ಅಪರಾಧ

ಸಹೋದ್ಯೋಗಿ ಮಹಿಳೆಗೆ ಮಾನಸಿಕ, ಲೈಂಗಿಕ ಕಿರುಕುಳ | ಪ್ರಕರಣ ದಾಖಲು

ಉಡುಪಿ: ಸಹೋದ್ಯೋಗಿ ವೈದ್ಯ ಮಹಿಳೆಗೆ ಲೈಂಗಿಕ ಹಾಗೂ ಮಾನಸಿಕ ಕಿರುಕುಳ ನೀಡುತ್ತಿದ್ದಾನೆ ಎಂದು ದೂರು ನೀಡಿದ ಹಿನ್ನಲೆಯಲ್ಲಿ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಳೆದ ಆರು ತಿಂಗಳಿಂದ ತನಗೆ ಹಗಲು ರಾತ್ರಿಯೆನ್ನದೇ ವೈದ್ಯಾಧಿಕಾರಿಯೊಬ್ಬ ಲೈಂಗಿಕ ಮತ್ತು ಮಾನಸಿಕ ಕಿರುಕುಳ ನೀಡುತ್ತಿದ್ದಾನೆ ಎಂದು ಕುಂದಾಪುರ ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿ ಡಾ, ರಾಬರ್ಟ್ ರೆಬೆಲ್ಲೋ ವಿರುದ್ಧ ಮಾನಭಂಗಕ್ಕೆ ಯತ್ನ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ. ಕುಂದಾಪುರದ ಸರ್ಕಾರಿ ತಾಲೂಕು ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ರಾಬರ್ಟ್ ರೆಬೆಲ್ಲೋ ವಿರುದ್ಧ ಹಿಂದಿನಿಂದಲೇ ಹಲವು ಆರೋಪಗಳಿದ್ದವು. […]

ಸಹೋದ್ಯೋಗಿ ಮಹಿಳೆಗೆ ಮಾನಸಿಕ, ಲೈಂಗಿಕ ಕಿರುಕುಳ | ಪ್ರಕರಣ ದಾಖಲು Read More »

ವ್ಯಕ್ತಿಗೆ ಆನ್ಲೈನ್ ವಂಚನೆ : ಪ್ರಕರಣ ದಾಖಲು

ಪುತ್ತೂರು: ಆನ್ಲೈನ್ ಮೂಲಕ ಡ್ರಮ್ ಉತ್ಪನ್ನಗಳನ್ನು ಪೂರೈಸುವುದಾಗಿ ನಂಬಿಸಿ ಹಣ ಪಡೆದುಕೊಂಡು ಕೃಷಿ ಉಪಕರಣಗಳನ್ನು ಪೂರೈಸದೆ ವಂಚಿಸಿರುವುದಾಗಿ ವ್ಯಕ್ತಿಯೋರ್ವರು ನಗರ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ. ನಗರದ ನರಿಮೊಗರು ನಿವಾಸಿ ಗಣೇಶ್ ಪ್ರಭು (40) ಎಂಬವರು ಈ ಕುರಿತು  ದೂರು ನೀಡಿದ್ದಾರೆ. ಪುತ್ತೂರು ತಾಲೂಕು ನರಿಮೊಗರು ಗ್ರಾಮದ ಪುರುಷರಕಟ್ಟೆ ಎಂಬಲ್ಲಿ, ಅಗ್ರೋ ಉತ್ಪನ್ನಗಳನ್ನು ಕೃಷಿಕರಿಗೆ ಮಾರಾಟ ಮಾಡುತ್ತಿದ್ದು, ಯುನಿಟಿ ಪಾಲಿ ಬ್ಯಾರೆಲ್ಸ್ ಪ್ರೈವೇಟ್ ಲಿಮಿಟೆಡ್ ಅಶೋಕ ನಗರ, ಶಿವಾಜಿ ನಗರ, ಪುಣೆ, ಮಹಾರಾಷ್ಟ್ರ ಎಂಬ ಹೆಸರಿನಿಂದ ಗಣೇಶ್

ವ್ಯಕ್ತಿಗೆ ಆನ್ಲೈನ್ ವಂಚನೆ : ಪ್ರಕರಣ ದಾಖಲು Read More »

ರೈಲು ಡಿಕ್ಕಿಯಾಗಿ ವ್ಯಕ್ತಿ ಮೃತ್ಯು !

ಪುತ್ತೂರು: ಕಬಕ ಪುತ್ತೂರು ರೈಲ್ವೇ ನಿಲ್ದಾಣ ಸಮೀಪದ ಮುರದಲ್ಲಿ ರೈಲು ಡಿಕ್ಕಿ ಹೊಡೆದು ವ್ಯಕ್ತಿಯೊಬ್ಬರು ಮೃತಪಟ್ಟ ಕುರಿತು ಇಂದು ಮುಂಜಾನೆ ಬೆಳಕಿಗೆ ಬಂದಿದೆ. ರೈಲು ಹಳಿ ದಾಟುವ ವೇಳೆ ರೈಲು ಡಿಕ್ಕಿ ಹೊಡೆದಿರಬಹುದು ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ರೈಲ್ವೇ ಪೊಲೀಸರು ಆಗಮಿಸಿದ್ದಾರೆ.

ರೈಲು ಡಿಕ್ಕಿಯಾಗಿ ವ್ಯಕ್ತಿ ಮೃತ್ಯು ! Read More »

ರಸ್ತೆಯಲ್ಲಿ ನಮಾಜ್‍ ಪ್ರಕರಣ | ಹೇಳಿಕೆ ನೀಡಿದ ಹಿಂದೂ ಪ್ರಮುಖರ ಮೇಲಿನ ಕೇಸ್ ಹಿಂಪಡೆಯುವಂತೆ ಆಗ್ರಹ

ಪುತ್ತೂರು: ಮಂಗಳೂರಿನಲ್ಲಿ ರಸ್ತೆ ಬದಿಯಲ್ಲಿ ನಮಾಜ್ ಮಾಡಿ ಸಾರ್ವಜನಿಕರಿಗೆ ಸಮಸ್ಯೆ ಉಂಟು ಮಾಡಿದ ಕೃತ್ಯವನ್ನು ಖಂಡಿಸಿ ಹೇಳಿಕೆ ನೀಡಿರುವ ವಿಹಿಂಪ ನ ಪ್ರಮುಖರಾದ ಶರಣ್ ಪಂಪ್‍ ವೆಲ್‍ ಹಾಗೂ ಪ್ರದೀಪ್ ಸರಿಪಲ್ಲ ಅವರ ಮೇಲೆ ಎಫ್‍ ಐಆರ್ ದಾಖಲಿಸಿರುವುದು ಖಂಡನೀಯ ಎಂದು ವಿಹಿಂಪ ಗೋರಕ್ಷಾ ಪ್ರಮುಖ್ ಮುರಳೀಕೃಷ್ಣ ಹಸಂತಡ್ಕ ತಿಳಿಸಿದ್ದರು. ರಾಜ್ಯ ಸರಕಾರ ಅಲ್ಪಸಂಖ್ಯಾತರ ತುಷ್ಠೀಕರಣದ ಪರಾಕಾಷ್ಟೇಯನ್ನು ತಲುಪಿದ್ದು, ಮುಂದೆ ಹಿಂದೂ ಸಮಾಜ ತಕ್ಕ ಉತ್ತರ ನೀಡಲಿದೆ ಎಂದು ಅವರು ತಿಳಿಸಿದ್ದಾರೆ. ಕೂಡಲೇ ಹಿಂದೂ ನಾಯಕರ ಮೇಲೆ

ರಸ್ತೆಯಲ್ಲಿ ನಮಾಜ್‍ ಪ್ರಕರಣ | ಹೇಳಿಕೆ ನೀಡಿದ ಹಿಂದೂ ಪ್ರಮುಖರ ಮೇಲಿನ ಕೇಸ್ ಹಿಂಪಡೆಯುವಂತೆ ಆಗ್ರಹ Read More »

ಪೆನ್ ಡ್ರೈವ್ ಪ್ರಕರಣ : ವಿಮಾನ ಇಳಿಯುತ್ತಿದ್ದಂತೆ ಮಹಿಳಾ ಪೊಲೀಸ್ ಅಧಿಕಾರಿಗಳಿಂದ ಬಂಧನ

ಲೈಂಗಿಕ ದೌರ್ಜನ್ಯ ಕೇಸ್ ನಲ್ಲಿ ಇಷ್ಟು ದಿನ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಪ್ರಜ್ವಲ್ ರೇವಣ್ಣ ಅವರನ್ನು ಜರ್ಮನಿಯಿಂದ ಬಂದು ವಿಮಾನದಿಂದ ಇಳಿಯುತ್ತಿದ್ದಂತೆಯೇ ಎಸ್ ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಭಾರತೀಯ ಕಾಲಮಾನದ ಪ್ರಕಾರ ನಿನ್ನೆ ಸಂಜೆ 4.05ಕ್ಕೆ ಮ್ಯೂನಿಕ್ ನಿಂದ ಹೊರಟ ಲುಫ್ತಾನ್ನಾ ಏರ್ ಲೈನ್ಸ್ ವಿಮಾನ ತಡರಾತ್ರಿ 12.50 ಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಆಯ್ತು. ಪ್ರಜ್ವಲ್ ರೇವಣ್ಣ ಅರೆಸ್ಟ್ ಮಾಡಲಿಕ್ಕಾಗಿ ಏರ್ ಪೋರ್ಟ್ ನಲ್ಲಿ ಎಸ್ಐಟಿ ಅಧಿಕಾರಿಗಳ ಟೀಂ ಕಾದು ಕುಳಿತಿತ್ತು.

ಪೆನ್ ಡ್ರೈವ್ ಪ್ರಕರಣ : ವಿಮಾನ ಇಳಿಯುತ್ತಿದ್ದಂತೆ ಮಹಿಳಾ ಪೊಲೀಸ್ ಅಧಿಕಾರಿಗಳಿಂದ ಬಂಧನ Read More »

ವ್ಯಕ್ತಿಯಿಂದ ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆತ | ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ ನ್ಯಾಯವಾದಿಗಳು

ಇಂದೋರ್: ನ್ಯಾಯಾಧೀಶರ ಮೇಲೆ ಚಪ್ಪಲಿ ಹಾರ ಎಸೆದ ವ್ಯಕ್ತಿಯೊಬ್ಬನನ್ನು ನ್ಯಾಯವಾದಿಗಳು ಹಿಡಿದು ಹಿಗ್ಗಾಮುಗ್ಗ ಥಳಿಸಿ ಪೊಲೀಸರಿಗೆ ಒಪ್ಪಿಸಿದ ಘಟನೆ ಇಂದೋರ್ ನಲ್ಲಿ ನಡೆದಿದೆ. ಮಹಮ್ಮದ್ ನಲಿಂ ಎಂಬಾತ  ನ್ಯಾಯಾಧೀಶರ ಮೇಲೆ ಚಪ್ಪಲಿಯ ಹಾರ ಎಸೆದವನು. ಈ ಘಟನೆಯ ನಂತರ ನ್ಯಾಯಾಲಯದ ಪರಿಸರದಲ್ಲಿ ಪೊಲೀಸ್ ಬಂದೋಬಸ್ತ್ ಹೆಚ್ಚಿಸಲಾಯಿತು. ವಿಚಿತ್ರವೆಂದರೆ ಈ ನ್ಯಾಯಾಲಯದಲ್ಲಿ ಈ ಹಿಂದೆಯು ಕೂಡ ಈ ರೀತಿಯ ಘಟನೆಗಳು ನಡೆದಿದ್ದವು. ಪೊಲೀಸರು ಕೂಡಾ ಯಾಕೆ ಜಾಗರೂಕರಾಗುತ್ತಿಲ್ಲ ಎಂಬುದು ಪ್ರಶ್ನೆ ಉದ್ಭವಿಸಿದೆ. ಈ ನ್ಯಾಯಾಲಯದಲ್ಲಿ ಇಬ್ಬರು ಮೌಲ್ವಿಗಳ  ವಿರುದ್ಧದ

ವ್ಯಕ್ತಿಯಿಂದ ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆತ | ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ ನ್ಯಾಯವಾದಿಗಳು Read More »

ವಿದ್ಯುತ್ ಲೈನ್ ದುರಸ್ತಿ ವೇಳೆ ಕಿಡಿಗೇಡಿಯಿಂದ ಲೈನ್ ಆನ್ ಮಾಡಲು ಯತ್ನ | ಮುಚ್ಚಳಿಕೆ ಬರೆಸಿದ ಪೊಲೀಸರು.

ಪಂಜ: ವಿದ್ಯುತ್ ಲೈನ್ ದುರಸ್ತಿ ನಡೆಸುತ್ತಿದ್ದ ವೇಳೆ ಯುವಕನೊಬ್ಬ ಲೈನ್ ಆನ್ ಮಾಡಲು ಯತ್ನಿಸಿದ ಪರಿಣಾಮ ಭಾರೀ ಅನಾಹುತವೊಂದು ತಪ್ಪಿದ ಘಟನೆ ಕರಿಕ್ಕಳದಲ್ಲಿ ನಡೆದಿದೆ. ಪಂಜದ ಮೆಸ್ಕಾಂ ಇಲಾಖೆಯ ಸಿಬ್ಬಂದಿಗಳು ಕರಿಕ್ಕಳ ಸಮೀಪ ವಿದ್ಯುತ್ ಲೈನ್ ಗೆ ತಾಗುತ್ತಿದ್ದ ಮರದ ಗೆಲ್ಲನ್ನು ತೆಗೆಯಲೆಂದು ಜೆ.ಒ.ಸಿ ಆನ್ ಮಾಡಿ ಯಾರು ಆಫ್ ಮಾಡದಂತೆ ಅದನ್ನು ತಂತಿಯಲ್ಲಿ ಕಟ್ಟಿ ಕೆಲವು ಸಿಬ್ಬಂದಿಗಳು ಕೆಲಸ ಮಾಡುತ್ತಿದ್ದರು. ಇದೇ ವೇಳೆ ಅಲ್ಲಿಯೇ ಸಮೀಪದಲ್ಲಿ ರೂಮ್ ನಲ್ಲಿರುವ ರಬ್ಬರ್ ಟ್ಯಾಪರ್ ಆಗಿರುವ ರಾಜೇಶ್ ಎಂಬತ

ವಿದ್ಯುತ್ ಲೈನ್ ದುರಸ್ತಿ ವೇಳೆ ಕಿಡಿಗೇಡಿಯಿಂದ ಲೈನ್ ಆನ್ ಮಾಡಲು ಯತ್ನ | ಮುಚ್ಚಳಿಕೆ ಬರೆಸಿದ ಪೊಲೀಸರು. Read More »

ಮನೆಯಿಂದ ಹೊರ ಹೋದ ತಾಯಿ-ಮಗಳು ನಾಪತ್ತೆ

ಮಂಗಳೂರು : ಮನೆಯಿಂದ ಹೊರಗೆ ತೆರಳಿದ ತಾಯಿ ಹಾಗೂ ಮಗು ನಾಪತ್ತೆಯಾಗಿರುವ ಕುರಿತು ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೈಕಂಪಾಡಿ ಮೀನಕಳಿ ನಿವಾಸಿ ಶ್ವೇತಾ (31) ಹಾಗೂ ಮಗಳು ಇಶಿಕಾ(6) ನಾಪತ್ತೆಯಾದವರು. ನಿನ್ನೆ ಮಧ್ಯಾಹ್ನ 3 ಗಂಟೆ ಹೊತ್ತಿಗೆ ತಾಯಿ ಮನೆಯಿಂದ ಗಂಡನ ಮನೆ ಕೂಳೂರಿಗೆ ಹೋಗಿ ಬರುತ್ತೇನೆ ಎಂದು ಹೇಳಿ ಹೋದ ತಾಯಿ ಮಗಳು ನಾಪತ್ತೆಯಾಗಿದ್ದಾರೆ. ಈ ಕುರಿತು ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಯಾರಿಗಾದರೂ ತಾಯಿ ಮಗಳ ಬಗ್ಗೆ ಮಾಹಿತಿ ಸಿಕ್ಕಿದರೆ

ಮನೆಯಿಂದ ಹೊರ ಹೋದ ತಾಯಿ-ಮಗಳು ನಾಪತ್ತೆ Read More »

ಅಯೋಧ್ಯೆ ರಾಮಮಂದಿರ ಸ್ಪೋಟಿಸುವ ಬೆದರಿಕೆ ಹಾಕಿದ ಇಬ್ಬರ ಬಂಧನ

ಲಕ್ನೋ: ಅಯೋಧ್ಯೆಯ ರಾಮಮಂದಿರವನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ 14 ವರ್ಷದ ಬಾಲಕ ಹಾಗೂ ಆತನ ಅಜ್ಜಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಬಾಲಕ ಮಂಗಳವಾರ ರಾತ್ರಿ ಪೊಲೀಸ್ ಕಂಟ್ರೋಲ್ ರೂಮ್‌ನ ತುರ್ತು ಸಹಾಯವಾಣಿ 112ಕ್ಕೆ ಕರೆಮಾಡಿ, ಮಂದಿರವನ್ನು ಬಾಂಬ್‌ನಿಂದ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದಾನೆ. ಬಳಿಕ ಪೊಲೀಸರು ಸೈಬರ್ ಸೆಲ್ ಸಹಾಯದಿಂದ ಆರೋಪಿಗಳಿರುವ ಸ್ಥಳವನ್ನು ಪತ್ತೆಹಚ್ಚಿದ್ದಾರೆ. ಇದೀಗ ಆರೋಪಿ ಬಾಲಕ ಹಾಗೂ ಆತನ ಅಜ್ಜಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಬಾಲಕ ಬುದ್ದಿಮಾಂದ್ಯತೆಯಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆಯುತ್ತಿದ್ದಾನೆ

ಅಯೋಧ್ಯೆ ರಾಮಮಂದಿರ ಸ್ಪೋಟಿಸುವ ಬೆದರಿಕೆ ಹಾಕಿದ ಇಬ್ಬರ ಬಂಧನ Read More »

ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ !

ನೆಲ್ಯಾಡಿ: ನೇಣುಬಿಗಿದ ಸ್ಥಿತಿಯಲ್ಲಿ ವ್ಯಕ್ತಯೊಬ್ಬರ ಮೃತದೇಹ ಕೊಕ್ಕಡ ಗ್ರಾಮದ ಹಿತ್ತಿಲು ಸಮೀಪದ ಗೇರು ಗುಡ್ಡೆಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ಮೃತರು ಬೆಂಗಳೂರಿನಿಂದ-ಹಾಸನ, ಹಾಸನದಿಂದ-ಕೊಕ್ಕಡಕ್ಕೆ ಮೇ.24ರಂದು ಬಸ್ಸಿನಲ್ಲಿ ಪ್ರಯಾಣಿಸಿರುವ ಟಿಕೆಟ್ ಹಾಗೂ ಬ್ಯಾಂಕ್ ಎಟಿಎಂ ಕಾರ್ಡ್ ದೊರೆತಿದ್ದು ಅದರಲ್ಲಿ ನಿಂಗಣ್ಣ ಎಂದು ಹೆಸರು ನಮೂದಿಸಲಾಗಿದೆ. ಸ್ಥಳಕ್ಕೆ ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್‌ಇನ್ಸ್‌ಪೆಕ್ಟ‌ರ್ ಸಮರ್ಥ ಗಾಣಿಗ ಮತ್ತು ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಅರಸಿನಮಕ್ಕಿ ಹಾಗೂ ಶಿಶಿಲ ಶೌರ್ಯ ಘಟಕದ ತಂಡದ ಸದಸ್ಯರ ಸಹಕಾರದಿಂದ ಮೃತದೇಹವನ್ನು ಮರಣೋತ್ತರ

ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ! Read More »

error: Content is protected !!
Scroll to Top