ಬಾಬಾ ಸಿದ್ದಿಕಿ ಹತ್ಯೆ ಪ್ರಕರಣ: ಇನ್ನೋರ್ವ ಆರೋಪಿ ಸೆರೆ
ಮುಂಬಯಿ: ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕಿ ಹತ್ಯೆ ಪ್ರಕರಣದ ಮೂರನೇ ಆರೋಪಿಯನ್ನು ಪೊಲೀಸರು ಭಾನುವಾರ ರಾತ್ರಿ ಪುಣೆಯಲ್ಲಿ ಬಂಧಿಸಿದ್ದಾರೆ. ಮೂವರು ಶೂಟರ್‌ಗಳ ಪೈಕಿ ಈತ ತನ್ನ ಸಹೋದರನೊಂದಿಗೆ ಸೇರಿಕೊಂಡು ಹತ್ಯೆಗೆ ಸಂಚು ರೂಪಿಸಿದ್ದ ಎನ್ನಲಾಗಿದೆ. ಬಂಧಿತ ಆರೋಪಿಯನ್ನು ಪುಣೆಯ ಪ್ರವೀಣ್ ಲೋಂಕರ್ (28) ಎಂದು ಗುರುತಿಸಲಾಗಿದೆ. ತಲೆಮರೆಸಿಕೊಂಡಿರುವ ಈತನ ಸಹೋದರ ಶುಭಂ ಲೋಂಕರ್‌ಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಈ ಪ್ರಕರಣದಲ್ಲಿ ಇದು ಮೂರನೇ ಬಂಧನವಾಗಿದೆ. ಇಬ್ಬರು ಆರೋಪಿಗಳನ್ನು ಈಗಾಗಲೇ ಬಂಧಿಸಿದ್ದಾರೆ. ಬಂಧಿತರನ್ನು ಹರ್ಯಾಣದ ಗುರ್ಮೈಲ್ ಬಲ್ಜಿತ್ […]
ಬಾಬಾ ಸಿದ್ದಿಕಿ ಹತ್ಯೆ ಪ್ರಕರಣ: ಇನ್ನೋರ್ವ ಆರೋಪಿ ಸೆರೆ Read More »









