ಅಪರಾಧ

ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ವಿಚಾರಣಾಧೀನ ಖೈದಿ ಆತ್ಮಹತ್ಯೆ

ಮಂಗಳೂರು: ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದ ವಿಚಾರಣಾಧೀನ ಕೈದಿಯೊಬ್ಬ ಆಸ್ಪತ್ರೆ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾನೆ. ಮಂಜೇಶ್ವರ ಬಂದ್ಯೋಡು ನಿವಾಸಿ ಮಹಮ್ಮದ್ ನೌಫಾಲ್ (24) ಮೃತ ಕೈದಿ. 2022ರ ಡಿಸೆಂಬರ್ ನಲ್ಲಿ ನೌಫಾಲ್ ಎನ್ ಡಿಪಿಎಸ್ ಕಾಯ್ದೆಯಡಿ ಕೋಣಾಜೆ ಪೊಲೀಸರಿಂದ ಬಂಧನಕ್ಕೀಡಾಗಿದ್ದ. ಆನಂತರ ಮಂಗಳೂರು ಜೈಲಿನಲ್ಲೇ ಇದ್ದು ಯುವಕನ ಪರವಾಗಿ ಜಾಮೀನು ಕೊಡಿಸುವುದಕ್ಕೂ ಯಾರೂ ಬಂದಿರಲಿಲ್ಲ. ಈತ ಜೈಲಿನಲ್ಲಿ ಮಾನಸಿಕ ಅಸ್ವಸ್ಥನಂತೆ  ವರ್ತಿಸುತ್ತಿದ್ದ ಕಾರಣಕ್ಕೆ ನೌಫಾಲ್ ನನ್ನು ಚಿಕಿತ್ಸೆಗೆಂದು ಮಂಗಳೂರಿನ ವೆನ್ಹಾಕ್ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿತ್ತು. ಮೇ […]

ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ವಿಚಾರಣಾಧೀನ ಖೈದಿ ಆತ್ಮಹತ್ಯೆ Read More »

ಮೊಬೈಲ್ ರಿಚಾರ್ಚ್‍ ಗೆ ಬಂದ ಯುವತಿಯ ಫೋಟೋ ಕ್ಲಿಕ್ಕಿಸಿದ ಅನ್ಯಕೋಮಿನ ಯುವಕ | ಪೊಲೀಸರಿಂದ ವಿಚಾರಣೆ | ಜಮಾಯಿಸಿದ ಹಿಂದೂ ಸಂಘಟನೆಯ ಕಾರ್ಯಕರ್ತರು

ಸುಳ್ಯ: ಏರ್ ಟೆಲ್ ಶೋ ರೋಂ ಗೆ ಕರೆನ್ಸಿ ರಿಚಾರ್ಚ್ ಗೆಂದು ಬಂದ ಯುವತಿಯೊಬ್ಬಳ ಫೋಟೋ ಕ್ಲಿಕ್ಕಿಸಿದ ಅನ್ಯಕೋಮಿನ ಯುವಕನ ಮೇಲೆ ವಿರುದ್ಧ ಯುವತಿಯ ಮನೆಯವರು ಪೋಲಿಸರಿಗೆ ದೂರು ನೀಡಿದ ಘಟನೆ ಇಂದು ನಡೆದಿದೆ. ಗಾಂಧಿನಗರದಲ್ಲಿರುವ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಹಿಂದೂ ಯುವತಿಯೊಬ್ಬಳು ಮೊಬೈಲ್ ರಿಚಾರ್ಜ್ ಗೆ ಬಂದಾಗ ಯುವತಿಯನ್ನು ಕುಳಿತುಕೊಳ್ಳುವಂತೆ ಹೇಳಿದ್ದಾನೆ. ಈ ಸಂದರ್ಭ ಯುವಕ ಯುವತಿಗೆ ಅರಿವಿಗೆ ಬಾರದಂತೆ ಫೋಟೋ ಕ್ಲಿಕ್ಕಿಸಿರುತ್ತಾನೆ. ಗಮನಿಸಿದ ಯುವತಿ ಆಕ್ಷೇಪಿಸಿ ಆತನ ಕೈಯಿಂದ ಮೊಬೈಲ್ ಕಸಿದುಕೊಂಡು ಫೋಟೋ ಕ್ಲಿಕ್ಕಿಸಿದ್ದನ್ನು

ಮೊಬೈಲ್ ರಿಚಾರ್ಚ್‍ ಗೆ ಬಂದ ಯುವತಿಯ ಫೋಟೋ ಕ್ಲಿಕ್ಕಿಸಿದ ಅನ್ಯಕೋಮಿನ ಯುವಕ | ಪೊಲೀಸರಿಂದ ವಿಚಾರಣೆ | ಜಮಾಯಿಸಿದ ಹಿಂದೂ ಸಂಘಟನೆಯ ಕಾರ್ಯಕರ್ತರು Read More »

ಅಶ್ಲೀಲ ವೀಡಿಯೋ, ಲೈಂಗಿಕ ದೌರ್ಜನ್ಯ ಪ್ರಕರಣ | ಹೆಚ್‍.ಡಿ.ರೇವಣ್ಣರನ್ನು ಬಂಧಿಸಿದ ವಿಶೇಷ ತನಿಖಾ ತಂಡ

ಬೆಂಗಳೂರು: ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಹಾಗೂ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಶಾಸಕ, ಮಾಜಿ ಸಚಿವ ಹೆಚ್‌ಡಿ ರೇವಣ್ಣ ಅವರನ್ನು ವಿಶೇಷ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕೃತಗೊಂಡ ಬೆನ್ನಲ್ಲೇ ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಮಾಜಿ ಪ್ರಧಾನಿ ದೇವೇಗೌಡರ ನಿವಾಸದಿಂದ ವಿಶೇಷ ತನಿಖಾ ತಂಡದ ಅಧಿಕಾರಿಗಳು ಬಂಧಿಸಿದ್ದಾರೆ. ರೇವಣ್ಣರನ್ನು ವಶಕ್ಕೆ ಪಡೆದ ಅಧಿಕಾರಿಗಳು ನೇರವಾಗಿ ಎಸ್‌ಐಟಿ ಕಚೇರಿಗೆ ಕರೆದುಕೊಂಡು ಹೋಗಿದ್ದಾರೆ. ಎನ್ನಲಾಗಿದೆ. ಮೈಸೂರಿನ ಕೆಆರ್ ನಗರ ಠಾಣೆಯಲ್ಲಿ ದಾಖಲಾದ ಅಪಹರಣ, ದೌರ್ಜನ್ಯ ಪ್ರಕರಣದಲ್ಲಿ ರೇವಣ್ಣರನ್ನು ಎಸ್‌ಐಟಿ ವಶಕ್ಕೆ

ಅಶ್ಲೀಲ ವೀಡಿಯೋ, ಲೈಂಗಿಕ ದೌರ್ಜನ್ಯ ಪ್ರಕರಣ | ಹೆಚ್‍.ಡಿ.ರೇವಣ್ಣರನ್ನು ಬಂಧಿಸಿದ ವಿಶೇಷ ತನಿಖಾ ತಂಡ Read More »

ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ I ಇ ಮೇಲ್ ರವಾನಿಸಿದ ಉಗ್ರರು    

ಮಂಗಳೂರು : ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಚೇರಿಗೆ ಬಾಂಬ್ ಬೆದರಿಕೆ ಹಾಕಿರುವ ಬಗ್ಗೆ ವರದಿಯಾಗಿದೆ. ಉಗ್ರರ ಹೆಸರಲ್ಲಿ ಇಮೇಲ್ ಮೂಲಕ ಬಾಂಬ್‌ ಬೆದರಿಕೆ ಹಾಕಲಾಗಿದ್ದು, ಮೂರು ವಿಮಾನದಲ್ಲಿಯೂ ಬಾಂಬ್ ಇಟ್ಟಿರುವುದಾಗಿ ಹಾಗೂ ಕೃತ್ಯದ ಹಿಂದೆ “ಟೆರರೈಸರ್ಸ್ 111″ ಇರುವುದಾಗಿ, ಏರ್ ಪೋರ್ಟ್ ಆವರಣದಲ್ಲಿ ಸ್ಫೋಟಕಗಳನ್ನು ಇಡಲಾಗಿದೆ. ಕೆಲವೇ ಗಂಟೆಗಳಲ್ಲಿ ದೊಡ್ಡ ಮಟ್ಟದ ರಕ್ತಪಾತ ಆಗಲಿದೆ ಎಂದು ಬರೆಯಲಾಗಿದೆ ಎಂದು ತಿಳಿದು ಬಂದಿದೆ. ಎಪ್ರಿಲ್ 29ರಂದು ಬಾಂಬ್ ಇಟ್ಟಿರುವ ಬಗ್ಗೆ ಬೆದರಿಕೆ ಇಮೇಲ್ ರವಾನೆಯಾಗಿದ್ದು, ಈ ವಿಚಾರ ತಡವಾಗಿ ಬೆಳಕಿಗೆ ಬಂದಿದೆನ್ನಲಾಗಿದೆ. ಬಾಂಬ್

ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ I ಇ ಮೇಲ್ ರವಾನಿಸಿದ ಉಗ್ರರು     Read More »

ವಿವಾಹಿತ ಮಹಿಳೆ ಆತ್ಮಹತ್ಯೆ !

ಕಾಣಿಯೂರು : ಪತಿಯ ಕಿರುಕುಳ ತಾಳಲಾರದೆ ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಣಿಯೂರು ಗ್ರಾಮದ ಪಣ್ಚತ್ತಾರು ಸಮೀಪ ಉಪ್ಪಡ್ಕ ಎಂಬಲ್ಲಿ ಗುರುವಾರ ಸಂಜೆ ನಡೆದಿದೆ. ಉಪ್ಪಡ್ಕ ನಿವಾಸಿ ಪೂವಪ್ಪ ನಾಯ್ಕ ಎಂಬವರ ಪತ್ನಿ ಚಂದ್ರಾವತಿ (38) ಮೃತಪಟ್ಟವರು. ಚಂದ್ರಾವತಿ ಅವರನ್ನು 16 ವರ್ಷದ ಹಿಂದೆ ಪೂವಪ್ಪ ನಾಯ್ಕ ಅವರು ಮದುವೆಯಾಗಿದ್ದರು. ದಂಪತಿಗೆ ಪ್ರಖ್ಯಾತ್‌ (15)  ಹಾಗೂ ನಿಶಾಂತ್ (7) ಎಂಬ ಇಬ್ಬರು ಗಂಡು ಮಕ್ಕಳಿದ್ದಾರೆ. ಪೂವಪ್ಪ ನಾಯ್ಕ ಮದುವೆಯಾದ ಕೆಲವು ವರ್ಷಗಳ ಬಳಿಕ ಮದ್ಯ ವ್ಯಸನಿಯಾಗಿ, ಸರಿಯಾಗಿ

ವಿವಾಹಿತ ಮಹಿಳೆ ಆತ್ಮಹತ್ಯೆ ! Read More »

ಯುವಕ ಪುಷ್ಪರಾಜ್ ನೇಣು ಬಿಗಿದು ಆತ್ಮಹತ್ಯೆ !

ಪುತ್ತೂರು: ಯುವಕನೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಡಿಪ್ಪಾಡಿಯಲ್ಲಿ ನಡೆದಿದೆ. ಕೊಡಿಪ್ಪಾಡಿ ಪಲ್ಲತ್ತಾರು ದಿ.ಚಂದ್ರಶೇಖರ್ ಆಚಾರ್ಯ ಅವರ ಮಗ ಪುಷ್ಪರಾಜ್ ಆತ್ಮಹತ್ಯೆ ಮಾಡಿಕೊಂಡವರು. ಪುಷ್ಪರಾಜ್ ಕಬಕ ಗ್ರಾಮದ ಪೋಳ್ಯದಲ್ಲಿರುವ ಬೇಕರಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದು, ಏ.29ರಂದು ತಾಯಿಗೆ ದೂರವಾಣಿ ಕರೆ ಮಾಡಿ, ನಾನು ಮುಂಬೈಗೆ ಹೋಗುತ್ತೇನೆ ಎಂದು ಹೇಳಿ ಕರೆ ಸ್ಥಗಿತಗೊಳಿಸಿದ್ದ. ಮೇ 1ರಂದು ಮಧ್ಯಾಹ್ನ ನಾನು ಮನೆಗೆ ವಾವಸ್ಸು ಬಂದು ನೋಡಿದಾಗ ಮಗ ಪುಷ್ಪರಾಜ್ ಮನೆಯ ದೇವರ ಕೋಣೆಯಲ್ಲಿ ಮಾಡಿನ ಪಕ್ಕಾಸಿಗೆ ನೈಲಾನ್ ಹಗ್ಗದಿಂದ ಕುತ್ತಿಗೆಗೆ ನೇಣು

ಯುವಕ ಪುಷ್ಪರಾಜ್ ನೇಣು ಬಿಗಿದು ಆತ್ಮಹತ್ಯೆ ! Read More »

ಕೋವಿಶೀಲ್ಡ್ ಪಡೆದ ಬಳಿಕ ಇಬ್ಬರು ಹೆಣ್ಣು ಮಕ್ಕಳು ಮೃತ್ಯು | ಕಾನೂನು ಸಮರಕ್ಕೆ ಸಜ್ಜಾದ ಮಕ್ಕಳ ಹೆತ್ತವರು

ಕೊರೊನಾ ಸಮಯದಲ್ಲಿ ಭಾರೀ ಸುದ್ದಿಯಲ್ಲಿದ್ದ ಔಷಧಿಗಳ ತಯಾರಿಕಾ ಸಂಸ್ಥೆ Oxford-AstraZeneca, ಆಘಾತಕಾರಿ ಮಾಹಿತಿ ಒಂದನ್ನು ಕೊನೆಗೂ ಕೋರ್ಟ್ ಮುಂದೆ ಒಪ್ಪಿಕೊಂಡಿರುವ ಬೆನ್ನಲ್ಲೇ ಭಾರತದಲ್ಲಿ ಹೆಣ್ಣು ಮಕ್ಕಳನ್ನು ಕಳೆದುಕೊಂಡ ಪೋಷಕರು ಕಾನೂನು ಸಮರಕ್ಕೆ ಸಜ್ಜಾಗಿದ್ದಾರೆ. ಔಷಧಿ ತಯಾರಿಕಾ ಕಂಪೆನಿಯು ತಾನು ಅಭವೃದ್ಧಿಪಡಿಸಿ ಕೋಟ್ಯಾಂತರ ಜನರಿಗೆ ನೀಡಿರುವ ಕೊರೊನಾ ಲಸಿಕೆಯು ಗಂಭೀರ ಅಡ್ಡಪರಿಣಾಮ ಉಂಟುಮಾಡಬಹುದು ಎಂದು ಲಂಡನ್ ಕೋರ್ಟ್‌ನಲ್ಲಿ ಹೇಳಿದೆ. ಇದೀಗ ಭಾರತದ ಇಬ್ಬರು ಹೆಣ್ಮಕ್ಕಳ ಪೋಷಕರು ಕೋವಿಶೀಲ್ಡ್ ಲಸಿಕೆಯನ್ನು ಒದಗಿಸಿದ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ (SII) ವಿರುದ್ಧ

ಕೋವಿಶೀಲ್ಡ್ ಪಡೆದ ಬಳಿಕ ಇಬ್ಬರು ಹೆಣ್ಣು ಮಕ್ಕಳು ಮೃತ್ಯು | ಕಾನೂನು ಸಮರಕ್ಕೆ ಸಜ್ಜಾದ ಮಕ್ಕಳ ಹೆತ್ತವರು Read More »

ಮನೆಗೆ ಕಲ್ಲು ತೂರಾಟ : ಗ್ರಾಮಾಂತರ ಪೊಲೀಸರಿಂದ ತನಿಖೆ

ಪುತ್ತೂರು : ಬೆಟ್ಟಂಪಾಡಿ ಗ್ರಾಮದ ಗುಮ್ಮಟಗದ್ದೆ ಎಂಬಲ್ಲಿ ಕಿಡಿಗೇಡಿಗಳು ಮನೆಯೊಂದಕ್ಕೆ ಕಲ್ಲು ತೂರಾಟ ನಡೆಸಿ ಪರಾರಿಯಾದ ಘಟನೆ ನಡೆದಿದೆ. ಗುಮ್ಮಟಗದ್ದೆ ಸೂರಪ್ಪ ಗೌಡ ಎಂಬವರ ಮನೆಗೆ ಕಲ್ಲು ತೂರಾಟ ನಡೆದಿದೆ. ಮೇ.1 ರಂದು ರಾತ್ರಿ 8.30ರ ವೇಳೆಗೆ ಮನೆ ಮಂದಿ ಮನೆಯೊಳಗಡೆ ಇರುವ ಸಂದರ್ಭದಲ್ಲಿ ಕಲ್ಲು ಬಿಸಾಡಿದ್ದಾರೆ. ಕಲ್ಲು ಮನೆ ಸಿಮೆಂಟ್ ಶೀಟ್ ಛಾವಣಿ ಮೇಲೆ ಬಿದ್ದ ಶಬ್ದ ಕೇಳಿ ಹೊರಗಡೆ ಬಂದಾಗ ಕಿಡಿಗೇಡಿಗಳು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಘಟನೆ ಬಗ್ಗೆ ಮಾಹಿತಿ ಪಡೆದ ಸಂಪ್ಯ ಠಾಣಾ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಮನೆಗೆ ಕಲ್ಲು ತೂರಾಟ : ಗ್ರಾಮಾಂತರ ಪೊಲೀಸರಿಂದ ತನಿಖೆ Read More »

ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ | ತನಿಖಾ ತಂಡದಲ್ಲಿ ಪುತ್ತೂರಿನ ಧನ್ಯಾ ನಾಯಕ್

ಪುತ್ತೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕುರಿತು ತನಿಖೆಗೆ ರಚಿಸಲಾಗಿರುವ 18 ಮಂದಿ ಪೊಲೀಸ್ ಅಧಿಕಾರಿಗಳನ್ನು ಒಳಗೊಂಡಿರುವ ವಿಶೇಷ ತನಿಖಾ ತಂಡದಲ್ಲಿ ಪುತ್ತೂರಿನ ಧನ್ಯಾ ನಾಯಕ್ ಅವರನ್ನು ನೇಮಕ ಮಾಡಲಾಗಿದೆ. ಧನ್ಯಾ ನಾಯಕ್ ಅವರು ಈ ಹಿಂದೆ ಪುತ್ತೂರಿನಲ್ಲಿ ಪ್ರೊಬೆಷನರಿ ಡಿವೈಎಸ್‌ಪಿಯಾಗಿದ್ದು, ಉಪ್ಪಿನಂಗಡಿ ಪೊಲೀಸ್ ಠಾಣೆ, ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಾರ್ಯ ನಿರ್ವಹಿಸಿದ್ದರು. ಪ್ರಸ್ತುತ ಮಂಗಳೂರು ನಗರ ದಕ್ಷಿಣ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಐಪಿಎಸ್ ಅಧಿಕಾರಿ ಬಿ.ಕೆ.

ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ | ತನಿಖಾ ತಂಡದಲ್ಲಿ ಪುತ್ತೂರಿನ ಧನ್ಯಾ ನಾಯಕ್ Read More »

ಮತದಾನ ಪ್ರಕ್ರಿಯೆ ಸಂಪೂರ್ಣ ದೃಶ್ಯದ ವೆಬ್‍ ಕ್ಯಾಮರಾ ಕಳವು | ಪೊಲೀಸರಿಂದ ತನಿಖೆ

ಪುತ್ತೂರು: ಮತದಾನ ಪ್ರಕ್ರಿಯೆ ರೆಕಾರ್ಡ್ ಆಗಿದ್ದ ವೆಬ್ ಕ್ಯಾಮರಾವೊಂದನ್ನು ಕಳವುಗೈದ ಘಟನೆ ಬೆಳ್ತಂಗಡಿ ತಾಲೂಕಿನ ತೆಕ್ಕಾರುನಲ್ಲಿ ನಡೆದಿದೆ. ತೆಕ್ಕಾರು ಗ್ರಾಮದ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಸಂಖ್ಯೆ 228ರಲ್ಲಿ ಅಳವಡಿಸಿದ್ದ ವೆಬ್ ಕ್ಯಾಮರಾವನ್ನು ಸಿಮ್, ಮೆಮೊರಿ ಕಾರ್ಡ್ ಸಮೇತ ಕಳವು ಮಾಡಲಾಗಿದೆ ಎಂದು ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಲಾಗಿದೆ. ಏ.24ರಂದು ಈ ವೆಬ್ ಕ್ಯಾಮರಾವನ್ನು ಅಳವಡಿಸಲಾಗಿದ್ದು, 26ರಂದು ರಾತ್ರಿ 8 ಗಂಟೆಯವರೆಗಿನ ಅಂದರೆ ಮತದಾನ ಪ್ರಕ್ರಿಯೆ ದೃಶ್ಯಗಳು ಇದರಲ್ಲಿ ಸೇವ್ ಆಗಿತ್ತು. ಕ್ಯಾಮರಾ ಹಾಗೂ

ಮತದಾನ ಪ್ರಕ್ರಿಯೆ ಸಂಪೂರ್ಣ ದೃಶ್ಯದ ವೆಬ್‍ ಕ್ಯಾಮರಾ ಕಳವು | ಪೊಲೀಸರಿಂದ ತನಿಖೆ Read More »

error: Content is protected !!
Scroll to Top