ಅಪರಾಧ

ಅಕ್ರಮ ಕಲ್ಲುಕೋರೆ ದಾಳಿ ನೆಪದಲ್ಲಿ ಬಿಜೆಪಿ ಯುವಮೋರ್ಚಾ ಅಧ್ಯಕ್ಷರ ಬಂಧನ | ಬಿಜೆಪಿಯಿಂದ ಪ್ರತಿಭಟನೆ

ಬೆಳ್ತಂಗಡಿ : ಅಕ್ರಮ ಕಲ್ಲು ಕೋರೆಗೆ ದಾಳಿ ನೆಪದಲ್ಲಿ ಬಿಜೆಪಿ ಕಾರ್ಯಕರ್ತನನ್ನು ಬಂಧಿಸಿದ ಹಿನ್ನಲೆಯಲ್ಲಿ ಬೆಳ್ತಂಗಡಿ ಬಿಜೆಪಿ ವತಿಯಿಂದ  ಬೆಳ್ತಂಗಡಿಯಲ್ಲಿ ಪ್ರತಿಭಟನೆ ಬೆಳ್ತಂಗಡಿಯಲ್ಲಿ ನಡೆಯಿತು. ಕಾಂಗ್ರೆಸ್ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದ ಬಿಜೆಪಿಗರು ಪೊಲೀಸ್ ಇಲಾಖೆಯ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಬಿಜೆಪಿ ಲೋಕಸಭಾ ಅಭ್ಯರ್ಥಿಗಳಾದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಕೋಟ ಶ್ರೀನಿವಾಸ ಪೂಜಾರಿ ಸಹಿತ ಬಿಜೆಪಿ ಮುಖಂಡರು, ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಅಕ್ರಮ ಕಲ್ಲುಕೋರೆ ದಾಳಿ ನೆಪದಲ್ಲಿ ಬಿಜೆಪಿ ಯುವಮೋರ್ಚಾ ಅಧ್ಯಕ್ಷರ ಬಂಧನ | ಬಿಜೆಪಿಯಿಂದ ಪ್ರತಿಭಟನೆ Read More »

ಇರಾನ್ ಅಧ್ಯಕ್ಷರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪಥನ | ಪ್ರಯಾಣಿಕರೆಲ್ಲರೂ ದುರ್ಮರಣ

ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮತ್ತು ಅವರ ವಿದೇಶಾಂಗ ಸಚಿವ ಹುಸೇನ್ ಅಮಿರಾಬೊಲ್ಲಿಯನ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಅಪಘಾತದ ಸ್ಥಳದಲ್ಲಿ ಬದುಕುಳಿದವರು ಕಂಡುಬಂದಿಲ್ಲ ಎಂದು ಇರಾನಿನ ಸರ್ಕಾರಿ ಮಾಧ್ಯಮ ಸೋಮವಾರ ತಿಳಿಸಿದೆ. ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಅವರ ಹೆಲಿಕಾಪ್ಟರ್ ಪತ್ತೆಯಾಗಿದೆ ಆದರೆ ಪರಿಸ್ಥಿತಿ ಉತ್ತಮವಾಗಿಲ್ಲ ಎಂದು ಇರಾನ್ ನ ರೆಡ್ ಕ್ರೆಸೆಂಟ್ ಮುಖ್ಯಸ್ಥರು ಹೇಳಿದ್ದಾರೆ. ಅಧ್ಯಕ್ಷ ರೈಸಿ ಮತ್ತು ಅಜೆರ್ಬೈಜಾನ್ ಅಧ್ಯಕ್ಷ ಇಲ್ಲಾಮ್ ಅಲಿಯನ್ ತಮ್ಮ ಹಂಚಿಕೆಯ ಗಡಿಯಲ್ಲಿರುವ ಕ್ವಿಜ್ ಖಲಾಸಿ ಅಣೆಕಟ್ಟನ್ನು ಉದ್ಘಾಟಿಸಿದ ನಂತರ ಅಧ್ಯಕ್ಷ

ಇರಾನ್ ಅಧ್ಯಕ್ಷರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪಥನ | ಪ್ರಯಾಣಿಕರೆಲ್ಲರೂ ದುರ್ಮರಣ Read More »

ಮಾರ್ಗದ ಬದಿ ಜೂಜಾಡುತ್ತಿದ್ದ 9 ಮಂದಿಯ ಬಂಧನ

ಮಂಗಳೂರು: ಮಾರ್ಗದ ಬದಿಯಲ್ಲೇ ಜೂಜಾಡುತ್ತಿದ್ದ 9 ಮಂದಿಯನ್ನು ಪಣಂಬೂರು ಪೊಲೀಸರು ಬಂಧಿಸಿದ್ದಾರೆ. ಝಾಕೀರ್ ಅಹಮ್ಮದ್, ವಿಲ್ಫ್ರೇಡ್ ಡಿಸೋಜಾ, ಹನೀಫ್, ಅನಿಲ್ ಕುಮಾರ್, ಮುರ್ತೋಝ ಸಾಬ್‍, ಶಶಿ ದೇವಾಡಿಗ, ಮೈಲಾರಪ್ಪ, ರಾಯ್ ಡಾಯಸ್, ಜೋಸ್ ರಾಬರ್ಟ್‍ ಬಂಧಿತರು. ಬೈಕಂಪಾಡಿ ರೈಲು ರಸ್ತೆಯ ಬಳಿ ಮಾರ್ಗದ ಬದಿಯಲ್ಲಿ ಜೂಜಾಡುತ್ತಿದ್ದರು ಎನ್ನಲಾಗಿದ್ದು, ಪೊಲೀಸರು ಬಂಧಿತರಿಂದ ಆಟಕ್ಕೆ ಬಳಸಿದ 11,265 ರೂ. ಹಾಗೂ ಇನ್ನಿತರ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಮಾರ್ಗದ ಬದಿ ಜೂಜಾಡುತ್ತಿದ್ದ 9 ಮಂದಿಯ ಬಂಧನ Read More »

ಉಡುಪಿ ಕಾಲೇಜು ವಿದ್ಯಾರ್ಥಿನಿ‌ ನಾಪತ್ತೆ !

ಉಡುಪಿ : ಮನೆಯಿಂದ ಕಾಲೇಜಿಗೆ ಹೋಗುತ್ತೇನೆ ಎಂದು ಹೋಗಿದ್ದ ವಿಧ್ಯಾರ್ಥಿನಿ ನಾಪತ್ತೆಯಾದ ಘಟನೆ ಹಿರಿಯಡ್ಕದಲ್ಲಿ ನಡೆದಿದ್ದು, ನಾಪತ್ತೆಯಾದ ವಿಧ್ಯಾರ್ಥಿನಿ ಹಿರಿಯಡ್ಕ ನಿವಾಸಿ ವಿದ್ಯಾಲಕ್ಷ್ಮೀ(20), ಎಪ್ರಿಲ್ 19 ರಂದು ಕಾಲೇಜಿಗೆಂದು ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ, 5 ಇಂಚು ಎತ್ತರ, ಗೋಧಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ, ತುಳು ಹಾಗೂ ಇಂಗ್ಲೀಷ್ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಹಿರಿಯಡ್ಕ ಪೊಲೀಸ್‌ ಠಾಣೆ ದೂ.ಸಂಖ್ಯೆ: 0820-2542248, ಮೊ.ನಂ. 9480805452, ಉಡುಪಿ ಕಂಟ್ರೋಲ್ ರೂಂ

ಉಡುಪಿ ಕಾಲೇಜು ವಿದ್ಯಾರ್ಥಿನಿ‌ ನಾಪತ್ತೆ ! Read More »

ನಟಿ ಪವಿತ್ರಾ ಜಯರಾಮ್ ಆಪ್ತ, ತೆಲುಗು ಕಿರುತೆರೆ ನಟ ಚಂದು ಆತ್ಮಹತ್ಯೆ

ಕೆಲವೇ ದಿನಗಳ ಹಿಂದೆ ನಟಿ ಪವಿತ್ರಾ ಜಯರಾಮ್ ಅವರು ರಸ್ತೆ ಅಪಘಾತದಲ್ಲಿ ನಿಧನರಾದ ಬೆನ್ನಲ್ಲೇ ಪವಿತ್ರಾ ಜಯರಾಮ್ ಜೊತೆ ಸ್ನೇಹ ಹೊಂದಿದ್ದ ತೆಲುಗು ಕಿರುತೆರೆ ನಟ ಚಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪವಿತ್ರಾ ಜಯರಾಮ್ ಜೊತೆ ಚಂದು ಆಪ್ತವಾಗಿದ್ದರು. ಪವಿತ್ರಾ ನಿಧನದ ಬಳಿಕ ತೀವ್ರ ದುಃಖಕ್ಕೆ ಒಳಗಾಗಿದ್ದ ಚಂದು ಅವರು ಹೈದರಾಬಾದ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದು ಎಲ್ಲರಿಗೂ ಅಚ್ಚರಿ ಮೂಡಿಸಿದೆ. ಹೈದರಾಬಾದ್ ನ ಮಣಿಕೊಂಡದಲ್ಲಿರುವ ಮನೆಯಲ್ಲಿ ಚಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಆತ್ಮಹತ್ಯೆಗೆ ನಿಖರ ಕಾರಣ ಏನು ಎಂಬುದು

ನಟಿ ಪವಿತ್ರಾ ಜಯರಾಮ್ ಆಪ್ತ, ತೆಲುಗು ಕಿರುತೆರೆ ನಟ ಚಂದು ಆತ್ಮಹತ್ಯೆ Read More »

ರಾಂಗ್ ಸೈಡ್ ನಲ್ಲಿ ಬಂದ ವಿದ್ಯಾರ್ಥಿಗಳ ಬೈಕ್ : ಕಾರಿಗೆ ಡಿಕ್ಕಿ

ಪುತ್ತೂರು : ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿಗಳು ದ್ವಿಚಕ್ರ ವಾಹನದಲ್ಲಿ ರಾಂಗ್ ಸೈಡ್ ನಿಂದ ಬಂದು ಕಾರುಗಳಿಗೆ ಡಿಕ್ಕಿ ಹೊಡೆದ ಘಟನೆ ದರ್ಬೆ ಸಮೀಪ ನಡೆದಿದೆ. ಆಕ್ಟಿವಾದಲ್ಲಿ ಮೂವರು ವಿದ್ಯಾರ್ಥಿಗಳು ಹೆಲ್ಮಟ್ ಧರಿಸದೆ ರಾಂಗ್ ಸೈಡ್ ನಿಂದ ಬಂದಿದ್ದು, ಈ ವೇಳೆ ನಿಯಂತ್ರಣ ತಪ್ಪಿ ಎರಡು ಕಾರುಗಳಿಗೆ ಡಿಕ್ಕಿ ಹೊಡೆದಿದ್ದಾರೆ ಎಂದು ವರದಿಯಾಗಿದೆ. ಘಟನೆಯಿಂದಾಗಿ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.

ರಾಂಗ್ ಸೈಡ್ ನಲ್ಲಿ ಬಂದ ವಿದ್ಯಾರ್ಥಿಗಳ ಬೈಕ್ : ಕಾರಿಗೆ ಡಿಕ್ಕಿ Read More »

ಉಗ್ರ ಸಂಘಟನೆ ಐಸಿಸ್ ಜತೆ ನಂಟು | ರಾಷ್ಟ್ರೀಯ ತನಿಖಾ ದಳದಿಂದ ಬಂಧಿಸಲ್ಪಟ್ಟ ಶಾಸಕ ದಿ.ಇದಿನಬ್ಬ ಮೊಮ್ಮಗ ಅಮರ್ ಅಬ್ದುಲ್ ರೆಹಮಾನ್ ಗೆ ಜಾಮೀನು ಮಂಜೂರು

ಮಂಗಳೂರು: ಉಗ್ರ ಸಂಘಟನೆ ಐಸಿಸ್ ಜೊತೆ ನಂಟು ಹೊಂದಿದ್ದ ಪ್ರಕರಣದಲ್ಲಿ ಮೂರು ವರ್ಷಗಳ ಹಿಂದೆ ರಾಷ್ಟ್ರೀಯ ತನಿಖಾ ದಳದಿಂದ ಬಂಧಿಸಲ್ಪಟ್ಟಿದ್ದ ಮಾಜಿ ಶಾಸಕ ದಿವಂಗತ ಇದಿನಬ್ಬ ಮೊಮ್ಮಗ ಅಮ‌ರ್ ಅಬ್ದುಲ್ ರೆಹಮಾನ್ ಗೆ ದೆಹಲಿ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಈ ಮೂಲಕ ಐಸಿಸ್ ಬಾವುಟ, ಕರಪತ್ರ ಮೊಬೈಲ್ ನಲ್ಲಿದ್ದರೆ ಉಗ್ರ ಎನ್ನಲು ಪೂರಕ ಸಾಕ್ಷ್ಯವಲ್ಲ ಎಂದು ದೆಹಲಿ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಐಸಿಸ್ ನಂಟಿನ ಆರೋಪದಡಿ ಯುಎಪಿಎ ಕಾಯ್ದೆಯಡಿ ಅಮ‌ರ್ ಅಬ್ದುಲ್ ರೆಹಮಾನ್ ನನ್ನು ಅಗಸ್ಟ್ 21,

ಉಗ್ರ ಸಂಘಟನೆ ಐಸಿಸ್ ಜತೆ ನಂಟು | ರಾಷ್ಟ್ರೀಯ ತನಿಖಾ ದಳದಿಂದ ಬಂಧಿಸಲ್ಪಟ್ಟ ಶಾಸಕ ದಿ.ಇದಿನಬ್ಬ ಮೊಮ್ಮಗ ಅಮರ್ ಅಬ್ದುಲ್ ರೆಹಮಾನ್ ಗೆ ಜಾಮೀನು ಮಂಜೂರು Read More »

ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ದ್ವಿಚಕ್ರ ವಾಹನ ಕಳವು ಪ್ರಕರಣ | ಸಾರ್ವಜನಿಕರಿಗೆ ಭಯದ ವಾತಾವರಣದಲ್ಲಿ ನಿಲುಗಡೆ ಮಾಡುವ ಪರಿಸ್ಥಿತಿ

ಪುತ್ತೂರು: ಪುತ್ತೂರು ನಗರದಲ್ಲಿ ಕಳ್ಳರ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಅದರಲ್ಲೂ ದ್ವಿಚಕ್ರ ವಾಹನ ಕಳ್ಳರ ಹಾವಳಿ ಜಾಸ್ತಿಯಾಗಿದೆ. ಪರಿಣಾಮ ನಗರದಲ್ಲಿ ಪಾರ್ಕ್ ಮಾಡಲು ವಾಹನ ಸವಾರರು ಹಿಂದೆ-ಮುಂದೆ ನೋಡುವಂತಾಗಿದೆ. ನಗರದಲ್ಲಿ ಅಂಗಡಿ ಮುಂಗಟ್ಟು, ರೈಲ್ವೇ ನಿಲ್ದಾಣ ಹೀಗೆ ಪ್ರಮುಖ ಪ್ರದೇಶಗಳಲ್ಲಿ ಸಿಸಿ ಕ್ಯಾಮರಾ ಕಾರ್ಯಾಚರಿಸುತ್ತಿದ್ದರೂ ಕ್ಯಾಮರಾ ಕಣ್ತಪ್ಪಿಸಿ ಕಳವು ಮಾಡುವ ಚಾಣಕ್ಯವನ್ನು ಕಳ್ಳರು ಹೊಂದಿದ್ದು, ಇದು ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದೆ. ಮತ್ತಷ್ಟು ಸಿಸಿ ಕ್ಯಾಮರಾ ಅಳವಡಿಸುವಂತೆ ಸಾರ್ವಜನಿಕರು ಮಾಹಿತಿ ಮನವಿ ಮಾಡಿದರೂ ಸಿಸಿ ಟಿವಿ ಅಳವಡಿಸದೇ

ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ದ್ವಿಚಕ್ರ ವಾಹನ ಕಳವು ಪ್ರಕರಣ | ಸಾರ್ವಜನಿಕರಿಗೆ ಭಯದ ವಾತಾವರಣದಲ್ಲಿ ನಿಲುಗಡೆ ಮಾಡುವ ಪರಿಸ್ಥಿತಿ Read More »

ಇಚ್ಲಂಪಾಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ನಾಗರಾಜ ಆರಿಗ ಆತ್ಮಹತ್ಯೆ

ಪುತ್ತೂರು: ಇಚ್ಲಂಪಾಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ನಾಗರಾಜ ಆರಿಗ (78) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನೆಲ್ಯಾಡಿ ಸಮೀಪದ ಇಚ್ಲಂಪಾಡಿ ಗ್ರಾಮದ ಬೀಡುಬೈಲು ನಿವಾಸಿಯಾಗಿರುವ ನಾಗರಾಜ ಆರಿಗ ಬೀಡುಬೈಲು ಮನೆಯಲ್ಲಿ ಕಳೆದ ಎರಡು ವರ್ಷಗಳಿಂದ ಒಬ್ಬಂಟಿಯಾಗಿ ವಾಸವಾಗಿದ್ದರು. ಅವರ ಮನೆ ಕೆಲಸದವರಾದ ಸುಧಾಕರ ಅವರು ಮಂಗಳವಾರ ಹಗಲು ಕೆಲಸಕ್ಕೆ ಬಂದಿರಲಿಲ್ಲ. ಅದೇ ದಿನ ರಾತ್ರಿ 8.45 ಗಂಟೆಗೆ ಮನೆಗೆ ಮಲಗಲೆಂದು ಬಂದಾಗ ಮನೆಯಲ್ಲಿ ಲೈಟ್ ಉರಿಯದಿರುವುದನ್ನು ಕಂಡು ಮನೆಯ ಬಳಿ ಹೋಗಿ ನಾಗರಾಜ

ಇಚ್ಲಂಪಾಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ನಾಗರಾಜ ಆರಿಗ ಆತ್ಮಹತ್ಯೆ Read More »

ಲಾರಿ-ಬೈಕ್ ಅಪಘಾತ, ಬೈಕ್ ಸವಾರ ಮೃತ್ಯು ಸಹಸವಾರ ಗಂಭೀರ

ಬಂಟ್ವಾಳ : ಬೈಕಿಗೆ ಲಾರಿ ಡಿಕ್ಕಿ ಹೊಡೆದು ರಸ್ತೆಗೆ ಬಿದ್ದ ಸವಾರರ ಮೇಲೆ ಅದೇ ಲಾರಿ ಹರಿದ ಪರಿಣಾಮ ಸವಾರ ದಾರುಣವಾಗಿ ಮೃತಪಟ್ಟು, ಇನ್ನೋರ್ವ ಸಹಸವಾರ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಪುದು ಗ್ರಾಮದ ಮಾರಿಪಳ್ಳ ಜಂಕ್ಷನ್ನಿನಲ್ಲಿ ಮಂಗಳವಾರ ಸಂಜೆ ನಡೆದಿದೆ. ಮೃತ ಬೈಕ್ ಸವಾರ ಮೂಲತಃ ಉತ್ತರ ಪ್ರದೇಶ ರಾಜ್ಯದ ನಿವಾಸಿ ಪ್ರಸ್ತುತ ಉಡುಪಿಯಲ್ಲಿ ವಾಸವಾಗಿರುವ ಸೋನು (19) ಹಾಗೂ ಗಾಯಾಳು ಸಹಸವಾರ ಕಾರ್ಕಳ ನಿವಾಸಿ ಪ್ರಸಾದ್ (22) ಎಂದು ಗುರುತಿಸಲಾಗಿದೆ. ಉಪ್ಪಿನಂಗಡಿ ಸಮೀಪದ

ಲಾರಿ-ಬೈಕ್ ಅಪಘಾತ, ಬೈಕ್ ಸವಾರ ಮೃತ್ಯು ಸಹಸವಾರ ಗಂಭೀರ Read More »

error: Content is protected !!
Scroll to Top