ಅಪರಾಧ

ಜೈಲಿಗೆ ಗಾಂಜಾ ಎಸೆದ ಯುವಕರು |  ವೀಡಿಯೋ ವೈರಲ್

ಮಂಗಳೂರು : ಮಂಗಳೂರಿನ ಜೈಲಿನೊಳಗೆ ಮಾದಕ ವಸ್ತು ಪೂರೈಕೆಯಾಗೋ ದೃಶ್ಯ ಸೆರೆಯಾದಿದಲ್ಲದೆ, ಮಾಜಿ ಮೇಯರ್ ಕಣ್ಣೆದುರಲ್ಲೇ ಜೈಲಿಗೆ ನಿಷೇಧಿತ ವಸ್ತು  ರವಾಣೆಯಾಗಿದೆ. ದ.ಕ. ಜಿಲ್ಲಾ ಕಾರಾಗೃಹಕ್ಕೆ ಯುವಕರು ಬೈಕ್ ನಲ್ಲಿ ಬಂದು ಗಾಂಜಾ ಎಸೆಯುತ್ತಿರುವ ವೀಡಿಯೋ ಜಾಲತಾಣದಲ್ಲಿ ವೈರಲ್‍ ಆಗಿದೆ. ಗಾಂಜಾ ಎಸೆಯುವ ದೃಶ್ಯ ಕಾರೊಂದರ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇಂತಹದ್ದೆ ಘಟನೆಗಳು ಹಿಂದಿನ ದಿನಗಳಿಂದ ಸಾಕಷ್ಟು ನಡೆಯುತ್ತಿತ್ತು ಎಂಬ ವಿಷಯ ತಿಳಿಸು ಬಂದಿದೆ. ಗಾಂಜಾ ಎಸೆದು ಓಡಿದ ಯುವಕರಿಗೆ ಜೈಲಿನಲ್ಲಿ ಅಕ್ರಮ ತಡೆಗಟ್ಟಲು ಹಾಗೂ  ಭದ್ರತೆ ಹೆಚ್ಚಿಸಲು […]

ಜೈಲಿಗೆ ಗಾಂಜಾ ಎಸೆದ ಯುವಕರು |  ವೀಡಿಯೋ ವೈರಲ್ Read More »

ಮನ್ನಡ್ಕಪಾದೆ ಗುಡ್ಡಕ್ಕೆ ತಗುಲಿದ ಬೆಂಕಿ

ಕಕ್ಕಿಂಜೆ : ಮನ್ನಡ್ಕಪಾದೆ ಗುಡ್ಡಕ್ಕೆ ಬೆಂಕಿ ಬಿದ್ದ ಘಟನೆ ಇಂದು ಕಕ್ಕಿಂಜೆಯಲ್ಲಿ ನಡೆದಿದೆ. ಸುಮಾರು 2 ಎಕರೆ ಪ್ರದೇಶದಲ್ಲಿ ಬೆಂಕಿ  ಆವರಿಸಿದೆ ಎನ್ನಲಾಗಿದೆ. ಯಾವುದೇ ರೀತಿ ಹೆಚ್ಚಿನ ಹಾನಿಯಾಗಿಲ್ಲವೆಂದು ತಿಳಿದುಬಂದಿದೆ.  

ಮನ್ನಡ್ಕಪಾದೆ ಗುಡ್ಡಕ್ಕೆ ತಗುಲಿದ ಬೆಂಕಿ Read More »

ಎಪಿಎಂಸಿ ರಸ್ತೆಯಲ್ಲಿ ಸರಣಿ ಕಳ್ಳತನ

ಪುತ್ತೂರು : ಆದರ್ಶ ಆಸ್ಪತ್ರೆಯ ಬಳಿ ಇರುವ ಮೆಡಿಕಲ್, ಸೆಲೂನ್ ಮತ್ತು ಪಕ್ಕದ ಕಟ್ಟಡದಲ್ಲಿರುವ ಕ್ಲಿನಿಕ್ ಹಾಗೂ ಅಂಗಡಿಗಳಿಗೆ ಕಳ್ಳರು ನುಗ್ಗಿ ನಗದು ಕಳವು ಮಾಡಿರುವುದಾಗಿ ಇಂದು ಬೆಳಗ್ಗೆ ಮಾಹಿತಿ ಲಭಿಸಿದೆ. ಘಟನೆಗೆ ಸಂಬಂಧಿಸಿ ಪೊಲೀಸರು ತೆರಳಿ ಮಾಹಿತಿ ಸಂಗ್ರಹಿಸುತ್ತಿದ್ದಾರೆ.

ಎಪಿಎಂಸಿ ರಸ್ತೆಯಲ್ಲಿ ಸರಣಿ ಕಳ್ಳತನ Read More »

ಮಹಾರಾಷ್ಟ್ರದಲ್ಲಿ ಕರ್ನಾಟಕದ ಬಸ್‌ಗಳಿಗೆ ಮಸಿ : ಶಿವಸೇನೆ ಪುಂಡರಿಂದ ಚಾಲಕ, ನಿರ್ವಾಹಕರಿಗೆ ಬೆದರಿಕೆ

ಗಡಿ ವಿವಾದವಾಗಿ ಬದಲಾದ ಕಂಡಕ್ಟರ್‌ ಮೇಲಿನ ಹಲ್ಲೆ ಘಟನೆ ಬೆಳಗಾವಿ: ಮರಾಠಿ ಗೊತ್ತಿಲ್ಲ ಕನ್ನಡದಲ್ಲಿ ಮಾತನಾಡು ಎಂದ ಬಸ್ ಕಂಡಕ್ಟರ್ ಮೇಲೆ ಮರಾಠಿ ಪುಂಡರು ಬೆಳಗಾವಿಯಲ್ಲಿ ಹಲ್ಲೆ ನಡೆಸಿದ ವಿಚಾರ ಈಗ ಎರಡು ರಾಜ್ಯಗಳ ನಡುವೆ ಗಡಿ ಉದ್ವಿಗ್ನತೆ ಸೃಷ್ಟಿಗೆ ಕಾರಣವಾಗಿದೆ. ಕರ್ನಾಟಕದಿಂದ ಮಹಾರಾಷ್ಟ್ರಕ್ಕೆ ಸಂಚರಿಸುವ ಬಸ್‌ಗಳನ್ನು ಅಲ್ಲಿನ ಮರಾಠಿ ಪುಂಡರು ಟಾರ್ಗೆಟ್ ಮಾಡುತ್ತಿದ್ದು, ಉದ್ಧವ್ ಠಾಕ್ರೆ ಬಣದ ಶಿವಸೇನೆ ಪುಂಡರು ಕರ್ನಾಟಕ ಬಸ್ಸುಗಳಿಗೆ ಮಸಿ ಬಳಿದು ಹಾನಿ ಎಸಗಿದ್ದಾರೆ. ಪುಣೆಯ ಸ್ವಾರ್‌ಗೇಟ್‌ ಬಳಿ ಪುಂಡಾಟಿಕೆ ಮಾಡಿರುವ

ಮಹಾರಾಷ್ಟ್ರದಲ್ಲಿ ಕರ್ನಾಟಕದ ಬಸ್‌ಗಳಿಗೆ ಮಸಿ : ಶಿವಸೇನೆ ಪುಂಡರಿಂದ ಚಾಲಕ, ನಿರ್ವಾಹಕರಿಗೆ ಬೆದರಿಕೆ Read More »

280 ಪ್ರಯಾಣಿಕರಿದ್ದ ವಿಮಾನಕ್ಕೆ ಬಾಂಬ್‌ ಬೆದರಿಕೆ : ರೋಮ್‌ನಲ್ಲಿ ತುರ್ತು ಭೂಸ್ಪರ್ಶ

ಅಮೆರಿಕದಿಂದ ದಿಲ್ಲಿಗೆ ಬರುತ್ತಿದ್ದ ಡ್ರೀಮ್‌ಲೈನರ್ ವಿಮಾನ ನವದೆಹಲಿ: ನ್ಯೂಯಾರ್ಕ್‌ನ ಜಾನ್ ಎಫ್ ಕೆ ಕೆನಡಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ನವದೆಹಲಿಗೆ ಹೊರಟ್ಟಿದ್ದ ಅಮೆರಿಕದ ವಿಮಾನಕ್ಕೆ ಬಾಂಬ್ ಬೆದರಿಕೆ ಹಾಕಿದ್ದರಿಂದ ವಿಮಾನವನ್ನು ರೋಮ್‌ನಲ್ಲಿ ಭಾನುವಾರ ಸಂಜೆ ತುರ್ತು ಭೂ ಸ್ಪರ್ಶ ಮಾಡಲಾಗಿದೆ. 280 ಪ್ರಯಾಣಿಕರಿದ್ದ ಬೋಯಿಂಗ್ 787-9 ಡ್ರೀಮ್‌ಲೈನರ್ ವಿಮಾನ ಕ್ಯಾಸ್ಪಿಯನ್ ಸಮುದ್ರದ ಮೇಲೆ ಪಶ್ಚಿಮಕ್ಕೆ ಹೋಗುವ ಮೊದಲು ಇಟಲಿಯ ಕಡೆಗೆ ತನ್ನ ಮಾರ್ಗವನ್ನು ತಿರುಗಿಸಿದೆ. ನ್ಯೂಯಾರ್ಕ್ ನಿಂದ ಶನಿವಾರ ರಾತ್ರಿ 8.30ರ ಸಮಯದಲ್ಲಿ ಟೇಕ್ ಆಫ್ ಆದ

280 ಪ್ರಯಾಣಿಕರಿದ್ದ ವಿಮಾನಕ್ಕೆ ಬಾಂಬ್‌ ಬೆದರಿಕೆ : ರೋಮ್‌ನಲ್ಲಿ ತುರ್ತು ಭೂಸ್ಪರ್ಶ Read More »

ಸಾಂತ್ಯ ನಿವಾಸಿ ನವೀನ್‍ ನೇಣು ಬಿಗಿದು ಆತ್ಮಹತ್ಯೆ

ಪುತ್ತೂರು: ಈಶ್ವರಮಂಗಲ ಸಾಂತ್ಯ ನಿವಾಸಿ ನವೀನ್ (42ವ) ರವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶನಿವಾರ ನಡೆದಿದೆ. ಕಳೆದ 15 ವರ್ಷದಿಂದ ನಾರಾಯಣ ಗೌಡ ಉರಿಕ್ಯಾಡಿ ಅವರ ಮಾಲಕತ್ವದ ಶ್ರೀ ಗಜವದನ ಗೂಡ್ಸ್ ಸರ್ವೀಸಸ್ ಲಾರಿಯಲ್ಲಿ ಚಾಲಕರಾಗಿದ್ದ ಅವರು ಗೋಡೌನ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈಶ್ವರಮಂಗಲ ಹೊರಠಾಣೆಯ ಎಎಸ್‌ಐ ಚಂದ್ರಶೇಖರ್ ಮತ್ತು ಸಿಬ್ಬಂದಿಗಳು ಶವದ ಮಹಜರು ನಡೆದಿದ್ದಾರೆ. ಮೃತರು ತಂದೆ, ತಾಯಿ, ಪತ್ನಿಯನ್ನು ಅಗಲಿದ್ದಾರೆ.

ಸಾಂತ್ಯ ನಿವಾಸಿ ನವೀನ್‍ ನೇಣು ಬಿಗಿದು ಆತ್ಮಹತ್ಯೆ Read More »

ಗ್ರಾಹಕರ ಸೋಗಿನಲ್ಲಿ ಅಪರಿಚಿತ ವ್ಯಕ್ತಿಯಿಂದ ಚಿನ್ನ ಕಳವು

ಹಿರಿಯಡ್ಕ: ಗ್ರಾಹಕರ ಸೋಗಿನಲ್ಲಿ ಬಂದ ಅಪರಿಚಿತ ವ್ಯಕ್ತಿಯೊಬ್ಬ ಜ್ಯುವೆಲ್ಲರಿ ಅಂಗಡಿಯಲ್ಲಿನ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಿದ ಘಟನೆ ಹಿರಿಯಡ್ಕದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಅಂಜಾರು ಗ್ರಾಮದ ರತ್ನಾಕರ ಎಂಬವರ ಹಿರಿಯಡ್ಕ ಪೇಟೆಯಲ್ಲಿರುವ ಶ್ರೀಲಕ್ಷ್ಮೀ ಅನಂತ ಪದ್ಮನಾಭ ಜ್ಯುವೆಲ್ಲರಿ ಶಾಪ್‌ಗೆ ನವರತ್ನ ಖರೀದಿ ಮಾಡಲು ಅಪರಿಚಿತ ವ್ಯಕ್ತಿಯೋರ್ವ ಬಂದಿದ್ದು, ನವರತ್ನವೊಂದನ್ನು ಖರೀದಿಸಿ ಆ ನಂತರ ಅಂಗಡಿ ಮಾಲಕರಲ್ಲಿ ಬೇರೆ ಚಿನ್ನ ತೋರಿಸಲು ಹೇಳಿ ಅವರ ಗಮನಕ್ಕೆ ಬಾರದಂತೆ ಡ್ರಾವರ್‌ಗೆ ಕೈಹಾಕಿ ರಿಪೇರಿಗಾಗಿ ಗ್ರಾಹಕರು ನೀಡಿದ್ದ

ಗ್ರಾಹಕರ ಸೋಗಿನಲ್ಲಿ ಅಪರಿಚಿತ ವ್ಯಕ್ತಿಯಿಂದ ಚಿನ್ನ ಕಳವು Read More »

ಬಾಣಂತಿ ಹೊಟ್ಟೆಯಲ್ಲಿ ಹತ್ತಿ ಉಂಡೆ ಬಿಟ್ಟು ಹೊಲಿಗೆ ಹಾಕಿದ ವೈದ್ಯರು

ಜಿಮ್ಸ್‌ ಆಸ್ಪತ್ರೆ ವೈದ್ಯರ ಯಡವಟ್ಟು ಕಲಬುರಗಿ: ಇಲ್ಲಿನ ಜಿಮ್ಸ್‌ ಆಸ್ಪತ್ರೆಯ ವೈದ್ಯರು ಮಹಿಳೆಯೊಬ್ಬರಿಗೆ ಸಿಸೇರಿಯನ್‌ ಮಾಡುವ ವೇಳೆ ಹೊಟ್ಟೆಯಲ್ಲೇ ಬಟ್ಟೆ ಉಂಡೆ ಹಾಗೂ ಹತ್ತಿ ಬಿಟ್ಟು ಹೊಲಿಗೆ ಹಾಕಿರುವ ಘಟನೆ ಬೆಳಕಿಗೆ ಬಂದಿದೆ. ಕಳೆದ ಫೆ.5ರಂದು ಭಾಗ್ಯಶ್ರೀ ಎಂಬ ಮಹಿಳೆಗೆ ಸಿಸೇರಿಯನ್‌ ಆಗಿತ್ತು. ಈ ವೇಳೆ ಶಸ್ತ್ರಚಿಕಿತ್ಸೆ ಮಾಡಿದ ವೈದ್ಯರು ಹೊಟೆಯಲ್ಲೇ ಬಟ್ಟೆ ಉಂಡೆ ಹಾಗೂ ಹತ್ತಿ ಬಿಟ್ಟು ಹೊಲಿಗೆ ಹಾಕಿದ್ದಾರೆ. ತಕ್ಷಣಕ್ಕೆ ಇದು ಮಹಿಳೆಯ ಅರಿವಿಗೆ ಬಂದಿಲ್ಲ. ಒಂದು ವಾರದ ಬಳಿಕ ಹೊಟ್ಟೆನೋವು ಕಾಣಿಸಿಕೊಂಡಿದೆ. ಈ

ಬಾಣಂತಿ ಹೊಟ್ಟೆಯಲ್ಲಿ ಹತ್ತಿ ಉಂಡೆ ಬಿಟ್ಟು ಹೊಲಿಗೆ ಹಾಕಿದ ವೈದ್ಯರು Read More »

ಬೆಂಗಳೂರಿನಲ್ಲಿ ನಡುರಾತ್ರಿ ಕಾಂಗ್ರೆಸ್‌ ಮುಖಂಡನ ಹತ್ಯೆ

ಬೆಂಬಲಿಗರಿಂದ ಆಸ್ಪತ್ರೆ ಎದುರು ಮಚ್ಚು, ಲಾಂಗ್‌ ಪ್ರದರ್ಶಿಸಿ ಭೀತಿ ಸೃಷ್ಟಿ ಬೆಂಗಳೂರು : ಕಾಂಗ್ರೆಸ್‌ ಮುಖಂಡರೊಬ್ಬರು ನಿನ್ನೆ ತಡರಾತ್ರಿ ಬೆಂಗೂರಿನಲ್ಲಿ ಬರ್ಬರವಾಗಿ ಹತ್ಯೆಯಾಗಿದ್ದಾರೆ. ಅಶೋಕನಗರದ ಗರುಡ ಮಾಲ್ ಬಳಿ ತಡರಾತ್ರಿ 1 ಗಂಟೆ ವೇಳೆಗೆ ಕಾಂಗ್ರೆಸ್​ ಮುಖಂಡ ಹೈದರ್ ಅಲಿ ಎಂಬವರನ್ನು ಕೊಲೆ ಮಾಡಲಾಗಿದೆ. ಹೈದರ್ ಅಲಿ ಶನಿವಾರ ರಾತ್ರಿ ಲೈವ್‌ಬ್ಯಾಂಡ್​ ಕಾರ್ಯಕ್ರಮವೊಂದನ್ನು ಮುಗಿಸಿಕೊಂಡು ಸ್ನೇಹಿತನ ಜೊತೆಗೆ ಬೈಕ್​ನಲ್ಲಿ ತೆರಳುತ್ತಿದ್ದರು. ಈ ವೇಳೆ ಬೈಕ್​ನಲ್ಲಿ ಹಿಂಬಾಲಿಸಿಕೊಂಡು ಬಂದ ದುಷ್ಕರ್ಮಿಗಳು ಹೈದರ್ ಅಲಿಯ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ.ಸ್ಥಳಕ್ಕೆ

ಬೆಂಗಳೂರಿನಲ್ಲಿ ನಡುರಾತ್ರಿ ಕಾಂಗ್ರೆಸ್‌ ಮುಖಂಡನ ಹತ್ಯೆ Read More »

ಉಪ್ಪಿನಂಗಡಿ ಜಾತ್ರೆ ಸಂದರ್ಭದಲ್ಲೇ ನದಿಗೆ ಹಾರಿದ ಕುಖ್ಯಾತ ಆರೋಪಿ | ಪೊಲೀಸರ ಕಣ್ತಪ್ಪಿಸಿ ಪರಾರಿಯಾದ ಆರೋಪಿ | ಭಕ್ತರಲ್ಲಿ ಆತಂಕ

ಉಪ್ಪಿನಂಗಡಿ: ಮಖೆ ಜಾತ್ರೆ ಸಡಗರದಲ್ಲಿದ್ದ ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ ದೇವಾಲಯದ ಭಕ್ತರಲ್ಲಿ ಯುವಕನೋರ್ವ ನದಿಗೆ ಹಾರಿರುವ ಕುರಿತು ಸುದ್ದಿಯಾಗುತ್ತಿದ್ದಂತೆ ಆತಂಕ ಸೃಷ್ಟಿಯಾದ ಘಟನೆ ಗುರುವಾರ ರಾತ್ರಿ ನಡೆದಿದೆ ದೇಗುಲದ ರಥೋತ್ಸವ ನಡೆಯುತ್ತಿದ್ದಂತೆಯೇ ಪೊಲೀಸರು ನೇತ್ರಾವತಿ ಹಾಗೂ ಕುಮಾರಧಾರಾ ನದಿ ಸಂಗಮ ಸ್ಥಳದತ್ತ ಧಾವಿಸುತ್ತಿರುವುದು ಕಂಡು ಬಂದಿತ್ತು. ಜತೆಗೆ ಭಕ್ತರು ಕೂಡ ಅತ್ತ ಧಾವಿಸತೊಡಗಿದರು. ಈ ವೇಳೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗಿಯಾದ ಮಂದಿಗೆ ಈ ಬೆಳವಣಿಗೆ ಬಗ್ಗೆ, ಕುತೂಹಲ ಮೂಡಿ ವಿಚಾರಿಸತೊಡಗಿದರು. ಆದರೆ ನದಿಗೆ

ಉಪ್ಪಿನಂಗಡಿ ಜಾತ್ರೆ ಸಂದರ್ಭದಲ್ಲೇ ನದಿಗೆ ಹಾರಿದ ಕುಖ್ಯಾತ ಆರೋಪಿ | ಪೊಲೀಸರ ಕಣ್ತಪ್ಪಿಸಿ ಪರಾರಿಯಾದ ಆರೋಪಿ | ಭಕ್ತರಲ್ಲಿ ಆತಂಕ Read More »

error: Content is protected !!
Scroll to Top