ಅಪರಾಧ

ಕಾರಿನಲ್ಲಿ ಸಾಗಿಸುತ್ತಿದ್ದ ಒಂದು ಕೆಜಿ ಚಿನ್ನ ವಶ !

ಕೋಟ: ಕೇರಳದಿಂದ ಕಾರಿನಲ್ಲಿ ಒಂದು ಕೆ.ಜಿ.ಗೂ ಅಧಿಕ ಚಿನ್ನ ಸಾಗಿಸುತ್ತಿದ್ದ ಪ್ರಕರಣ ಪತ್ತೆಹಚ್ಚಿದ ಪೊಲೀಸರು ಚಿನ್ನ ವಶಪಡಿಸಿಕೊಂಡಿದ್ದಾರೆ. ಕೋಟ ಮೂರುಕೈನಲ್ಲಿ ಅನುಮಾಸ್ಪದವಾಗಿ ಕಾರಿನಲ್ಲಿ ಕೇರಳದಿಂದ ಕುಂದಾಪುರದ ಕಡೆ ಸಾಗಿಸುತ್ತಿದ್ದ 1.200 ಕೆಜಿ ಚಿನ್ನವನ್ನು ಕೋಟ ಪೋಲಿಸರು ವಶಪಡಿಸಿಕೊಂಡಿದ್ದಾರೆ.    ಕೇರಳದ ಚಿತ್ರ ನಿರ್ಮಾಪಕರೊಬ್ಬರ ಮನೆಯಿಂದ ಕದ್ದ ಚಿನ್ನ ಎಂದು ಶಂಕಿಸಲಾಗಿದ್ದು, ಇದನ್ನು ಬಿಹಾರಕ್ಕೆ ಸಾಗಿಸುವ ಯತ್ನದಲ್ಲಿದ್ದ ಆರೋಪಿಗಳ ಕುರಿತು ಮಾಹಿತಿ ತಿಳಿದ ಕೋಟ ಪೋಲಿಸ್ ಆರೋಪಿಗಳನ್ನು ಬಂದಿಸಿದ್ದಾರೆ. ಕೋಟ ಠಾಣೆಯಲ್ಲಿ ಉನ್ನತ ಮಟ್ಟದ ಪೋಲಿಸ್ ಅಧಿಕಾರಿಗಳು ಆಗಮಿಸಿ, ಪ್ರಕರಣದ […]

ಕಾರಿನಲ್ಲಿ ಸಾಗಿಸುತ್ತಿದ್ದ ಒಂದು ಕೆಜಿ ಚಿನ್ನ ವಶ ! Read More »

ಉಪ್ಪಿನಂಗಡಿ ವಿದ್ಯಾರ್ಥಿ ನಂದನ್ ನೇಣು ಬಿಗಿದು ಆತ್ಮಹತ್ಯೆ

ಉಪ್ಪಿನಂಗಡಿ: ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಏ.19 ರಂದು ಸಂಜೆ ನಡೆದಿದೆ. ಕರಾಯ ಗ್ರಾಮದ ಶಿವಗಿರಿ ದುಗಲಾಡಿ ಮನೆ ನಿವಾಸಿ, ವಿದ್ಯಾರ್ಥಿ ನಂದನ್ (13) ಆತ್ಮಹತ್ಯೆ ಮಾಡಿಕೊಂಡವ. ತನ್ನ ಮನೆಯ ಕಿಟಕಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪಂಜದ ದಿ.ರೋಹಿತ್ ಗೌಡ ಎಂಬವರ ಪುತ್ರನಾಗಿದ್ದು, ತನ್ನ ತಂದೆಯ ನಿಧನದ ನಂತರ ದುಗಲಾಡಿಯ ತನ್ನ ಮಾವನ ಮನೆಯಲ್ಲಿದ್ದು ಉಪ್ಪಿನಂಗಡಿಯ ಖಾಸಗಿ ಶಾಲೆಯಲ್ಲಿ ಕಲಿಯುತ್ತಿದ್ದ. ಈತ ಏಳನೇ ತರಗತಿ ಉತ್ತೀರ್ಣನಾಗಿದ್ದು, ಮುಂದಿನ ಶೈಕ್ಷಣಿಕ ವರ್ಷದಲ್ಲಿ 8ನೇ ತರಗತಿಗೆ

ಉಪ್ಪಿನಂಗಡಿ ವಿದ್ಯಾರ್ಥಿ ನಂದನ್ ನೇಣು ಬಿಗಿದು ಆತ್ಮಹತ್ಯೆ Read More »

ಕೊಳೆತ ಸ್ಥಿತಿಯಲ್ಲಿ ಮನುಷ್ಯನ ತಲೆಬುರುಡೆ ಪತ್ತೆ !

ಕಡಬ: ಮನುಷ್ಯನ ತಲೆಬುರುಡೆಯೊಂದು ಕೊಳೆತ ಸ್ಥಿತಿಯಲ್ಲಿ ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಹಳೆ ನರ್ಸರಿ ಬಳಿ, ಸುಬ್ರಮಣ್ಯ-ಉಪ್ಪಿನಂಗಡಿ ರಾಜ್ಯಹೆದ್ದಾರಿಯ ಪಕ್ಕದಲ್ಲಿರುವ ರಕ್ಷಿತಾರಣ್ಯದಲ್ಲಿ ಪತ್ತೆಯಾಗಿದೆ. ಬಿಳಿನೆಲೆ ಗ್ರಾಮ ನಿವಾಸಿ ಚಂದ್ರಶೇಖರ್ ಎಂಬವರು ಏ.19 ರಂದು ಬೆಳಿಗ್ಗೆ ನೆರೆ-ಕೆರೆಯ ನಿವಾಸಿಗಳೊಂದಿಗೆ, ಕಾಡಿನಲ್ಲಿ ಕಟ್ಟಿಗೆ ಯನ್ನು ತರಲು ಕಡಬ ತಾಲೂಕು ಬಿಳಿನೆಲೆ ಗ್ರಾಮದ ಹಳೆ ನರ್ಸರಿ ಬಳಿ, ಸುಬ್ರಮಣ್ಯ-ಉಪ್ಪಿನಂಗಡಿ ರಾಜ್ಯಹೆದ್ದಾರಿಯ ಪಕ್ಕದಲ್ಲಿರುವ ರಕ್ಷಿತಾರಣ್ಯದಲ್ಲಿ ತೆರಳುತ್ತಿದ್ದಾಗ, ದಾರಿಯ ಬದಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಮನುಷ್ಯನ ತಲೆಬುರುಡೆ ಹಾಗು ಬ್ಯಾಗ್ ಕಂಡುಬಂದಿದೆ. ಸ್ವಲ್ಪ ದೂರದಲ್ಲಿ ಮರವೊಂದರಲ್ಲಿ

ಕೊಳೆತ ಸ್ಥಿತಿಯಲ್ಲಿ ಮನುಷ್ಯನ ತಲೆಬುರುಡೆ ಪತ್ತೆ ! Read More »

ನೇಹಾ ಬರ್ಬರ ಹತ್ಯೆ ಮೂಲಕ ಜಿಹಾದಿ ಮಾನಸಿಕತೆ ಮತ್ತೊಮ್ಮೆ ತಲೆ ಎತ್ತಿದೆ | ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ಆರೋಪ

ಪುತ್ತೂರು: ಹುಬ್ಬಳ್ಳಿ ಮಹಾನಗರ ಪಾಲಿಕೆಯ ಕಾರ್ಪೊರೇಟರ್ ನಿರಂಜನ್ ಹಿರೇಮಠ್ ಅವರ ಪುತ್ರಿ ನೇಹಾ ಅವರನ್ನು ಬರ್ಬರವಾಗಿ ಹತ್ಯೆ ಮಾಡುವ ಮೂಲಕ ಜಿಹಾದಿ ಮಾನಸಿಕತೆ ಮತ್ತೊಮ್ಮೆ ತಲೆ ಎತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಮೇಲೆ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ. ಘಟನೆಯ ನೈತಿಕ ಹೊಣೆ ಹೊತ್ತುರಾಜ್ಯ ಗೃಹ ಸಚಿವರು ತಕ್ಷಣ ರಾಜೀನಾಮೆ ನೀಡಬೇಕು ಎಂದು ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು ಆಗ್ರಹಿಸಿದ್ದಾರೆ. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಮತಾಂಧನಾದ ಫಯಾಝ್ ಎಂಬ ವ್ಯಕ್ತಿ ಪ್ರೀತಿಯ

ನೇಹಾ ಬರ್ಬರ ಹತ್ಯೆ ಮೂಲಕ ಜಿಹಾದಿ ಮಾನಸಿಕತೆ ಮತ್ತೊಮ್ಮೆ ತಲೆ ಎತ್ತಿದೆ | ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ಆರೋಪ Read More »

ದುಷ್ಕರ್ಮಿಗಳಿಂದ ಒಂದೇ ಕುಟುಂಬದ ನಾಲ್ವರ ಹತ್ಯೆ !

ಗದಗ: ಒಂದೇ ಕುಟುಂಬದ ನಾಲ್ವರನ್ನು ದುಷ್ಕರ್ಮಿಗಳು ಮಲಗಿದಲ್ಲೇ ಭೀಕರವಾಗಿ ಕೊಲೆ ಮಾಡಿದ ಘಟನೆ ದಾಸರ ಓಣಿಯಲ್ಲಿ ನಡೆದಿದೆ. ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಅವರ ಪುತ್ರ ಕಾರ್ತಿಕ್ ಬಾಕಳೆ (27), ಪರಶುರಾಮ (55), ಆತನ ಪತ್ನಿ ಲಕ್ಷ್ಮೀ (45), ಪುತ್ರಿ ಆಕಾಂಕ್ಷಾ (16) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಏ.17 ರಂದು ಪ್ರಕಾಶ್ ಬಾಕಳೆ ಪುತ್ರ ಕಾರ್ತಿಕನ ಮದುವೆ ಫಿಕ್ಸ್ ಮಾಡುವ ಕಾರ್ಯಕ್ರಮಕ್ಕೆ ಕೊಪ್ಪಳದಿಂದ ಸಂಬಂಧಿಗಳು ಆಗಮಿಸಿದ್ದರು. ಗುರುವಾರ ರಾತ್ರಿ ಪರಶುರಾಮ ಪತ್ನಿ ಲಕ್ಷ್ಮೀಯವರ ಹುಟ್ಟಿದ ಹಬ್ಬವನ್ನು ಕುಟುಂಬಸ್ಥರು

ದುಷ್ಕರ್ಮಿಗಳಿಂದ ಒಂದೇ ಕುಟುಂಬದ ನಾಲ್ವರ ಹತ್ಯೆ ! Read More »

ಮುಕ್ವೆ ಶಾಲಾ ವಠಾರದಲ್ಲಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಪುತ್ತೂರು: ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರ ಹೊರವಲಯದ ಮುಕ್ವೆ ಶಾಲಾ ವಠಾರದಲ್ಲಿ ನಡೆದಿದೆ. ನಿನ್ನೆ ರಾತ್ರಿ ಮುಕ್ವೆ ಶಾಲಾ ಬಳಿ ಯಕ್ಷಗಾನ ಬಯಲಾಟ ನಡೆಯುತ್ತಿತ್ತು. ಶಾಲಾ ವಠಾರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿದ್ದುದನ್ನು ಯಕ್ಷಗಾನ ವೀಕ್ಷಿಸಲು ಬಂದಿದ್ದವರಿಗೆ ಈ ಮಾಹಿತಿ ಇಂದು ಮುಂಜಾನೆ ಗೊತ್ತಾಗಿದೆ. ವ್ಯಕ್ತಿ ಯಾರೆಂದು ತಿಳಿದು ಬಂದಿಲ್ಲ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ.

ಮುಕ್ವೆ ಶಾಲಾ ವಠಾರದಲ್ಲಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ Read More »

ಜಾತ್ರಾ ಗದ್ದೆಯಲ್ಲಿ ನಕಲಿ ಮಂಗಳಮುಖಿಯಿಂದ ಚಿನ್ನದ ಸರ ಕಳವು | ಮಂಗಳಮುಖಿಯನ್ನು ಠಾಣೆಯಲ್ಲಿರಿಸಿದರೂ ಯಾವುದೇ ಕಾನೂನು ಕ್ರಮ ಕೈಗೊಳ್ಳದೆ ಬಿಡುಗಡೆ | ದ.ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು

ಪುತ್ತೂರು: ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಬ್ರಹ್ಮರಥೋತ್ಸವ ಸಂದರ್ಭ ಮಹಿಳೆಯೊಬ್ಬರ ಚಿನ್ನದ ಸರ ಕಳವು ಮಾಡುತ್ತಿದ್ದ ನಕಲಿ ಮಂಗಳಮುಖಿಯೊಬ್ಬರನ್ನು ರೆಡ್ ಹ್ಯಾಂಡ್ ಆಗಿ ಹಿಡಿದು ಪೊಲೀಸರಿಗೆ ಒಪ್ಪಿಸಿದರೂ ಯಾವುದೇ ಕಾನೂನು ಕ್ರಮ ಕೈಗೊಳ್ಳದ ಹಿನ್ನಲೆಯಲ್ಲಿ ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿರುವ ತಿಳಿದು ಬಂದಿದೆ. ಬ್ರಹ್ಮರಥೋತ್ಸವ ಸಂದರ್ಭ ಗದ್ದೆಯಲ್ಲಿ ನಕಲಿ ಮಂಗಳಮುಖಿಯೋರ್ವಳು ಸಾರ್ವಜನಿಕರಿಂದ ಹಣ ವಸೂಲಿ ಮಾಡುತ್ತಿದ್ದಲ್ಲದೆ ಮಹಿಳೆಯೊಬ್ಬರ ಕತ್ತಿನಲ್ಲಿದ್ದ ಚಿನ್ನದ ಸರವನ್ನು ಕಳವು ಮಾಡಿದ್ದಾರೆ. ಇದು ಗಮನಕ್ಕೆ ಬಮದಾಗ ಸಾರ್ವಜನಿಕರ ಸಹಕಾರದೊಂದಿಗೆ ಹಿಡಿದು

ಜಾತ್ರಾ ಗದ್ದೆಯಲ್ಲಿ ನಕಲಿ ಮಂಗಳಮುಖಿಯಿಂದ ಚಿನ್ನದ ಸರ ಕಳವು | ಮಂಗಳಮುಖಿಯನ್ನು ಠಾಣೆಯಲ್ಲಿರಿಸಿದರೂ ಯಾವುದೇ ಕಾನೂನು ಕ್ರಮ ಕೈಗೊಳ್ಳದೆ ಬಿಡುಗಡೆ | ದ.ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು Read More »

ಚುನಾವಣಾ ಕರ್ತವ್ಯದಲ್ಲಿದ್ದ ಮಹಿಳೆಗೆ ಮನೆ ಭೇಟಿ ಸಂದರ್ಭ ಹಲ್ಲೆ

ಪುತ್ತೂರು: ಚಿಕ್ಕಮುಡ್ನೂರು ಗ್ರಾಮದ ರೋಟರಿ ಪುರದಲ್ಲಿ ಚುನಾವಣೆ ಕರ್ತವ್ಯ ನಿರತ ಮನೆ ಮನೆಗೆ ಮತ ಚೀಟಿ ವಿತರಣೆಗೆ ತೆರಳಿದ ಅಂಗನವಾಡಿ ಕಾರ್ಯಕರ್ತೆ ಮಹಿಳೆಯೊಬ್ಬರಿಗೆ ಹಲ್ಲೆ ನಡೆಸಿದ ಘಟನೆ ಇಂದು ನಡೆದಿದೆ. ಲೋಕಸಭಾ ಚುನಾವಣೆಯ ಸಂಬಂಧ ಮನೆಮನೆಗೆ ಮತ ಚೀಟಿ ವಿತರಣೆಗೆ ಚುನಾವಣಾಧಿಕಾರಿಯವರ ಸೂಚನೆಯಂತೆ ಅಂಗನವಾಡಿ ಕಾರ್ಯಕರ್ತೆಯರು ತೆರಳುವ ಕಾರ್ಯ ಇಂದಿನಿಂದ ಆರಂಭಗೊಂಡಿದ್ದು, ಈ ಸಂದರ್ಭ ರೋಟರಿಪುರ ಅಂಗನವಾಡಿ ಕಾರ್ಯಕರ್ತೆಯೊಬ್ಬರು ಮತ ಚೀಟಿ ವಿತರಣೆ ಮತದಾರರ ಮನೆಯೊಂದಕ್ಕೆ ಹೋಗುತ್ತಿದ್ದ ವೇಳೆ ಇನ್ನೊಂದು ಮನೆಯಿಂದ ಹೊರ ಬಂದ ಮಹಿಳೆ ಅಂಗನವಾಡಿ

ಚುನಾವಣಾ ಕರ್ತವ್ಯದಲ್ಲಿದ್ದ ಮಹಿಳೆಗೆ ಮನೆ ಭೇಟಿ ಸಂದರ್ಭ ಹಲ್ಲೆ Read More »

ಹಿಂದೂ ಮುಖಂಡನಿಗೆ ಚೂರಿ ಇರಿತ !

ಬಂಟ್ವಾಳ : ಹಿಂದೂ ಯುವಸೇನೆಯ ಮುಖಂಡ, ಉದ್ಯಮಿಯೊಬ್ಬರಿಗೆ ಚೂರಿಯಿಂದ ಇರಿದ ಘಟನೆ ಭಾನುವಾರ ರಾತ್ರಿ ಬಂಟ್ವಾಳದ ಜಕ್ರಿಬೆಟ್ಟು ಎಂಬಲ್ಲಿ ನಡೆದಿದೆ. ಪುಷ್ಪರಾಜ್ ಎಂಬವರಿಗೆ ಜಕ್ರಿಬೆಟ್ಟು ಎಂಬಲ್ಲಿ ಚೂರಿ ಇರಿತವಾಗಿದೆ. ಇರಿತಕ್ಕೆ ಸ್ಪಷ್ಟವಾದ ಕಾರಣ ತಿಳಿದುಬಂದಿಲ್ಲ. ರಿಕ್ಷಾದಲ್ಲಿ ಜತೆಯಾಗಿ ತೆರಳುತ್ತಿದ್ದಾಗಲೇ ಸ್ನೇಹಿತ ರವಿ ಎಂಬಾತ ಚೂರಿಯಿಂದ ಕುತ್ತಿಗೆಗೆ ಇರಿದಿದ್ದಾನೆ ಎಂದು ಹೇಳಲಾಗಿದೆ. ಗಂಭೀರ ಗಾಯಗೊಂಡಿರುವ ಪುಷ್ಪರಾಜ್ ರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಆರೋಪಿ ರವಿ ಪರಾರಿಯಾಗಿದ್ದಾನೆ. ಬಂಟ್ವಾಳ ನಗರ ಠಾಣಾ ಪೋಲೀಸರು ಸ್ಥಳಕ್ಕೆ

ಹಿಂದೂ ಮುಖಂಡನಿಗೆ ಚೂರಿ ಇರಿತ ! Read More »

ಸ್ಯಾಂಡಲ್‌ವುಡ್ ನಿರ್ಮಾಪಕ ಸೌಂದರ್ಯ ಜಗದೀಶ್ ನಿಧನ

ಬೆಂಗಳೂರು: ಚಲನಚಿತ್ರ ನಿರ್ಮಾಪಕ ಸೌಂದರ್ಯ ಜಗದೀಶ್ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ನಲ್ಲಿರುವ ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೌಂದರ್ಯ ಜಗದೀಶ್ ಅವರು  ಕನ್ನಡದ ಅನೇಕ ಸಿನಿಮಾಗಳನ್ನು ನಿರ್ಮಾಣ ಮಾಡಿದ್ದಾರೆ. ಕೆಲವು ದಿನಗಳಿಂದ ಸೌಂದರ್ಯ ಜಗದೀಶ್ ಅವರು ಹೆಚ್ಚಾಗಿ ಎಲ್ಲಿಯೂ ಕಾಣಿಸಿಕೊಳ್ಳುತ್ತಿರಲಿಲ್ಲ. ಹಾಗೆಯೇ ಅವರು ಹಣಕಾಸಿನ ವಿಚಾರವಾಗಿ ಹೆಚ್ಚು ಚಿಂತೆಗೀಡಾಗಿದ್ದರು ಎಂದು ಅವರ ಆಪ್ತ ಮೂಲಗಳು ತಿಳಿಸಿವೆ‌. ಸೌಂದರ್ಯ ಜಗದೀಶ್ ಅವರು ಸಿನಿಮಾ ನಿರ್ಮಾಣದ ಜೊತೆ ಜೊತೆಗೆ ಇತರೆ ಉದ್ಯಮಗಳಲ್ಲಿಯೂ ಸಹ ತೊಡಗಿಸಿಕೊಂಡಿದ್ದರು. ಆದರೆ ಇಂದು ಹಣಕಾಸಿನ ವಿಚಾರವಾಗಿ

ಸ್ಯಾಂಡಲ್‌ವುಡ್ ನಿರ್ಮಾಪಕ ಸೌಂದರ್ಯ ಜಗದೀಶ್ ನಿಧನ Read More »

error: Content is protected !!
Scroll to Top