ಸಗಣಿ ರಾಶಿಯಡಿಯಲ್ಲಿತ್ತು ಲಕ್ಷಗಟ್ಟಲೆ ರೂಪಾಯಿ!
ಭುವನೇಶ್ವರ:ಸಗಣಿ ರಾಶಿಯಲ್ಲಿ ಬಚ್ಚಿಟ್ಟಿದ್ದ 20 ಲಕ್ಷ ರೂ.ಯನ್ನು ಪೊಲೀಸರು ವಶಪಡಿಸಿಕೊಂಡ ಘಟನೆ ಒಡಿಶಾದ ಬಾಲಾಸೋರ್ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ. ಹೈದರಾಬಾದ್ ಮತ್ತು ಒಡಿಶಾ ಪೊಲೀಸ್ ತಂಡ ದಾಳಿ ನಡೆಸಿ ಕಮರ್ದಾ ಪೊಲೀಸ್ ಠಾಣಾ ವ್ಯಾಪ್ತಿಯ ಬಡಮಂಡರುಣಿ ಗ್ರಾಮದಲ್ಲಿ ಹಣವನ್ನು ವಶಪಡಿಸಿಕೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಗೋಪಾಲ್ ಎಂಬಾತ ಹೈದರಾಬಾದ್‌ನ ಕೃಷಿ ಆಧಾರಿತ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದು, ಕಂಪನಿಯ ಲಾಕರ್‌ನಿಂದ 20 ಲಕ್ಷಕ್ಕೂ ಹೆಚ್ಚು ಹಣವನ್ನು ಕಳ್ಳತನ ಮಾಡಿದ್ದ. ಬಳಿಕ ತನ್ನ ಸೋದರ ಮಾವ ರವೀಂದ್ರ ಬೆಹೆರಾ ಮೂಲಕ […]
ಸಗಣಿ ರಾಶಿಯಡಿಯಲ್ಲಿತ್ತು ಲಕ್ಷಗಟ್ಟಲೆ ರೂಪಾಯಿ! Read More »










