ಅಪರಾಧ

ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳಿಂದ ದಾಳಿ | ಮಹಾನಗರ ಪಾಲಿಕೆ ಆಯುಕ್ತರ ಮನೆ ಮೇಲೆ ದಾಳಿ

ಮಂಗಳೂರು : ಲೋಕಾಯುಕ್ತ ಅಧಿಕಾರಿಗಳು ಇಂದು ಬೆಳಿಗ್ಗೆ ದಾಳಿ ಮಾಡುವ ಮೂಲಕ ಶಾಕ್ ನೀಡಿದ್ದಾರೆ. ಮಹಾನಗರ ಪಾಲಿಕೆ ಆಯುಕ್ತ ಕೆ.ಎ.ಎಸ್‍. ಗ್ರೇಡ್ ಅಧಿಕಾರಿ ಆನಂದ್ ಅವರ  ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಿದ್ದು, ಬೆಳ್ಳಂಬೆಳಗ್ಗೆ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ನೀಡಿದೆ. ಬೆಂಗಳೂರು, ಶಿವಮೊಗ್ಗ, ಯಾದಗಿರಿ, ತುಮಕೂರು, ಬೆಂಗಳೂರು ಗ್ರಾಮಾಂತರ ಸಹಿತ 52 ಕಡೆಗಳಲ್ಲಿ ಏಕಕಾಲಕ್ಕೆ ನೂರಕ್ಕೂ ಅಧಿಕ ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ನಡೆಸಿದೆ.

ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳಿಂದ ದಾಳಿ | ಮಹಾನಗರ ಪಾಲಿಕೆ ಆಯುಕ್ತರ ಮನೆ ಮೇಲೆ ದಾಳಿ Read More »

ಶ್ರೀಲಂಕಾ ಮಾಜಿ ಕ್ರಿಕೆಟಿಗ ಧಮ್ಮಿಕಾ ನಿರೋಶನಾ ಅಪರಿಚಿತ ವ್ಯಕ್ತಿಯ ಗುಂಡಿಗೆ ಬಲಿ

ಕೋಲಂಬೊ : ಶ್ರೀಲಂಕಾದ ಮಾಜಿ ಕ್ರಿಕೆಟಿಗರೊಬ್ಬರನ್ನು ಅವರ ನಿವಾಸದಲ್ಲಿ ಗುಂಡಿಕ್ಕಿ ಕೊಲ್ಲಲಾಗಿದೆ. ಧಮ್ಮಿಕಾ ನಿರೋಶನಾ (41) ಅವರನ್ನು ಮಂಗಳವಾರ ರಾತ್ರಿ  ಗಾಲೆ ಜಿಲ್ಲೆಯ ಸಣ್ಣ ಪಟ್ಟಣವಾದ ಅಂಬಲಂಗೋಡದಲ್ಲಿರುವ ಅವರ ನಿವಾಸದಲ್ಲಿ ಗುಂಡಿಕ್ಕಿ ಕೊಲ್ಲಲಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಸ್ಥಳೀಯ ಪೊಲೀಸರ ಪ್ರಕಾರ, ನಿರೋಶನಾ ತನ್ನ ಪತ್ನಿ ಮತ್ತು ಇಬ್ಬರು ಮಕ್ಕಳೊಂದಿಗೆ ಇದ್ದಾಗ ಅಪರಿಚಿತ ವ್ಯಕ್ತಿಯೊಬ್ಬ ಆತನ ಮೇಲೆ ಗುಂಡು ಹಾರಿಸಿದ್ದಾನೆ ಪೊಲೀಸರು ಇನ್ನೂ ಶಂಕಿತನನ್ನು ಬಂಧಿಸಿಲ್ಲ. ಪ್ರಸ್ತುತ ಸಮಗ್ರ ತನಿಖೆ ನಡೆಯುತ್ತಿದೆ, ಆದರೆ ಅಪರಾಧದ

ಶ್ರೀಲಂಕಾ ಮಾಜಿ ಕ್ರಿಕೆಟಿಗ ಧಮ್ಮಿಕಾ ನಿರೋಶನಾ ಅಪರಿಚಿತ ವ್ಯಕ್ತಿಯ ಗುಂಡಿಗೆ ಬಲಿ Read More »

ಮಹಿಳೆಯ‌ ಸರ ಎಗರಿಸಿ ಪರಾರಿಗೆ‌ ಯತ್ನ l ಇಬ್ಬರು ಯುವಕರ ಬಂಧನ

ಪುತ್ತೂರು: ಬೆಂಗಳೂರು ಮೂಲದ ಇಬ್ಬರು ಯುವಕರು ಹೆದ್ದಾರಿ ಬದಿಯ ಅಂಗಡಿಯಲ್ಲಿದ್ದ ವೃದ್ದೆಯ ಚಿನ್ನದ ಸರ ಸೆಳೆದು ಪರಾರಿಯಾಗಲು ಯತ್ನಿಸಿ ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಉಪ್ಪಿನಂಗಡಿ ಬಳಿಯ ಅಡ್ಡಹೊಳೆ ಎಂಬಲ್ಲಿ ನಡೆದಿದೆ. ನೆಲ್ಯಾಡಿ ಬಳಿಯ ಅಡ್ಡಹೊಳೆಯ ಹೆದ್ದಾರಿ ಬದಿಯ ಡ್ರೈ ಫ್ರುಟ್ಸ್ ಅಂಗಡಿಯಲ್ಲಿ ಒಂಟಿಯಾಗಿದ್ದ ವೃದ್ಧ ಮಹಿಳೆ ತೇಸ್ಯಮ್ಮ (60) ಎಂಬುವವರ ಕುತ್ತಿಗೆಯಲ್ಲಿದ್ದ ಸರವನ್ನು ಎಳೆದು ಯುವಕರು ಪರಾರಿಯಾಗಲು ಯತ್ನಿಸಿದ್ದು, ತಕ್ಷಣ ಮಹಿಳೆಯ ಬೊಬ್ಬೆ ಕೇಳಿ ಸ್ಥಳೀಯರು ಸೇರಿ ಯುವಕರನ್ನು ಹಿಡಿದು ಥಳಿಸಿದ್ದಾರೆ. ಕೃತ್ಯದ ಆರೋಪಿಗಳಾದ

ಮಹಿಳೆಯ‌ ಸರ ಎಗರಿಸಿ ಪರಾರಿಗೆ‌ ಯತ್ನ l ಇಬ್ಬರು ಯುವಕರ ಬಂಧನ Read More »

ಸಾಮೆತ್ತಡ್ಕ ನಿವಾಸಿ ಶಿವಪ್ರಸಾದ್ ನೇಣು ಬಿಗಿದು ಆತ್ಮಹತ್ಯೆ

ಪುತ್ತೂರು : ಸಾಮೆತ್ತಡ್ಕ 2ನೇ ಕ್ರಾಸ್ ನಿವಾಸಿಯೊಬ್ಬರು ನೇಣು ಬಿಗಿದು  ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಶಿವಪ್ರಸಾದ್ (39) ಆತ್ಮಹತ್ಯೆ ಮಾಡಿಕೊಂಡಡವರು. ಸಾಮೆತ್ತಡ್ಕ ದಿ.ಗಣೇಶ್ ರಾವ್ ಅವರ ಪುತ್ರ ಶಿವಪ್ರಸಾದ್ ಅವಿವಾಹಿತರಾಗಿದ್ದು, ಮಾರುತಿ ಓಮ್ಮಿಯಲ್ಲಿ ಶಾಲಾ ಮಕ್ಕಳನ್ನು ಟ್ರಿಪ್ ಮಾಡುತ್ತಿದ್ದರು. ನಿನ್ನೆ ರಾತ್ರಿ ಮನೆಯಲ್ಲಿ ಮಲಗಿದ್ದರು. ಬೆಳಗ್ಗಿನ ಜಾವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿ ಪತ್ತೆಯಾಗಿದ್ದಾರೆ. ಮೃತರು ತಾಯಿ, ಸಹೋದರ ಮತ್ತು ಸಹೋದರಿಯನ್ನು ಅಗಲಿದ್ದಾರೆ.

ಸಾಮೆತ್ತಡ್ಕ ನಿವಾಸಿ ಶಿವಪ್ರಸಾದ್ ನೇಣು ಬಿಗಿದು ಆತ್ಮಹತ್ಯೆ Read More »

ಬಸ್ಸಿನಲ್ಲಿ ಅಪ್ರಾಪ್ತ ಯುವತಿಗೆ ಕಿರುಕುಳ | ಆರೋಪಿಗೆ ಮಹಿಳೆಯರಿಂದ ಗೂಸಾ

ಮಂಗಳೂರು: ಮೌಲ್ವಿಯೊಬ್ಬ ಬೆಂಗಳೂರಿನಿಂದ ಮಂಗಳೂರಿಗೆ ಸಂಚರಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಅಪ್ರಾಪ್ತಗೆ ಕಿರುಕುಳ ನೀಡಿದ ಸಂದರ್ಭ ಬಾಲಕಿಯ ತಾಯಿ ಹಾಗೂ ಇತರ ಮಹಿಳಾ ಪ್ರಯಾಣಿಕರೇ ಸೇರಿ ಯದ್ವಾತದ್ವಾ ಗೂಸಾ ನೀಡಿರುವ ಘಟನೆ ನಡೆದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ವೈರಲ್ ಆಗಿದೆ. ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಆರೋಪಿ ಪ್ರಯಾಣಿಸುತ್ತಿದ್ದ. ಈತನ ಪಕ್ಕದ ಸೀಟ್‌ನಲ್ಲಿ ಅಪ್ರಾಪ್ತಯೊಬ್ಬಳು ಕುಳಿತಿದ್ದಳು. ಬಸ್ ಸಕಲೇಶಪುರ ತಳುಪುತ್ತಿದ್ದ ವೇಳೆ ಬಾಲಕಿಯನ್ನು ಆರೋಪಿ ಮೆತ್ತಗೆ ಸ್ಪರ್ಶಿಸುತ್ತಿರುವುದನ್ನು ಗಮನಿಸಿ ಮತ್ತೊಂದು ಸೀಟ್‌ನಲ್ಲಿದ್ದ ಪ್ರಯಾಣಿಕ ವೀಡಿಯೋ ಮಾಡಿದ್ದಾನೆ. ಬಳಿಕ

ಬಸ್ಸಿನಲ್ಲಿ ಅಪ್ರಾಪ್ತ ಯುವತಿಗೆ ಕಿರುಕುಳ | ಆರೋಪಿಗೆ ಮಹಿಳೆಯರಿಂದ ಗೂಸಾ Read More »

ಅಮೇರಿಕ ಅಧ್ಯಕ್ಷ ಸ್ಥಾನ ಅಭ್ಯರ್ಥಿ, ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್‍ ಮೇಲೆ ಗುಂಡಿನ ದಾಳಿ

ವಾಷಿಂಗ್ಟನ್: ಅಮೆರಿಕದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಅಭ್ಯರ್ಥಿ, ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ ನಡೆದ ಘಟನೆ ಪೆನ್ಸಿಲ್ವೇನಿಯಾದಲ್ಲಿ ನಡೆದಿದೆ. ಗುಂಡಿನ ದಾಳಿಯಿಂದಾಗಿ ಟ್ರಂಪ್ ಬಲ ಕಿವಿಗೆ ಗಾಯವಾಗಿದೆ. ಟ್ರಂಪ್‌ ಚುನಾವಣಾ ರ್ಯಾಲಿಯಲ್ಲಿ ಮಾತನಾಡುತ್ತಿರುವ ಸಂದರ್ಭದಲ್ಲಿ ಅವರ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ. ಕೂಡಲೇ ಭದ್ರತಾ ಸಿಬ್ಬಂದಿ ಶೂಟರ್ ಸೇರಿದಂತೆ ಇಬ್ಬರನ್ನು ಗುಂಡಿಕ್ಕಿ ಸಾಯಿಸಿದ್ದಾರೆ. ಗುಂಡಿನ ದಾಳಿಯ ಬಳಿಕ ಟ್ರಂಪ್ ಮುಖ ರಕ್ತಸಿಕ್ತವಾಗಿತ್ತು. ಪೆನ್ಸಿಲ್ವೇನಿಯಾದ ಬಟ್ಲರ್‌ನಲ್ಲಿ ಟ್ರಂಪ್‌ ವೇದಿಕೆಯಲ್ಲಿ ಮಾತನಾಡುತ್ತಿದ್ದಾಗ ಗುಂಡಿನ ಸದ್ದು ಕೇಳಿಸಿದೆ.

ಅಮೇರಿಕ ಅಧ್ಯಕ್ಷ ಸ್ಥಾನ ಅಭ್ಯರ್ಥಿ, ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್‍ ಮೇಲೆ ಗುಂಡಿನ ದಾಳಿ Read More »

ಫೈನಾನ್ಸ್ ನಲ್ಲಿ ದರೋಡೆಗೆ ಯತ್ನಿಸಿದ ಮೂವರ ಬಂಧನ | ಲಕ್ಷಾಂತರ ಮೌಲ್ಯದ ಸೊತ್ತು ವಶಕ್ಕೆ

ಬಜಪೆ: ಬುರ್ಖಾ ಧರಿಸಿ ಬಂದು ಆ್ಯಸಿಡ್ ಎರಚಿ ದರೋಡೆಗೆ ಯತ್ನಿಸಿದ ಮೂವರು ಆರೋಪಿಗಳನ್ನು ಬಜಪೆ ಪೊಲೀಸರು ಬಂಧಿಸಿದ್ದಾರೆ. ಬಜಪೆ ಶಾಂತಿಗುಡ್ಡೆಯ ಪ್ರೀತೇಶ್ ಯಾನೆ ಪ್ರೀತು (31), ಸುರತ್ಕಲ್ ಕೋಡಿಕರೆಯ ಧನರಾಜ್ ಯಾನೆ ಧನು (30) ಹಾಗೂ ಬಾಳ ಕುಂಬಳಕೆರೆಯ ಕುಸುಮಾಕರ ಯಾನೆ ಅಣ್ಣು (37) ಬಂಧಿತ ಆರೋಪಿಗಳು. ಬಂಧಿತರಿಂದ 15 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ಬಜಪೆ ಪೊಲೀಸರು ಶನಿವಾರ ವಶಪಡಿಸಿಕೊಂಡಿದ್ದಾರೆ. ತಾಲೂಕು ಬಜಪೆ ಗ್ರಾಮದ ನಿವಾಸಿ ಲೆಸ್ಲಿ ಡಿ ಕುನ್ಹಾ ಅವರ ಬಜಪೆ ಪೇಟೆಯಲ್ಲಿರುವ ಬಜಪೆ

ಫೈನಾನ್ಸ್ ನಲ್ಲಿ ದರೋಡೆಗೆ ಯತ್ನಿಸಿದ ಮೂವರ ಬಂಧನ | ಲಕ್ಷಾಂತರ ಮೌಲ್ಯದ ಸೊತ್ತು ವಶಕ್ಕೆ Read More »

ವಾಲ್ಮೀಕಿ ಹಗರಣ ಬೆನ್ನಲ್ಲೇ ಪ್ರವಾಸೋದ್ಯಮ ಇಲಾಖೆಯಲ್ಲೂ ಹಗರಣ

ಬೆಂಗಳೂರು: ವಾಲ್ಮೀಕಿ ನಿಗಮದ ಹಣ ದುರುಪಯೋಗ ಮಾಡಿರುವ ಹಗರಣದ ಬೆನ್ನಲ್ಲೇ ಇದೀಗ ಪ್ರವಾಸೋದ್ಯಮ ಇಲಾಖೆಯಲ್ಲೂ ಹಗರಣ ಮಾಡಿರುವುದು ಬೆಳಕಿಗೆ ಬಂದಿದೆ. ಪ್ರವಾಸೋದ್ಯಮ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ಅವರನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದಿರುವ ಬೆನ್ನಲ್ಲೇ ಪ್ರವಾಸೋದ್ಯಮ ಇಲಾಖೆಗೆ ಸಂಬಂಧಿಸಿದ ಬ್ಯಾಂಕ್ ಖಾತೆಯಲ್ಲಿ ವಂಚನೆ ಆಗಿರುವುದು ಬೆಳಕಿಗೆ ಬಂದಿದೆ. ಬಾಗಲಕೋಟೆ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯಲ್ಲಿ 2.47 ಕೋಟಿಗೂ ಮಿಕ್ಕಿ  ವಂಚನೆಯಾಗಿದ್ದು, ಬಾಗಲಕೋಟೆ ಐಡಿಬಿಐ ಬ್ಯಾಂಕ್ ಖಾತೆಗಳ ಮೂಲಕ ಹಣ ವಿವಿಧ ಖಾತೆಗೆ ಅಕ್ರಮವಾಗಿ ವರ್ಗಾವಣೆಯಾಗಿದೆ. ಅಕ್ರಮ

ವಾಲ್ಮೀಕಿ ಹಗರಣ ಬೆನ್ನಲ್ಲೇ ಪ್ರವಾಸೋದ್ಯಮ ಇಲಾಖೆಯಲ್ಲೂ ಹಗರಣ Read More »

ಡ್ರಗ್ಸ್ ನಶೆಯಲ್ಲಿ ತನ್ನ ಮನೆಯವರಿಗೇ ಚಿತ್ರಹಿಂಸೆ| ಆಸೀಫ್ ಆಪತ್ಭಾಂಧವನ ಕರಾಳ ಮುಖ ಬಯಲು

ಮಂಗಳೂರು: ಆಸೀಫ್‌ ಆಪತ್ಭಾಂಧವನ ಕರಾಳ ಮುಖ ಬಯಲಾಗಿದೆ. ನಶೆಯಲ್ಲಿ ಹೆಂಡತಿಗೆ ಚಿತ್ರಹಿಂಸೆ, ಮನೆಯಲ್ಲಿ ರಂಪಾಟ ಮಾಡುವುದು ಜೊತೆಗೆ ತನ್ನ ಸ್ವಂತ ಮಗಳದ್ದೇ ಖಾಸಗಿ ವಿಡಿಯೋ ವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟು ವಿಕೃತಿ ಮೇರೆದಿದ್ದಾನೆ. ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ವಿವಿಧ ವಾಟ್ಸಾಪ್‌ ಗುಂಪುಗಳಲ್ಲಿ ತನ್ನ ಮಗಳ ಖಾಸಗಿ ವೀಡಿಯೋಗಳನ್ನು ಹರಿಬಿಟ್ಟ ಆರೋಪದಲ್ಲಿ ತಂದೆ ಆಸೀಫ್‌ ವಿರುದ್ಧ ಆತನ ಪತ್ನಿ ಪೊಲೀಸರಿಗೆ ದೂರು ನೀಡಿದ್ದಾರೆ. ಈ ನಡುವೆ ಆರೋಪಿಯ ಪುತ್ರಿಯು ಫಿನಾಯಿಲ್‌ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದು, ಆಕೆಯನ್ನು ಅಜ್ಜರಕಾಡು ಆಸ್ಪತ್ರೆಗೆ

ಡ್ರಗ್ಸ್ ನಶೆಯಲ್ಲಿ ತನ್ನ ಮನೆಯವರಿಗೇ ಚಿತ್ರಹಿಂಸೆ| ಆಸೀಫ್ ಆಪತ್ಭಾಂಧವನ ಕರಾಳ ಮುಖ ಬಯಲು Read More »

ಗರುಡ ಗ್ಯಾಂಗ್‍ ಸದಸ್ಯರಿಗೆ ಆರ್ಥಿಕ ನೆರವು | ಉಪ್ಪಿನಂಗಡಿ ಮೂಲದ ಯುವತಿ ಬಂಧನ

ಉಡುಪಿ : ಗರುಡ ಗ್ಯಾಂಗ್ ಸದಸ್ಯರಿಗೆ ಆರ್ಥಿಕ ನೆರವು ನೀಡಿದ್ದ ದಕ್ಷಿಣ ಕನ್ನಡ ಮೂಲದ ಉಪ್ಪಿನಂಗಡಿಯ ಯುವತಿಯನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಉಪ್ಪಿನಂಗಡಿ ಮೂಲದ ಶಫೀರಾ (21) ಬಂಧಿತ ಯುವತಿ. ಬಂಧಿತೆಯು ಗರುಡ ಗ್ಯಾಂಗ್ ಸದಸ್ಯರಿಗೆ ಆರ್ಥಿಕ ನೆರವು ಮತ್ತು ಆಶ್ರಯ ವ್ಯವಸ್ಥೆ ಮಾಡಿದ್ದಳು. ಗ್ಯಾಂಗ್ ಸದಸ್ಯರಿಗೆ ಮೊಬೈಲ್ ಫೋನ್ ನೀಡಿ ಹಣ ವರ್ಗಾವಣೆ ಮಾಡಿರುವ ಆರೋಪವೂ ಬಂಧಿತೆ ಶಫೀರಾ ಮೇಲಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ. ತಿಳಿಸಿದ್ದಾರೆ. ಈ ಗರುಡ ಗ್ಯಾಂಗ್‌ನ

ಗರುಡ ಗ್ಯಾಂಗ್‍ ಸದಸ್ಯರಿಗೆ ಆರ್ಥಿಕ ನೆರವು | ಉಪ್ಪಿನಂಗಡಿ ಮೂಲದ ಯುವತಿ ಬಂಧನ Read More »

error: Content is protected !!
Scroll to Top