ಅಪರಾಧ

ನೇಣು ಬಿಗಿದು ಯುವತಿ ಆತ್ಮಹತ್ಯೆ !

ಬೆಳ್ತಂಗಡಿ: ಯುವತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಕಾಯರ್ತಡ್ಕದಲ್ಲಿ ಗುರುವಾರ ನಡೆದಿದೆ. ಕಾಯರ್ತಡ್ಕ ಕುರುಂಬುಡೇಲು ನಿವಾಸಿ ವನಿತಾ ಯಾನೆ ರೇವತಿ (30) ಆತ್ಮಹತ್ಯೆ ಮಾಡಿಕೊಂಡವರು. ಮಂಗಳೂರಿನಲ್ಲಿ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗಿಯಾಗಿರುವ ವನಿತಾ ಅನಾರೋಗ್ಯ ಹಿನ್ನಲೆಯಲ್ಲಿ ಒಂದು ತಿಂಗಳು ಮನೆಯಲ್ಲಿದ್ದರು. ಬುಧವಾರ ಮುಂಜಾನೆ ಮನೆಯ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಡೆತ್ ನೋಟ್ ದೊರಕಿದ್ದು, ನನ್ನ ಸಾವಿಗೆ ನಾನೇ ಕಾರಣ ಎಂದು ಬರೆದಿದೆ. ಧರ್ಮಸ್ಥಳ ಪೊಲೀಸರು […]

ನೇಣು ಬಿಗಿದು ಯುವತಿ ಆತ್ಮಹತ್ಯೆ ! Read More »

ಅಡ್ಯನಡ್ಕ ಬ್ಯಾಂಕ್‍ ದರೋಡೆ | ಸ್ಥಳಕ್ಕೆ ಶ್ವಾನದಳ ಮತ್ತು ಬೆರಳಚ್ಚು ತಜ್ಞರ ತಂಡ ಭೇಟಿ | ಘಟನೆ ಕುರಿತು ಮಾಹಿತಿ ನೀಡಿದ ಎಸ್.ಪಿ. ರಿಷ್ಯಂತ್

ಅಡ್ಯನಡ್ಕ : ಕರ್ನಾಟಕ ಬ್ಯಾಂಕ್‍ ಗೆ ಕಳ್ಳರು ನುಗ್ಗಿ ಕೋಟ್ಯಾಂತರ ಮೌಲ್ಯದ ನಗ-ನಗದು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕು ಪಡೆದುಕೊಂಡಿದ್ದು, ಸ್ಥಳಕ್ಕೆ ಶ್ವಾನದಳ ಮತ್ತು ಬೆರಳಚ್ಚು ತಜ್ಞರ ತಂಡ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ. ಬ್ಯಾಂಕ್‌ಗೆ ನಿನ್ನೆ ರಾತ್ರಿ ದರೋಡೆಕೋರರು ಒಳನುಗ್ಗಿದ್ದು, ಇಂದು ಮುಂಜಾನೆ ಎಂದಿನಂತೆ ಬ್ಯಾಂಕ್ ಸಿಬ್ಬಂದಿ ಬ್ಯಾಂಕ್ ತೆರೆದು ಒಳಗೆ ಹೋದಾಗ ಕೃತ್ಯ ಎಸಗಿರುವುದು ಬೆಳಕಿಗೆ ಬಂದಿದೆ. ತಕ್ಷಣವೇ ವಿಟ್ಲ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಬಂದು

ಅಡ್ಯನಡ್ಕ ಬ್ಯಾಂಕ್‍ ದರೋಡೆ | ಸ್ಥಳಕ್ಕೆ ಶ್ವಾನದಳ ಮತ್ತು ಬೆರಳಚ್ಚು ತಜ್ಞರ ತಂಡ ಭೇಟಿ | ಘಟನೆ ಕುರಿತು ಮಾಹಿತಿ ನೀಡಿದ ಎಸ್.ಪಿ. ರಿಷ್ಯಂತ್ Read More »

ದ್ಚಿಚಕ್ರ ವಾಹನ ಕಳವು | ಪ್ರಕರಣ ದಾಖಲು

ಉಪ್ಪಿನಂಗಡಿ: ಗ್ರಾಮ ಪಂಚಾಯಿತಿ ನೀರು ನಿರ್ವಾಹಕ ಉಮೇಶ್ ನಾಯಕ್ ಅವರ  ದ್ವಿಚಕ್ರ ವಾಹನವನ್ನು ಕಳವುಗೈದ ಕುರಿತು ಉಪ್ಪಿನಂಗಡಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಉಮೇಶ್ ನಾಯಕ್ ಅವರು ಗಾಂಧೀ ಪಾರ್ಕ್ ನ ಹೈ ಮಾಸ್ಕ್ ವಿದ್ಯುತ್ ಕಂಬದ ಬಳಿ ಹೊಂಡಾ ಆ್ಯಕ್ಟಿವಾವನ್ನು ನಿಲ್ಲಿಸಿದ್ದರು. ಬಳಿಕ ಅದೇ ಸ್ಥಳಕ್ಕೆ ಬಂದಾಗ ವಾಹನ ಕಳವುಗೈದಿರುವ ಕುರಿತು ಗಮನಕ್ಕೆ ಬಂದಿದೆ. ತಕ್ಷಣ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದರು. ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ದ್ಚಿಚಕ್ರ ವಾಹನ ಕಳವು | ಪ್ರಕರಣ ದಾಖಲು Read More »

ಕರ್ನಾಟಕ ಬ್ಯಾಂಕ್‍ ಅಡ್ಯನಡ್ಕ ಶಾಖೆಗೆ ನುಗ್ಗಿದ ಕಳ್ಳರು | ಲಕ್ಷಾಂತರ ಮೌಲ್ಯದ ನಗ, ನಗದು ಕಳವು

ವಿಟ್ಲ: ಅಡ್ಯನಡ್ಕ ಕರ್ನಾಟಕ ಬ್ಯಾಂಕ್‍ಗೆ ನುಗ್ಗಿದ ಕಳ್ಳರು ಲಕ್ಷಾಂತರ ಮೌಲ್ಯದ ಚಿನ್ನ, ಹಣ ಕಳವು ಮಾಡಿ ಪರಾರಿಯಾದ ಘಟನೆ ಬುಧವಾರ ತಡರಾತ್ರಿ ನಡೆದಿದೆ. ವಿಟ್ಲ ಅಡ್ಯನಡ್ಕದಲ್ಲಿ ಕಾರ್ಯಾಚರಿಸುತ್ತಿದ್ದ ಸುಮಾರು 20 ವರ್ಷ ಹಳೆಯ ಕಟ್ಟಡದಲ್ಲಿರುವ ಕರ್ನಾಟಕ ಬ್ಯಾಂಕ್ ಶಾಖೆಯ ಕಿಟಕಿಗಳನ್ನು ಮುರಿದು ಕಳ್ಳರು ಒಳನುಗ್ಗಿದ್ದಾರೆ. ಯಾವುದೇ ಭದ್ರತೆಯಿಲ್ಲದ ಈ ಬ್ಯಾಂಕ್ ನಿಂದ ಕಳ್ಳತನಕ್ಕೆ ಅಜಾಗರೂಕತೆಯೇ ಕಾರಣ ಎಂದು ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಕಳವಾದ ಸೊತ್ತುಗಳ ನಿಖರವಾದ ಮೌಲ್ಯ ತನಿಖೆಯಿಂದಷ್ಟೇ ತಿಳಿದು ಬರಬೇಕಿದೆ.

ಕರ್ನಾಟಕ ಬ್ಯಾಂಕ್‍ ಅಡ್ಯನಡ್ಕ ಶಾಖೆಗೆ ನುಗ್ಗಿದ ಕಳ್ಳರು | ಲಕ್ಷಾಂತರ ಮೌಲ್ಯದ ನಗ, ನಗದು ಕಳವು Read More »

ಬ್ಯಾಂಕ್‍ ಸಿಬ್ಬಂದಿಯೆಂದು ಒಟಿಪಿ ಪಡೆದು ಲಕ್ಷಾಂತರ ವಂಚನೆ | ಪ್ರಕರಣ ದಾಖಲು

ಪುತ್ತೂರು : ಕೆವೈಸಿ ಅಪ್‍ಡೇಟ್ ಇದೆ ಎಂದು ವ್ಯಕ್ತಿಯೊಬ್ಬರಿಂದ ಬ್ಯಾಂಕ್ ಸಿಬ್ಬಂದಿ ಎಂದು ಹೇಳಿಕೊಂಡು ಒಟಿಪಿ ಪಡೆದು ಖಾತೆಯಿಂದ ಲಕ್ಷಾಂತರ ರೂ. ವಂಚಿಸಿದ ಘಟನೆ ಕುರಿತು ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಂದ್ರಶೇಖರ ಭಟ್ (62) ಒಟಿಪಿ ನೀಡಿ ಲಕ್ಷಾಂತರ ರೂಪಾಯಿ ಕಳೆದುಕೊಂಡವರು. ಮಂಗಳವಾರ ಚಂದ್ರಶೇಖರ ಭಟ್ ಅವರ ಮೊಬೈಲಿಗೆ ಕೆವೈಸಿ ಅಪ್‍ ಡೇಟ್ ಮಾಡುವ ಕುರಿತು ಸಂದೇಶ ಬಂದಿದೆ. ಸಂದೇಶದಲ್ಲಿ ತಿಳಿಸಿದ ದೂರವಾಣಿ ಸಂಖ್ಯೆಗೆ ಅವರು ಕರೆ ಮಾಡಿದಾಗ ನಿಮ್ಮ ಖಾತೆ ಬ್ಲಾಕ್ ಆಗಿದೆ.

ಬ್ಯಾಂಕ್‍ ಸಿಬ್ಬಂದಿಯೆಂದು ಒಟಿಪಿ ಪಡೆದು ಲಕ್ಷಾಂತರ ವಂಚನೆ | ಪ್ರಕರಣ ದಾಖಲು Read More »

ರಸ್ತೆ ಬದಿ ಮಾದಕ ವಸ್ತುಗಳ ಮಾರಾಟ | ಆರೋಪಿಗಳಿಬ್ಬರು ಪೊಲೀಸರ ವಶಕ್ಕೆ

ಮಂಗಳೂರು : ರಸ್ತೆ ಬದಿಯಲ್ಲಿ ಮಾದಕ ವಸ್ತುಗಳ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಕೇಂದ್ರ ಉಪ-ವಿಭಾಗ ಆ್ಯಂಟಿ ಡ್ರಗ್ ತಂಡದ ಅಧಿಕಾರಿ ಮತ್ತು ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಅತ್ತಾವರದ ಆದಿತ್ಯ ಕೆ (29), ಅಡ್ಯಾರ್ ಪದವು ನಿವಾಸಿ ರೋಹನ್‌ ಸಿಕ್ಕೇರಾ (33) ಬಂಧಿತ ಆರೋಪಿಗಳು. ಮಂಗಳೂರು ನಗರ ಪೊಲೀಸ್‌ ಆಯುಕ್ತ ಅನುಪಮ್ ಅಗ್ರವಾಲ್ ಅವರ ನಿರ್ದೇಶನದಂತೆ, ಉಪ ಪೊಲೀಸ್ ಆಯುಕ್ತ ಸಿದ್ದಾರ್ಥ್ ಗೋಯಲ್ ಐ.ಪಿ.ಎಸ್, ಉಪ ಪೊಲೀಸ್‌ ಆಯುಕ್ತ ದಿನೇಶ್ ಕುಮಾರ್ ಮಾರ್ಗದರ್ಶನದಲ್ಲಿ, ಕೇಂದ್ರ ಉಪ

ರಸ್ತೆ ಬದಿ ಮಾದಕ ವಸ್ತುಗಳ ಮಾರಾಟ | ಆರೋಪಿಗಳಿಬ್ಬರು ಪೊಲೀಸರ ವಶಕ್ಕೆ Read More »

ನವವಿವಾಹಿತೆ ಶೋಭಾ ನೇಣು ಬಿಗಿದು ಆತ್ಮಹತ್ಯೆ

ಪುತ್ತೂರು: ಪುತ್ತೂರು: ನವವಿವಾಹಿತೆ ಶೋಭಾ (26) ಪುತ್ತೂರಿನ ಕುರಿಯ ಗಡಾಜೆ ಎಂಬಲ್ಲಿ ತನ್ನ ಪತಿಯ ಮನೆಯಲ್ಲಿ ಸೋಮವಾರ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಉರುವಾಲು ಗ್ರಾಮದ ಕುಕ್ಕಾಜೆ ರಾಮಣ್ಣ ಗೌಡ ಮತ್ತು ಪುಷ್ಪ ದಂಪತಿ ಪುತ್ರಿಯಾಗಿರುವ ಶೋಭಾ ಅವರನ್ನು ಕಳೆದ ಒಂದೂವರೆ ತಿಂಗಳ ಹಿಂದೆ ಪುತ್ತೂರು ಗಡಾಜೆ ರೋಹಿತ್ ಅವರಿಗೆ ಮದುವೆ ಮಾಡಿ ಕೊಡಲಾಗಿತ್ತು. ಸೋಮವಾರ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಾರಣ

ನವವಿವಾಹಿತೆ ಶೋಭಾ ನೇಣು ಬಿಗಿದು ಆತ್ಮಹತ್ಯೆ Read More »

ನೈತಿಕ ಪೊಲೀಸ್‍ ಗಿರಿ ! | ಮೂವರು ಪೊಲೀಸರ ವಶಕ್ಕೆ

ಅನ್ಯಕೋಮಿನ ಯುವಕ ಯುವತಿಗೆ  ಹಿಂದೂ ಸಂಘಟನೆ ಕಾರ್ಯಕರ್ತರು ತಡೆದು ಕಿರಿಕ್ ಮಾಡುವ ಮೂಲಕ ನೈತಿಕ ಪೊಲೀಸ್ ಗಿರಿ ನಡೆಸಿದ ಘಟನೆ ಮಂಗಳೂರಿನ ಪ್ರವಾಸಿ ತಾಣವಾದ ಪಣಂಬೂರು ಬೀಚ್ ನಲ್ಲಿ ನಡೆದಿದೆ. ಕೇರಳದ ಯುವಕ ಹಾಗೂ ಬೆಂಗಳೂರಿನ ಯುವತಿ ಪಣಂಬೂರು ಬೀಚ್ ಗೆ ಬಂದಿದ್ದರು. ಈ ವೇಳೆ ಅಲ್ಲಿಗೆ ಬಂದ  ಹಿಂದೂ ಸಂಘಟನೆ ಕಾರ್ಯಕರ್ತರು ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.  ಈ ಸಂದರ್ಭದಲ್ಲಿ  ಸ್ಥಳಕ್ಕೆ ಆಗಮಿಸಿದ ಪೊಲೀಸರು ಅನ್ಯಜೋಡಿ ಹಾಗೂ ಹಿಂದೂ ಕಾರ್ಯಕರ್ತರನ್ನು ಠಾಣೆಗೆ ಕರೆದುಕೊಂಡು ಹೋಗಿದ್ದಾರೆ. ನಂತರ ಈ

ನೈತಿಕ ಪೊಲೀಸ್‍ ಗಿರಿ ! | ಮೂವರು ಪೊಲೀಸರ ವಶಕ್ಕೆ Read More »

ಅಕ್ರಮ ಗೋಮಾಂಶ ವಶ | ಇಬ್ಬರು ಪೊಲೀಸರ ವಶಕ್ಕೆ

ಬಿ.ಸಿ.ರೋಡು: ಅಕ್ರಮ ಗೋಮಾಂಸವನ್ನು ಪತ್ತೆಹಚ್ಚಿ ಇಬ್ಬರು ಆರೋಪಿಗಳನ್ನು ಬಂಧಿಸಿದ ಘಟನೆ ಕಲ್ಲಡ್ಕದಲ್ಲಿ ಇಂದು ಮುಂಜಾನೆ ನಡೆದಿದೆ. ಬಜರಂಗದಳ ಕಲ್ಲಡ್ಕ ಪ್ರಖಂಡದ ಮಾಹಿತಿ ಮೇರೆಗೆ ಇಂದು ಮುಂಜಾನೆ ಕಲ್ಲಡ್ಕ ಮದಕ ಬಳಿ ಬಿಸಿ ರೋಡ್ ನಗರ ಪೊಲೀಸರು ಕಾರ್ಯಾಚರಣೆ ನಡೆಸಿ ಅಂದಾಜು 2 ಕಿಂಟ್ಟಾಲ್ ಗೋ ಮಾಂಸ, ಒಂದು ಆಟೋ , ಆಲ್ಟೋ ಕಾರು ಹಾಗೂ ಬೈಕ್ ವಶಪಡಿಸಿಕೊಂಡು ಆರೋಪಿಗಳನ್ನು ಬಂಧಿಸಲಾಗಿದೆ ಆರೋಪಿಗಳ ಪೈಕಿ ಓರ್ವ ಪರಾರಿಯಾಗಿದ್ದಾನೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ.

ಅಕ್ರಮ ಗೋಮಾಂಶ ವಶ | ಇಬ್ಬರು ಪೊಲೀಸರ ವಶಕ್ಕೆ Read More »

ಅಕ್ರಮ ವೇಶ್ಯಾವಾಟಿಕೆ ದಂಧೆ : ಮೂವರು ಪೊಲೀಸ್ ವಶಕ್ಕೆ

ಮಣಿಪಾಲ: ಅಕ್ರಮವಾಗಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಮೂವರನ್ನು ಮಣಿಪಾಲ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಪವನ್, ಚೇತನ್ ಸಿ.ಬಿ. ಹಾಗೂ ಪಂಜು ಬಂಧಿತ ಆರೋಪಿಗಳು ಮಹಿಳೆಯರನ್ನು ಪುಸಲಾಯಿಸಿ ಕರೆ ತಂದು ಅಕ್ರಮ ವೇಶ್ಯಾವಾಟಿಕೆಗೆ ಕಳುಹಿಸಿಕೊಡುತ್ತಿರುವ ಕುರಿತು ಬಂದ ಮಾಹಿತಿಯಂತೆ ಸ್ಥಳಕ್ಕೆ ಮಣಿಪಾಲ ಪೊಲೀಸರು ದಾಳಿ ನಡೆಸಿ ಮೊದಲಿಗೆ ಆರೋಪಿ ಪವನ್‌ ಎಂಬವನನ್ನು ವಶಕ್ಕೆ ಪಡೆದಿದ್ದಾರೆ. ಪವನ್ ಹೇಳಿಕೆಯಂತೆ ಉಡುಪಿ ತಾಲೂಕು ಬೊಮ್ಮರಬೆಟ್ಟು ಮನೆಗೆ ದಾಳಿ ನಡೆಸಿ ಆರೋಪಿ ಚೇತನ್‌ ಸಿ.ಬಿ. ಹಾಗೂ ಆರೋಪಿ ಪಂಜು ಎಂಬವರನ್ನು ವಶಕ್ಕೆ

ಅಕ್ರಮ ವೇಶ್ಯಾವಾಟಿಕೆ ದಂಧೆ : ಮೂವರು ಪೊಲೀಸ್ ವಶಕ್ಕೆ Read More »

error: Content is protected !!
Scroll to Top