ಅಪರಾಧ

ರಬ್ಬರ್‌ ತೋಟದಲ್ಲಿ ಮೂರು ಮರಿಗಳೊಂದಿಗೆ ಚಿರತೆ ಠಿಕಾಣಿ

ಬೆಳ್ತಂಗಡಿ: ತಾಲೂಕಿನ ಮುಂಡಾಜೆಯ ಮಚ್ಚಿಮಲೆ ಅನಂತ ಭಟ್ ಎಂಬವರ ರಬ್ಬರ್ ತೋಟದಲ್ಲಿ ಮೂರು ಮರಿಗಳೊಂದಿಗೆ ತಾಯಿ ಚಿರತೆಯೊಂದು ಕಾಣಿಸಿಕೊಂಡಿದ್ದು, ಟ್ಯಾಪಿಂಗ್ ಕೆಲಸದವರು ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದಾರೆ. ಕೆಲಸದವರು ಬೆಳಗ್ಗೆ ತೋಟಕ್ಕೆ ಹೋದಾಗ ಚಿರತೆಗಳು ಕಾಣಿಸಿರುವುದಾಗಿ ತಿಳಿದು ಬಂದಿದೆ. ಅವರು ಅಲ್ಲಿಂದ ಓಡಿ ತಪ್ಪಿಸಿಕೊಂಡಿದ್ದಾರೆ. ಮುಂಡಾಜೆ ಪರಿಸರದಲ್ಲಿ ಕಳೆದ ಕೆಲವು ದಿನಗಳಿಂದ ಚಿರತೆ ಓಡಾಟದ ಬಗ್ಗೆ ಸ್ಥಳೀಯರು ಮಾಹಿತಿ ನೀಡುತ್ತಿದ್ದರು.‌ ಇಲ್ಲೇ ಸಮೀಪದ ಕಾಯರ್ತೋಡಿಯಲ್ಲಿ ನದಿಬದಿಯಲ್ಲಿ ಚಿರತೆ ಕಾಣಿಸಿಕೊಂಡ ಬಗ್ಗೆ ಸ್ಥಳೀಯ ಜನರು ಮಾಹಿತಿ ನೀಡಿದ್ದಾರೆ. ಮರಿಗಳೊಂದಿಗೆ […]

ರಬ್ಬರ್‌ ತೋಟದಲ್ಲಿ ಮೂರು ಮರಿಗಳೊಂದಿಗೆ ಚಿರತೆ ಠಿಕಾಣಿ Read More »

ಕಾಣೆಯಾದ ನಾಯಿ: ಪೊಲೀಸರಿಗೆ ದೂರು

ಪುತ್ತೂರು: ಪ್ರೀತಿಯಿಂದ ಸಾಕಿದ್ದ ಶ್ವಾನವೊಂದು ಕಾಣೆಯಾಗಿರುವ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಾವು ಪ್ರೀತಿಯಿಂದ ಸಾಕಿದ್ದ ಶಿಟ್ಝೂ ತಳಿಯ ನಾಯಿ ಬಾಬ್ರೂ ಕಾಣೆಯಾಗಿರುವುದಾಗಿ ದೂರಿನಲ್ಲಿ ಪೂನಂ ಶೆಟ್ಟಿ ಎಂಬವರು ದೂರಿನಲ್ಲಿ ತಿಳಿಸಿದ್ದಾರೆ. ನೆಲ್ಲಿಕಟ್ಟೆಯ ‌ಮಲ್ಯ ಕಾಂಪೌಂಡ್‌ನಿಂದ ನಾಯಿ ಕಾಣೆಯಾಗಿದೆ. ನಾಯಿಯ ಕೆಲವು ದೃಶ್ಯಾವಳಿಗಳು ‌ಸಿಸಿಟಿವಿ‌ಯಲ್ಲಿ ಸೆರೆಯಾಗಿರುವುದಾಗಿಯೂ ಅವರು ದೂರಿನಲ್ಲಿ ‌ಹೇಳಿದ್ದಾರೆ.

ಕಾಣೆಯಾದ ನಾಯಿ: ಪೊಲೀಸರಿಗೆ ದೂರು Read More »

ಜಾರ್ಖಂಡ್ ವ್ಯಕ್ತಿಗೆ ಹಲ್ಲೆ ಪ್ರಕರಣ : ಮೂವರು ಆರೋಪಿಗಳ ಸೆರೆ

ಬಾಂಗ್ಲಾದೇಶದವನು ಎಂದು ಭಾವಿಸಿ ಹಲ್ಲೆ ಮಂಗಳೂರು: ಬಾಂಗ್ಲಾದೇಶದ ಪ್ರಜೆ ಎಂದು ಭಾವಿಸಿ ಜಾರ್ಖಂಡ್ ಮೂಲದ ವಲಸೆ ಕಾರ್ಮಿಕನ ಮೇಲೆ ಹಲ್ಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ತಾಲೂಕಿನ ಕೂಳೂರು ಗ್ರಾಮ ನಿವಾಸಿಗಳಾದ ರತೀಶ್ ದಾಸ್ ಯಾನೆ ಲಾಲು (32), ಧನುಷ್ (24) ಮತ್ತು ಸಾಗರ್ (24) ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ. ಜ.11ರಂದು ಸಂಜೆ ನಾಲ್ವರು ಆರೋಪಿಗಳು ಜಾರ್ಖಂಡ್ ಮೂಲದ ದಿಲ್ಜಾನ್ ಅನ್ಸಾರಿ ಎಂಬವರನ್ನು ತಡೆದು ನಿಲ್ಲಿಸಿ, ನೀನು

ಜಾರ್ಖಂಡ್ ವ್ಯಕ್ತಿಗೆ ಹಲ್ಲೆ ಪ್ರಕರಣ : ಮೂವರು ಆರೋಪಿಗಳ ಸೆರೆ Read More »

ಬಾಂಗ್ಲಾದೇಶದಲ್ಲಿ ಇನ್ನೋರ್ವ ಹಿಂದೂ ವ್ಯಕ್ತಿಯ ಹತ್ಯೆ

ರಿಕ್ಷಾ ಚಾಲಕನನ್ನು ಕೊಂದು ಹೊಲದಲ್ಲಿ ಎಸೆದ ದುಷ್ಕರ್ಮಿಗಳು ಢಾಕಾ : ಬಾಂಗ್ಲಾದೇಶದಲ್ಲಿ ಹಿಂದೂಗಳ ಹತ್ಯಾ ಸರಣಿ ಮುಂದುವರಿದಿದೆ. ದಕ್ಷಿಣ ಬಾಂಗ್ಲಾದ ಫೆನಿ ಜಿಲ್ಲೆಯ ಧಗನ್​ಭುಯಾನ್​ನಲ್ಲಿ ಅಪರಿಚಿತ ದುಷ್ಕರ್ಮಿಗಳು 28 ವರ್ಷದ ಆಟೋ ಚಾಲಕನನ್ನು ಇರಿದು ಹತ್ಯೆ ಮಾಡಿದ್ದಾರೆ. ಸಮೀರ್ ಕುಮಾರ್ ದಾಸ್ ಮೃತ ವ್ಯಕ್ತಿ. ಆಟೋ ಚಾಲಕನನ್ನು ಕೊಂದು ಆಟೋವನ್ನು ಕೂಡ ಕಳವು ಮಾಡಲಾಗಿದೆ. ಕುಟುಂಬದವರ ಪ್ರಕಾರ, ಸಮೀರ್ ಭಾನುವಾರ ಸಂಜೆ 7 ಗಂಟೆ ಸುಮಾರಿಗೆ ಆಟೋರಿಕ್ಷಾದಲ್ಲಿ ಮನೆಯಿಂದ ಹೊರಟಿದ್ದರು, ತಡರಾತ್ರಿಯಾದರೂ ಅವನು ಹಿಂತಿರುಗದಿದ್ದಾಗ, ಕುಟುಂಬದವರು ಅವರನ್ನು

ಬಾಂಗ್ಲಾದೇಶದಲ್ಲಿ ಇನ್ನೋರ್ವ ಹಿಂದೂ ವ್ಯಕ್ತಿಯ ಹತ್ಯೆ Read More »

ಇರಾನ್‌ನಲ್ಲಿ ತೀವ್ರಗೊಂಡ ಪ್ರತಿಭಟನೆ : 350ಕ್ಕೂ ಹೆಚ್ಚು ಮಸೀದಿಗಳಿಗೆ ಬೆಂಕಿ

ಸರ್ವಾಧಿಕಾರಿ ಖಮೇನಿ ವಿರುದ್ಧ ಭುಗಿಲೆದ್ದ ಆಕ್ರೋಶ ; ಮುಲ್ಲಾಗಳು ದೇಶಬಿಟ್ಟು ಹೋಗಲು ಒತ್ತಾಯ ಟೆಹ್ರಾನ್‌: ಇರಾನ್‌ನಲ್ಲಿ ಮುಲ್ಲಾಗಳ ವಿರುದ್ಧ ನಡೆಯುತ್ತಿರುವ ಪ್ರತಿಭಟನೆ ಇನ್ನಷ್ಟು ಜೋರಾಗಿದೆ. ಹಣದುಬ್ಬರ, ಬೆಲೆ ಏರಿಕೆ ವಿರುದ್ಧ ಸಣ್ಣಮಟ್ಟದಲ್ಲಿ ಆರಂಭವಾದ ಪ್ರತಿಭಟನೆ ತೀವ್ರಗೊಂಡಿದ್ದು, ಇರಾನ್‌ ಜನರು ಈಗ ಮಸೀದಿಗೆ ಬೆಂಕಿ ಹಾಕುತ್ತಿದ್ದಾರೆ. ಇರಾನ್‌ನ ಪರಮೋಚ್ಚ ನಾಯಕ ಆಯತೊಲ್ಲಾ ಖಮೇನಿ ಆಡಳಿತದ ವಿರುದ್ಧ ತಿರುಗಿ ಬಿದ್ದ ಪ್ರತಿಭಟನಕಾರರು ಸುಮಾರು 350ಕ್ಕೂ ಹೆಚ್ಚು ಮಸೀದಿಗಳಿಗೆ ಬೆಂಕಿ ಹಚ್ಚಿದ್ದಾರೆ. ಇಷ್ಟರ ತನಕ ಪ್ರತಿಭಟನೆಗೆ 650ಕ್ಕೂ ಹೆಚ್ಚು ಜನರು ಬಲಿಯಾಗಿದ್ದಾರೆ.

ಇರಾನ್‌ನಲ್ಲಿ ತೀವ್ರಗೊಂಡ ಪ್ರತಿಭಟನೆ : 350ಕ್ಕೂ ಹೆಚ್ಚು ಮಸೀದಿಗಳಿಗೆ ಬೆಂಕಿ Read More »

4 ಕೋ. ರೂ. ಮೌಲ್ಯದ ಡ್ರಗ್ಸ್‌ ವಶ : ಉಗಾಂಡದ ಮಹಿಳೆ ಬಂಧನ

ಬೆಂಗಳೂರಿನಿಂದ ಮಂಗಳೂರಿಗೆ ಮಾದಕವಸ್ತು ಪೂರೈಸುತ್ತಿದ್ದ ಜಾಲದ ಪ್ರಮುಖ ಸೂತ್ರಧಾರಿ ಮಹಿಳೆ ಮಂಗಳೂರು: ಬೆಂಗಳೂರಿನಿಂದ ಮಂಗಳೂರಿಗೆ ವ್ಯವಸ್ಥಿತ ರೀತಿಯಲ್ಲಿ ಮಾದಕ ದ್ರವ್ಯ ಎಂಡಿಎಂಎ ಸರಬರಾಜು ಮಾಡುತ್ತಿದ್ದ ಉಗಾಂಡ ಮೂಲದ ಮಹಿಳೆಯನ್ನು ಮಂಗಳೂರು ಸಿಸಿಬಿ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿ ಅವಳಿಂದ ಸುಮಾರು 4 ಕೋ. ರೂ. ಮೌಲ್ಯದ 4 ಕೆಜಿ ಡ್ರಗ್ಸ್‌ ವಸ್ತು ವಶಪಡಿಸಿಕೊಂಡಿದ್ದಾರೆ. ಬೆಂಗಳೂರಿನ ಹೊರವಲಯದ ಜಿಗಾನಿಯಲ್ಲಿ 4 ಕೆಜಿ ಎಂಡಿಎಂಎ ಜೊತೆ ಮಹಿಳೆ ಸಿಕ್ಕಿಬಿದ್ದಿದ್ದಾಳೆ. ಆರೋಪಿಯನ್ನು ಜಲಿಯಾ ಝಲ್ವಾಂಗೊ ಎಂದು ಗುರುತಿಸಲಾಗಿದ್ದು, ವಶಪಡಿಸಿಕೊಂಡ ಅಕ್ರಮ ವಸ್ತುಗಳ ಮೌಲ್ಯ

4 ಕೋ. ರೂ. ಮೌಲ್ಯದ ಡ್ರಗ್ಸ್‌ ವಶ : ಉಗಾಂಡದ ಮಹಿಳೆ ಬಂಧನ Read More »

ಕಡಬ: ಮನೆಯಂಗಳದಿಂದ ನಾಯಿಯನ್ನು ಹೊತ್ತೊಯ್ದ ಚಿರತೆ

ಬೃಹತ್‌ ಗಾತ್ರದ ಚಿರತೆಯ ಓಡಾಟ ಸಿಸಿಟಿವಿಯಲ್ಲಿ ಸೆರೆ ಕಡಬ : ಎಡಮಂಗಲ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಹಾಗೂ ಹಾಲಿ ಸದಸ್ಯೆ ಸುಮ ನೂಜಿಲ ಅವರ ಮನೆಯಂಗಳಕ್ಕೆ ಜ.7ರಂದು ಬಂದ ಬೃಹತ್ ಗಾತ್ರದ ಚಿರತೆಯೊಂದು ಸಾಕುನಾಯಿಯನ್ನು ಹೊತ್ತೊಯ್ದಿದೆ. ಪಂಜ ಮೀಸಲು ಅರಣ್ಯ ವ್ಯಾಪ್ತಿಗೆ ಒಳಪಟ್ಟ ಎಡಮಂಗಲ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷವಾಗಿರುವುದು ಸಾರ್ವಜನಿಕರಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. ಜ.7ರಂದು ಸುಮ ನೂಜಿಲ ಅವರ ಕುಟುಂಬದವರು ಕಾರ್ಯಕ್ರಮವೊಂದಕ್ಕೆ ತೆರಳಿದ್ದರಿಂದ ಮನೆಗೆ ಬೀಗ ಹಾಕಲಾಗಿತ್ತು. ಸಾಯಂಕಾಲ ಸುಮಾರು 7 ಗಂಟೆಯ ಹೊತ್ತಿಗೆ

ಕಡಬ: ಮನೆಯಂಗಳದಿಂದ ನಾಯಿಯನ್ನು ಹೊತ್ತೊಯ್ದ ಚಿರತೆ Read More »

ಚಾಕು ಹಿಡಿದು ಹಸುವನ್ನು ಬೆದರಿಸಿದ ಪ್ರಕರಣ: ಪೊಲೀಸರಿಂದ ಸ್ವಯಂಪ್ರೇರಿತ ದೂರು ದಾಖಲು

ಮಂಗಳೂರು: ಹಸುವೊಂದು ಹೊಟೇಲ್‌ಗೆ ನುಗ್ಗಿ ಅಲ್ಲಿದ್ದ ಆಹಾರಗಳನ್ನು ತಿಂದಿದ್ದು, ಆ ಹಸುವನ್ನು ಹೆದರಿಸಲು ಹೊಟೇಲ್ ಮಾಲೀಕ ಚಾಕು ಹಿಡಿದು ಹಸುವನ್ನು ಹೆದರಿಸಿದ ಪ್ರಕರಣಕ್ಕೆ ‌ಸಂಬಂಧಿಸಿದ ಹಾಗೆ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲು ಮಾಡಿರುವ ಘಟನೆ ನಡೆದಿದೆ. ಈ ಘಟನೆಯಲ್ಲಿ ಹಸುವಿಗೆ ಸಣ್ಣ ಪ್ರಮಾಣದ ಗಾಯಗಳಾಗಿದ್ದು, ಯಾರಿಂದಲೂ ಯಾವುದೇ ರೀತಿಯ ಪ್ರಕರಣ ದಾಖಲಾಗಿಲ್ಲ. ಆದರೆ ಪೊಲೀಸರೇ ಈ ವಿಚಾರದಲ್ಲಿ ಹಸುವಿಗೆ ಹಲ್ಲೆ ನಡೆಸಿದ ಹೊಟೇಲ್ ಮಾಲೀಕ ಮತ್ತು ಹಸುವಿನ ವಾರೀಸುದಾರರ ಮೇಲೆ ಕೇಸು ದಾಖಲು ಮಾಡಿರುವುದಾಗಿದೆ. ಹಸುವಿಗೆ ಗಾಯಗಳಾಗಿರುವ

ಚಾಕು ಹಿಡಿದು ಹಸುವನ್ನು ಬೆದರಿಸಿದ ಪ್ರಕರಣ: ಪೊಲೀಸರಿಂದ ಸ್ವಯಂಪ್ರೇರಿತ ದೂರು ದಾಖಲು Read More »

ಬಾಂಗ್ಲಾದೇಶದವ ಎಂದು ಜಾರ್ಖಂಡ್‌ನ ಕಾರ್ಮಿಕನ ಮೇಲೆ ಹಲ್ಲೆ

ದೈಹಿಕ, ಮಾನಸಿಕ ಹಿಂಸೆ ನೀಡಿದ ನಾಲ್ವರ ವಿರುದ್ಧ ಕೇಸ್‌ ಮಂಗಳೂರು : ಜಾರ್ಖಂಡ್ ಮೂಲದ ವಲಸೆ ಕಾರ್ಮಿಕನನ್ನು ಬಾಂಗ್ಲಾದೇಶಿ ಪ್ರಜೆ ಎಂದು ಭಾವಿಸಿ ನಾಲ್ವರು ವ್ಯಕ್ತಿಗಳು ಮಾನಸಿಕ ಹಿಂಸೆ ನೀಡಿ ಹಲ್ಲೆ ನಡೆಸಿದ ಘಟನೆ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೂಳೂರು ನಿವಾಸಿಗಳಾದ ಸಾಗರ್, ಧನುಷ್, ಲಾಲು ಯಾನೆ ರತೀಶ್, ಮೋಹನ್ ಹಲ್ಲೆ ಮಾಡಿದವರು ಎಂದು ಗುರುತಿಸಲಾಗಿದೆ. ಜಾರ್ಖಂಡ್ ಮೂಲದ ಗಿರಿಜಾ ಅನ್ಸಾರಿ ಕಳೆದ 10–15 ವರ್ಷಗಳಿಂದ ವಲಸೆ ಕಾರ್ಮಿಕನಾಗಿ ಜೀವನ ನಡೆಸುತ್ತಿದ್ದು, ಸ್ಥಳೀಯರಾದ ನಾಲ್ವರು

ಬಾಂಗ್ಲಾದೇಶದವ ಎಂದು ಜಾರ್ಖಂಡ್‌ನ ಕಾರ್ಮಿಕನ ಮೇಲೆ ಹಲ್ಲೆ Read More »

ಪ್ರಶ್ನೆ ಪತ್ರಿಕೆ ಸೋರಿಕೆ : ಹೆಡ್‌ಮಾಸ್ಟರ್‌ ಸಹಿತ ಎಂಟು ಮಂದಿ ಬಂಧನ

ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಲೀಕ್‌ ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಕ್ಷಕರು, ವಿದ್ಯಾರ್ಥಿಗಳನ್ನು ಉತ್ತರ ವಿಭಾಗದ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಜನವರಿ 9ರಂದು ಹಿಂದಿ ಪರೀಕ್ಷೆ ಇತ್ತು. ಆದರೆ ಜನವರಿ 8ರಂದು ನಿರಂಜನ್ ಶೆಟ್ಟಿ ಹೆಸರಿನ ಯೂಟ್ಯೂಬ್‌ ಚಾನೆಲ್‌ನಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿತ್ತು. ಈ ಸಂಬಂಧ ಪದವಿ ಪೂರ್ವ ಇಲಾಖೆಯ ಜಂಟಿ ನಿರ್ದೇಶಕ ರಾಜು ನೀಡಿದ ದೂರಿನ ಹಿನ್ನೆಲೆಯಲ್ಲಿ ಉತ್ತರ ವಿಭಾಗದ ಸೈಬರ್ ಸೆನ್ ಪೊಲೀಸ್ ಠಾಣೆಯಲ್ಲಿ

ಪ್ರಶ್ನೆ ಪತ್ರಿಕೆ ಸೋರಿಕೆ : ಹೆಡ್‌ಮಾಸ್ಟರ್‌ ಸಹಿತ ಎಂಟು ಮಂದಿ ಬಂಧನ Read More »

error: Content is protected !!
Scroll to Top