ಅಪರಾಧ

ಬಸ್ ನಲ್ಲಿ ಚಿನ್ನಾಭರಣವಿದ್ದ ಬ್ಯಾಗ್ ಕಳವು

ಮಂಗಳೂರು : ಕೆ.ಎಸ್.ಆರ್.ಟಿ.ಸಿ ಬಸ್ ನಲ್ಲಿ 67.75 ಲ.ರೂ. ಮೌಲ್ಯದ ಚಿನ್ನಾಭರಣವಿದ್ದ ಹ್ಯಾಂಡ್ ಬ್ಯಾಗ್ ಕಳವಾಗಿರುವುದಾಗಿ ವರದಿಯಾಗಿದೆ. ಮಹಿಳೆಯೋರ್ವರು ನಗರದ ಬ್ಯಾಂಕ್ ನ ಲಾಕರ್ ನಲ್ಲಿದ್ದ 110 ಗ್ರಾಂ ತೂಕದ ವಜ್ರದ ಹರಳುಗಳಿರುವ ವಿವಿಧ ನಮೂನೆಯ ಚಿನ್ನದ ಒಡವೆಗಳನ್ನು ಕೌಟುಂಬಿಕ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮನೆಗೆ ತಂದು ಹ್ಯಾಂಡ್ ಬ್ಯಾಗ್ ನಲ್ಲಿ ಹಾಕಿ ಬೆಳಗ್ಗೆ 7 ಗಂಟೆಗೆ ಮಂಗಳೂರಿನಿಂದ ಕೆ.ಎಸ್.ಆರ್.ಟಿ.ಸಿ ಐರಾವತ ಬಸ್ ನಲ್ಲಿ ಇತರ ಲಗೇಜ್ ಜತೆ ತೆಗೆದುಕೊಂಡು ಬೆಂಗಳೂರಿಗೆ ಪ್ರಯಾಣಿಸಿದ್ದರು ಎನ್ನಲಾಗಿದೆ. ಹಾಸನ ತಲುಪಿದಾಗ ಅವರ […]

ಬಸ್ ನಲ್ಲಿ ಚಿನ್ನಾಭರಣವಿದ್ದ ಬ್ಯಾಗ್ ಕಳವು Read More »

ನೇಣು ಬಿಗಿದು ಮಹಿಳೆ ಆತ್ಮಹತ್ಯೆ

ಬೆಳ್ತಂಗಡಿ : ಧರ್ಮಸ್ಥಳದ ಜೋಡುಸ್ಥಾನದಲ್ಲಿ ನೇಣು ಬಿಗಿದು ಮಹಿಳೆಯೋರ್ವಳು ಆತ್ಮಹತ್ಯೆಗೆ ಶರಣಾದ ಘಟನೆ ಇಂದು ನಡೆದಿದೆ. ಜೋಡುಸ್ಥಾನ ನಿತ್ಯನೂತನ ಭಜನ ಮಂದಿರ ಬಳಿಯ ನಿವಾಸಿ ರಕ್ಷಿತಾ ಜೈನ್ (26) ಆತ್ಮಹತ್ಯೆ ಮಾಡಿಕೊಂಡವರು. ರಕ್ಷಿತಾ ಜೈನ್ ರವರು ತನ್ನ ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ. ರಕ್ಷಿತಾ ಅವರ ಆತ್ಮಹತ್ಯೆಗೆ ನಿಖರ ಕಾರಣ ಇನ್ನಷ್ಟೇ ತಿಳಿದು ಬರಬೇಕಿದೆ. ಮೃತರು ಪತಿ, ತಂದೆ, ತಾಯಿ ಹಾಗೂ 2 ವರ್ಷದ ಹೆಣ್ಣು ಮಗುವನ್ನು ಅಗಲಿದ್ದಾರೆ.

ನೇಣು ಬಿಗಿದು ಮಹಿಳೆ ಆತ್ಮಹತ್ಯೆ Read More »

ಲಿಫ್ಟ್ ನೊಳಗೆ ಸಿಲುಕಿದ ವಿದ್ಯಾರ್ಥಿಗಳು : ಸ್ಥಳೀಯರಿಂದ  ರಕ್ಷಣೆ

ವಿಟ್ಲ : ಸ್ವಿಫ್ಟ್ ಸ್ಪೇಸ್ ಎಲಿವೇಟರ್ ನಲ್ಲಿ ವಿದ್ಯಾರ್ಥಿಗಳು ಬಾಗಿಲು ಓಪನೆ ಆಗದೆ ಲಿಫ್ಟ್ ನೊಳಗೆ ಸಿಲುಕಿದ ಘಟನೆ ವಿಟ್ಲ ಪುತ್ತೂರು ರಸ್ತೆಯಲ್ಲಿರುವ ಬಹುಮಹಡಿ ಕಟ್ಟಡದಲ್ಲಿ ನಡೆದಿದೆ. ವಿಟ್ಲ ಪುತ್ತೂರು ರಸ್ತೆಯಲ್ಲಿರುವ ಬಹುಮಹಡಿ ಕಟ್ಟಡದಲ್ಲಿ ಲಿಫ್ಟ್ ನಲ್ಲಿ ಚಲಿಸುತ್ತಿದ್ದ ವಿದ್ಯಾರ್ಥಿಗಳು, ಎಷ್ಟು ಹೊತ್ತಾದರೂ ಲಿಫ್ಟ್ ನ ಬಾಗಿಲು ತೆರೆಯದೇ ಅದರ ಒಳಗೆ ಸಿಲುಕಿದ್ದರು. ಈ ವೇಳೆ ವಿದ್ಯಾರ್ಥಿಗಳಲ್ಲಿ ಉಸಿರಾಟದ ತೊಂದರೆ ಕಂಡುಬಂದಿದ್ದು, ಕೂಡಲೇ ವಿದ್ಯಾರ್ಥಿಗಳು ತಮ್ಮ ಮನೆಯವರಿಗೆ ಕರೆ ಮಾಡಿ ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿ ಪಡೆದ

ಲಿಫ್ಟ್ ನೊಳಗೆ ಸಿಲುಕಿದ ವಿದ್ಯಾರ್ಥಿಗಳು : ಸ್ಥಳೀಯರಿಂದ  ರಕ್ಷಣೆ Read More »

ರಾಮಕುಂಜದಲ್ಲಿ ಗೋಮಾಂಸ ಪತ್ತೆ : ಓರ್ವನ ಬಂಧನ

ಕಡಬ : ಗೋ,ಮಾಂಸ ಪತ್ತೆಯಾದ ಘಟನೆ ಕಡಬ ತಾಲೂಕಿನ ರಾಮಕುಂಜ ಆತೂರು ಸಮೀಪದ ಅಮೈ ಎಂಬಲ್ಲಿ ನಡೆದಿದೆ. ಆಟೋ ರಿಕ್ಷಾದಲ್ಲಿ ಸುಮಾರು 50 ಕೆಜಿ ಗೋ ಮಾಂಸ ಸಾಗುಸುತ್ತಿರುವಾಗ ಖಚಿತ ಮಾಹಿತಿ ಮೇರೆಗೆ ಕಡಬ ಪೋಲಿಸರು ಬೆನ್ನಟ್ಟಿ ಹಿಡಿಯುವಲ್ಲಿ ಸಫಲರಾಗಿದ್ದಾರೆ. ಈ ಸಂಬಂಧ ಅಬ್ದುಲ್‌ ಎಂಬಾತನನ್ನು ಬಂಧಿಸಿ ಆಟೋ ರಿಕ್ಷಾವನ್ನು ವಶಪಡಿಸಿಕೊಳ್ಳಾಗಿದೆ. ಕಡಬ ಎಸ್ ಐ ಅಭಿನಂದನ್ ಎಂ. ಎಸ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ ಎಂದು ತಿಳಿದು ಬಂದಿದೆ.

ರಾಮಕುಂಜದಲ್ಲಿ ಗೋಮಾಂಸ ಪತ್ತೆ : ಓರ್ವನ ಬಂಧನ Read More »

ಪತ್ನಿಗೆ ಚೂರಿಯಿಂದ ಇರಿದ ಪತಿ : ಪ್ರಕರಣ ದಾಖಲು

ಸುಳ್ಯ: ಪತ್ನಿಗೆ ಪತಿಯೇ ಚೂರಿಯಿಂದ ಇರಿದು ಗಾಯಗೊಳಿಸಿದ ಘಟನೆ ಜಾಲ್ಸೂರಿನಿಂದ ವರದಿಯಾಗಿದೆ. ಅಶ್ವಿನಿ ಕೆ ವಿ (25) ಪತಿಯಿಂದ ಚೂರಿ ಇರಿತಕ್ಕೊಳಗಾದವರು ಎಂದು ಗುರುತಿಸಲಾಗಿದೆ. ಆರೋಪಿ ಪತಿ ನವೀನ್ ಕುಮಾರ್ ಮತ್ತು ಅಶ್ವಿನಿ ಅವರು 6 ವರ್ಷಗಳ ಹಿಂದೆ ವಿವಾಹವಾಗಿದ್ದು, ಆ ಬಳಿಕ ಆತ ವಿನಃ ಕಾರಣ ಕಿರುಕುಳ ನೀಡುತ್ತಾ ಬಂದಿದ್ದು, ಪತ್ನಿ ಅಶ್ವಿನಿ ಕಳೆದ 4 ವರ್ಷಗಳಿಂದ ತನ್ನ ತವರು ಮನೆಯಾದ ಸುಳ್ಯ ತಾಲೂಕು ಜಾಲ್ಸೂರು ಗ್ರಾಮದ ವಿನೋಭನಗರ ಎಂಬಲ್ಲಿ ವಾಸವಾಗಿದ್ದಾರೆ. ಅಲ್ಲಿಗೂ ಬರುತ್ತಿದ್ದ ಪತಿ

ಪತ್ನಿಗೆ ಚೂರಿಯಿಂದ ಇರಿದ ಪತಿ : ಪ್ರಕರಣ ದಾಖಲು Read More »

ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ

ಉಪ್ಪಿನಂಗಡಿ: ಗಂಡನೊಂದಿಗೆ ಜಗಳವಾಡಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ  ಮಹಿಳೆಯೋರ್ವರನ್ನು ಯುವಕನೋರ್ವ ರಕ್ಷಿಸಿದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಬನ್ನಿಂಗಳ ಸಮೀಪದ ನಿವಾಸಿಯೋರ್ವರು ಗುರುವಾರ ರಾತ್ರಿ ಸುಮಾರು 9.30 ರಿಂದ 10ರ ನಡುವೆ ಉಪ್ಪಿನಂಗಡಿಯ ನೇತ್ರಾವತಿ ನದಿ ಸೇತುವೆಯ ಮೇಲೆ ಸಂಶಯ ಬರುವಂತೆ ಆ ಕಡೆ, ಈ ಕಡೆ ನಡೆದಾಡುವುದು ಕಾಣಿಸಿಕೊಂಡಿದ್ದು, ಇದನ್ನು ಕಂಡ ರಿಕ್ಷಾ ಚಾಲಕರೋರ್ವರು ಅಲ್ಲಿಯೇ ಸಮೀಪದ ನಿವಾಸಿ ಸಾಮಾಜಿಕ ಕಾರ್ಯಕರ್ತ ಫಯಾಝ್ ಯು.ಟಿ. ಅವರ ಗಮನಕ್ಕೆ ತಂದಿದ್ದರು. ತಕ್ಷಣವೇ ಕಾರ್ಯಪ್ರವೃತರಾದ ಫಯಾಜ್

ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ Read More »

ಹೊಳೆಗೆ ಬಿದ್ದು ವ್ಯಕ್ತಿ ಮೃತ್ಯು

ಸುಳ್ಯ: ಅರಂತೋಡು ಗ್ರಾಮದ ಬಾಜಿನಡ್ಕದ ವ್ಯಕ್ತಿಯೋರ್ವರು ಕಾಲು ಜಾರಿ ಹೊಳೆಗೆ ಬಿದ್ದು ಮೃತಪಟ್ಟ ಘಟನೆ ಇಂದು ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಬಾಜಿನಡ್ಕದ ಚನಿಯ(50) ಎಂದು ಗುರುತಿಸಲಾಗಿದೆ. ಚನಿಯ ಅವರು ಇಂದು ಬೆಳಗ್ಗೆ 7 ಗಂಟೆ ಸುಮಾರಿಗೆ ಮನೆ ಸಮೀಪದ ಹೊಳೆಗೆ ಹೋಗಿದ್ದಾರೆ. ಈ ವೇಳೆ ಹೊಳೆಗೆ ಕಾಲು ಜಾರಿ ಬಿದ್ದಿದ್ದಾರೆ. ಚನಿಯ ಅವರು ಹೊಳೆಗೆ ಬಿದ್ದಿದ್ದನ್ನು ಕಂಡ ಹತ್ತಿರದ ಮನೆಯವರು ಬೊಬ್ಬೆ ಹಾಕಿದಾಗ ಹತ್ತಿರ ಇರುವ ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ ಮನ್ಸ ಮುಗೇರರವರು ಓಡಿಬಂದು ನೀರಿಗಿಳಿದು

ಹೊಳೆಗೆ ಬಿದ್ದು ವ್ಯಕ್ತಿ ಮೃತ್ಯು Read More »

ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಬೆಂಕಿ

ಉಡುಪಿ: ಮಣಿಪಾಲದ ಬಬ್ಬುಸ್ವಾಮಿ ದೈವಸ್ಥಾನದ ರಸ್ತೆ ಬದಿ ನಿಲ್ಲಿಸಿದ್ದ ಮಾರುತಿ ರಿಡ್ಜ್ ಕಾರು ಬೆಂಕಿಗಾಹುತಿಯಾದ ಘಟನೆ ತಡರಾತ್ರಿ ನಡೆದಿದೆ. ಕಾರು ಚಾಲಕ ಸೇರಿ ಇನ್ನೋರ್ವ ವ್ಯಕ್ತಿ ಕಾರನ್ನು ರಸ್ತೆ ಬದಿ ನಿಲ್ಲಿಸಿ ಅದರೊಳಗೆ ಮಲಗಿದ್ದರು. ಈ ವೇಳೆ ಕಾರು ಚಾಲಕನಿಗೆ ಕಾರಿನ ಬಾನೆಟ್ ಬಳಿ ಹೊಗೆ ಕಾಣಿಸಿಕೊಂಡಿದ್ದು, ಕಾರಿನಿಂದ ಹೊರಬಂದಿದ್ದಾರೆ. ಬೆಂಕಿಯ ಕೆನ್ನಾಲೆಗೆ ಕಾರು ಸಂಪೂರ್ಣ ಸುಟ್ಟುಹೋಗಿದ್ದು, ಶಾರ್ಟ್ ಸರ್ಕ್ಯೂಟ್ ನಿಂದ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಕಾರು ಮಾಲೀಕನ ಮಾಹಿತಿ ಮೇರೆಗೆ ಅಗ್ನಿ ಶಾಮಕ ದಳದವರು

ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಬೆಂಕಿ Read More »

ಅಟ್ಟಿಕಾ ಗೋಲ್ಡ್ ಕಂಪನಿ ಮಾಲೀಕ ಬಂಧನ

ಬೆಂಗಳೂರು : ಅಟ್ಟಿಕಾ ಗೋಲ್ಡ್ ಕಂಪನಿ ಮಾಲೀಕ ಅಟ್ಟಿಕಾ ಬಾಬು ಅಲಿಯಾಸ್ ಬೊಮ್ಮನಹಳ್ಳಿ ಬಾಬು ಅವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಕದ್ದ ಚಿನ್ನ ಖರೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ಜಿಲ್ಲೆಯ ತುರುವೇಕೆರೆ ಪೊಲೀಸರು ಬುಧವಾರ ಬೊಮ್ಮನಹಳ್ಳಿ ಬಾಬು ಅವರನ್ನು ಪ್ರೇಜರ್ ಟೌನ್ ನಿವಾಸದ ಬಳಿ ಬಂಧಿಸಿದ್ದಾರೆ. ಕಳ್ಳತನ ಮಾಡಿದ ಚಿನ್ನದ ಆಭರಣಗಳನ್ನು ಖರೀದಿ ಮಾಡಿದ ಕುರಿತು ತುರುವೇಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿತ್ತು. ಹಾಗಾಗಿ, ತುರುವೇಕೆರೆ ಸಿಪಿಐ ಲೋಹಿತ್ ಬಿ.ಎನ್ ಹಾಗೂ ತಂಡದಿಂದ ಬಂಧಿಸಲಾಗಿದೆ.

ಅಟ್ಟಿಕಾ ಗೋಲ್ಡ್ ಕಂಪನಿ ಮಾಲೀಕ ಬಂಧನ Read More »

ವಿದ್ಯುತ್ ತಂತಿ ತಗುಲಿ ಇಬ್ಬರು ಆಟೋ ಚಾಲಕರು ಮೃತ್ಯು

ಮಂಗಳೂರು : ಮಳೆಗೆ ವಿದ್ಯುತ್ ತಂತಿ ಕಡಿದು ಬಿದ್ದ ಹಿನ್ನಲೆ ಇಬ್ಬರು ಆಟೋ ಚಾಲಕರು ಸಾವನ್ನಪ್ಪಿದ ಘಟನೆ ಮಂಗಳೂರಿನ ರೊಸಾರಿಯೂ ಶಾಲಾ ಹಿಂಭಾಗದಲ್ಲಿ ನಡೆದಿದೆ. ಉಪ್ಪಿನಂಗಡಿ ನಿವಾಸಿ ದೇವರಾಜ್ ಗೌಡ, ಹಾಸನ ಮೂಲದ ರಾಜು ಪಾಲ್ಯ ವಿದ್ಯುತ್ ಶಾಕ್‍ ನಿಂದ ಮೃತಪಟ್ಟವರು. ಮಳೆಗೆ ತುಕ್ಕು ಹಿಡಿದ ವಿದ್ಯುತ್ ತಂತಿ ಹಠಾತ್ತನೆ ತುಂಡಾಗಿ ಆಟೋ ಚಾಲಕನ ಮೇಲೆ ಬಿದ್ದಿದ್ದು, ಆತನನ್ನು ರಕ್ಷಿಸಲು ಹೋದ ಇನ್ನೊಬ್ಬ ಆಟೋ ಚಾಲಕ ಕೂಡ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ

ವಿದ್ಯುತ್ ತಂತಿ ತಗುಲಿ ಇಬ್ಬರು ಆಟೋ ಚಾಲಕರು ಮೃತ್ಯು Read More »

error: Content is protected !!
Scroll to Top