ಅಪರಾಧ

ಉಡುಪಿ ಮಾಜಿ ಶಾಸಕರ ಪತ್ನಿ ಪದ್ಮಪ್ರಿಯ ನಾಪತ್ತೆ, ಆತ್ಮಹತ್ಯೆ ಪ್ರಕರಣ | ಆರೋಪಿ ಅತುಲ್ ರಾವ್‍ ಗೆ ಜೈಲು ಶಿಕ್ಷೆ ವಿಧಿಸಿದ ಉಡುಪಿ ನ್ಯಾಯಾಲಯ

ಉಡುಪಿ: ಉಡುಪಿಯ ಮಾಜಿ ಶಾಸಕ ಕೆ.ರಘುಪತಿ ಭಟ್ ಅವರ ಪತ್ನಿ ಪದ್ಮಪ್ರಿಯ ನಾಪತ್ತೆ ಹಾಗೂ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮೋಸ, ವಂಚನೆ ಹಾಗೂ ನಕಲಿ ದಾಖಲೆ ಸೃಷ್ಠಿಸಿರುವ ಆರೋಪದಲ್ಲಿ ಅತುಲ್ ರಾವ್‌ಗೆ ಒಂದು ವರ್ಷ ಜೈಲುಶಿಕ್ಷೆ, ದಂಡ ವಿಧಿಸಿ ಉಡುಪಿ ನ್ಯಾಯಾಲಯ ಆದೇಶ ನೀಡಿದೆ. 15 ವರ್ಷಗಳ ಹಿಂದೆ ನಡೆದ ಈ ಪ್ರಕರಣದಲ್ಲಿ ಸಿಒಡಿ ಪರ ವಿಶೇಷ ಸರಕಾರಿ ಅಭಿಯೋಜಕರಾಗಿ ಮಂಗಳೂರು ವಲಯದ ಹಿರಿಯ ಕಾನೂನು ಅಧಿಕಾರಿ ಪುತ್ತೂರಿನ ಕೆ.ಶಿವಪ್ರಸಾದ್ ಆಳ್ವ ಅವರು ವಾದ ಮಂಡನೆ ಮಾಡಿ […]

ಉಡುಪಿ ಮಾಜಿ ಶಾಸಕರ ಪತ್ನಿ ಪದ್ಮಪ್ರಿಯ ನಾಪತ್ತೆ, ಆತ್ಮಹತ್ಯೆ ಪ್ರಕರಣ | ಆರೋಪಿ ಅತುಲ್ ರಾವ್‍ ಗೆ ಜೈಲು ಶಿಕ್ಷೆ ವಿಧಿಸಿದ ಉಡುಪಿ ನ್ಯಾಯಾಲಯ Read More »

ತಲವಾರು ಝಳಪಿಸಿದ 9 ಮಂದಿ ಪೊಲೀಸ್ ವಶಕ್ಕೆ!!!

ಪುತ್ತೂರು: ಪುತ್ತಿಲ ಪರಿವಾರದ ಕಚೇರಿ ಮುಂಭಾಗ ತಲವಾರು ಝಳಪಿಸಿದ ಪ್ರಕರಣದಲ್ಲಿ 9 ಮಂದಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಘಟನೆ‌‌ ನಡೆಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ

ತಲವಾರು ಝಳಪಿಸಿದ 9 ಮಂದಿ ಪೊಲೀಸ್ ವಶಕ್ಕೆ!!! Read More »

ಪುತ್ತಿಲ ಪರಿವಾರ ಕಚೇರಿ ಮುಂದೆ ತಲವಾರು ಝಳಪಿಸಿದ ಯುವಕ!!

ಪುತ್ತೂರು: ಮುಕ್ರಂಪಾಡಿಯಲ್ಲಿರುವ ಪುತ್ತಿಲ ಪರಿವಾರ ಕಚೇರಿ ಮುಂಭಾಗದಲ್ಲಿ ಯುವಕನೋರ್ವ ತಲವಾರು ಹಿಡಿದು ಬೊಬ್ಬೆ ಹೊಡೆದ ಘಟನೆ ಶುಕ್ರವಾರ ನಡೆದಿದೆ. ಈ ಘಟನೆ ಪುತ್ತೂರು ನಗರ ಠಾಣಾ ಪೊಲೀಸರಿಗೆ ಮಾಹಿತಿ ತಿಳಿಯುತ್ತಿದ್ದಂತೆ ಪುತ್ತೂರು ನಗರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅರುಣ್ ಪುತ್ತಿಲ ಬೆಂಬಲಿಗರಾದ ಮನೀಶ್ ಕುಲಾಲ್ ಬನ್ನೂರು ಅವರನ್ನು ಗುರಿಯಾಗಿಟ್ಟುಗೊಂಡು ದಿನೇಶ್ ಪಂಜಿಗ ಎಂಬಾತ ನಾಲ್ವರು ಯುವಕರೊಂದಿಗೆ ತಲವಾರು ಹಿಡಿದುಕೊಂಡು ಆಗಮಿಸಿದ್ದ ಎನ್ನಲಾಗಿದೆ. ಪುತ್ತಿಲ ಕಚೇರಿಯಲ್ಲಿ ಕೃಷ್ಣಪ್ರಸಾದ್‌ ಶೆಟ್ಟಿ ಮತ್ತಿತರರು ಇದ್ದರು. ಮನೀಶ್

ಪುತ್ತಿಲ ಪರಿವಾರ ಕಚೇರಿ ಮುಂದೆ ತಲವಾರು ಝಳಪಿಸಿದ ಯುವಕ!! Read More »

ಉದ್ಯಮಿ ಸೊಸೆ ಆತ್ಮಹತ್ಯೆ | ಆರೋಪಿಗಳಿಗೆ ಜಾಮೀನು !

ಸುಳ್ಯ; ಉದ್ಯಮಿ ಸೊಸೆ ಐಶ್ವರ್ಯಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳಿಗೆ ಬೆಂಗಳೂರಿನ ಸಿಟಿ ಏಳನೇ ಹೆಚ್ಚುವರಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಆದೇಶ ನೀಡಿದೆ. ಪ್ರಕರಣಕ್ಕೆ ಸಂಬಂಧಿಸಿ ಐಶ್ವರ್ಯಾ ಮಾವ ಗಿರಿಯಪ್ಪ ಗೌಡ ಕಾಪಿಲ, ಅತ್ತೆ ಸೀತಮ್ಮ, ಗಂಡ ರಾಜೇಶ್, ಮೈದುನ ವಿಜಯ್, ಮೈದುನನ ಪತ್ನಿ ತಸ್ಮಯ್ ಅವರನ್ನು ಪೊಲೀಸರು ಗೋವಾದಲ್ಲಿ ಬಂಧಿಸಿದ್ದರು. ಇನ್ನುಳಿದ ಆರೋಪಿಗಳಾದ ಐಶ್ವರ್ಯಾ ಅವರ ತಂದೆಯ ಅಕ್ಕ ಗೀತಾ, ಅವರ ಪತಿ ರವೀಂದ್ರನಾಥ ಕೇವಳ ಹಾಗೂ

ಉದ್ಯಮಿ ಸೊಸೆ ಆತ್ಮಹತ್ಯೆ | ಆರೋಪಿಗಳಿಗೆ ಜಾಮೀನು ! Read More »

ಅನ್ಯ ಮತೀಯ ಯುವಕನಿಂದ ಯುವತಿಗೆ ಕಿರುಕುಳ | ಆರೋಪಿ ಬಂಧನ

ಸುಳ್ಯ: ಅನ್ಯಮತೀಯ ಯುವಕನೊಬ್ಬ ಯುವತಿಗೆ ಕಿರುಕುಳ ನೀಡಿದ ಘಟನೆ ನಿಂತಿಕಲ್ಲಿನಲ್ಲಿ ಇಂದು ರಾತ್ರಿ ನಡೆದಿದೆ. ಅಂಗಡಿಯೊಂದರಲ್ಲಿ ಕೆಲಸಕ್ಕಿದ್ದ ಯುವತಿಯ ಮೈಗೆ ಕೈ ಹಾಕಿರುವುದಾಗಿ ಯುವತಿ ಬೆಳ್ಳಾರೆ ಠಾಣೆಗೆ ದೂರು ನೀಡಿದ್ದು, ಯುವಕನನ್ನು ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ. ಮಾಹಿತಿ ತಿಳಿಯುತ್ತಿದ್ದಂತೆ ಹಿಂದೂ ಕಾರ್ಯಕರ್ತರು ಠಾಣೆ ಎದುರು ಜಮಾಯಿಸಿರುವುದಾಗಿ ತಿಳಿದು ಬಂದಿದೆ.

ಅನ್ಯ ಮತೀಯ ಯುವಕನಿಂದ ಯುವತಿಗೆ ಕಿರುಕುಳ | ಆರೋಪಿ ಬಂಧನ Read More »

ಕಾಲೇಜಿಗೆ ತೆರಳಿದ ವಿದ್ಯಾರ್ಥಿನಿ ದೀಪಾ ಕಾಣೆ | ಪ್ರಕರಣ ದಾಖಲು

ಕಾರ್ಕಳ : ಕಾಲೇಜಿಗೆ ತೆರಳಿದ ವಿದ್ಯಾರ್ಥಿನಿಯೋರ್ವಳು ಕಾಣೆಯಾದ ಘಟನೆ ಕಾರ್ಕಳ ನಂದಳಿಕೆಯಲ್ಲಿ ನಡೆದಿದೆ. ನಂದಳಿಕೆ ಗ್ರಾಮದ ಮಾವಿನಕಟ್ಟೆಯ ದೀಪಾ (21) ಕಾಣೆಯಾದ ವಿದ್ಯಾರ್ಥಿನಿ. ದೀಪಾ ಕಾರ್ಕಳ ಭುವನೇಂದ್ರ ಕಾಲೇಜಿನಲ್ಲಿ ತೃತೀಯ ವರ್ಷದ ಬಿ.ಎ. ವಿದ್ಯಾಭ್ಯಾಸ ಮಾಡುತ್ತಿದ್ದು, ನ. 6 ರಂದು ಬೆಳಿಗ್ಗೆ ಕಾಲೇಜಿಗೆ ಹೋಗಿ ಬರುವುದಾಗಿ ಮನೆಯಿಂದ ಹೋಗಿರುತ್ತಾಳೆ. ಆದರೆ ಕಾಲೇಜಿಗೂ ಹೋಗದೆ ಅತ್ತ ವಾಪಾಸು ಮನೆಗೂ ಬಾರದೇ ಜೊತೆಗೆ ಸಂಬಂಧಿಕರ ಮನೆಗೂ ಹೋಗದೆ ಕಾಣೆಯಾಗಿದ್ದಾರೆ. ಈ ಬಗ್ಗೆ ದೀಪಾಳ ಅಣ್ಣ ದಿಲೀಪ್ ಪೂಜಾರಿ ನೀಡಿದ ದೂರಿನಂತೆ

ಕಾಲೇಜಿಗೆ ತೆರಳಿದ ವಿದ್ಯಾರ್ಥಿನಿ ದೀಪಾ ಕಾಣೆ | ಪ್ರಕರಣ ದಾಖಲು Read More »

ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ | ನಾಲ್ವರು ಆರೋಪಿಗಳಿಗೆ ನ.22 ರ ತನಕ ನ್ಯಾಯಾಂಗ ಕಸ್ಟಡಿ

ಪುತ್ತೂರು: ನೆಹರುನಗರದಲ್ಲಿ ಕಲ್ಲೇಗ ಟೈಗರ್‍ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳಾದ ಚೇತನ್, ಮನೀಶ್, ಕೇಶವ, ಮಂಜುನಾಥ್ ಎಂಬವರನ್ನು ಬುಧವಾರ ನ್ಯಯಾಲಯಕ್ಕೆ ಹಾಜರುಪಡಿಸಲಾಯಿತು. ಮಂಗಳವಾರ ರಾತ್ರಿ ಆರೋಪಿಗಳನ್ನು ನ್ಯಾಯಾಧೀಶರ ಮನೆಗೆ ಹಾಜರು ಪಡಿಸಲಾಗಿತ್ತು. ಬುಧವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ನ್ಯಾಯಾಧೀಶರು ನ.22ರ ತನಕ ನ್ಯಾಯಾಂಗ ಕಸ್ಟಡಿಗೊಳಪಡಿಸಿ ಆದೇಶ ನೀಡಿದ್ದಾರೆ. ಸೋಮವಾರ ತಡರಾತ್ರಿ ಅಕ್ಷಯ್ ಕಲ್ಲೇಗ ಅವರನ್ನು ನಾಲ್ವರ ತಂಡ ತಲವಾರಿನಿಂದ ಹತ್ಯೆ ಮಾಡಿತ್ತು. ಅದಾದ ಬಳಿಕ ಆರೋಪಿಗಳು ಪೊಲೀಸರಿಗೆ ಶರಣಾಗಿದ್ದರು.

ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ | ನಾಲ್ವರು ಆರೋಪಿಗಳಿಗೆ ನ.22 ರ ತನಕ ನ್ಯಾಯಾಂಗ ಕಸ್ಟಡಿ Read More »

ಡೆತ್ ನೋಟ್ ಬರೆದಿಟ್ಟು ವಿದ್ಯಾರ್ಥಿ ಆತ್ಮಹತ್ಯೆ

ಕಾಸರಗೋಡು: ಡೆತ್ ನೋಟು ಬರೆದಿಟ್ಟು ವಿದ್ಯಾರ್ಥಿಯೋರ್ವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪೆರ್ಲ ಸಮೀಪದ ಪದ್ಯಾಣದಲ್ಲಿ ನಡೆದಿದೆ. ಪದ್ಯಾಣದ ನಿವಾಸಿ ಸಿಲ್ವೆಸ್ಟರ್ ಕ್ರಾಸ್ತ ಎಂಬವರ ಪುತ್ರ ಐವನ್ ಕ್ರಾಸ್ತ (23) ಈ ಕೃತ್ಯ ಎಸಗಿದವರು. ಐವನ್ ತೊಕ್ಕೊಟ್ಟುವಿನ ಕಾಲೇಜೊಂದರ ಬಿ.ಎಡ್ ವಿದ್ಯಾರ್ಥಿಯಾಗಿದ್ದ. ಈತನ ಮೃತದೇಹ ಮಂಗಳವಾರ ರಾತ್ರಿ ಮನೆ ಸಮೀಪದ ಬಾವಿಯಲ್ಲಿ ಪತ್ತೆಯಾಗಿದೆ. ಮನೆಯಿಂದ ನಾಪತ್ತೆಯಾಗಿದ್ದ ವಿದ್ಯಾರ್ಥಿಯ ಶೋಧ ನಡೆಸಿದಾಗ ಬಾವಿಯಲ್ಲಿ ಮೃತ ದೇಹ ಪತ್ತೆಯಾಗಿದೆ. ಈತ ಮಲಗುವ ಕೋಣೆಯೊಳಗೆ ಡೆತ್ ನೋಟ್ ಪತ್ತೆಯಾಗಿದ್ದು, ನನ್ನ

ಡೆತ್ ನೋಟ್ ಬರೆದಿಟ್ಟು ವಿದ್ಯಾರ್ಥಿ ಆತ್ಮಹತ್ಯೆ Read More »

ಕಲ್ಲೇಗ ಟೈಗರ್ಸ್‍ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಹತ್ಯೆ | ಮೂವರು ಆರೋಪಿಗಳು ಪೊಲೀಸ್ ವಶಕ್ಕೆ

ಪುತ್ತೂರು: ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಹತ್ಯೆಗೆ ಸಂಬಂಧಿಸಿದಂತೆ ಮೂವರಿ ಆರೋಪಿಗಳನ್ನು ಪುತ್ತೂರು ನಗರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬನ್ನೂರು ಜೈನರಗುರಿ ನಿವಾಸಿ ಚೇತು ಅಲಿಯಾಸ್ ಚೇತನ್, ಮಂಜು ಯಾನೆ ಮಂಜುನಾಥ ಹಾಗೂ ಪಡೀಲು ನಿವಾಸಿ ಮನೀಶ್ ಮಣಿಯಾಣಿ ಪೊಲೀಸ್ ವಶದಲ್ಲಿದ್ದಾರೆ. ಇನ್ನೋರ್ವ ಆರೋಪಿ ಕೇಶವ ಎಂಬಾತ ಇನ್ನಷ್ಟೇ ಪೊಲೀಸರಿಗೆ ಶರಣಾಗಬೇಕಾಗಿದೆ ಎಂದು ತಿಳಿದು ಬಂದಿದೆ. ಸೋಮವಾರ ತಡರಾತ್ರಿ ಅಪಘಾತ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಆರೋಪಿಗಳು ಹಾಗೂ ಅಕ್ಷಯ್‍ ಮಧ್ಯೆ ಚರ್ಚೆಗಳು ನಡೆದಿವೆ. ಇದು ತಾರಕಕ್ಕೇರಿ ಅಕ್ಷಯ್

ಕಲ್ಲೇಗ ಟೈಗರ್ಸ್‍ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಹತ್ಯೆ | ಮೂವರು ಆರೋಪಿಗಳು ಪೊಲೀಸ್ ವಶಕ್ಕೆ Read More »

ಹೃದಯಾಘಾತದಿಂದ ವಿದ್ಯಾರ್ಥಿ ಇರ್ಫಾನ್ ಮೃತ್ಯು

ಉಪ್ಪಿನಂಗಡಿ: ವಿದ್ಯಾರ್ಥಿಯೋರ್ವ ಹೃದಯಾಘಾತಕ್ಕೊಳಗಾಗಿ ಮೃತಪಟ್ಟ ಘಟನೆ ನೆಲ್ಯಾಡಿಯ ಕೌಕ್ರಾಡಿಯಲ್ಲಿ ನಡೆದಿದೆ. ಕೌಕ್ರಾಡಿ ಶಾಂತಿಬೆಟ್ಟು ನಿವಾಸಿ ಯೂಸುಫ್ ಎಂಬವರ ಪುತ್ರ ಮಹಮ್ಮದ್ ಇರ್ಫಾನ್ (18) ಮೃತಪಟ್ಟವರು. ಇರ್ಫಾನ್ ಎ.ಸಿ. ಮೆಕ್ಯಾನಿಕ್ ವ್ಯಾಸಂಗ ಮಾಡುತ್ತಿದ್ದು, ತಂದೆ, ತಾಯಿ, ಸಹೋದರು, ಸಹೋದರಿಯರನ್ನು ಅಗಲಿದ್ದಾರೆ.

ಹೃದಯಾಘಾತದಿಂದ ವಿದ್ಯಾರ್ಥಿ ಇರ್ಫಾನ್ ಮೃತ್ಯು Read More »

error: Content is protected !!
Scroll to Top