ಅಪರಾಧ

ಬಾಲಕಿಗೆ ಲೈಂಗಿಕ ಕಿರುಕುಳ ಪ್ರಕರಣ | ಕುತೂಹಲ ಕೆರಳಿಸಿದ ಗೃಹಸಚಿವ ಡಾ.ಪರಮೇಶ್ವರ್ ಹೇಳಿಕೆ

ಬೆಂಗಳೂರು: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ಪೋಕ್ಸೋ ಪ್ರಕರಣದಲ್ಲಿ ಸಿಲುಕಿಕೊಂಡಿರುವ ಮಾಜಿ ಸಿಎಂ ಯಡಿಯೂರಪ್ಪ ಭಾರಿ ಸಂಕಷ್ಟಕ್ಕೆ ಸಿಲುಕಿಕೊಳ್ಳುವ ಸಾಧ್ಯತೆ ಕಂಡು ಬಂದಿದೆ. ಈ ವಿಚಾರದಲ್ಲಿ ಗೃಹ ಸಚಿವ ಡಾ. ಜಿ ಪರಮೇಶ್ವರ್ ನೀಡಿರುವ ಹೇಳಿಕೆ ಈಗ ಕುತೂಹಲ ಕೆರಳಿಸಿದೆ. ಈ ಪ್ರಕರಣದ ಬಗ್ಗೆ ಮಾಧ್ಯಮದೊಂದಿಗೆ ತುಮಕೂರಿನಲ್ಲಿ ಮಾತನಾಡಿರುವ ಡಾ. ಜಿ ಪರಮೇಶ್ವರ್, ಅಗತ್ಯಬಿದ್ದರೆ ಸಿಐಡಿಯವರು ಯಡಿಯೂರಪ್ಪ ಅವರನ್ನು ಬಂಧಿಸಲಿದ್ದಾರೆ. ಯಡಿಯೂರಪ್ಪ ನೋಟಿಸ್ ಗೆ ಬಂದು ಉತ್ತರ ನೀಡಬೇಕಾಗುತ್ತದೆ ಎಂದು ತಿಳಿಸಿದರು. ಈಗಾಗಲೇ ಈ ಪ್ರಕರಣದ ಬಗ್ಗೆ […]

ಬಾಲಕಿಗೆ ಲೈಂಗಿಕ ಕಿರುಕುಳ ಪ್ರಕರಣ | ಕುತೂಹಲ ಕೆರಳಿಸಿದ ಗೃಹಸಚಿವ ಡಾ.ಪರಮೇಶ್ವರ್ ಹೇಳಿಕೆ Read More »

ಅನ್ಯ ಕೋಮಿನ ವಿದ್ಯಾರ್ಥಿಗಳ ಜತೆ ಹಿಂದೂ ಯುವತಿ ಕಾರಿನಲ್ಲಿ ಸುತ್ತಾಟ | ವಿದ್ಯಾರ್ಥಿಗಳು ಪೊಲೀಸರ ವಶಕ್ಕೆ

ಮಂಗಳೂರು: ಹಿಂದೂ ಯುವತಿಯೊಬ್ಬಳು ಅನ್ಯಕೋಮಿನ ವಿದ್ಯಾರ್ಥಿಗಳ ಜೊತೆ ಸುತ್ತಾಟ ನಡೆಸುತ್ತಿದ್ದುದು ಮಂಗಳೂರಿನಲ್ಲಿ ನಡೆದಿದೆ. ಮಂಗಳೂರು ಹೊರವಲಯದ ಮುಕ್ಕ ಎಂಬಲ್ಲಿ ಅನ್ಯಕೋಮಿನ ಯುವಕರು ಹಾಗೂ ಹಿಂದೂ ಯುವತಿಯಿದ್ದ ಐಬಿಎಂಡಬ್ಲ್ಯೂ ಕಾರು ಮುಕ್ಕ ಸಮೀಪ ಸ್ಕೂಲ್ ಬಸ್ ಗೆ ಡಿಕ್ಕಿಯಾಗಿದ್ದು, ಈ ವೇಳೆ ಬಸ್ ಚಾಲಕನ ಜೊತೆ ತಂಡ ಜಗಳವಾಡುತ್ತಿದ್ದು, ಸ್ಥಳದಲ್ಲಿ ಸಾರ್ವಜನಿಕರು ಜಮಾಯಿಸುತ್ತಿದ್ದಂತೆ ತಂಡ ಅಲ್ಲಿಂದ ಎಸ್ಕೆಪ್ ಆಗಲು ಯತ್ನಿಸಿದೆ. ಈ ವೇಳೆ ಕಾರು ಕೈ ಕೊಟ್ಟಿದೆ ಎನ್ನಲಾಗಿದೆ. ಸ್ಥಳದಲ್ಲಿ ಜನ ಜಮಾಯಿಸುತ್ತಿದ್ದಂತೆ ಅನ್ಯಕೋಮಿನ ಜೋಡಿ ಎಂದು ಬೆಳಕಿಗೆ

ಅನ್ಯ ಕೋಮಿನ ವಿದ್ಯಾರ್ಥಿಗಳ ಜತೆ ಹಿಂದೂ ಯುವತಿ ಕಾರಿನಲ್ಲಿ ಸುತ್ತಾಟ | ವಿದ್ಯಾರ್ಥಿಗಳು ಪೊಲೀಸರ ವಶಕ್ಕೆ Read More »

ನ್ಯಾಯಾಲಯದ ಆವರಣದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಕೈದಿ

ವಿಚಾರಣೆಗಾಗಿ ಕರೆತಂದಿದ್ದ ಕೈದಿಯೊಬ್ಬ ನ್ಯಾಯಾಲಯದ ಆವರಣದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಘಟನೆ ಇಂದು ಬೆಳಗ್ಗೆ ಬೆಳಗಾವಿಯಲ್ಲಿ ನಡೆದಿದೆ. ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿದ್ದ ಕೈದಿ ಕಡಬ ಮೂಲದ ಜಯೇಶ್ ಪೂಜಾರಿ ಎಂಬಾತನನ್ನು ವಿಚಾರಣೆಗಾಗಿ ನ್ಯಾಯಾಲಯಕ್ಕೆ ಕರೆತರಲಾಗಿತ್ತು. ಆಗ, ‘ನ್ಯಾಯಾಲಯದಲ್ಲಿ ನನ್ನ ಅಹವಾಲು ಸ್ವೀಕರಿಸುತ್ತಿಲ್ಲ’ ಎಂದು ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾನೆ ಎನ್ನಲಾಗಿದೆ. ಈ ವೇಳೆ ವಕೀಲರು ಮತ್ತು ಜನರು ಹೊಡೆಯುತ್ತಿದ್ದಂತೆ, ಕೈದಿಯನ್ನು ರಕ್ಷಿಸಿದ ಪೊಲೀಸರು ಎಪಿಎಂಸಿ ಠಾಣೆಗೆ ಕರೆದೊಯ್ದು ವಿಚಾರಣೆ ಮುಂದುವರಿಸಿದ್ದಾರೆ ಎಂದು

ನ್ಯಾಯಾಲಯದ ಆವರಣದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಕೈದಿ Read More »

ನಟ ದರ್ಶನ್‍ ಗೆ ಜೀವಾವಧಿ-ಮರಣ ದಂಡನೆ ಶಿಕ್ಷೆಯಾಗಲಿ | ಪೋಸ್ಟ್ ಒಂದನ್ನು ಎಕ್ಸ್ ನಲ್ಲಿ ರೀಟ್ವಿಟ್ ಮಾಡಿದ ನಟಿ ರಮ್ಯಾ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ತಪ್ಪು ಮಾಡಿದವರಿಗೆ ಶಿಕ್ಷೆ ಆಗಲೇ ಬೇಕು ಎಂದು ನಟಿ ರಮ್ಯಾ ಪೋಸ್ಟ್ ಮೂಲಕ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸೆಕ್ಷನ್ 302 ರ ಅಡಿಯಲ್ಲಿ ಶಿಕ್ಷೆ ಸಾಬೀತಾದರೆ ದರ್ಶನ್ ಮರಣದಂಡನೆ ಅಥವಾ ಜೀವಾವಧಿ ಶಿಕ್ಷೆ ಪಡೆಯುವ ಸಾಧ್ಯತೆಯಿದೆ. ಈ ಪ್ರಕರಣದಲ್ಲಿ ಹಣ ಅಥವಾ ಇತರೆ ಅಂಶ ಪರಿಣಾಮ ಬೀರಬಾರದು. ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂದು ಹೇಳಿರುವ ಪೋಸ್ಟ್ ಒಂದನ್ನು ಎಕ್ಸ್’ ನಲ್ಲಿ ರಮ್ಯಾ ರೀಟ್ವಿಟ್ ಮಾಡಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್

ನಟ ದರ್ಶನ್‍ ಗೆ ಜೀವಾವಧಿ-ಮರಣ ದಂಡನೆ ಶಿಕ್ಷೆಯಾಗಲಿ | ಪೋಸ್ಟ್ ಒಂದನ್ನು ಎಕ್ಸ್ ನಲ್ಲಿ ರೀಟ್ವಿಟ್ ಮಾಡಿದ ನಟಿ ರಮ್ಯಾ Read More »

ಬೆಳ್ಳಾರೆ ಮಹಿಳೆ ಕೊಲೆ ಆರೋಪಿ ಬಂಧನ

ಬೆಳ್ಳಾರೆ: ಬೆಳ್ಳಾರೆಯ ಎಪಿಎಂಸಿ ಸಂತೆ ಮಾರುಕಟ್ಟೆಯಲ್ಲಿ ನಡೆದ ಮಹಿಳೆಯ ಕೊಲೆಗೆ ಸಂಬಂಧಿಸಿ ಕೊಲೆ ಆರೋಪಿಯನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ. ಕಲ್ಮಡ್ಕದ ಜೋಗಿಯಡ್ಕದ ವೆಂಕಪ್ಪ ಎಂಬವರ ಪುತ್ರ ಜಯರಾಮ ನಾಯ್ಕ ಕೊಲೆ ಆರೋಪಿಯಾಗಿದ್ದು, ಆತನನ್ನು ಬಂಧಿಸಲಾಗಿದೆ. ಬೆಳ್ಳಾರೆ ಗ್ರಾಮದ ಪಾಟಾಜೆಯ ನಳಿನಿ (55) ಅವರನ್ನು ಭಾನುವಾರ ರಾತ್ರಿ ಕಲ್ಲು ಎತ್ತಿ ಹಾಕಿ ಕೊಲೆ ಮಾಡಲಾಗಿದ್ದು ಈ ಬಗ್ಗೆ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 2 ವರ್ಷಗಳ ಹಿಂದೆ ಮನೆ ಬಿಟ್ಟಿದ್ದ ನಳಿನಿ ವಾರಕೊಮ್ಮೆ ಮನೆಗೆ ಹೋಗಿ ಬರುತ್ತಿದ್ದು, ಬಸ್

ಬೆಳ್ಳಾರೆ ಮಹಿಳೆ ಕೊಲೆ ಆರೋಪಿ ಬಂಧನ Read More »

ಬೆಳ್ಳಾರೆಯಲ್ಲಿ ಮಹಿಳೆಯೊಬ್ಬರ ಮೃತದೇಹ ಪತ್ತೆ | ಕೊಲೆ ಶಂಕೆ

ಬೆಳ್ಳಾರೆ: ಬೆಳ್ಳಾರೆಯ ಎಪಿಎಂಸಿ ಸಂತೆ ಮಾರುಕಟ್ಟೆಯಲ್ಲಿ ಮಹಿಳೆಯೊಬ್ಬರ ಮೃತದೇಹ ಪತ್ತೆಯಾಗಿದೆ. ತಲೆಗೆ ಕೆಂಪುಕಲ್ಲು ಎತ್ತಿಹಾಕಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ತಲೆ ಒಡೆದು ರಕ್ತ ಹರಿದುಹೋಗಿದೆ. ಸ್ಥಳದಲ್ಲಿ ಕೆಂಪು ಕಲ್ಲು ಇದ್ದು, ಅದನ್ನೇ ತಲೆಗೆ ಎತ್ತಿಹಾಕಿ ಕೊಲೆ ಮಾಡಲಾಗಿದೆ ಎನ್ನಲಾಗಿದೆ. ಬೆಳ್ಳಾರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಬೆಳ್ಳಾರೆ ಪೊಲೀಸ್ ಠಾಣಾಧಿಕಾರಿ ಸಂತೋಷ್ ಮತ್ತು ಸಿಬ್ಬಂದಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಮಹಿಳೆಯ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ. ಹೆಚ್ಚಿನ ವಿವರ ತಿಳಿದು ಬರಬೇಕಿದೆ.

ಬೆಳ್ಳಾರೆಯಲ್ಲಿ ಮಹಿಳೆಯೊಬ್ಬರ ಮೃತದೇಹ ಪತ್ತೆ | ಕೊಲೆ ಶಂಕೆ Read More »

ಸಾರ್ವಜನಿಕ ಸ್ಥಳದಲ್ಲಿ ತಲವಾರು ಪ್ರದರ್ಶಿಸಿದ ಐವರ ಬಂಧನ

ಬಂಟ್ವಾಳ : ಸಾರ್ವಜನಿಕ ಸ್ಥಳದಲ್ಲಿ ತಲವಾರು ಪ್ರದರ್ಶನ ಮಾಡುತ್ತಿದ್ದ ಆರೋಪದ ಹಿನ್ನೆಲೆ ಐವರ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜೂ. 9 ರಂದು ಸಂಜೆ, ಬಂಟ್ವಾಳ ಬಡಗಬೆಳ್ಳೂರು ಎಂಬಲ್ಲಿ ಅಪರಿಚಿತ ವ್ಯಕ್ತಿಗಳು, ಸಾರ್ಜಜನಿಕವಾಗಿ ಮಾರಕಾಸ್ತ್ರವನ್ನು ಪ್ರದರ್ಶಿಸುತ್ತಿದ್ದಾರೆ ಎಂಬುದಾಗಿ ಬಂದ ಮಾಹಿತಿ ಮೇರೆಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಪಿ.ಎಸ್.ಐ ಹರೀಶ್ ಎಮ್.ಆ‌ರ್, ಸಿಬ್ಬಂದಿಗಳೊಂದಿಗೆ ಸದ್ರಿ ಸ್ಥಳಕ್ಕೆ ತೆರಳಿದಾಗ ಬೋಜರಾಜ, ವಿನೋದ್, ವಿವೇಕ್, ರಕ್ಷೀತ್, ರಕ್ಷಕ್ ಎಂಬವರುಗಳು ಸಾರ್ವಜನಿಕ ಸ್ಥಳದಲ್ಲಿ ತಲವಾರು ಹಿಡಿದುಕೊಂಡು ಸಾರ್ವಜನಿಕವಾಗಿ ಭಯವನ್ನುಂಟು

ಸಾರ್ವಜನಿಕ ಸ್ಥಳದಲ್ಲಿ ತಲವಾರು ಪ್ರದರ್ಶಿಸಿದ ಐವರ ಬಂಧನ Read More »

ಯಾತ್ರಾರ್ಥಿಗಳಿದ್ದ ಬಸ್ಸಿನ ಮೆಲೆ ಭಯೋತ್ಪಾದಕರಿಂದ ಗುಂಡಿನ ದಾಳಿ | 9 ಮಂದಿ ಮೃತ್ಯು, 33 ಮಂದಿಗೆ ಗಾಯ

ಶ್ರೀನಗರ:  ಯಾತ್ರಾರ್ಥಿಗಳಿದ್ದ ಬಸ್ಸಿನ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ ಪರಿಣಾಮ 9 ಯಾತ್ರಿಕರು ಮೃತಪಟ್ಟು, 33 ಮಂದಿ ಗಾಯಗೊಂಡ ಘಟನೆ ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಭಾನುವಾರ ಸಂಜೆ ನಡೆದಿದೆ. 53 ಆಸನಗಳ ಬಸ್ ಶಿವ ಖೋರಿ ದೇವಸ್ಥಾನದಿಂದ ಕತ್ರಾ ಮಾರ್ಗವಾಗಿ ತೆರಳುತ್ತಿದ್ದ ವೇಳೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಚಲಿಸುತ್ತಿದ್ದ ವೇಳೆಯೇ ದಾಳಿ ನಡೆಸಿದ ಪರಿಣಾಮ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಿಂದ ಆಳವಾದ ಕಮರಿಗೆ ಬಿದ್ದಿದೆ. ಪೋನಿ ಪ್ರದೇಶದ ತೇರ್ಯತ್ ಗ್ರಾಮದ

ಯಾತ್ರಾರ್ಥಿಗಳಿದ್ದ ಬಸ್ಸಿನ ಮೆಲೆ ಭಯೋತ್ಪಾದಕರಿಂದ ಗುಂಡಿನ ದಾಳಿ | 9 ಮಂದಿ ಮೃತ್ಯು, 33 ಮಂದಿಗೆ ಗಾಯ Read More »

ವಿಜಯೋತ್ಸವದಲ್ಲಿ ಪಾಲ್ಗೊಂಡಿದ್ದ ಇಬ್ಬರು ಬಿಜೆಪಿ ಕಾರ್ಯಕರ್ತರಿಗೆ ಅನ್ಯ ಕೋಮಿನ ತಂಡದಿಂದ ಹಲ್ಲೆ

ಮಂಗಳೂರು : ವಿಜಯೋತ್ಸವದಲ್ಲಿ ಭಾಗವಹಿಸಿದ್ದ  ಇಬ್ಬರು ಬಿಜೆಪಿ ಕಾರ್ಯಕರ್ತರಿಬ್ಬರಿಗೆ ಮುಸ್ಲಿಂ ಯುವಕರ ತಂಡವೊಂದು ಚೂರಿಯಿಂದ ಇರಿದ ಘಟನೆ ಕೊಣಾಜೆ ಠಾಣೆ ವ್ಯಾಪ್ತಿಯ ಬೋಳಿಯಾರು ಸಮೀಪ ಭಾನುವಾರ ರಾತ್ರಿ ನಡೆದಿದೆ. ಇನೋಳಿ ಧರ್ಮನಗರದ ಹರೀಶ್ ಹಾಗೂ ನಂದನ್ ಕುಮಾರ್ ಚೂರಿ ಇರಿತದಿಂದ ಗಾಯಗೊಂಡವರು ಎನ್ನಲಾಗಿದೆ. ಗಾಯಾಳುಗಳನ್ನು ದೇರಳಕಟ್ಟೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಧಾನಮಂತ್ರಿಯಾಗಿ ನರೇಂದ್ರ ಮೋದಿ ಅವರು ಪ್ರಮಾಣವಚನ ಸ್ವೀಕರಿಸಿದ ಮತ್ತು ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಅವರ ವಿಜಯೋತ್ಸವದ ಅಂಗವಾಗಿ ಬೋಳಿಯಾರು ಬಿಜೆಪಿ ಗ್ರಾಮಸಮಿತಿ ವತಿಯಿಂದ ಚೇಳೂರು,

ವಿಜಯೋತ್ಸವದಲ್ಲಿ ಪಾಲ್ಗೊಂಡಿದ್ದ ಇಬ್ಬರು ಬಿಜೆಪಿ ಕಾರ್ಯಕರ್ತರಿಗೆ ಅನ್ಯ ಕೋಮಿನ ತಂಡದಿಂದ ಹಲ್ಲೆ Read More »

ನೇಣು ಬಿಗಿದು ಆತ್ಮಹತ್ಯೆ

ವಿಟ್ಲ: ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲದ ಕನ್ಯಾನ ಸಮೀಪದ ಮಂಡಿಯೂರು ಎಂಬಲ್ಲಿ ಇಂದು ನಡೆದಿದೆ. ನಾರಾಯಣ ನಾಯ್ಕ (60) ಆತ್ಮಹತ್ಯೆ ಮಾಡಿಕೊಂಡವರು. ಕಿಟಕಿ ಸರಳಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.

ನೇಣು ಬಿಗಿದು ಆತ್ಮಹತ್ಯೆ Read More »

error: Content is protected !!
Scroll to Top