ಅಪರಾಧ

ಅವಧಿ ಮೀರಿದ ಬಿಯರ್‌ ಕುಡಿದು ಯುವಕರು ಅಸ್ವಸ್ಥ

ಜನಪ್ರಿಯ ಬ್ರಾಂಡ್‌ನ ಅವಧಿ ಮೀರಿದ ಬಿಯರ್‌ ಪೂರೈಸಿದ ಬಾರ್‌ನವರು ಬೆಂಗಳೂರು : ಅವಧಿ ಮೀರಿದ ಬಿಯರ್ ಕುಡಿದ ಪರಿಣಾಮ ಕೆಲವರು ವಾಂತಿ ಮಾಡಿಕೊಂಡು ಅಸ್ವಸ್ಥರಾಗಿ ಆಸ್ಪತ್ರೆ ಪಾಲಾದ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಹುಳದೇನಹಳ್ಳಿಯ ವೆಂಕಟ್ ಬಾರ್ ಅಂಡ್ ರೆಸ್ಟೋರೆಂಟ್‌ನಲ್ಲಿ ನಡೆದಿದೆ. ಗುರುವಾರ ಸಂಜೆ ಯುವಕರ ಗುಂಪೊಂದು ಒಂದು ಕೇಸ್ ಬಡ್‌ವೈಸರ್‌ ಬಿಯರ್ ಖರೀದಿಸಿ ಸೇವಿಸಿದ ನಂತರ ವಾಂತಿ ಆಗಿದ್ದು, ಅವರನ್ನು ತಕ್ಷಣ ಮಾಲೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಂಬ್ಯುಲೆನ್ಸ್ ಬಳಸಿದರೆ ಮುಜುಗರ ಆಗುತ್ತದೆ ಎಂಬ ಕಾರಣಕ್ಕಾಗಿ […]

ಅವಧಿ ಮೀರಿದ ಬಿಯರ್‌ ಕುಡಿದು ಯುವಕರು ಅಸ್ವಸ್ಥ Read More »

ಪುನೀತ್‌ ಕೆರೆಹಳ್ಳಿ ಮತ್ತೆ ಬಂಧನ

ವಲಸೆ ಕಾರ್ಮಿಕರ ದಾಖಲೆ ಪತ್ರಗಳನ್ನು ಪರಿಶೀಲಿಸಿದ ಆರೋಪ ಹೊರಿಸಿ ಬಂಧನ ಬೆಂಗಳೂರು: ವಲಸೆ ಕಾರ್ಮಿಕರ ಪೌರತ್ವ ಹಾಗೂ ಗುರುತಿನ ದಾಖಲೆಗಳನ್ನು ಪರಿಶೀಲಿಸುತ್ತಿದ್ದ ಹಿಂದೂ ಪರ ಹೋರಾಟಗಾರ ಪುನೀತ್‌ ಕೆರೆಹಳ್ಳಿಯನ್ನು ಪೊಲೀಸರು ಶುಕ್ರವಾರ ತಡರಾತ್ರಿ ಬಂಧಿಸಿದ್ದಾರೆ. ವಲಸಿಗರಿಗೆ ಬೆದರಿಕೆ ಹಾಗೂ ಭೀತಿಯನ್ನುಂಟುಮಾಡುತ್ತಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಪುನೀತ್ ಕೆರೆಹಳ್ಳಿಯನ್ನು ಬನ್ನೇರುಘಟ್ಟ ಪೊಲೀಸ್ ಠಾಣಾ ಪೊಲೀಸರು ಶುಕ್ರವಾರ ತಡರಾತ್ರಿ ಬಂಧಿಸಿದ್ದಾರೆ. ನಿನ್ನೆ ರಾತ್ರಿ ಪುನೀತ್ ಕೆರೆಹಳ್ಳಿ ಮನೆಯ ಬಳಿಯೇ ಪೊಲೀಸರು ವಶಕ್ಕೆ ಪಡೆದಿದ್ದು, ಪೊಲೀಸ್​ ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸುತ್ತಿದ್ದಾರೆ.

ಪುನೀತ್‌ ಕೆರೆಹಳ್ಳಿ ಮತ್ತೆ ಬಂಧನ Read More »

ಹಸೆಮಣೆ ಏರಬೇಕಾಗಿದ್ದ ಯುವಕನನ್ನು ಹತ್ಯೆ ಮಾಡಿದ ಅಣ್ಣ

ಮಂಡ್ಯ: ಇನ್ನೇನು ಕೆಲವೇ ದಿನಗಳಲ್ಲಿ ಹಸೆಮಣೆ ಏರಬೇಕಾಗಿದ್ದ ಯುವಕನನ್ನು ಆತನ ಅಣ್ಣ ಮತ್ತು ಮಕ್ಕಳು ಸೇರಿ ಇರಿದು ಹತ್ಯೆ ಮಾಡಿದ ಘಟನೆ ಮಾಯಪ್ಪನಹಳ್ಳಿಯಲ್ಲಿ ನಡೆದಿದೆ. ಯೋಗೇಶ್ (30) ಮೃತ ದುರ್ದೈವಿ. ಯೋಗೇಶ್‌ಗೆ ಜ.21 ರಂದು ಮದುವೆ ನಿಶ್ಚಯವಾಗಿತ್ತು. ಆದರೆ ಮದುವೆಗೂ ಮೊದಲೇ ತನ್ನ ಅಣ್ಣನಿಂದಲೇ ಈತ ಮಸಣ ಸೇರಿದ್ದಾನೆ. ಆರೋಪಿಗಳನ್ನು ಲಿಂಗರಾಜು ಮತ್ತು ಅವನ ಮಕ್ಕಳಾದ ಭರತ್, ದರ್ಶನ್ ಎಂದು ಗುರುತಿಸಲಾಗಿದೆ.. ಅಣ್ಣ ತಮ್ಮಂದಿರ ನಡುವೆ ಹಲವು ವರ್ಷಗಳಿಂದ ಆಸ್ತಿ ಕಲಹ ಇತ್ತು. ಈ ವಿಚಾರವಾಗಿ ಆಗಾಗ್ಗೆ

ಹಸೆಮಣೆ ಏರಬೇಕಾಗಿದ್ದ ಯುವಕನನ್ನು ಹತ್ಯೆ ಮಾಡಿದ ಅಣ್ಣ Read More »

ಗೌರಿ ಲಂಕೇಶ್‌ ಹತ್ಯೆ ಆರೋಪಿಗೆ ಮುನ್ಸಿಪಲ್‌ ಚುನಾವಣೆಯಲ್ಲಿ ಗೆಲುವು

ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆದ್ದ ಶ್ರೀಕಾಂತ್‌ ಪಂಗಾರ್ಕರ್‌ ಮುಂಬೈ: ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಪ್ರಕರಣದ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮಹಾರಾಷ್ಟ್ರದ ನಗರಪಾಲಿಕೆ ಚುನಾವಣೆಯಲ್ಲಿ ಜಯಗಳಿಸಿದ್ದಾರೆ. ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಶ್ರೀಕಾಂತ್ ಪಂಗಾರ್ಕರ್ ಸ್ಪರ್ಧಿಸಿದ್ದರು. ಶ್ರೀಕಾಂತ್ ಎದುರು ಬಿಜೆಪಿ ಮತ್ತು ಇತರ ಪಕ್ಷಗಳು ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದರೆ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಆ ವಾರ್ಡ್‌ನಲ್ಲಿ ಯಾವುದೇ ಅಭ್ಯರ್ಥಿಯನ್ನು ಕಣಕ್ಕಿಳಿಸಿರಲಿಲ್ಲ. ಪಂಗಾರ್ಕರ್ 2001 ಮತ್ತು 2006ರ ನಡುವೆ ಅವಿಭಜಿತ ಶಿವಸೇನೆಯಿಂದ ಜಲ್ನಾ ಪುರಸಭೆಯ ಸದಸ್ಯರಾಗಿದ್ದರು.

ಗೌರಿ ಲಂಕೇಶ್‌ ಹತ್ಯೆ ಆರೋಪಿಗೆ ಮುನ್ಸಿಪಲ್‌ ಚುನಾವಣೆಯಲ್ಲಿ ಗೆಲುವು Read More »

ಅಪ್ರಾಪ್ತೆಗೆ ‌ಮಗು ಕರುಣಿಸಿದ ಬಸ್ ಕ್ಲೀನರ್‌ಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದ ಕೋರ್ಟ್

ಮಡಿಕೇರಿ: ಅಪ್ರಾಪ್ತ ಬಾಲಕಿಯನ್ನು ಲೈಂಗಿಕವಾಗಿ ಬಳಸಿಕೊಂಡು, ಗರ್ಭವತಿಯನ್ನಾಗಿಸಿ ಮಗು ನೀಡಿದ ಆರೋಪದಲ್ಲಿ ಖಾಸಗಿ ಬಸ್ಸಿನ ಕ್ಲೀನರ್‌ಗೆ ಪೋಕ್ಸೋ ಕಾಯಿದೆಯಡಿ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು 25 ಸಾವಿರ ರೂ. ದಂಡ ವಿಧಿಸಿ ವಿರಾಜಪೇಟೆ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ನೀಡಿದೆ. ಆರೋಪಿಯನ್ನು ಎಚ್. ಆರ್. ಮನೋಜ್ (26) ಎಂದು ಗುರುತಿಸಲಾಗಿದೆ. ಮನೋಜ್‌ಗೆ ಈಗಾಗಲೇ ಮದುವೆಯೂ ಆಗಿದೆ. ಈತ ತಾನು ಕೆಲಸ ಮಾಡುತ್ತಿದ್ದ ಬಸ್ಸಿನಲ್ಲಿ ಬರುತ್ತಿದ್ದ 8 ನೇ ತರಗತಿಯ ಹುಡುಗಿಯ

ಅಪ್ರಾಪ್ತೆಗೆ ‌ಮಗು ಕರುಣಿಸಿದ ಬಸ್ ಕ್ಲೀನರ್‌ಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದ ಕೋರ್ಟ್ Read More »

ಹಣದ ವಿಚಾರಕ್ಕೆ ಹಲ್ಲೆ: ದೂರು ದಾಖಲು

ರಾಮಕುಂಜ: ಹಣದ ವಿಚಾರಕ್ಕೆ ಸಂಬಂಧಿಸಿದ ಹಾಗೆ ರಾಮಕುಂಜದ ಕುಂಡಡ್ಕಕ್ಕೆ ಬರಲು ಹೇಳಿ ತಗಾದೆ ತೆಗೆದು, ಹಲ್ಲೆ ನಡೆಸಿರುವ ಬಗ್ಗೆ ಕಡು ಪೊಲೀಸ್ ಠಾಣೆಗೆ ಸವಣೂರು ಚಾಪಳ್ಳಿ ನಿವಾಸಿ ಅಬ್ದುಲ್ ಖಾದರ್ ಎಂಬವರು ದೂರು ನೀಡಿದ್ದಾರೆ. ಆರೋಪಿಗಳಾದ ಕೃಷ್ಣಪ್ಪ, ಗಂಗಾಧರ, ಆರಿಫ್, ಸದಾಶಿವ ಎಂಬವರು ತಮ್ಮ ಮೇಲೆ ಹಲ್ಲೆ ನಡೆಸಿದ್ದಾಗಿ ಖಾದರ್ ತಿಳಿಸಿದ್ದಾರೆ. ಕೃಷ್ಣಪ್ಪ ಎಂಬವರು ಖಾದರ್ ಅವರಿಗೆ ಪರಿಚಯಸ್ಥರಾಗಿದ್ದು ಫೋನ್ ಮೂಲಕ ಕುಂಡಡ್ಕದ ಕೇಶವ ಎಂಬವರ ಮನೆಯ ಪಕ್ಕ ಬನ್ನಿ, ಹಣಕಾಸಿಗೆ ಸಂಬಂಧಿಸಿದಂತೆ ಮಾತನಾಡುವುದಾಗಿ ಕರೆದಿದ್ದರು. ಅದರಂತೆ

ಹಣದ ವಿಚಾರಕ್ಕೆ ಹಲ್ಲೆ: ದೂರು ದಾಖಲು Read More »

ಅಕ್ರಮ ಜಾನುವಾರು ಸಾಗಾಟಗಾರರ ಬಂಧನ

ಉಡುಪಿ: ಅನಧಿಕೃತವಾಗಿ ದನಗಳನ್ನು ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಹೆಬ್ರಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಕೆಮ್ಮಣ್ಣಿನ ವಾಸಿಂ ಅಕ್ರಮ್ ಮತ್ತು ಮೊಹಮ್ಮದ್ ಖಾಜಾ ಎಂದು ಗುರುತಿಸಲಾಗಿದೆ. ಆರೋಪಿಗಳನ್ನು ಮಂಗಳೂರು ತಾಲೂಕು ಮೂಡುತೆರಾರ್ ಗ್ರಾಮದ ಗಂಜಿಮಠದ ಸಮೀಪ ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಆರೋಪಿಗಳ ವಿರುದ್ಧ ಬಿ.ಎನ್.ಎಸ್. ಮತ್ತು ಕಲಂ ಪ್ರಾಣಿ ಹಿಂಸಾ ಪ್ರತಿಬಂಧಕ ಕಾಯ್ದೆ ಮತ್ತು ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲು ಮಾಡಲಾಗಿದೆ.

ಅಕ್ರಮ ಜಾನುವಾರು ಸಾಗಾಟಗಾರರ ಬಂಧನ Read More »

ಸೂರ್ಯಕುಮಾರ್‌ ಯಾದವ್‌ ಜೊತೆ ಡೇಟಿಂಗ್‌ ಮಾಡಿದ್ದೇನೆ ಎಂದ ನಟಿಯ ಮೇಲೆ ಬಿತ್ತು 100 ಕೋ. ರೂ. ಮಾನನಷ್ಟ ಮೊಕದ್ದಮೆ

ಹಲವಾರು ಕ್ರಿಕೆಟರ್‌ಗಳು ನನ್ನ ಹಿಂದೆ ಬಿದ್ದಿದ್ದರು ಎಂದು ಬಡಾಯಿ ಕೊಚ್ಚಿದ್ದ ನಟಿ ಮುಂಬೈ: ಟಿ20 ಭಾರತ ಕ್ರಿಕೆಟ್ ತಂಡದ ನಾಯಕ ಸೂರ್ಯ ಕುಮಾರ್ ಯಾದವ್ ವಿರುದ್ಧ ಹೇಳಿಕೆ ನೀಡಿದ್ದ ಬಾಲಿವುಡ್ ನಟಿ ಖುಷಿ ಮುಖರ್ಜಿಗೆ ಬಿಗ್ ಶಾಕ್ ಎದುರಾಗಿದ್ದು, ಆಕೆಯ ವಿರುದ್ಧ ಇದೀಗ 100 ಕೋಟಿ ರೂಗಳ ಮಾನನಷ್ಟ ಮೊಕದ್ದಮೆ ದಾಖಲಿಸಲಾಗಿದೆ. ಈ ಹಿಂದೆ ಖುಷಿ ಮುಖರ್ಜಿ ನನ್ನ ಹಿಂದೆ ಹಲವಾರು ಕ್ರಿಕೆಟರ್‌ಗಳು ಬಿದ್ದಿದ್ದರು. ಇದರಲ್ಲಿ ಕ್ಯಾಪ್ಟನ್‌ ಸೂರ್ಯಕುಮಾರ್‌ ನನ್ನ ಜೊತೆ ಸಾಕಷ್ಟು ಮೆಸೇಜ್‌ ವಿನಿಮಯ ಮಾಡಿದ್ದರು

ಸೂರ್ಯಕುಮಾರ್‌ ಯಾದವ್‌ ಜೊತೆ ಡೇಟಿಂಗ್‌ ಮಾಡಿದ್ದೇನೆ ಎಂದ ನಟಿಯ ಮೇಲೆ ಬಿತ್ತು 100 ಕೋ. ರೂ. ಮಾನನಷ್ಟ ಮೊಕದ್ದಮೆ Read More »

ಹಿಂದೂ ಹುಡುಗಿಗೆ ಬಲವಂತಾಗಿ ಬುರ್ಖಾ ತೊಡಿಸಿದ ಸ್ನೇಹಿತೆಯರು : ವಿಡಿಯೋ ವೈರಲ್‌

ಇದನ್ನು ಧರಿಸು, ಚೆನ್ನಾಗಿ ಕಾಣುತ್ತದೆ ಎಂದು ಹೇಳಿದ ಗೆಳತಿಯರು ಲಖನೌ : ಉತ್ತರ ಪ್ರದೇಶದ ಮೊರಾದಾಬಾದ್‌ನಲ್ಲಿ ಮುಸ್ಲಿಂ ಸ್ನೇಹಿತೆಯರ ಗುಂಪೊಂದು ಹಿಂದೂ ಹುಡುಗಿಗೆ ಬಲವಂತವಾಗಿ ಬುರ್ಖಾ ತೊಡಿಸಿರುವ ವಿಡಿಯೋವೊಂದು ವೈರಲ್ ಆಗಿ ವಿವಾದ ಸೃಷ್ಟಿಸಿದೆ. ಉತ್ತರ ಪ್ರದೇಶದ ಮೊರಾದಾಬಾದ್‌ನ ಬಿಲಾರಿ ಪ್ರದೇಶದ ಸಾಹುಕುಂಜ್ ಕಾಲೋನಿಯಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ವೈರಲ್ ಆಗಿರುವ ವಿಡಿಯೋದಲ್ಲಿ ಬುರ್ಖಾ ಧರಿಸಿದ ಕೆಲವು ಹುಡುಗಿಯರು ಸರಳ ಉಡುಪಿನಲ್ಲಿರುವ ಹಿಂದೂ ಹುಡುಗಿಯನ್ನು ಬುರ್ಖಾ ಧರಿಸಲು ಒತ್ತಾಯಿಸುತ್ತಿರುವುದು ಕಂಡುಬರುತ್ತದೆ. ಇದಕ್ಕೆ ಹುಡುಗಿ ನಿರಾಕರಿಸಿದಾಗ,

ಹಿಂದೂ ಹುಡುಗಿಗೆ ಬಲವಂತಾಗಿ ಬುರ್ಖಾ ತೊಡಿಸಿದ ಸ್ನೇಹಿತೆಯರು : ವಿಡಿಯೋ ವೈರಲ್‌ Read More »

ಅವನಲ್ಲ ಅವಳು : ಕಳ್ಳರನ್ನು ಹಿಡಿದ ಪೊಲೀಸರಿಗೆ ಕಾದಿತ್ತು ಶಾಕ್‌

ಶಾಲೂ, ನೀಲೂ ಖತರ್‌ನಾಕ್‌ ಐಡಿಯಾಕ್ಕೆ ಬೇಸ್ತುಬಿದ್ದ ಪೊಲೀಸರು ಬೆಂಗಳೂರು: ಹುಡುಗರ ರೀತಿ ಡ್ರೆಸ್ ಮಾಡಿಕೊಂಡು ಮನೆಗಳ್ಳತನ ಮಾಡುತ್ತಿದ್ದ ಇಬ್ಬರು ಹುಡುಗಿಯರನ್ನು ಪೊಲೀಸರು ಬಂಧಿಸಿದ್ದಾರೆ. ಜ.13ರಂದು ಸಂಪಿಗೇಹಳ್ಳಿಯ ಸಂಗಮೇಶ್ ಅವರ ಮನೆಯಲ್ಲಿ ಕಳ್ಳತನ ನಡೆದಿತ್ತು. ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದಾಗ ಪೊಲೀಸರು ಸಿಸಿಟಿವಿ ಪರಿಶೀಲಿಸಿದಾಗ ಇಬ್ಬರು ಹುಡುಗರು ನಡೆದುಕೊಂಡು ಹೋಗುವುದು ಪತ್ತೆಯಾಗಿತ್ತು. ಸಿಸಿಟಿವಿ ಬೆನ್ನತ್ತಿ ಆರೋಪಿಗಳನ್ನು ವಶಕ್ಕೆ ಪಡೆದ ವೇಳೆ ಅದು ಹುಡುಗರಲ್ಲ, ಹುಡುಗಿಯರು ಎನ್ನುವುದು ಪತ್ತೆಯಾಗಿದೆ. ಕಳ್ಳತನ ಎಸಗಿದ ಶಾಲು ಮತ್ತು ನೀಲು ಅವರನ್ನು ಬಂಧಿಸಿದ್ದಾರೆ. ಇಬ್ಬರು

ಅವನಲ್ಲ ಅವಳು : ಕಳ್ಳರನ್ನು ಹಿಡಿದ ಪೊಲೀಸರಿಗೆ ಕಾದಿತ್ತು ಶಾಕ್‌ Read More »

error: Content is protected !!
Scroll to Top