ಅಟ್ಟಿಕಾ ಗೋಲ್ಡ್ ಕಂಪನಿ ಮಾಲೀಕ ಬಂಧನ
ಬೆಂಗಳೂರು : ಅಟ್ಟಿಕಾ ಗೋಲ್ಡ್ ಕಂಪನಿ ಮಾಲೀಕ ಅಟ್ಟಿಕಾ ಬಾಬು ಅಲಿಯಾಸ್ ಬೊಮ್ಮನಹಳ್ಳಿ ಬಾಬು ಅವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಕದ್ದ ಚಿನ್ನ ಖರೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ಜಿಲ್ಲೆಯ ತುರುವೇಕೆರೆ ಪೊಲೀಸರು ಬುಧವಾರ ಬೊಮ್ಮನಹಳ್ಳಿ ಬಾಬು ಅವರನ್ನು ಪ್ರೇಜರ್ ಟೌನ್ ನಿವಾಸದ ಬಳಿ ಬಂಧಿಸಿದ್ದಾರೆ. ಕಳ್ಳತನ ಮಾಡಿದ ಚಿನ್ನದ ಆಭರಣಗಳನ್ನು ಖರೀದಿ ಮಾಡಿದ ಕುರಿತು ತುರುವೇಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿತ್ತು. ಹಾಗಾಗಿ, ತುರುವೇಕೆರೆ ಸಿಪಿಐ ಲೋಹಿತ್ ಬಿ.ಎನ್ ಹಾಗೂ ತಂಡದಿಂದ ಬಂಧಿಸಲಾಗಿದೆ. […]
ಅಟ್ಟಿಕಾ ಗೋಲ್ಡ್ ಕಂಪನಿ ಮಾಲೀಕ ಬಂಧನ Read More »










