ಬ್ಯಾಂಕ್‌ನಿಂದ 13 ಕೋಟಿ ರೂ. ಮೌಲ್ಯದ 17 ಕೆಜಿ ಚಿನ್ನಾಭರಣ ಕಳ್ಳತನ | ಕಿಟಿಕಿ ಸರಳು ಮುರಿದು ಒಳನುಗ್ಗಿದ್ದ ಕಳ್ಳರು; ಬ್ಯಾಂಕ್ ಒಳಗೆಲ್ಲ ಮೆಣಸಿನ ಪುಡಿ
ದಾವಣಗೆರೆ: ಜಿಲ್ಲೆಯ ನ್ಯಾಮತಿಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಶಾಖೆಯಿಂದ ಕಳ್ಳರು ಬರೋಬ್ಬರಿ 17 ಕೆಜಿ ಚಿನ್ನಾಭರಣ ಕಳ್ಳತನ ಮಾಡಿದ್ದಾರೆ. ಈ ಕುರಿತು ಬ್ಯಾಂಕ್ ಮ್ಯಾನೇಜರ್ ಸುನಿಲ್ ಕುಮಾರ್ ಯಾದವ್ ಪೊಲೀಸರಿಗೆ ದೂರು ನೀಡಿದ್ದಾರೆ. 12.95 ಕೋಟಿ ರೂ. ಮೌಲ್ಯದ 17.705 ಕೆಜಿ ಚಿನ್ನಾಭರಣವನ್ನು ಕಳ್ಳರು ಕದ್ದೊಯ್ದಿದ್ದಾರೆ ಎಂದು ದೂರಿನಲ್ಲಿ ಮಾಹಿತಿ ನೀಡಿದ್ದಾರೆ.ನ್ಯಾಮತಿ ನಗರದ ನೆಹರು ರಸ್ತೆಯಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯ ಕಿಟಕಿ ಸರಳುಗಳನ್ನು ಮುರಿದು ಲಾಕರ್‌ನಲ್ಲಿದ್ದ ನಗದು ಹಾಗೂ ಚಿನ್ನಾಭರಣವನ್ನು ಕಳ್ಳರು […]










