ಅಪರಾಧ

ಎಡನೀರು ಸ್ವಾಮೀಜಿ ಶ್ರೀ ಸಚ್ಚಿದಾನಂದ ಭಾರತೀಯವರ ಕಾರಿಗೆ ಹಾನಿ | ಮತಾಂಧ ದುಷ್ಕರ್ಮಿಗಳನ್ನು ಬಂಧಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು : ಸಂಜೀವ ಮಠಂದೂರು

ಪುತ್ತೂರು: ಎಡನೀರು ಮಠದ ಸ್ವಾಮೀಜಿ ಶ್ರೀ ಸಚ್ಚಿದಾನಂದ ಭಾರತೀಯವರು ಭಾನುವಾರ ಬೋವಿಕಾನ ಬಾವಿಕೆರೆ ಎಂಬಲ್ಲಿ ವಾಹನದಲ್ಲಿ ಸಂಚರಿಸುತ್ತಿದ್ದ ಸಂದರ್ಭದಲ್ಲಿ ಕೆಲವು ಮತಾಂಧ ಕಿಡಿಗೇಡಿಗಳು ಸ್ವಾಮೀಜಿಯವರು ಹೋಗುತ್ತಿದ್ದ ವಾಹನವನ್ನು ಅಡ್ಡಗಟ್ಟಿ ನಿಲ್ಲಿಸಿ ಬಾವಿಕೆರೆ ಎಂಬಲ್ಲಿ ದೊಣ್ಣೆಯಿಂದ ಕಾರಿನ ಗಾಜನ್ನು ಹೊಡೆದು ಹಾನಿಗೊಳಿಸಿದರೆಂದು ತಿಳಿದು ಬಂದಿದ್ದು, ಈ ಘಟನೆಯಲ್ಲಿ ಭಾಗಿಯಾದ ಮತಾಂಧ ದುಷ್ಕರ್ಮಿಗಳನ್ನು ತಕ್ಷಣ ಬಂಧಿಸಿ, ಕೇರಳ ಸರಕಾರ ಹಾಗೂ ಪೊಲೀಸ್ ಇಲಾಖೆ ಸೂಕ್ತ ರಕ್ಷಣೆ ನೀಡಬೇಕು ಎಂದು ಮಾಜಿ ಶಾಸಕ ಸಂಜೀವ ಮಠಂದೂರು ಆಗ್ರಹಿಸಿದ್ದಾರೆ. ಪತ್ರಿಕಾ ಹೇಳಿಕೆ ನೀಡಿರುವ […]

ಎಡನೀರು ಸ್ವಾಮೀಜಿ ಶ್ರೀ ಸಚ್ಚಿದಾನಂದ ಭಾರತೀಯವರ ಕಾರಿಗೆ ಹಾನಿ | ಮತಾಂಧ ದುಷ್ಕರ್ಮಿಗಳನ್ನು ಬಂಧಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು : ಸಂಜೀವ ಮಠಂದೂರು Read More »

ಎಡನೀರು ಶ್ರೀಗಳ ವಾಹನಕ್ಕೆ ಅಡ್ಡಿ | ವಿಶ್ವಹಿಂದೂ ಪರಿಷದ್‍ ನಿಂದ ಖಂಡನೆ

ಮಂಗಳೂರು: ಜಗದ್ಗುರು ಶ್ರೀ ಶಂಕರಾಚಾರ್ಯ ಸಂಸ್ಥಾನ ಶ್ರೀಮದ್ ಎಡನೀರು ಮಠಾಧೀಶರಾದ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರು ಸಂಚರಿಸುತಿದ್ದ ವಾಹನಕ್ಕೆ ಕಿಡಿಗೇಡಿಗಳು ತಡೆಯೊಡ್ಡಿ ಕೃತ್ಯ ಎಸಗಿದ ಘಟನೆಯನ್ನು ವಿಶ್ವ ಹಿಂದೂ ಪರಿಷದ್ ಬಲವಾಗಿ ಖಂಡಿಸುತ್ತದೆ. ಪೂಜ್ಯ ಸಾಧು ಸಂತರನ್ನು ಗುರಿಯಾಗಿಸಿಕೊಂಡು ನಡೆಯುತ್ತಿರುವ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ದುಷ್ಕರ್ಮಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಈ ಕುರಿತು ವಿಶ್ವ ಹಿಂದೂ ಪರಿಷದ್ ಪ್ರಾಂತ ಸಹಕಾರ್ಯದರ್ಶಿ  ಶರಣ್ ಪಂಪವೆಲ್ ಕೇರಳ ಸರಕಾರಕ್ಕೆ ಆಗ್ರಹಿಸಿದ್ದಾರೆ.

ಎಡನೀರು ಶ್ರೀಗಳ ವಾಹನಕ್ಕೆ ಅಡ್ಡಿ | ವಿಶ್ವಹಿಂದೂ ಪರಿಷದ್‍ ನಿಂದ ಖಂಡನೆ Read More »

ಸಲ್ಮಾನ್‌ ಖಾನ್‌ಗೆ ಮತ್ತೆ ಜೀವ ಬೆದರಿಕೆ ಕರೆ

5 ಕೋಟಿ ರೂ. ಕೊಟ್ಟು, ದೇವಸ್ಥಾನಕ್ಕೆ ಹೋಗಿ ಕ್ಷಮೆ ಯಾಚಿಸದಿದ್ದರೆ ಫಿನಿಶ್‌ ಎಂದು ಧಮಕಿ ಮುಂಬಯಿ : ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ಗೆ ಮತ್ತೊಂದು ಜೀವ ಬೆದರಿಕೆ ಕರೆ ಬಂದಿದೆ. ಈ ಸಲ ಬೆದರಿಕೆ ಹಾಕಿದವ ಲಾರೆನ್ಸ್‌ ಬಿಷ್ಣೋಯ್‌ಯ ಸಹೋದರನ ಹೆಸರು ಹೇಳಿಕೊಂಡಿದ್ದಾನೆ. ಇದರೊಂದಿಗೆ ಕಳೆದ 10 ದಿನಗಳಲ್ಲಿ ಸಲ್ಮಾನ್‌ಗೆ ಮೂರು ಬೆದರಿಕೆಗಳು ಬಂದಿವೆ.ಮುಂಬಯಿ ಟ್ರಾಫಿಕ್‌ ಪೊಲೀಸರಿಗೆ ಕರೆ ಬಂದಿದ್ದು, ಸಲ್ಮಾನ್ ಖಾನ್ ದೇವಸ್ಥಾನಕ್ಕೆ ಹೋಗಿ ತಪ್ಪಾಯ್ತು ಎಂದು ಕ್ಷಮೆ ಕೇಳಬೇಕು ಅಥವಾ 5 ಕೋಟಿ ರೂ.

ಸಲ್ಮಾನ್‌ ಖಾನ್‌ಗೆ ಮತ್ತೆ ಜೀವ ಬೆದರಿಕೆ ಕರೆ Read More »

ಪಟಾಕಿ ಡಬ್ಬಾದ ಮೇಲೆ ಕುಳಿತುಕೊಳ್ಳುವ ಸವಾಲು ಸ್ವೀಕರಿಸಿ ಪ್ರಾಣ ಕಳೆದುಕೊಂಡ ಯುವಕ

ಆಟೋರಿಕ್ಷಾ ಸಿಗುವ ಎಂಬ ಆಸೆಯಿಂದ ಅಪಾಯಕಾರಿ ಆಟ ಆಡಿದ ಯುವಕ ಬೆಂಗಳೂರು : ಪಟಾಕಿ ಜೊತೆ ಹುಡುಗಾಟವಾಡಲು ಹೋಗಿ ಯುವಕ ಪ್ರಾಣ ಕಳೆದುಕೊಂಡಿರುವ ಘಟನೆ ಬೆಂಗಳೂರಿನ ಕೋಣನಕುಂಟೆ ವ್ಯಾಪ್ತಿಯ ವಿವರ್ಸ್ ಕಾಲೋನಿಯಲ್ಲಿ ನಡೆದಿದೆ. ಶಬರೀಶ್​ (32) ಮೃತ ಯುವಕ. ಯುವಕರ ಹುಚ್ಚಾಟದ ದೃಶ್ಯ ಮನೆಯೊಂದರ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಅಕ್ಟೋಬರ್ 31ರಂದು ಐದಾರು ಮಂದಿ ಯುವಕರು ಶಬರೀಶ್​ಗೆ ಪಟಾಕಿ ತುಂಬಿಸಿದ ಡಬ್ಬಾದ ಮೇಲೆ ಕುಳೀತುಕೊಳ್ಳಲು ಸವಾಲು ಹಾಕುತ್ತಾರೆ. ಡಬ್ಬಾದಲ್ಲಿ ಪಟಾಕಿ ತುಂಬಿಸಿ ಬೆಂಕಿಹಚ್ಚಿ ಅದರ ಮೇಲೆ ಶಬರೀಶ್​ನನ್ನು

ಪಟಾಕಿ ಡಬ್ಬಾದ ಮೇಲೆ ಕುಳಿತುಕೊಳ್ಳುವ ಸವಾಲು ಸ್ವೀಕರಿಸಿ ಪ್ರಾಣ ಕಳೆದುಕೊಂಡ ಯುವಕ Read More »

ಸಾರ್ವಜನಿಕರು, ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ಮಾರಾಟಕ್ಕೆ ಯತ್ನ | ಆರೋಪಿ ಪುತ್ತೂರು ಮೂಲದ ಎಚ್‍.ಮೊಹಮ್ಮದ್ ಹಫೀಜ್‍ ಬಂಧನ | ಸೊತ್ತುಗಳ ವಶ

ಮಂಗಳೂರು: ವಿದೇಶದಿಂದ ಮಾದಕ ವಸ್ತುಗಳನ್ನು ಸಾಗಿಸುತ್ತಿದ್ದ ಸಂದರ್ಭ ಕಾರ್ಯಾಚರಣೆ ನಡೆಸಿದ ಮಂಗಳೂರು ಸಿಸಿಬಿ ಪೊಲೀಸರು ಆರೋಪಿಯೋಬ್ಬನನ್ನು ಬಂಧಿಸಿ, ಆತನಿಂದ 30 ಲಕ್ಷ ರೂ. ಮೌಲ್ಯದ ಹೈಡೋವೀಡ್ ಗಾಂಜಾ, 2.5 ಕೆಜಿ ಗಾಂಜಾ ಹಾಗೂ ಇತರ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಪುತ್ತೂರು ಹಾರಾಡಿ ಮೂಲದ, ಪ್ರಸ್ತುತ ತೊಕ್ಕೊಟ್ಟು ಚೊಂಬುಗುಡ್ಡೆ ನಿವಾಸಿ ಎಚ್. ಮೊಹಮ್ಮದ್ ಹಫೀಜ್ (23) ಬಂಧಿತ ಆರೋಪಿ. ಆರೋಪಿ ಮೊಹಮ್ಮದ್ ಹಫೀಜ್‍ ಹೈಡೋವೀಡ್ ಗಾಂಜಾ ಮತ್ತು ಗಾಂಜಾವನ್ನು ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಎಂಬ ಖಚಿತ ಮಾಹಿತಿ

ಸಾರ್ವಜನಿಕರು, ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ಮಾರಾಟಕ್ಕೆ ಯತ್ನ | ಆರೋಪಿ ಪುತ್ತೂರು ಮೂಲದ ಎಚ್‍.ಮೊಹಮ್ಮದ್ ಹಫೀಜ್‍ ಬಂಧನ | ಸೊತ್ತುಗಳ ವಶ Read More »

ಗುರುಪ್ರಸಾದ್‌ ಮೊಬೈಲ್‌, ಲ್ಯಾಪ್‌ಟಾಪ್‌ ಎಫ್‌ಎಸ್‌ಎಲ್‌‌ ಪರೀಕ್ಷೆಗೆ ರವಾನೆ

ಸಾವಿನ ನಿಜವಾದ ಕಾರಣ ಇನ್ನೂ ನಿಗೂಢ ಬೆಂಗಳೂರು: ನಿರ್ದೇಶಕ, ನಟ ಗುರುಪ್ರಸಾದ್ ಆತ್ಮಹತ್ಯೆಯ ಕಾರಣ ನಿಗೂಢವಾಗಿರುವುದ ಹಿನ್ನೆಲೆಯಲ್ಲಿ ಪೊಲೀಸರು ಅವರ ಲ್ಯಾಪ್‌ಟಾಪ್‌, ಮೊಬೈಲ್‌ ಫೋನ್‌, ಟ್ಯಾಬ್‌ ಇತ್ಯಾದಿಗಳನ್ನಜು ವಿಧಿವಿಜ್ಞಾನ ಪರೀಕ್ಷೆಗಾಗಿ ಎಫ್‌ಎಸ್‌ಎಲ್‌ ಲ್ಯಾಬ್‌ಗೆ ರವಾನಿಸಿದ್ದಾರೆ.ಭಾನುವಾರ ಬೆಂಗಳೂರಿನ ಮಾದನಾಯಕನಹಳ್ಳಿ ಅಪಾರ್ಟ್‌ಮೆಂಟ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಗುರುಪ್ರಸಾದ್ ಶವ ಪತ್ತೆಯಾಗಿದೆ. ಆತ್ಮಹತ್ಯೆ ಮಾಡಿಕೊಂಡ 72 ತಾಸಿಗೂ ಅಧಿಕ ಸಮಯ ಕಳೆದ ಬಳಿಕ ಮೃತದೇಹ ಸಿಕ್ಕಿದೆ. ಆದರೆ ಆತ್ಮಹತ್ಯೆಐ ಅಸಲಿ ಕಾರಣ ಇನ್ನೂ ನಿಗೂಢವಾಗಿ ಇರುವುದರ ಹಿನ್ನೆಲೆಯಲ್ಲಿ ಪೊಲೀಸರು ಮೊಬೈಲ್‌ ಫೋನ್‌

ಗುರುಪ್ರಸಾದ್‌ ಮೊಬೈಲ್‌, ಲ್ಯಾಪ್‌ಟಾಪ್‌ ಎಫ್‌ಎಸ್‌ಎಲ್‌‌ ಪರೀಕ್ಷೆಗೆ ರವಾನೆ Read More »

ದೇವಸ್ಥಾನಕ್ಕೆ ನುಗ್ಗಿ ಹಿಂದುಗಳ ಮೇಲೆ ಹಲ್ಲೆ ನಡೆಸಿದ ಉಗ್ರರು

ಖಲಿಸ್ಥಾನಿ ಉಗ್ರರ ಕೃತ್ಯಕ್ಕೆ ಕೆನಡಾ ಪ್ರಧಾನಿ ಜಸ್ಟಿನ್‌ ಟ್ರುಡೊ ವಿಷಾದ ಒಟ್ಟಾವಾ: ಭಾರತ-ಕೆನಡಾ ರಾಜಕೀಯ ಬಿಕ್ಕಟ್ಟಿನ ನಡುವೆ ಕೆನಡಾದಲ್ಲಿ ಹಿಂದೂಗಳ ಮೇಲೆ ಹಿಂಸಾಚಾರ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಕೆನಡಾದ ಬ್ರಾಂಪ್ಟನ್‌ನಲ್ಲಿರುವ ಹಿಂದೂ ದೇವಾಲಯದಲ್ಲಿ ಭಕ್ತರ ಮೇಲೆ ಖಲಿಸ್ಥಾನಿ ಉಗ್ರರ ಗುಂಪೊಂದು ದಾಳಿ ನಡೆಸಿದೆ.ಖಲಿಸ್ಥಾನಿ ಧ್ವಜ ಹಿಡಿದಿದ್ದ ಉಗ್ರರ ಗುಂಪು ದೇವಸ್ಥಾನಕ್ಕೆ ನುಗ್ಗಿ ಭಕ್ತರ ಮೇಲೆ ಮನಸೋ ಇಚ್ಚೆ ಹಲ್ಲೆ ನಡೆಸಿದೆ. ಈ ಹಲಕ್ಲೆಯ ವೀಡಿಯೊ ಜಾಲತಾಣಗಳಲ್ಲಿ ವೈರಲ್‌ ಆಗಿವೆ. ವೀಡಿಯೊಲ್ಲಿ ಖಲಿಸ್ಥಾನಿ ಧ್ವಜ ಹಿಡಿದ ಗುಂಪು

ದೇವಸ್ಥಾನಕ್ಕೆ ನುಗ್ಗಿ ಹಿಂದುಗಳ ಮೇಲೆ ಹಲ್ಲೆ ನಡೆಸಿದ ಉಗ್ರರು Read More »

ಮಹಿಳೆಯ ತಲೆ ಬುರುಡೆ, ಎಲುಬುಗಳು ಪತ್ತೆ | ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ | ಪೊಲೀಸರಿಂದ ತನಿಖೆ

ಪುತ್ತೂರು: ಮರವೊಂದಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯೊಬ್ಬರ ತಲೆ ಬುರುಡೆ ಹಾಗೂ ಎಲುಬುಗಳು ಪತ್ತೆಯಾದ ಘಟನೆ ಒಳಮೊಗ್ರು ಗ್ರಾಮದ ಉರ್ವದಲ್ಲಿ ನಡೆದಿದೆ. ಉರ್ವ ನಿವಾಸಿ ಸಂಜೀವ ಎಂಬವರ ಪತ್ನಿ ನಳಿನಿ ಎಂಬಾಕೆ ತನ್ನ ಮನೆಯ ಎದುರಿನ ಕಾಡೊಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು ಇದು ಮನೆಯವರಿಗೆ ಒಂದು ತಿಂಗಳ ಬಳಿಕ ಗೊತ್ತಾಗಿದ್ದು ಈ ವೇಳೆ ಮಹಿಳೆಯ ತಲೆ ಬುರುಡೆ ಹಾಗೂ ಕೈ, ಕಾಲುಗಳ ಎಲುಬು ಪತ್ತೆಯಾಗಿದೆ. ಸ್ಥಳಕ್ಕೆ ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿದ್ದು ತಲೆ

ಮಹಿಳೆಯ ತಲೆ ಬುರುಡೆ, ಎಲುಬುಗಳು ಪತ್ತೆ | ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ | ಪೊಲೀಸರಿಂದ ತನಿಖೆ Read More »

ಆತ್ಮಹತ್ಯೆ ಮಾಡಿಕೊಂಡ ನಟ, ನಿರ್ದೇಶಕ ಗುರುಪ್ರಸಾದ್ !

ಬೆಂಗಳೂರು: ನಟ, ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಾದನಾಯಕಹಳ್ಳಿ ಅಪಾರ್ಟ್‌ಮೆಂಟ್‌ ನಲ್ಲಿರುವ ತಮ್ಮ ನಿವಾಸದಲ್ಲಿ ಮೂರು ದಿನಗಳ ಹಿಂದೆ ನೇಣಿಗೆ ಶರಣಾಗಿದ್ದಾರೆ ಎನ್ನಲಾಗಿದೆ. ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದು, ಪೊಲೀಸ್ ತನಿಖೆಯಿಂದ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.

ಆತ್ಮಹತ್ಯೆ ಮಾಡಿಕೊಂಡ ನಟ, ನಿರ್ದೇಶಕ ಗುರುಪ್ರಸಾದ್ ! Read More »

ಯುವಕ ನೇಣು ಬಿಗಿದು ಆತ್ಮಹತ್ಯೆ !

ಬೆಳ್ತಂಗಡಿ: ಯುವಕನೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ಲಾಯಿಲ ಕುಂಠಿನ ಎಂಬಲ್ಲಿ ನಡೆದಿದೆ. ಲಾಯಿಲ ಗ್ರಾಮದ ಕುಂಟಿನಿ ನಿವಾಸಿ ನಿತಿನ್ (26) ಆತ್ಮಹತ್ಯೆ ಮಾಡಿಕೊಂಡ ಯುವಕ. ಕಳೆದ ಕೆಲವು ಸಮಯಗಳಿಂದ ಗೂಡ್ಸ್ ರಿಕ್ಷಾದಲ್ಲಿ ಮೀನು ವ್ಯಾಪಾರ ಮಾಡಿಕೊಂಡಿದ್ದ, ನಿನ್ನೆ ಕೂಡ ಕುಂಟಿನಿಯಲ್ಲಿ ಮೀನು ವ್ಯಾಪಾರ ಮಾಡಿ ನಂತರ ತನ್ನ ಸಂಬಂಧಿಕರ ಮನೆಗೆ ತೆರಳಿದ್ದಾನೆ. ಅಲ್ಲಿ ಯಾವುದೋ ಕಾರಣಕ್ಕಾಗಿ ತನ್ನ ಮನೆಯವರೊಂದಿಗೆ ಜಗಳವಾಗಿದೆ. ಇದೇ ವೇಳೆ ಮನೆಗೆ ಬಂದ ನಿತಿನ್ ಬಾಗಿಲು ಹಾಕಿ ನೇಣು ಬಿಗಿದುಕೊಂಡಿದ್ದಾನೆ.

ಯುವಕ ನೇಣು ಬಿಗಿದು ಆತ್ಮಹತ್ಯೆ ! Read More »

error: Content is protected !!
Scroll to Top