ್ದ ವೇಳೆ ಕೋಪಗೊಂಡು ಮುಸ್ಲಿಂ ವಿದ್ಯಾರ್ಥಿಯನ್ನು ‘ಭಯೋತ್ಪಾದಕ’ ಎಂದು ಕರೆದು ಅವಮಾನಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಘಟನೆ ಎರಡು ದಿನಗಳ ಹಿಂದೆ ನಡೆದಿದೆ ಎನ್ನಲಾಗಿದೆ. ಅದರ ವಿಡಿಯೋ ಈಗ ವೈರಲ್‌ ಆಗಿದೆ. ಪಾಠದ ಮಧ್ಯದಲ್ಲಿ ಮಕ್ಕಳ ಗಲಾಟೆಯಿಂದ ದೇಶಪಾಂಡೆ ಗರಂ ಆಗಿದ್ದು, ನೀವೆಲ್ಲಾ ಭಯೋತ್ಪಾದಕರು ಎಂದೆಲ್ಲಾ ನಿಂದಿಸಿದ್ದಾರೆ. ಇದೇ ವೇಳೆ ತರಗತಿಯಲ್ಲಿ ಕುಳಿತಿದ್ದ ವಿದ್ಯಾರ್ಥಿಗಳು

ವಿದ್ಯಾರ್ಥಿಯನ್ನು ಟೆರರಿಸ್ಟ್‌ ಎಂದು ಕರೆದ ಪ್ರೊಫೆಸರ್‌ ಅಮಾನತು Read More »

error: Content is protected !!
Scroll to Top