ಕನ್ನಡ ಓದಲು, ಬರೆಯಲು ಬಾರದವನಿಗೆ ನ್ಯಾಯಾಲಯದಲ್ಲಿ ಜವಾನ ಹುದ್ದೆ : ನ್ಯಾಯಾಧೀಶರಿಂದ ಸ್ವಯಂಪ್ರೇರಿತ ಪ್ರಕರಣ ದಾಖಲು
ಕೊಪ್ಪಳ : ಕನ್ನಡ ಸರಿಯಾಗಿ ಓದಲು ಮತ್ತು ಬರೆಯಲು ಬಾರದಿದ್ದರೂ ಒಬ್ಬ 625ರಲ್ಲಿ 622 ಅಂಕ ಪಡೆದಿದ್ದ. ಅಂಕಗಳ ಆಧಾರದಲ್ಲಿ ನ್ಯಾಯಾಲಯದ ಜವಾನ ಹುದ್ದೆಗೆ ಆಯ್ಕೆಯಾಗಿದ್ದ.ಈ ಬಗ್ಗೆ ಆತನ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣವನ್ನು ದಾಖಲಿಸಿ ತನಿಖೆ ನಡೆಸುವಂತೆ ಕೊಪ್ಪಳ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ. ಕೊಪ್ಪಳ ಸಿವಿಲ್ ಮತ್ತು ಜೆ ಎಂ ಎಫ್ ಸಿ ನ್ಯಾಯಾಲಯದ ಮಾನ್ಯ ನ್ಯಾಯಾಧೀಶರಾದ ಶ್ರೀ. ಎಂ ಹರೀಶ್ ಕುಮಾರ್ ರವರ ದಿಟ್ಟತನದ ನಡೆಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ. ಯಾದಗಿರಿ ಜಿಲ್ಲಾ ನ್ಯಾಯಾಲಯದಲ್ಲಿ […]







